Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 13:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಮತ್ತು ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ದ್ವೇಷಿಸುವರು, ಆದರೆ ಕೊನೆಯವರೆಗೂ ತಾಳುವವನೇ ರಕ್ಷಣೆ ಹೊಂದುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನೀವು ನನ್ನವರು. ಆದುದರಿಂದಲೇ ನಿಮ್ಮನ್ನು ಎಲ್ಲರೂ ದ್ವೇಷಿಸುವರು. ಆದರೆ ಕೊನೆಯವರೆಗೂ ಸೈರಣೆಯಿಂದಿರುವವನು ಜೀವೋದ್ಧಾರವನ್ನು ಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಮತ್ತು ನನ್ನ ಹೆಸರಿನ ನಿವಿುತ್ತವಾಗಿ ನಿಮ್ಮನ್ನು ಎಲ್ಲರೂ ಹಗೆಮಾಡುವರು. ಆದರೆ ಕಡೇವರೆಗೂ ತಾಳುವವನು ರಕ್ಷಣೆ ಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನೀವು ನನ್ನನ್ನು ಹಿಂಬಾಲಿಸುವ ಕಾರಣ ಜನರೆಲ್ಲರೂ ನಿಮ್ಮನ್ನು ದ್ವೇಷಿಸುವರು. ಆದರೆ ಕೊನೆಯವರೆಗೆ ತಾಳುವವನು ರಕ್ಷಣೆ ಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ದ್ವೇಷಮಾಡುವರು. ಆದರೆ ಕೊನೆಯವರೆಗೂ ತಾಳುವವನೇ ರಕ್ಷಣೆಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಮಾಕಾ ಲಾಗುನ್ ಹರ್ ಎಕ್ಲೊ ತುಮ್ಚೊ ದ್ವೆಸ್ ಕರ್‍ತ್ಯಾತ್. ಖರೆ ಸರ್ತ್ಯಾ ಕಾಲ್ ಸಗೊಳ್ ಕೊನ್ ವಿಶ್ವಾಸ್ ಕಳ್ದುನ್ ಘೆಯ್ನಾಸ್ತಾನಾ ರ್‍ಹಾತಾ, ತೊ ದೆವಾಚ್ಯಾ ನ್ಯಾಯ್ ತಿರ್ಪಾತ್ನಾ ಬಚಾವ್ ಹೊವ್ನ್ ದೆವಾಚ್ಯಾ ರಾಜಾತ್ ಜಾತಲಿ ಯೊಗ್ಯತಾ ಜೊಡುನ್ ಘೆತಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 13:13
19 ತಿಳಿವುಗಳ ಹೋಲಿಕೆ  

ಮತ್ತು ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲರೂ ದ್ವೇಷಿಸುವರು. ಆದರೆ ಕಡೆಯವರೆಗೂ ತಾಳಿಕೊಳ್ಳುವವನು ರಕ್ಷಣೆಹೊಂದುವನು.


ಆದರೆ ಕಡೆಯವರೆಗೂ ತಾಳುವವನು ರಕ್ಷಣೆ ಹೊಂದುವನು.


“ಮನುಷ್ಯಕುಮಾರನ ನಿಮಿತ್ತವಾಗಿ ಜನರು ನಿಮ್ಮನ್ನು ಹಗೆಮಾಡಿ ನಿಮಗೆ ಬಹಿಷ್ಕಾರ ಹಾಕಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದೆಂದು ತೆಗೆದುಹಾಕಿದರೆ ನೀವು ಧನ್ಯರು.


ಒಳ್ಳೆಯದನ್ನು ಮಾಡುವುದರಲ್ಲಿ ಬೇಸರಗೊಳ್ಳದೇ ಇರೋಣ. ಏಕೆಂದರೆ ಮನಗುಂದದಿದ್ದರೆ ತಕ್ಕ ಸಮಯದಲ್ಲಿ ಬೆಳೆಯನ್ನು ಕೊಯ್ಯುವೆವು.


ಯಾರು ಪ್ರಶಂಸೆ, ಗೌರವ, ಮತ್ತು ಭ್ರಷ್ಟರಹಿತ ಜೀವನ ಹೊಂದಬೇಕೆಂದು ಒಳ್ಳೆಯದನ್ನು ಬೇಸರಗೊಳ್ಳದೆ ಮಾಡುತ್ತಾರೋ, ಅವರಿಗೆ ನಿತ್ಯಜೀವವನ್ನು ಕೊಡುವನು.


ಆದರೆ ಅವರು ನನ್ನನ್ನು ಕಳುಹಿಸಿಕೊಟ್ಟಾತನನ್ನು ತಿಳಿಯದವರಾದ್ದರಿಂದ ಇದನ್ನೆಲ್ಲಾ ನನ್ನ ಹೆಸರಿನ ನಿಮಿತ್ತ ನಿಮಗೆ ಮಾಡುವರು.


ನಿನಗೆ ಸಂಭವಿಸಬಹುದಾದ ಬಾಧೆಗಳಿಗೆ ಹೆದರಬೇಡ. ಇಗೋ, ನಿಮ್ಮನ್ನು ಪರೀಕ್ಷಿಸಲು ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕಿದ್ದಾನೆ ಮತ್ತು ಹತ್ತು ದಿನಗಳ ತನಕ ನಿಮಗೆ ಸಂಕಟವಿರುವುದು. ನೀನು ಸಾಯುವ ತನಕ ನಂಬಿಗಸ್ತನಾಗಿರು, ನಾನು ನಿನಗೆ ಜೀವದ ಕಿರೀಟವನ್ನು ಕೊಡುವೆನು.


ಕಾದುಕೊಂಡು, ಸಾವಿರದ ಮುನ್ನೂರ ಮೂವತ್ತೈದು ದಿನಗಳ ಕೊನೆಯವರೆಗೆ ತಾಳುವವನು ಧನ್ಯನು.


ನಾವಾದರೋ ಹಿಂಜರಿದವರಾಗಿ ನಾಶವಾಗುವವರಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವರಾಗಿದ್ದೇವೆ.


ಮೊದಲಿನಿಂದಲೂ ಇರುವ ನಮ್ಮ ಭರವಸೆಯನ್ನು ಅಂತ್ಯದ ವರೆಗೂ ದೃಢವಾಗಿ ಹಿಡಿದುಕೊಳ್ಳುವುದಾದರೆ ನಾವು ಕ್ರಿಸ್ತನಲ್ಲಿ ಪಾಲುಗಾರರಾಗುತ್ತೇವೆ.


ನಾನು ನಿನ್ನ ವಾಕ್ಯವನ್ನು ಇವರಿಗೆ ಕೊಟ್ಟಿದ್ದೇನೆ, ನಾನು ಈ ಲೋಕದವನಲ್ಲದವನಾಗಿರುವ ಪ್ರಕಾರ ಇವರೂ ಈ ಲೋಕದವರಲ್ಲ. ಆದಕಾರಣ ಲೋಕವು ಇವರನ್ನು ದ್ವೇಷಿಸುತ್ತದೆ.


ಇದಲ್ಲದೆ ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲರೂ ಹಗೆಮಾಡುವರು.


“ಆಗ ನಿಮ್ಮನ್ನು ಕಷ್ಟಸಂಕಟಗಳಿಗೆ ಗುರಿಮಾಡಿ ಕೊಲ್ಲುವರು; ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲಾ ಜನಾಂಗಗಳವರು ದ್ವೇಷಿಸುವರು.


ಸೈರಣೆಯಿಂದಿರಬೇಕೆಂಬ ನನ್ನ ಆಜ್ಞೆಯನ್ನು ನೀನು ಪಾಲಿಸಿದ್ದರಿಂದ, ಭೂಲೋಕದ ನಿವಾಸಿಗಳೆಲ್ಲರನ್ನು ಪರೀಕ್ಷಿಸುವುದಕ್ಕಾಗಿ ಇಡೀ ಜಗತ್ತಿನ ಮೇಲೆ ಬರಲಿರುವ ಕಡುಶೋಧನೆಯ ಕಾಲದಲ್ಲಿ ನಾನು ನಿನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೇನೆ.


ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದಂತೆ ಜೀವದ ಕಿರೀಟವನ್ನು ಹೊಂದುವನು.


ನನ್ನ ಸಹೋದರರೇ, ಲೋಕವು ನಿಮ್ಮನ್ನು ದ್ವೇಷಿಸಿದರೆ ಆಶ್ಚರ್ಯಪಡಬೇಡಿರಿ.


ಇದಲ್ಲದೆ ಸಹೋದರನು ಸಹೋದರನನ್ನೂ, ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು. ಮಕ್ಕಳು ಹೆತ್ತವರಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು