Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 12:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವನಿಗೆ ಕಳುಹಿಸಲು ಇನ್ನು ಒಬ್ಬನಿದ್ದನು. ಯಾರೆಂದರೆ ತನಗೆ ಪ್ರಿಯನಾಗಿದ್ದ ಒಬ್ಬನೇ ಮಗನು. ತನ್ನ ಮಗನಿಗೆ ಅವರು ಮರ್ಯಾದೆ ಕೊಡಬಹುದೆಂದು ಯಜಮಾನನು ಕೊನೆಗೆ ಅವನನ್ನು ಅವರ ಬಳಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಯಜಮಾನನಿಗೆ ಇನ್ನು ಉಳಿದಿದ್ದವನೆಂದರೆ ಅವನ ಮುದ್ದುಮಗನೊಬ್ಬನೇ, “ನನ್ನ ಮಗನಿಗಾದರೂ ಅವರು ಮರ್ಯಾದೆಕೊಟ್ಟಾರು,” ಎಂದು ಭಾವಿಸಿ, ಕಟ್ಟಕಡೆಗೆ ಆ ಯಜಮಾನ ತನ್ನ ಮಗನನ್ನೇ ಅವರ ಬಳಿಗೆ ಕಳುಹಿಸಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವನಿಗೆ ಇನ್ನೂ ಒಬ್ಬನಿದ್ದನು; ಯಾರಂದರೆ ಅವನ ಮುದ್ದು ಮಗನೇ. ನನ್ನ ಮಗನಿಗಾದರೂ ಮರ್ಯಾದೆ ತೋರಿಸಿಯಾರೆಂದು ಧಣಿಯು ಕಡೆಯಲ್ಲಿ ಅವನನ್ನು ಅವರ ಬಳಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ಆ ಯಜಮಾನನಿಗೆ ರೈತರ ಬಳಿಗೆ ಕಳುಹಿಸಲು ಪ್ರಿಯ ಮಗನೊಬ್ಬನೇ ಉಳಿದಿದ್ದನು. ಅವನು ಕಳುಹಿಸಬಹುದಾದ ಕೊನೆಯ ವ್ಯಕ್ತಿ ಅವನ ಸ್ವಂತ ಮಗನಾಗಿದ್ದನು. ‘ರೈತರು ನನ್ನ ಮಗನಿಗೆ ಗೌರವ ಕೊಡುತ್ತಾರೆ’ ಎಂದುಕೊಂಡು ಯಜಮಾನನು ಅವನನ್ನೇ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ಕಡೆಯದಾಗಿ ತನಗೆ ಪ್ರಿಯನಾಗಿದ್ದ ಒಬ್ಬನೇ ಮಗನಿದ್ದನು. ‘ಅವರು ನನ್ನ ಮಗನಿಗಾದರೂ ಮರ್ಯಾದೆ ಕೊಡುವರು,’ ಎಂದು ಭಾವಿಸಿ, ಅವನನ್ನು ಅವರ ಬಳಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಅತ್ತಾ ತ್ಯಾ ರೈತಾಂಚಾಕ್ಡೆ ಧಾಡುಕ್ ತ್ಯಾ ಸಾವ್ಕಾರಾಚೊ ಅಪುರ್‍ಬಾಯೆಚೊ ಲೆಕ್ ಎಕ್ಲೊಚ್ ಹುರಲ್ಲೊ, ರೈತಾ ಅಪ್ನಾಚ್ಯಾ ಲೆಕಾಕ್ ತರ್ಬಿ ಮಾನ್ ದಿತಿಲ್ ಮನುನ್ ಅಪ್ನಾಚ್ಯಾ ಲೆಕಾಕ್ ತೆಂಚೆಕ್ಡೆ ಧಾಡುನ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 12:6
32 ತಿಳಿವುಗಳ ಹೋಲಿಕೆ  

ನಾನು ಅದನ್ನು ನೋಡಿದ್ದೇನೆ ಮತ್ತು ಈತನೇ ದೇವಕುಮಾರನೆಂದು ಸಾಕ್ಷಿ ಕೊಟ್ಟಿದ್ದೇನೆ” ಎಂದು ಹೇಳಿದನು.


ಆಗ “ಈತನು ನನ್ನ ಪ್ರಿಯ ಮಗನು, ಈತನನ್ನು ನಾನು ಬಹಳವಾಗಿ ಮೆಚ್ಚಿದ್ದೇನೆ” ಎಂಬ ವಾಣಿ ಪರಲೋಕದಿಂದ ಕೇಳಿಬಂದಿತು.


ನಾವು ಆತನ ಮೂಲಕ ಜೀವಿಸುವುದಕ್ಕಾಗಿ ದೇವರು ತನ್ನ ಒಬ್ಬನೇ ಮಗನನ್ನು ಲೋಕಕ್ಕೆ ಕಳುಹಿಸಿಕೊಟ್ಟದ್ದರಲ್ಲಿಯೇ ದೇವರ ಪ್ರೀತಿಯು ನಮ್ಮಲ್ಲಿ ಪ್ರತ್ಯಕ್ಷವಾಗಿದೆ.


ಇದಲ್ಲದೆ ದೇವರು ತನ್ನ ಚೊಚ್ಚಲು ಮಗನನ್ನು ಭೂಲೋಕಕ್ಕೆ ತಿರುಗಿ ಬರಮಾಡುವಾಗ “ದೇವದೂತರೆಲ್ಲರೂ ಆತನನ್ನು ಆರಾಧಿಸಬೇಕು” ಎಂದು ಆಜ್ಞಾಪಿಸಿದ್ದಾನೆ.


ಎಲ್ಲರೂ ತಂದೆಯನ್ನು ಯಾವ ರೀತಿಯಲ್ಲಿ ಗೌರವಿಸುವರೋ ಅದೇ ರೀತಿಯಲ್ಲಿ ಮಗನನ್ನೂ ಗೌರವಿಸಬೇಕೆಂದು ಹಾಗೆ ಮಾಡಿದ್ದಾನೆ. ಮಗನನ್ನು ಗೌರವಿಸದವನು ಆತನನ್ನು ಕಳುಹಿಸಿದ ತಂದೆಯನ್ನು ಗೌರವಿಸಲಾರನು.


ತಂದೆಯಾದ ದೇವರು ತನ್ನ ಮಗನನ್ನು ಪ್ರೀತಿಸಿ ಎಲ್ಲವನ್ನೂ ಆತನ ಕೈಯಲ್ಲಿ ಕೊಟ್ಟಿದ್ದಾನೆ.


ಅದಕ್ಕೆ ನತಾನಯೇಲನು, “ಗುರುವೇ, ನೀನು ದೇವಕುಮಾರನು! ನೀನೇ ಇಸ್ರಾಯೇಲಿನ ಅರಸನು” ಎಂದನು.


ದೇವರನ್ನು ಯಾರೂ ಎಂದೂ ನೋಡಿಲ್ಲ. ತಂದೆಯ ಹೃದಯದಲ್ಲಿರುವ ಏಕಪುತ್ರನೂ ಸ್ವತಃ ದೇವರೂ ಆಗಿರುವಾತನೇ, ತಂದೆಯನ್ನು ತಿಳಿಯಪಡಿಸಿದ್ದಾನೆ.


ಆ ವಾಕ್ಯವೆಂಬುವವನು ಮನುಷ್ಯನಾಗಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ, ಸತ್ಯದಿಂದಲೂ ತುಂಬಿದವನಾಗಿದ್ದನು.


ಆಗ ಆ ಮೋಡದೊಳಗಿಂದ, “ಈತನು ನನ್ನ ಮಗನು. ನಾನು ಆರಿಸಿಕೊಂಡವನು, ಈತನ ಮಾತನ್ನು ಕೇಳಿರಿ” ಎಂಬ ವಾಣಿ ಆಯಿತು.


ಮತ್ತು ಪವಿತ್ರಾತ್ಮನು ದೇಹಾಕಾರನಾಗಿ ಪಾರಿವಾಳದ ಹಾಗೆ ಆತನ ಮೇಲೆ ಇಳಿದನು. ಆಗ, “ನೀನು ಪ್ರಿಯನಾಗಿರುವ ನನ್ನ ಮಗನು, ನಿನ್ನನ್ನು ನಾನು ಮೆಚ್ಚಿದ್ದೇನೆ” ಎಂಬ ವಾಣಿಯು ಪರಲೋಕದಿಂದ ಬಂದಿತು.


ಅಷ್ಟರಲ್ಲಿ ಒಂದು ಮೋಡವು ಬಂದು ಅವರ ಮೇಲೆ ಕವಿಯಿತು. ಆ ಮೋಡದೊಳಗಿನಿಂದ, “ಈತನು ನನ್ನ ಪ್ರಿಯ ಕುಮಾರನು; ಈತನ ಮಾತನ್ನು ಕೇಳಿರಿ” ಎಂದು ಧ್ವನಿ ಉಂಟಾಯಿತು.


ಆಗ “ನೀನು ಪ್ರಿಯನಾಗಿರುವ ನನ್ನ ಮಗನು, ನಾನು ನಿನ್ನನ್ನು ಬಹಳವಾಗಿ ಮೆಚ್ಚಿದ್ದೇನೆ” ಎಂಬ ದೈವ ವಾಣಿ ಪರಲೋಕದಿಂದ ಕೇಳಿಸಿತು.


ಮಹಾಯಾಜಕನು ಯೇಸುವಿಗೆ, “ನಿನಗೆ ಜೀವಸ್ವರೂಪನಾದ ದೇವರ ಮೇಲೆ ಆಣೆಯಿಟ್ಟು ಕೇಳುತ್ತಿದ್ದಾನೆ; ನೀನು ದೇವಕುಮಾರನಾದ ಕ್ರಿಸ್ತನಾದರೆ ನಮಗೆ ಹೇಳಬೇಕು” ಅಂದನು.


ಆತನು ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೋಡವು ಬಂದು ಅವರ ಮೇಲೆ ಕವಿಯಿತು. ಇದಲ್ಲದೆ ಆ ಮೋಡದೊಳಗಿನಿಂದ “ಈತನು ಪ್ರಿಯನಾಗಿರುವ ನನ್ನ ಮಗನು ಈತನನ್ನು ನಾನು ಮೆಚ್ಚಿದ್ದೇನೆ ಈತನಿಗೆ ಕಿವಿಗೊಡಿರಿ” ಎಂದು ಹೇಳುವ ವಾಣಿವುಂಟಾಯಿತು.


ನನ್ನ ತಂದೆಯು ಎಲ್ಲವನ್ನು ನನಗೆ ಒಪ್ಪಿಸಿದ್ದಾನೆ. ತಂದೆಯ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ. ಮಗನ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ. ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಇಚ್ಛಿಸುತ್ತಾನೋ ಅವನು ಆತನನ್ನು ತಿಳಿದವನಾಗಿದ್ದಾನೆ.


“ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು; ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು. ‘ದೇವರು ನಮ್ಮ ಕೂಡ ಇದ್ದಾನೆಂದು’ ಈ ಹೆಸರಿನ ಅರ್ಥ.”


ಇಗೋ, ನನ್ನ ಸೇವಕನು! ಇವನಿಗೆ ನಾನೇ ಆಧಾರ. ಇವನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಇವನಲ್ಲಿ ನನ್ನ ಆತ್ಮವನ್ನು ಇರಿಸಿದ್ದೇನೆ. ಇವನು ಅನ್ಯಜನಗಳಲ್ಲಿಯೂ ಸದ್ಧರ್ಮವನ್ನು ಪ್ರಚುರಪಡಿಸುವನು.


ಆತನ ಮಗನಿಗೆ ಮುದ್ದಿಡಿರಿ; ಇಲ್ಲವಾದರೆ ಯೆಹೋವನ ಕೋಪವು ಬೇಗನೆ ಪ್ರಜ್ವಲಿಸಲು ನೀವು ದಾರಿಯಲ್ಲೇ ನಾಶವಾದೀರಿ. ಯೆಹೋವನನ್ನು ಆಶ್ರಯಿಸುವವರೆಲ್ಲರು ಧನ್ಯರು.


ಯೋಸೇಫನು ಇಸ್ರಾಯೇಲನಿಗೆ ಮುಪ್ಪಿನಲ್ಲಿ ಹುಟ್ಟಿದವನಾಗಿದ್ದುದರಿಂದ ಅವನನ್ನು ತನ್ನ ಎಲ್ಲಾ ಮಕ್ಕಳಿಗಿಂತ ಹೆಚ್ಚಾಗಿ ಪ್ರೀತಿಸುತ್ತಿದ್ದನು, ಅಲ್ಲದೆ ಅವನಿಗೆ ಬಣ್ಣಬಣ್ಣದ ಒಂದು ನಿಲುವಂಗಿಯನ್ನು ಹೊಲಿಸಿ ಕೊಟ್ಟಿದ್ದನು.


ಆ ದೂತನು ಅವನಿಗೆ, “ಹುಡುಗನ ಮೇಲೆ ಕೈ ಹಾಕಬೇಡ, ಅವನಿಗೆ ಏನೂ ಮಾಡಬೇಡ. ನೀನು ನಿನ್ನ ಒಬ್ಬನೇ ಮಗನನ್ನು ನನಗೆ ಸಮರ್ಪಿಸುವುದಕ್ಕೆ ಹಿಂಜರಿಯಲಿಲ್ಲ. ಈಗ ನೀನು ದೇವರಲ್ಲಿ ಭಯಭಕ್ತಿಯುಳ್ಳವನು ಎಂದು ನನಗೆ ಗೊತ್ತಾಯಿತು” ಎಂದು ಹೇಳಿದನು.


ಹೇಗೆಂದರೆ ಆತನು ಅವನನ್ನು, “ಅಬ್ರಹಾಮನೇ” ಎಂದು ಕರೆಯಲು ಅವನು, “ಇಗೋ, ಇದ್ದೇನೆ” ಎಂದನು. ಆಗ ಆತನು, “ನಿನಗೆ ಪ್ರಿಯನಾಗಿರುವ ಒಬ್ಬನೇ ಮಗನಾದ ಇಸಾಕನನ್ನು ಕರೆದುಕೊಂಡು ಮೊರೀಯ ದೇಶಕ್ಕೆ ಹೋಗಿ ಅಲ್ಲಿ ಅವನನ್ನು ನಾನು ಹೇಳುವ ಒಂದು ಬೆಟ್ಟದ ಮೇಲೆ ಸರ್ವಾಂಗಹೋಮವಾಗಿ ಅರ್ಪಿಸಬೇಕು” ಎಂದನು.


ನಾನು ಯೆಹೋವನ ಆಜ್ಞೆಯನ್ನು ತಿಳಿಸುತ್ತೇನೆ, ಕೇಳಿರಿ; ಆತನು ನನಗೆ, “ನನಗೆ ನೀನು ಮಗನು; ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.


ನಾವು ‘ನಮಗೆ ಮುದುಕನಾದ ತಂದೆಯಿದ್ದಾನೆ, ಅವನಿಗೆ ಮುಪ್ಪಿನಲ್ಲಿ ಹುಟ್ಟಿದ ಒಬ್ಬ ಚಿಕ್ಕ ಮಗನೂ ಇದ್ದಾನೆ, ಅವನ ಒಡಹುಟ್ಟಿದವನು ಸತ್ತು ಹೋಗಿದ್ದಾನೆ. ಆದುದರಿಂದ ಅವನ ತಾಯಿಯಲ್ಲಿ ಹುಟ್ಟಿದವರೊಳಗೆ ಅವನೊಬ್ಬನೇ ಉಳಿದಿದ್ದಾನೆ. ಅವನ ಮೇಲೆ ತಂದೆಗೆ ಬಹಳ ಪ್ರೀತಿಯುಂಟು’ ಎಂದು ಹೇಳಿದೆವು.


ಆದರೂ ಇನ್ನೊಬ್ಬ ಸೇವಕನನ್ನು ಕಳುಹಿಸಿದನು. ಇವನನ್ನು ಅವರು ಕೊಂದು ಹಾಕಿದರು. ಇನ್ನೂ ಅನೇಕರಿಗೆ ಅವರು ಹಾಗೆಯೇ ಮಾಡಿ, ಅವರಲ್ಲಿ ಕೆಲವರನ್ನು ಹೊಡೆದರು ಮತ್ತು ಕೆಲವರನ್ನು ಕೊಂದು ಹಾಕಿದರು.


ಆದರೆ ಆ ಗುತ್ತಿಗೆದಾರರು, ‘ತೋಟಕ್ಕೆ ಇವನೇ ಉತ್ತರಾಧಿಕಾರಿ; ಬನ್ನಿ ಇವನನ್ನು ನಾವು ಕೊಂದು ಹಾಕೋಣ. ಆಗ ಆಸ್ತಿ ನಮ್ಮದಾಗುವುದು’ ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡು,


ಸಭೆಯ ಹಿರಿಯನಾದ ನಾನು, ಪೂರ್ಣಹೃದಯದಿಂದ ಪ್ರೀತಿಸುವ ಪ್ರಿಯ ಗಾಯನಿಗೆ ಬರೆಯುವುದೇನಂದರೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು