Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 13:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೇಸು, “ಈ ದೊಡ್ಡ ಕಟ್ಟಡಗಳನ್ನು ನೋಡುತ್ತೀಯಲ್ಲವೇ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವುದಿಲ್ಲ; ಎಲ್ಲವೂ ಕೆಡವಲ್ಪಡುವುದು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅದಕ್ಕೆ ಯೇಸು, “ಈ ಮಹಾಕಟ್ಟಡಗಳನ್ನು ನೀನು ನೋಡುತ್ತಿರುವೆಯಲ್ಲವೆ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವುದಿಲ್ಲ; ಎಲ್ಲವನ್ನೂ ಕೆಡವಿಹಾಕುವರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೇಸು - ಈ ದೊಡ್ಡ ಕಟ್ಟಣಗಳನ್ನು ನೋಡುತ್ತೀಯಾ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವದಿಲ್ಲ; ಎಲ್ಲಾ ಕೆಡವಲ್ಪಡುವದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೇಸು, “ನೀವು ಈ ದೊಡ್ಡ ಕಟ್ಟಡಗಳನ್ನು ನೋಡುತ್ತಿರುವಿರಾ? ಇವುಗಳನ್ನೆಲ್ಲ ನಾಶಪಡಿಸಲಾಗುವುದು. ಪ್ರತಿಯೊಂದು ಕಲ್ಲನ್ನೂ ನೆಲಕ್ಕೆ ಕೆಡವಲಾಗುವುದು. ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಉಳಿಯುವುದಿಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯೇಸು ಅವನಿಗೆ ಉತ್ತರವಾಗಿ, “ನೀನು ಈ ದೊಡ್ಡ ಕಟ್ಟಡಗಳನ್ನು ನೋಡುತ್ತೀಯೋ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವುದಿಲ್ಲ; ಎಲ್ಲವೂ ಕೆಡವಲಾಗುವವು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತನ್ನಾ ಜೆಜುನ್ ತೆಂಕಾ “ತುಮಿ ಎವ್ಡಿ ಬರಿ ಭಾಂದ್ಪಾ ಬಗುಲ್ಯಾಸಿ ಕಿ? ಹೆ ಸಗ್ಳೆ ನಾಸ್ ಹೊವ್ನ್ ಜಾತಾ, ಎಕ್ ಗುಂಡ್ಯಾ ವರ್‍ತಿ ಅನಿ ಎಕ್ ಗುಂಡೊ ರ್‍ಹಾನಾಸ್ತಾನಾ ಹರ್ ಎಕ್ ಗುಂಡೊ ಜಮ್ನಿಕ್ ಕೊಸ್ಳುನ್ ಘಾಲ್ತ್ಯಾತ್” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 13:2
10 ತಿಳಿವುಗಳ ಹೋಲಿಕೆ  

ಯೇಸು, “ನೀವು ಇವುಗಳನ್ನು ನೋಡುತ್ತಿದ್ದೀರಲ್ಲಾ, ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯದೆ ಎಲ್ಲಾ ಕೆಡವಲ್ಪಡುವ ದಿನಗಳು ಬರುವವು” ಅಂದನು.


ಆದರೆ ಅದಕ್ಕೆ ಉತ್ತರವಾಗಿ ಆತನು ಅವರಿಗೆ, “ಇವುಗಳನ್ನೆಲ್ಲಾ ನೋಡುತ್ತೀರಲ್ಲವೇ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವುದಿಲ್ಲ, ಎಲ್ಲಾ ಕೆಡವಲ್ಪಡುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ” ಅಂದನು.


ಹೀಗಿರಲು ನಿಮ್ಮ ದೆಸೆಯಿಂದ ಚೀಯೋನ್ ಪಟ್ಟಣವು ಹೊಲದಂತೆ ಉಳಲ್ಪಡುವುದು, ಯೆರೂಸಲೇಮು ಹಾಳುದಿಬ್ಬಗಳಾಗುವುದು. ಯೆಹೋವನ ಆಲಯದ ಪರ್ವತವು ಕಾಡುಗುಡ್ಡಗಳಂತಾಗುವುದು.


“ಯೆಹೂದದ ಅರಸನಾದ ಹಿಜ್ಕೀಯನ ಕಾಲದಲ್ಲಿ ಮೋರೆಷೆತ್ ಊರಿನವನಾದ ಮೀಕಾಯನು ಯೆಹೂದ್ಯರೆಲ್ಲರಿಗೆ, ‘ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳಿರಿ, ಚೀಯೋನ್ ಪಟ್ಟಣವು ಹೊಲದಂತೆ ಉಳಲಾಗುವುದು, ಯೆರೂಸಲೇಮು ಹಾಳುದಿಬ್ಬಗಳಾಗಿ ಬೀಳುವುದು, ಯೆಹೋವನ ಆಲಯದ ಪರ್ವತವು ಕಾಡು ಗುಡ್ಡಗಳಂತಾಗುವುದು’ ಎಂದು ಹೇಳಲಾಗಿ


ಆಲಯದ ಹೊರಗಿರುವ ಹೊರಾಂಗಣವನ್ನು ಅಳೆಯದೆ ಬಿಟ್ಟುಬಿಡು, ಅದು ಅನ್ಯಜನರಿಗಾಗಿ ಕೊಡಲ್ಪಟ್ಟಿದೆ. ಅವರು ಪರಿಶುದ್ಧ ಪಟ್ಟಣವನ್ನು ನಲವತ್ತೆರಡು ತಿಂಗಳು ತುಳಿದಾಡುವರು.


ಆ ನಜರೇತಿನ ಯೇಸು ಈ ಸ್ಥಳವನ್ನು ನಾಶಮಾಡಿ, ಮೋಶೆ ನಮಗೆ ನೇಮಿಸಿರುವ ಆಚಾರಗಳನ್ನು ಬೇರೆ ಮಾಡುವನೆಂಬುದಾಗಿ ಇವನು ಹೇಳುವುದನ್ನು ನಾವು ಕೇಳಿದ್ದೇವೆ” ಅಂದರು.


ಅರುವತ್ತೆರಡು ವಾರಗಳಾದ ಮೇಲೆ ಅಭಿಷಿಕ್ತನೊಬ್ಬನು ಛೇದಿಸಲ್ಪಡುವನು; ಅವನಿಗೆ ಏನೂ ಇರದು; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪವಿತ್ರಾಲಯವನ್ನೂ ಹಾಳು ಮಾಡುವರು; ತುಂಬಿ ತುಳುಕುವ ಪ್ರಳಯವು ಪಟ್ಟಣವನ್ನು ಕೊನೆಗಾಣಿಸುವುದು; ಅಂತ್ಯದವರೆಗೂ ಯುದ್ಧವಾಗುವುದು, ನಿಶ್ಚಿತ ನಾಶನಗಳು ಸಂಭವಿಸುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು