Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 13:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 “ಇದಲ್ಲದೆ ವಿನಾಶಕಾರಕ ಅಸಹ್ಯ ಮೂರ್ತಿಯು ನಿಲ್ಲಬಾರದ ಸ್ಥಳದಲ್ಲಿ ನಿಂತಿರುವುದನ್ನು ನೀವು ನೋಡುವಾಗ (ಇದನ್ನು ಓದುವವನು ತಿಳಿದುಕೊಳ್ಳಲಿ). ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 “ವಿನಾಶಕಾರಿಯಾದ ವಿಕಟಮೂರ್ತಿಯು ಇರಬಾರದ ಸ್ಥಾನದಲ್ಲಿ ಇರುವುದನ್ನು ನೀವು ನೋಡುವಾಗ (ಇದನ್ನು ಓದುವವನು ಅರ್ಥಮಾಡಿಕೊಳ್ಳಲಿ) ಜುದೇಯದಲ್ಲಿರುವ ಜನರು ಬೆಟ್ಟಗುಡ್ಡಗಳಿಗೆ ಓಡಿಹೋಗಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇದಲ್ಲದೆ ಹಾಳುಮಾಡುವ ಅಸಹ್ಯ ವಸ್ತುವು ನಿಲ್ಲಬಾರದ ಸ್ಥಳದಲ್ಲಿ ನಿಂತಿರುವದನ್ನು ನೀವು ಕಾಣುವಾಗ (ಇದನ್ನು ಓದುವವನು ತಿಳುಕೊಳ್ಳಲಿ) ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ವಿನಾಶವನ್ನು ಉಂಟುಮಾಡುವ ಭಯಂಕರ ವಸ್ತುವನ್ನು ನೀವು ನೋಡುತ್ತೀರಿ. ಇದು ನಿಂತುಕೊಳ್ಳಬಾರದಂಥ ಸ್ಥಳದಲ್ಲಿ ನಿಂತಿರುವುದನ್ನು ನೀವು ನೋಡುವಿರಿ. (ಇದನ್ನು ಓದುವವನು ಇದರ ಅರ್ಥವನ್ನು ತಿಳಿದುಕೊಳ್ಳಬೇಕು) ಆ ಸಮಯದಲ್ಲಿ ಜುದೇಯದಲ್ಲಿರುವ ಜನರು ಬೆಟ್ಟಗಳಿಗೆ ಓಡಿಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ಆದರೆ ‘ಅಸಹ್ಯ ವಸ್ತು’ ನಿಲ್ಲಬಾರದ ಸ್ಥಳದಲ್ಲಿ ನಿಂತಿರುವುದನ್ನು ನೀವು ಕಾಣುವಾಗ ಓದುವವನು ತಿಳಿದುಕೊಳ್ಳಲಿ. ಆಗ ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಸಗ್ಳೆ ಸತ್ತ್ಯಾನಾಸ್ ಕರ್‍ತಲಿ ಬುರ್ಶಿ ವಸ್ತ್ ಇಬೆ ರವ್ಚೆ ನ್ಹಯ್ ತ್ಯಾ ಜಾಗ್ಯಾರ್ ಇಬೆ ಹೊತ್ತೆ ತುಮಿ ಬಗ್ತಾನಾ, ಹೆ ವಾಚ್ವುತಲೆ ಹೆಚೊ ಅರ್ತ್‍ ಕಾಯ್ ಮನುನ್ ಕಳ್ವುನ್ ಘೆವ್ಚೆ ಜುದೆಯಾತ್ಲಿ ಲೊಕಾ ಗುಡ್ಡ್ಯಾಂಚ್ಯಾ ವಯ್ನಿ ಪಳುನ್ ಜವ್ಕ್ ಪಾಜೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 13:14
14 ತಿಳಿವುಗಳ ಹೋಲಿಕೆ  

ನಿತ್ಯಹೋಮವು ನೀಗಿಸಲ್ಪಟ್ಟು, ಹಾಳುಮಾಡುವ ಅಸಹ್ಯ ವಸ್ತುವು ಪ್ರತಿಷ್ಠಿತವಾದ ಮೇಲೆ ಸಾವಿರದ ಇನ್ನೂರತ್ತೊಂಭತ್ತು ದಿನಗಳು ಕಳೆಯಬೇಕು.


ಆ ಪ್ರಭುವು ಒಂದು ವಾರದ ಮಟ್ಟಿಗೆ ಬಹು ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು; ಅರ್ಧಭಾಗ ಯಜ್ಞನೈವೇದ್ಯಗಳನ್ನು ನಿಲ್ಲಿಸುವನು; ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬಂದು ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.”


ಅವನು ಕೂಡಿಸುವ ಸೈನ್ಯವು ಆಶ್ರಯ ದುರ್ಗವಾದ ಪವಿತ್ರಾಲಯವನ್ನು ಹೊಲೆಗೆಡಿಸಿ, ನಿತ್ಯಹೋಮವನ್ನು ನೀಗಿಸಿ, ಹಾಳುಮಾಡುವ ಅಸಹ್ಯವಸ್ತುವನ್ನು ಪ್ರತಿಷ್ಠಿಸುವುದು.


ಇದನ್ನು ಗ್ರಹಿಸಲು ಜ್ಞಾನವು ಅಗತ್ಯವಾಗಿದೆ. ಬುದ್ಧಿವಂತನು ಆ ಮೃಗದ ಸಂಖ್ಯೆಯನ್ನು ಎಣಿಸಲಿ, ಅದು ಒಬ್ಬ ಮನುಷ್ಯನನ್ನು ಸೂಚಿಸುವ ಸಂಖ್ಯೆಯಾಗಿದೆ. ಅದರ ಸಂಖ್ಯೆಯು 666.


ಈ ಪ್ರವಾದನಾ ವಾಕ್ಯಗಳನ್ನು ಓದುವವನೂ, ಕೇಳುವವರೂ ಮತ್ತು ಇದರಲ್ಲಿ ಬರೆದಿರುವುದನ್ನು ಕೈಕೊಂಡು ನಡೆಯುವವರೂ ಧನ್ಯರು. ಏಕೆಂದರೆ ಅವು ನೆರವೇರುವ ಕಾಲವು ಸಮೀಪವಾಗಿದೆ.


ಸಹೋದರರೇ, ಬಾಲಕರಂತೆ ಆಲೋಚಿಸಬೇಡಿರಿ; ಕೆಟ್ಟತನದ ವಿಷಯದಲ್ಲಿ ಶಿಶುಗಳಂತಿರಿ; ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಾಗಿರಿ.


ಆಗ ಒಬ್ಬ ದೇವದೂತನು ಮಾತನಾಡುವುದನ್ನು ಕೇಳಿದೆನು. ಮಾತನಾಡುವವನನ್ನು ಮತ್ತೊಬ್ಬ ದೇವದೂತನು, “ನಿತ್ಯಹೋಮವನ್ನು ನಿಲ್ಲಿಸುವುದು, ಭಯಂಕರವಾದ ದೇವದ್ರೋಹ ಮಾಡುವುದು, ಪವಿತ್ರಾಲಯವನ್ನೂ, ದೇವಭಕ್ತ ಗಣವನ್ನು ತುಳಿಯುವುದು ಎಂಬ ಕನಸಿನ ಕಾರ್ಯಗಳು ಎಷ್ಟು ಕಾಲ ನಡೆಯುವುದು?” ಎಂದು ಪ್ರಶ್ನೆಮಾಡಿದನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಇಸ್ರಾಯೇಲರಲ್ಲಿ ಸೇರಿಕೊಂಡಿರುವ ಮ್ಲೇಚ್ಛರೊಳಗೆ ಹೃದಯದಲ್ಲಿಯೂ, ಶರೀರದಲ್ಲಿಯೂ ಸುನ್ನತಿಹೀನನಾದ ಯಾರೂ ನನ್ನ ಪವಿತ್ರಾಲಯವನ್ನು ಪ್ರವೇಶಿಸಬಾರದು.


ವಿರೋಧಿಯು ಕೈಚಾಚಿ ಅವಳ ಭೋಗ್ಯವಸ್ತುಗಳನ್ನೆಲ್ಲಾ ಬಾಚಿಬಿಟ್ಟನು; “ಮ್ಲೇಚ್ಛರು ನಿನ್ನ ಸಭೆಗೆ ಸೇರಬಾರದು” ಎಂದು ನೀನು ಆಜ್ಞಾಪಿಸಿದರೂ ಅಂಥವರೇ ತನ್ನಲ್ಲಿನ ಪವಿತ್ರಾಲಯದೊಳಗೆ ಸೇರುವುದನ್ನು ಆಕೆಯು ಕಾಣಬೇಕಾಯಿತು.


“ಈ ಎಲ್ಲಾ ಸಂಗತಿಗಳು ನಿಮಗೆ ಅರ್ಥವಾಯಿತೋ” ಎಂದು ಕೇಳಲು, ಶಿಷ್ಯರು, “ಅರ್ಥವಾಯಿತು” ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು