Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಪೇತ್ರ, ಯಾಕೋಬ, ಯೋಹಾನರನ್ನು ತನ್ನ ಜೊತೆಯಲ್ಲಿ ಕರೆದುಕೊಂಡು ಹೋಗಿ ಬಹು ಬೆಚ್ಚಿಬೆರಗಾಗಿ ಮನಗುಂದಿದವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಯೇಸುಸ್ವಾಮಿ ತಮ್ಮ ಶಿಷ್ಯರಿಗೆ, “ನಾನು ಪ್ರಾರ್ಥನೆಮಾಡಿ ಬರುವವರೆಗೂ ನೀವು ಇಲ್ಲೇ ಕುಳಿತಿರಿ,” ಎಂದು ಹೇಳಿ ಪೇತ್ರ ಯಕೋಬ ಮತ್ತು ಯೊವಾನ್ನರನ್ನು ಮಾತ್ರ ತಮ್ಮ ಜೊತೆಯಲ್ಲಿ ಕರೆದುಕೊಂಡು ಮುಂದಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಬೆಚ್ಚಿಬೆರಗಾಗಿ ಮನಗುಂದಿದವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಪೇತ್ರನನ್ನು, ಯಾಕೋಬನನ್ನು ಮತ್ತು ಯೋಹಾನನನ್ನು ತನ್ನ ಜೊತೆ ಕರೆದುಕೊಂಡು ಹೋದನು. ನಂತರ ಯೇಸು ಬಹಳ ಗಲಿಬಿಲಿಗೊಂಡು, ದುಃಖದಿಂದ ತುಂಬಿದವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಯೇಸು ಪೇತ್ರ, ಯಾಕೋಬ, ಯೋಹಾನರನ್ನು ತಮ್ಮೊಂದಿಗೆ ಕರೆದುಕೊಂಡು ಹೋಗಿ, ಬಹು ಬೆರಗಾಗಿ ವ್ಯಥೆಗೊಳ್ಳಲಾರಂಭಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ಜೆಜುನ್ ಪೆದ್ರುಕ್ ಜಾಕೊಬಾಕ್ ಅನಿ ಜುವಾಂವಾಕ್ ವಾಂಗ್ಡಾ ಘೆವ್ನ್ ಗೆಲ್ಯಾನ್, ತರಾಸ್ ಅನಿ ದುಕ್ ತೆಚೆ ವರ್‍ತಿ ಯೆಲ್ಲೆ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:33
13 ತಿಳಿವುಗಳ ಹೋಲಿಕೆ  

ಯೇಸು ತೀವ್ರವಾದ ಮನೋವ್ಯಥೆಯುಳ್ಳವನಾಗಿ, ಆಸಕ್ತಿಯಿಂದ ಪ್ರಾರ್ಥಿಸುತ್ತಿರಲಾಗಿ, ಆತನ ಬೆವರು ರಕ್ತದ ಹನಿಗಳೋಪಾದಿಯಲ್ಲಿ ನೆಲಕ್ಕೆ ಬೀಳುತ್ತಿತ್ತು.


ಕ್ರಿಸ್ತನು ತಾನೇ ಭೂಲೋಕದಲ್ಲಿ ಮನುಷ್ಯನಾಗಿ ಜೀವಿಸಿದ್ದ ಕಾಲದಲ್ಲಿ, ಮರಣದಿಂದ ತಪ್ಪಿಸಿ ಕಾಪಾಡಲು ಶಕ್ತನಾಗಿರುವಾತನಿಗೆ ಗಟ್ಟಿಯಾಗಿ ಮೊರೆಯಿಡುತ್ತಾ, ಕಣ್ಣೀರನ್ನು ಸುರಿಸುತ್ತಾ, ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿದನು. ದೇವರ ಮೇಲಣ ಭಯಭಕ್ತಿಯ ನಿಮಿತ್ತ ಆತನ ಪ್ರಾರ್ಥನೆಯನ್ನು ದೇವರು ಕೇಳಿದನು.


ಮತ್ತು ಆತನು ಪೇತ್ರ, ಯಾಕೋಬ, ಮತ್ತು ಯಾಕೋಬನ ತಮ್ಮನಾದ ಯೋಹಾನ ಇವರನ್ನೇ ಹೊರತು ಬೇರೆ ಯಾರನ್ನೂ ತನ್ನೊಂದಿಗೆ ಬರುವುದಕ್ಕೆ ಅನುಮತಿಸಲಿಲ್ಲ.


ನನ್ನ ಆಪ್ತಸ್ನೇಹಿತರು ಮತ್ತು ಜೊತೆಗಾರರು, ನನ್ನ ರೋಗವನ್ನು ನೋಡಿ ಓರೆಯಾಗಿ ಹೋಗುತ್ತಾರೆ; ನನ್ನ ಬಂಧುಗಳು ದೂರ ನಿಲ್ಲುತ್ತಾರೆ.


ಆರು ದಿನಗಳಾದ ಮೇಲೆ ಯೇಸು ಪೇತ್ರ, ಯಾಕೋಬ, ಯೋಹಾನ ಇವರನ್ನು ಮಾತ್ರ ತನ್ನೊಡನೆ ಕರೆದುಕೊಂಡು ಎತ್ತರವಾದ ಬೆಟ್ಟಕ್ಕೆ ಹೋದನು. ಅಲ್ಲಿ ಅವರ ಕಣ್ಣೆದುರಿಗೇ ಯೇಸುವು ರೂಪಾಂತರಗೊಂಡನು.


ಅವನನ್ನು ಜಜ್ಜುವುದು ಯೆಹೋವನ ಸಂಕಲ್ಪವಾಗಿತ್ತು. ಆತನು ಅವನನ್ನು ವ್ಯಾಧಿಯಿಂದ ಬಾಧಿಸಿ ಹೀಗೆಂದುಕೊಂಡನು, ಇವನು ತನ್ನ ಆತ್ಮವನ್ನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಪ್ಪಿಸಿದ ಮೇಲೆ ತನ್ನ ಸಂತಾನವನ್ನು ನೋಡುವನು, ಚಿರಂಜೀವಿಯಾಗುವನು, ನನ್ನ ಸಂಕಲ್ಪವು ಇವನ ಕೈಯಿಂದ ನೆರವೇರುವುದು;


ಕೂಡಲೆ ಆ ಗುಂಪಿನವರೆಲ್ಲರು ಯೇಸುವನ್ನು ಕಂಡು ಬಹು ಆಶ್ಚರ್ಯಪಟ್ಟು ಆತನ ಬಳಿಗೆ ಓಡಿ ಬಂದು ಆತನನ್ನು ವಂದಿಸಿದರು.


ಅವರು ಸಮಾಧಿಯೊಳಗೆ ಹೋಗಿ, ಒಬ್ಬ ಯೌವನಸ್ಥನು ಬಿಳಿ ನಿಲುವಂಗಿಯನ್ನು ಧರಿಸಿಕೊಂಡು ಬಲ ಭಾಗದಲ್ಲಿ ಕುಳಿತಿರುವುದನ್ನು ಕಂಡು ಬೆಚ್ಚಿಬೆರಗಾದರು.


ಅವನು ಅವರಿಗೆ, “ಭಯಪಡಬೇಡಿರಿ, ಶಿಲುಬೆಗೆ ಹಾಕಲ್ಪಟ್ಟಿದ್ದ ನಜರೇತಿನ ಯೇಸುವನ್ನು ಹುಡುಕುತ್ತಿರಲ್ಲವೇ. ಆತನು ಇಲ್ಲಿ ಇಲ್ಲ, ಜೀವಿತನಾಗಿ ಎದ್ದಿದ್ದಾನೆ; ಆತನನ್ನು ಇಟ್ಟಿದ್ದ ಸ್ಥಳ ಇದೇ ನೋಡಿರಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು