Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 13:36 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಆತನು ಫಕ್ಕನೆ ಬಂದು ನೀವು ನಿದ್ರೆ ಮಾಡುತ್ತಿರುವುದನ್ನು ಕಂಡಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಅನಿರೀಕ್ಷಿತವಾಗಿ ಅವನು ಬಂದಾಗ ನೀವು ನಿದ್ರಿಸುತ್ತಿರುವುದನ್ನು ಕಂಡಾನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಅವನು ಏಕಾಏಕಿ ಬಂದು ನೀವು ನಿದ್ದೆ ಮಾಡುವದನ್ನು ಕಂಡಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಯಜಮಾನನು ಬೇಗನೆ ಹಿಂತಿರುಗಿ ಬರಬಹುದು. ನೀವು ಯಾವಾಗಲೂ ಸಿದ್ಧವಾಗಿದ್ದರೆ, ಅವನು ಬಂದಾಗ ನೀವು ನಿದ್ರಿಸುತ್ತಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಆತನು ಫಕ್ಕನೆ ಬಂದು ನೀವು ನಿದ್ರೆ ಮಾಡುವುದನ್ನು ಕಂಡಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ತೊ ಎಗ್ದಮುಚ್ ಯೆಲೊ ತರ್, ತುಮಿ ತೆಚ್ಯಾ ಇದ್ರಾಕ್ ಜಾಗೆ ಹೊತ್ತ್ಯಾ ಸರ್ಕೆ ದಿಸುಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 13:36
14 ತಿಳಿವುಗಳ ಹೋಲಿಕೆ  

ಯೇಸು ಹಿಂತಿರುಗಿ ಬಂದಾಗ ಅವರು ಪುನಃ ನಿದ್ರೆ ಮಾಡುವುದನ್ನು ಕಂಡನು ಯಾಕೆಂದರೆ ಅವರ ಕಣ್ಣುಗಳು ಭಾರವಾಗಿದ್ದವು. ಮತ್ತು ಆತನಿಗೆ ಏನು ಉತ್ತರ ಕೊಡಬೇಕೆಂದು ಅವರಿಗೆ ತಿಳಿಯಲಿಲ್ಲ.


“ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ. ಅತಿ ಭೋಜನದ ಮದದಿಂದಲೂ, ಅಮಲಿನಿಂದಲೂ, ಪ್ರಾಪಂಚಿಕವಾದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗಿರಲಾಗಿ ಆ ದಿನವು ನಿಮ್ಮ ಮೇಲೆ ಉರುಲಿನಂತೆ ಫಕ್ಕನೆ ಬಂದೀತು.


ಮದಲಿಂಗನು ಬರುವುದಕ್ಕೆ ತಡಮಾಡಲು ಅವರೆಲ್ಲರೂ ತೂಕಡಿಸಿ ನಿದ್ರಿಸಿದರು.


ಆ ಮೇಲೆ ಆತನು ಬಂದು ಶಿಷ್ಯರು ನಿದ್ರೆ ಮಾಡುವುದನ್ನು ಕಂಡು ಪೇತ್ರನಿಗೆ, “ಸೀಮೋನನೇ, ನೀನು ನಿದ್ರೆಮಾಡುತ್ತಿರುವೆಯಾ? ಒಂದು ಗಳಿಗೆಯಾದರೂ ಎಚ್ಚರವಾಗಿರಲಾರೆಯಾ?


ಇವರ ಕಾವಲುಗಾರರು ಕುರುಡರು, ಇವರಲ್ಲಿ ಯಾರಿಗೂ ತಿಳಿವಳಿಕೆಯಿಲ್ಲ; ಇವರೆಲ್ಲರೂ ಬೊಗಳಲಾರದ ಮೂಕ ನಾಯಿಗಳು, ನಿದ್ರೆಯನ್ನಾಶಿಸಿ ಮಲಗಿಕೊಂಡು ಕನವರಿಸುವ ನಾಯಿಗಳು.


ಆದ್ದರಿಂದ, “ನಿದ್ರೆ ಮಾಡುವವನೇ, ಎಚ್ಚರವಾಗು! ಸತ್ತವರನ್ನು ಬಿಟ್ಟು ಏಳು! ಆಗ ಕ್ರಿಸ್ತನು ನಿನ್ನಲ್ಲಿ ಪ್ರಕಾಶಿಸುವನು” ಎಂದು ಹೇಳಿಯದೆಯಲ್ಲಾ.


ಆತನು ಪ್ರಾರ್ಥನೆ ಮುಗಿಸಿ ಎದ್ದು ಶಿಷ್ಯರ ಬಳಿಗೆ ಬಂದು, ಅವರು ದುಃಖದಿಂದ ಬಳಲಿಹೋದವರಾಗಿ ನಿದ್ರೆಹತ್ತಿರುವುದನ್ನು ಕಂಡು,


ನಾನು ನಿದ್ರೆಗೊಂಡಿದ್ದರೂ ನನ್ನ ಹೃದಯವು ಎಚ್ಚರಗೊಂಡಿತ್ತು. ಇಗೋ, ಎನ್ನಿನಿಯನು ಕದ ತಟ್ಟಿ, “ಪ್ರಿಯಳೇ, ಕಾಂತಳೇ, ಪಾರಿವಾಳವೇ, ನಿರ್ಮಲೆಯೇ, ಬಾಗಿಲು ತೆಗೆ! ನನ್ನ ತಲೆಯ ಮೇಲೆಲ್ಲಾ ಇಬ್ಬನಿಯು ಬಿದ್ದಿದೆ, ನನ್ನ ಕೂದಲು ರಾತ್ರಿ ಬೀಳುವ ಹನಿಗಳಿಂದ ತುಂಬಿದೆ” ಅಂದನು.


ರಾತ್ರಿಯಲ್ಲಿ ಹಾಸಿಗೆಯ ಮೇಲೆ ನನ್ನ ಪ್ರಾಣಪ್ರಿಯನನ್ನು ಹುಡುಕಿದೆನು, ಎಷ್ಟು ಹುಡುಕಿದರೂ ಸಿಕ್ಕಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು