Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 13:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಇದಲ್ಲದೆ ಆ ದಿನಗಳ ಸಂಕಟವು ತೀರಿದ ನಂತರ; “‘ಸೂರ್ಯನು ಕತ್ತಲಾಗಿ ಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 “ಆ ದಿನಗಳಲ್ಲಿ ಈ ಸಂಕಷ್ಟಗಳು ಮುಗಿದ ಬಳಿಕ ಸೂರ್ಯನು ಅಂಧಕಾರಮಯನಾಗುವನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಇದಲ್ಲದೆ ಆ ದಿನಗಳಲ್ಲಿ ಆ ಸಂಕಟ ತೀರಿದ ಮೇಲೆ ಸೂರ್ಯನು ಕತ್ತಲಾಗಿ ಹೋಗುವನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 “ಈ ಸಂಕಟವು ತೀರಿದ ಮೇಲೆ, ‘ಸೂರ್ಯನು ಕತ್ತಲಾಗುತ್ತಾನೆ. ಚಂದ್ರನು ಬೆಳಕನ್ನು ಕೊಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 “ಇದಲ್ಲದೆ ಆ ದಿವಸಗಳಲ್ಲಿ ಸಂಕಟವು ತೀರಿದ ನಂತರ, “ ‘ಸೂರ್ಯನಿಗೆ ಕತ್ತಲು ಮುಸುಕುವುದು; ಚಂದ್ರನು ಕಾಂತಿಹೀನನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 “ಹಿ ಸಂಕಟಾಚಿ ದಿಸಾ ಸರಲ್ಲ್ಯಾ ತನ್ನಾ, ಸೂರ್ಯಾ ಕಾಳೊ ಹೊತಾ,ಅನಿ ಚಂದ್ರಾಮ್ ಉಜ್ವೊಡ್ ದಿ ನಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 13:24
20 ತಿಳಿವುಗಳ ಹೋಲಿಕೆ  

ಆಕಾಶದ ತಾರೆಗಳೂ, ನಕ್ಷತ್ರ ರಾಶಿಗಳೂ ಬೆಳಕನ್ನು ಕೊಡುವುದಿಲ್ಲ. ಸೂರ್ಯನು ಮೂಡುತ್ತಲೇ ಕತ್ತಲಾಗುವನು. ಚಂದ್ರನು ಪ್ರಕಾಶಿಸುವುದಿಲ್ಲ.


ಆದರೂ ಕರ್ತನ ದಿನವು ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶ ಮಂಡಲವು ಮಹಾಘೋಷದಿಂದ ಇಲ್ಲದೆ ಹೋಗುವವು. ಮೂಲಧಾತುಗಳು ಉರಿದು ಲಯವಾಗಿ ಹೋಗುವವು. ಭೂಮಿಯೂ ಅದರಲ್ಲಿರುವ ಕೆಲಸಗಳೂ ಸುಟ್ಟು ಹೋಗುವವು.


ಯೆಹೋವನ ದಿನವು ಬೆಳಕಲ್ಲ; ಕತ್ತಲೆಯೇ! ಯಾವ ಪ್ರಕಾಶ ಇಲ್ಲದ ಗಾಢಾಂಧಕಾರವೇ!


ಸೂರ್ಯ ಮತ್ತು ಚಂದ್ರರು ಮಂಕಾಗುತ್ತಾರೆ, ನಕ್ಷತ್ರಗಳು ಕಾಂತಿಗುಂದುತ್ತವೆ.


ಆ ಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕುಳಿತಿದ್ದಾತನನ್ನೂ ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋದವು, ಆದರೆ ಹೋಗುವುದಕ್ಕೆ ಅವುಗಳಿಗೆ ಸ್ಥಳವಿರಲಿಲ್ಲ.


ದೇವರ ದಿನದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಆತುರಪಡುವ ಆ ದಿನದಲ್ಲಿ ಆಕಾಶಮಂಡಲವು ಬೆಂಕಿಯಿಂದ ನಾಶವಾಗಿ ಹೋಗುವವು. ಅತಿ ಉಷ್ಣದಿಂದ ಮೂಲಧಾತುಗಳು ಉರಿದು ಕರಗಿ ಹೋಗುವವು.


ಅವುಗಳ ಆಗಮನದಿಂದ ಭೂಮಿಯು ಕಂಪಿಸುತ್ತದೆ, ಆಕಾಶಮಂಡಲವು ನಡಗುತ್ತದೆ, ಸೂರ್ಯ ಮತ್ತು ಚಂದ್ರರು ಮಂಕಾಗುತ್ತಾರೆ, ಮತ್ತು ನಕ್ಷತ್ರಗಳು ಕಾಂತಿಗುಂದುತ್ತವೆ.


“ನಿನ್ನ ಜನರ ಪಕ್ಷವನ್ನು ಹಿಡಿದಿರುವ ಮಹಾಪಾಲಕನಾದ ದೇವದೂತ ಮೀಕಾಯೇಲನು ಆ ಕಾಲದಲ್ಲಿ ಏಳುವನು. ಮೊಟ್ಟಮೊದಲು ಜನಾಂಗವು ಉಂಟಾದ ದಿನದಿಂದ ಇಂದಿನವರೆಗೂ ಸಂಭವಿಸದಂಥ ಸಂಕಟವು ಸಂಭವಿಸುವುದು. ಆಗ ನಿನ್ನ ಜನರೊಳಗೆ ಯಾರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಸಿಕ್ಕುವವೋ ಅವರೆಲ್ಲರೂ ರಕ್ಷಿಸಲ್ಪಡುವರು.


ನ್ಯಾಯಾಸನದ ಮುಂದೆ ಉರಿಯ ಪ್ರವಾಹವು ಉಕ್ಕಿ ಹರಿದು ಬಂದಿತು. ಲಕ್ಷೋಪಲಕ್ಷ ದೂತರು ಆತನ ಸೇವೆಗೆ ಸಿದ್ಧರಾಗಿದ್ದರು. ಕೋಟ್ಯಾನುಕೋಟಿ ಕಿಂಕರರು ಆತನ ಮುಂದೆ ನಿಂತುಕೊಂಡಿದ್ದರು. ನ್ಯಾಯಸಭೆಯವರು ಕುಳಿತುಕೊಂಡರು, ಪುಸ್ತಕಗಳು ತೆರೆಯಲ್ಪಟ್ಟವು.


ಫರೋಹನನೇ, ಆಗ ನಾನು ನಿನ್ನ ಬೆಳಕನ್ನು ನಂದಿಸುವಾಗ, ಆಕಾಶಕ್ಕೆ ಮುಸುಕುಹಾಕಿ, ಅಲ್ಲಿನ ನಕ್ಷತ್ರಗಳನ್ನು ಮಸುಕುಮಾಡಿ, ಸೂರ್ಯನನ್ನು ಮೋಡದಿಂದ ಮುಚ್ಚಿಬಿಡುವೆನು, ಚಂದ್ರನೂ ಪ್ರಕಾಶಿಸನು.


ಇದಕ್ಕಾಗಿ ಭೂಲೋಕವು ಪ್ರಲಾಪಿಸುವುದು, ಮೇಲೆ ಆಕಾಶವು ಕಪ್ಪಾಗುವುದು; ನಾನು ನುಡಿದಿದ್ದೇನೆ, ಪಶ್ಚಾತ್ತಾಪಪಡೆನು; ಇದರಿಂದ, ಹಿಂದೆಗೆಯನು” ಎಂದು ನುಡಿಯುತ್ತಾನೆ.


ನೀವಂತೂ ಜಾಗರೂಕರಾಗಿರಿ. ನಾನು ನಿಮಗೆ ಎಲ್ಲವುಗಳನ್ನು ಮುಂದಾಗಿಯೇ” ಹೇಳಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು