Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆಗ ಯೇಸು ಅವರಿಗೆ, “ನೀವೆಲ್ಲರೂ ನನ್ನನ್ನು ಬಿಟ್ಟು ಓಡಿಹೋಗುವಿರಿ. ಏಕೆಂದರೆ; “‘ನಾನು ಕುರುಬನನ್ನು ಹೊಡೆಯುವೆನು; ಕುರಿಗಳು ಚದರಿ ಹೋಗುವವು’ ಎಂದು ಬರೆದಿದೆಯಲ್ಲಾ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಅನಂತರ ಯೇಸುಸ್ವಾಮಿ ಶಿಷ್ಯರಿಗೆ, “ ‘ಕುರುಬನನ್ನು ಕೊಲ್ಲುವೆನು ಕುರಿಗಳು ಚದರಿಹೋಗುವುವು’ ಎಂದು ಪವಿತ್ರಗ್ರಂಥದಲ್ಲಿ ಬರೆದಿರುವಂತೆ ನೀವು ಎಲ್ಲರೂ ನನ್ನಲ್ಲಿ ವಿಶ್ವಾಸ ಕಳೆದುಕೊಂಡು ಹಿಮ್ಮೆಟ್ಟುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆಗ ಯೇಸು ಅವರಿಗೆ - ನೀವೆಲ್ಲರೂ ದಿಗಿಲು ಪಟ್ಟು ಹಿಂಜರಿಯುವಿರಿ. ಕುರುಬನನ್ನು ಹೊಡೆಯುವೆನು, ಕುರಿಗಳು ಚದರಿಹೋಗುವವು ಎಂದು ಬರೆದದೆಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ನಂತರ ಯೇಸು ಶಿಷ್ಯರಿಗೆ, “ನೀವೆಲ್ಲರೂ ಭಯಗೊಂಡು ಹಿಂಜರಿಯುವಿರಿ. ‘ನಾನು ಕುರುಬನನ್ನು ಹೊಡೆಯುವೆನು; ಆಗ ಕುರಿಗಳು ಚದರಿಹೋಗುತ್ತವೆ’ ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆಗ ಯೇಸು, “ನೀವೆಲ್ಲರೂ ಓಡಿಹೋಗುವಿರಿ. ಏಕೆಂದರೆ ಪವಿತ್ರ ವೇದದಲ್ಲಿ ಹೀಗೆ ಬರೆದಿದೆ: “ ‘ನಾನು ಕುರುಬನನ್ನು ಹೊಡೆಯುವೆನು, ಕುರಿಗಳು ಚದರಿಹೋಗುವುವು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಮಾನಾ ಜೆಜುನ್ ತೆಂಕಾ “ತುಮಿ ಮಾಕಾ ಸೊಡುನ್ ಪಳುನ್ ಜಾತ್ಯಾಶಿ” ಕಶ್ಯಾಕ್ ಮಟ್ಲ್ಯಾರ್ “ದೆವ್ ಕುರ್‍ಬುರಾಕ್ ಜಿವಾನಿ ಮಾರ್‍ತಾ, ತನ್ನಾ ಸಗ್ಳಿ ಬಕ್ರಿ ಮಾಳ್ಬರ್ ಹೊತ್ಯಾತ್” ಮನುನ್ ಪವಿತ್ರ್ ಪುಸ್ತಕಾತ್ ಲಿವಲ್ಲೆ ಹಾಯ್ ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:27
7 ತಿಳಿವುಗಳ ಹೋಲಿಕೆ  

ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಖಡ್ಗವೇ, ನಾನು ನೇಮಿಸಿದ ಕುರುಬನೂ, ನನ್ನ ಸಂಗಡಿಗನೂ ಆಗಿರುವವನ ವಿರುದ್ಧ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದುರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ.


ಇಗೋ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಸ್ಥಳಕ್ಕೆ ಚದರಿಹೋಗಿ ನನ್ನನ್ನು ಒಬ್ಬಂಟಿಗನಾಗಿ ಬಿಡುವ ಸಮಯವು ಬರುತ್ತದೆ. ಹೌದು, ಅದು ಈಗಲೇ ಬಂದಿದೆ. ಆದರೂ ನಾನು ಏಕಾಂಗಿಯಲ್ಲ, ಏಕೆಂದರೆ ತಂದೆಯು ನನ್ನ ಸಂಗಡ ಇದ್ದಾನೆ.


ಆಗ ಯೇಸು, ಅವರಿಗೆ, “ಕುರುಬನನ್ನು ಹೊಡೆಯುವೆನು; ಹಿಂಡಿನ ಕುರಿಗಳು ಚದರಿಹೋಗುವವು ಎಂದು ಬರೆದಿರುವ ಹಾಗೆ ನೀವೆಲ್ಲರೂ ಈ ರಾತ್ರಿ ನನ್ನ ವಿಷಯದಲ್ಲಿ ಹಿಂಜರಿಯುವಿರಿ.”


“ನೀವು ನಂಬಿಕೆಯಿಂದ ಎಡವಿ ಬಿದ್ದು ಹೋಗಬಾರದೆಂದು ನಾನು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ.


ನಾನು ಮೊದಲನೆ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನ ಸಂಗಡ ಇರಲಿಲ್ಲ, ಎಲ್ಲರೂ ನನ್ನನ್ನು ಕೈಬಿಟ್ಟರು. ಇದು ಅವರಿಗೆ ದೋಷವಾಗಿ ಎಣಿಸಲ್ಪಡದೆ ಇರಲಿ.


ನನ್ನ ವಿಷಯದಲ್ಲಿ ಆಪಾದಿಸದವನೇ ಧನ್ಯನು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು