Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನ ಅಂದರೆ ಪಸ್ಕದ ಕುರಿಮರಿಯನ್ನು ಕೊಯ್ಯುವ ದಿನವಾಗಿತ್ತು. ಶಿಷ್ಯರು ಯೇಸುವಿಗೆ, “ನೀನು ಪಸ್ಕದ ಭೋಜನ ಮಾಡಲು ನಾವು ಎಲ್ಲಿ ಸಿದ್ಧಮಾಡಬೇಕೆಂದು ಹೇಳು” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅಂದು ಹುಳಿರಹಿತ ರೊಟ್ಟಿಯ ಹಬ್ಬದ ಮೊದಲನೆಯ ದಿನ. ಅಂದರೆ, ಪಾಸ್ಕಹಬ್ಬದ ಕುರಿಮರಿಯನ್ನು ಕೊಯ್ಯುವ ದಿನ. ಶಿಷ್ಯರು ಯೇಸುಸ್ವಾಮಿಯ ಬಳಿಗೆ ಬಂದು, “ತಮಗೆ ಪಾಸ್ಕಭೋಜನವನ್ನು ನಾವು ಎಲ್ಲಿ ಸಿದ್ಧಪಡಿಸಬೇಕೆನ್ನುತ್ತೀರಿ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿವಸ, ಅಂದರೆ ಪಸ್ಕದ ಕುರಿಮರಿಯನ್ನು ಕೊಯ್ಯುವ ದಿವಸ, ಆತನ ಶಿಷ್ಯರು - ನೀನು ಪಸ್ಕದ ಊಟ ಮಾಡುವಂತೆ ನಾವು ಎಲ್ಲಿ ಹೋಗಿ ಸಿದ್ಧಮಾಡಬೇಕನ್ನುತ್ತೀ ಎಂದು ಆತನನ್ನು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅಂದು ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನವಾಗಿತ್ತು. ಯೆಹೂದಿಗಳು ಯಾವಾಗಲೂ ಪಸ್ಕಹಬ್ಬದ ಕುರಿಮರಿಗಳನ್ನು ಯಜ್ಞಮಾಡುವ ಸಮಯ ಇದಾಗಿತ್ತು. ಯೇಸುವಿನ ಶಿಷ್ಯರು ಆತನ ಬಳಿಗೆ ಬಂದು, “ನಾವು ಪಸ್ಕಹಬ್ಬದ ಊಟವನ್ನು ನಿನಗಾಗಿ ಎಲ್ಲಿ ಸಿದ್ಧಪಡಿಸೋಣ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅಂದು ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನ ಅಂದರೆ ಪಸ್ಕದ ಕುರಿಯನ್ನು ವಧಿಸುವ ದಿನವಾಗಿತ್ತು. ಶಿಷ್ಯರು ಯೇಸುವಿಗೆ, “ನೀವು ಪಸ್ಕದ ಊಟ ಮಾಡಲು ನಾವು ಎಲ್ಲಿಗೆ ಹೋಗಿ ಅದನ್ನು ಸಿದ್ಧಪಡಿಸೋಣ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಜೆಜು ಅಪ್ನಾಚ್ಯಾ ಸಿಸಾಂಚ್ಯಾ ವಾಂಗ್ಡಾ ಪಾಸ್ಕಾಚೆ ಜೆವಾನ್ ಕರ್‍ತಲೆ ಇಸ್ಟ್ ಘಾಲಿನಸಲ್ಲ್ಯಾ ಭಾಕ್ರಿಚ್ಯಾ ಸನಾಚ್ಯಾ ಪಯ್ಲೆಚ್ಯಾ ದಿಸಿ, ಪಾಸ್ಕಾಚ್ಯಾ ಸನಾಚ್ಯಾ ಜೆವ್ನಾಚೆ ಬಕ್ರೆ ಬಲಿ ದಿತಲ್ಯಾ ದಿಸಿ, ಶಿಸಾನಿ ಜೆಜುಕ್ಡೆ ಯೆವ್ನ್ “ಪಾಸ್ಕಾಚ್ಯಾ ಜೆವ್ನಾಚಿ ತಯಾರಿ ಅಮಿ ಖೈ ಜಾವ್ನ್ ಕರುಚೆ ಮನುನ್ ತಿಯಾ ಮನ್ತೆ?” ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:12
16 ತಿಳಿವುಗಳ ಹೋಲಿಕೆ  

ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲ ಮೊದಲುಗೊಂಡು ಅದೇ ತಿಂಗಳಿನ ಇಪ್ಪತ್ತೊಂದನೆಯ ದಿನದ ಸಾಯಂಕಾಲದವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನೇ ತಿನ್ನಬೇಕು.


ಈ ತಿಂಗಳಿನ ಹದಿನಾಲ್ಕನೆಯ ದಿನದವರೆಗೆ ಅವುಗಳನ್ನು ಇಟ್ಟುಕೊಂಡಿದ್ದು, ಆ ದಿನದ ಸಂಜೆ ವೇಳೆಯಲ್ಲಿ ಇಸ್ರಾಯೇಲರ ಸಮೂಹದವರೆಲ್ಲರೂ ಒಟ್ಟಿಗೆ ಸೇರಿ ಅವುಗಳನ್ನು ವಧಿಸಬೇಕು.


ಆ ರಾತ್ರಿಯಲ್ಲಿಯೇ ಆ ಮಾಂಸವನ್ನು ಭೋಜನಮಾಡಬೇಕು. ಅದನ್ನು ಬೆಂಕಿಯಲ್ಲಿ ಸುಟ್ಟು ಹುಳಿಯಿಲ್ಲದ ರೊಟ್ಟಿಗಳ ಮತ್ತು ಕಹಿಯಾದ ಸೊಪ್ಪಿನ ಪಲ್ಯಗಳ ಸಂಗಡ ಊಟಮಾಡಬೇಕು.


ಆದರೆ ಸೂಕ್ತಸಮಯ ಬಂದಾಗ ದೇವರು ತನ್ನ ಮಗನನ್ನು ಕಳುಹಿಸಿಕೊಟ್ಟನು. ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಬಿಡಿಸಬೇಕೆಂತಲೂ, ಪುತ್ರರ ಬಾಧ್ಯತೆಯ ಪದವಿಯನ್ನು ನಮಗೆ ದೊರಕಿಸಿಕೊಡಬೇಕೆಂತಲೂ ಆತನು ಸ್ತ್ರೀಯಲ್ಲಿ ಹುಟ್ಟಿದವನಾಗಿಯೂ, ಧರ್ಮಶಾಸ್ತ್ರಾಧೀನನಾಗಿಯೂ ಬಂದನು.


ಮೋಶೆಯು ಇಸ್ರಾಯೇಲರಿಗೆ, “ನೀವು ದಾಸತ್ವದಲ್ಲಿದ್ದ ಐಗುಪ್ತ ದೇಶದೊಳಗಿಂದ ಬಿಡುಗಡೆಯಾದ ಈ ದಿನವನ್ನು ನೆನಪಿನಲ್ಲಿಟ್ಟುಕೊಳ್ಳಿರಿ. ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಆ ಸ್ಥಳದಿಂದ ಬಿಡಿಸಿದ್ದಾನೆ. ಈ ದಿನದಲ್ಲಿ ನೀವು ಹುಳಿಬೆರೆಸಿದ್ದನ್ನು ತಿನ್ನಬಾರದು.


ಯೇಸು ಪ್ರತ್ಯುತ್ತರವಾಗಿ ಅವನಿಗೆ, “ಸದ್ಯಕ್ಕೆ ಒಪ್ಪಿಕೋ; ಹೀಗೆ ನಾವು ಎಲ್ಲಾ ನೀತಿಯನ್ನು ನೆರವೇರಿಸತಕ್ಕದ್ದಾಗಿದೆ” ಎಂದು ಹೇಳಿದಾಗ ಯೋಹಾನನು ಒಪ್ಪಿಕೊಂಡನು.


ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಯಾವ ಊರಲ್ಲಿಯಾದರೂ ಪಸ್ಕದ ಪಶುವನ್ನು ವಧಿಸದೆ,


ಪಸ್ಕಹಬ್ಬ ಎಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬ ಬರುವುದಕ್ಕೆ ಇನ್ನೂ ಎರಡು ದಿನಗಳಿದ್ದಾಗ ಮುಖ್ಯಯಾಜಕರೂ ಶಾಸ್ತ್ರಿಗಳೂ ಯೇಸುವನ್ನು ಉಪಾಯದಿಂದ ಹಿಡಿದು ಕೊಲ್ಲುವುದಕ್ಕೆ ಮಾರ್ಗವನ್ನು ಹುಡುಕುತ್ತಿದ್ದರು.


ಅವರು ಅದನ್ನು ಕೇಳಿ ಸಂತೋಷಪಟ್ಟು, ನಿನಗೆ ಹಣಕೊಡುತ್ತೇವೆ ಎಂದು ಮಾತುಕೊಟ್ಟರು. ಅಂದಿನಿಂದ ಯೂದನು ಯೇಸುವನ್ನು ಹಿಡಿದುಕೊಡುವುದಕ್ಕೆ ಅನುಕೂಲವಾದ ಸಂದರ್ಭವನ್ನು ಹುಡುಕುತ್ತಿದ್ದನು.


ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು ಅವರಿಗೆ, “ನೀವು ಪಟ್ಟಣದೊಳಗೆ ಹೋಗಿರಿ. ಅಲ್ಲಿ ತುಂಬಿದ ನೀರಿನ ಕೊಡವನ್ನು ಹೊತ್ತುಕೊಂಡು ಹೋಗುವ ಒಬ್ಬ ಮನುಷ್ಯನು ನಿಮ್ಮನ್ನು ಸಂಧಿಸುವನು. ಅವನನ್ನು ಹಿಂಬಾಲಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು