ಮಾರ್ಕ 14:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಪಸ್ಕಹಬ್ಬ ಎಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬ ಬರುವುದಕ್ಕೆ ಇನ್ನೂ ಎರಡು ದಿನಗಳಿದ್ದಾಗ ಮುಖ್ಯಯಾಜಕರೂ ಶಾಸ್ತ್ರಿಗಳೂ ಯೇಸುವನ್ನು ಉಪಾಯದಿಂದ ಹಿಡಿದು ಕೊಲ್ಲುವುದಕ್ಕೆ ಮಾರ್ಗವನ್ನು ಹುಡುಕುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಪಾಸ್ಕಹಬ್ಬವು, ಅಂದರೆ ಹುಳಿರಹಿತ ರೊಟ್ಟಿಯ ಹಬ್ಬವು ಬರುವುದಕ್ಕೆ ಇನ್ನು ಎರಡು ದಿನಗಳು ಮಾತ್ರ ಇದ್ದವು. ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ಯೇಸುಸ್ವಾಮಿಯನ್ನು ಉಪಾಯದಿಂದ ಹಿಡಿದು ಕೊಲ್ಲಿಸುವುದಕ್ಕೆ ಹವಣಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಪಸ್ಕದ ಮತ್ತು ಹುಳಿಯಿಲ್ಲದ ರೊಟ್ಟಿಯ ಹಬ್ಬ ಬರುವದಕ್ಕೆ ಇನ್ನೂ ಎರಡು ದಿನಗಳಿದ್ದಾಗ ಮಹಾಯಾಜಕರೂ ಶಾಸ್ತ್ರಿಗಳೂ ಯೇಸುವನ್ನು ಉಪಾಯದಿಂದ ಹಿಡಿದು ಕೊಲ್ಲುವದಕ್ಕೆ ಮಾರ್ಗವನ್ನು ಹುಡುಕುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಪಸ್ಕ ಮತ್ತು ಹುಳಿಯಿಲ್ಲದ ರೊಟ್ಟಿಯ ಹಬ್ಬಕ್ಕೆ ಕೇವಲ ಎರಡು ದಿನಗಳಿದ್ದವು. ಮಹಾಯಾಜಕರು ಹಾಗೂ ಧರ್ಮೋಪದೇಶಕರು ಯಾವುದಾದರೊಂದು ಸುಳ್ಳು ಅಪವಾದವನ್ನು ಕಂಡುಹಿಡಿದು ಯೇಸುವನ್ನು ಬಂಧಿಸಿ ಆತನನ್ನು ಕೊಲ್ಲಬೇಕೆಂದಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಪಸ್ಕದ ಮತ್ತು ಹುಳಿಯಿಲ್ಲದ ರೊಟ್ಟಿಯ ಹಬ್ಬ ಬರುವುದಕ್ಕೆ ಇನ್ನೂ ಎರಡು ದಿವಸಗಳಿದ್ದಾಗ, ಮುಖ್ಯಯಾಜಕರೂ ನಿಯಮ ಬೋಧಕರೂ ಉಪಾಯದಿಂದ ಯೇಸುವನ್ನು ಹೇಗೆ ಹಿಡಿದು ಕೊಲ್ಲಬೇಕೆಂದು ಮಾರ್ಗ ಹುಡುಕುತ್ತಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಪಾಸ್ಕ್ ಮನ್ತಲ್ಯಾ ಅನಿ ಇಸ್ಟ್ ಘಾಲಿನಸ್ತಾನಾ ಕರಲ್ಲ್ಯಾ ಭಾಕ್ರಿಚ್ಯಾ ಸನಾಕ್ ಅನಿ ಖಾಲಿ ದೊನ್ ದಿಸಾ ಹುರಲ್ಲಿ, ತನ್ನಾ ಮುಖ್ಯ ಯಾಜಕಾನಿ ಅನಿ ಖಾಯ್ದೆ ಸಿಕ್ವುತಲ್ಯಾನಿ ಜೆಜುಕ್ ಘುಟಾನಿ ಧರುನ್ ಜಿವಾನಿ ಮಾರುಚೆ ಮನುನ್ ಯವ್ಜುನ್ ಘೆವ್ನ್ ಹೊತ್ತ್ಯಾನಿ. ಅಧ್ಯಾಯವನ್ನು ನೋಡಿ |