Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:37 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಆ ಮೇಲೆ ಆತನು ಬಂದು ಶಿಷ್ಯರು ನಿದ್ರೆ ಮಾಡುವುದನ್ನು ಕಂಡು ಪೇತ್ರನಿಗೆ, “ಸೀಮೋನನೇ, ನೀನು ನಿದ್ರೆಮಾಡುತ್ತಿರುವೆಯಾ? ಒಂದು ಗಳಿಗೆಯಾದರೂ ಎಚ್ಚರವಾಗಿರಲಾರೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಅನಂತರ ಹಿಂದಿರುಗಿ ಬಂದು, ಆ ಮೂವರು ಶಿಷ್ಯರು ನಿದ್ರಿಸುತ್ತಿದ್ದುದನ್ನು ಕಂಡು, ಪೇತ್ರನಿಗೆ, “ಸಿಮೋನನೇ, ನಿದ್ದೆಮಾಡುತ್ತಿರುವಿಯೋ! ಒಂದು ಗಂಟೆಯಾದರೂ ಎಚ್ಚರವಾಗಿರಲು ನಿನಗೆ ಸಾಧ್ಯವಾಗದೆ ಹೋಯಿತೋ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಆಮೇಲೆ ಆತನು ಬಂದು ಅವರು ನಿದ್ದೆಮಾಡುವದನ್ನು ಕಂಡು ಪೇತ್ರನಿಗೆ - ಸೀಮೋನನೇ, ನಿದ್ದೆಮಾಡುತ್ತೀಯಾ? ಒಂದು ಗಳಿಗೆಯಾದರೂ ಎಚ್ಚರವಾಗಿರಲಾರೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ನಂತರ ಯೇಸು ತನ್ನ ಶಿಷ್ಯರ ಬಳಿಗೆ ಹಿಂತಿರುಗಿದಾಗ ಅವರು ನಿದ್ರಿಸುತ್ತಿರುವುದನ್ನು ಕಂಡು, ಪೇತ್ರನಿಗೆ, “ಸೀಮೋನನೇ, ಏಕೆ ನಿದ್ರೆ ಮಾಡುತ್ತಿರುವೆ? ನೀನು ನನ್ನೊಡನೆ ಒಂದು ಗಂಟೆ ಕಾಲ ಎಚ್ಚರವಾಗಿರಲು ಸಾಧ್ಯವಾಗಲಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ತರುವಾಯ ಯೇಸು ಬಂದು, ಶಿಷ್ಯರು ನಿದ್ರೆ ಮಾಡುವುದನ್ನು ಕಂಡು ಪೇತ್ರನಿಗೆ, “ಸೀಮೋನನೇ, ನೀನು ನಿದ್ರೆ ಮಾಡುತ್ತೀಯಾ? ಒಂದು ಘಂಟೆಯಾದರೂ ಎಚ್ಚರವಾಗಿರಲಾರೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 ಮಾನಾ ಜೆಜು ಅಪ್ನಾಚ್ಯಾ ತಿನ್ ಶಿಸಾಂಚ್ಯಾಕ್ಡೆ ಯೆಲೊ ಅನಿ ತೆನಿ ತಿಗೆ ಜಾನಾಬಿ ನಿಜಲ್ಲೆ ಬಗುನ್ ತೆನಿ ಪೆದ್ರುಕ್ “ಸಿಮಾವ್, ತಿಯಾ ನಿದ್ಲೆ ಕಾಯ್? ಎಕ್ ತಾಸ್ಬರ್ ಸೈತ್ ಮಾಜ್ಯಾ ವಾಂಗ್ಡಾ ತುಕಾ ಜಾಗೆ ರಾವ್ಕ್ ಹೊಯ್ನಾ ಕಾಯ್?” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:37
13 ತಿಳಿವುಗಳ ಹೋಲಿಕೆ  

ಅನಂತರ ಆತನು ಶಿಷ್ಯರ ಬಳಿಗೆ ಬರಲು ಅವರು ನಿದ್ದೆಮಾಡುವುದನ್ನು ಕಂಡು ಪೇತ್ರನಿಗೆ, “ಒಂದು ಗಳಿಗೆಯಾದರೂ ನನ್ನ ಸಂಗಡ ಎಚ್ಚರವಾಗಿರಲಾರಿರಾ?


ನೀವು ಮನಗುಂದಿದವರಾಗಿ ಬೇಸರಗೊಳ್ಳದಂತೆ ಯೇಸುವನ್ನು ಕುರಿತು ಯೋಚಿಸಿರಿ. ಆತನು ಪಾಪಿಗಳಿಂದ ಎಷ್ಟೋ ವಿರೋಧವನ್ನು ಸಹಿಸಿಕೊಂಡನು.


ಮದಲಿಂಗನು ಬರುವುದಕ್ಕೆ ತಡಮಾಡಲು ಅವರೆಲ್ಲರೂ ತೂಕಡಿಸಿ ನಿದ್ರಿಸಿದರು.


ಅಬ್ಷಾಲೋಮನು ಅವನಿಗೆ “ಸ್ನೇಹಿತನ ಬಗ್ಗೆ ನಿನಗಿರುವ ಪ್ರಾಮಾಣಿಕತೆ ಪ್ರೀತಿ ಇಷ್ಟೇತಾನೇ? ನೀನು ನಿನ್ನ ಸ್ನೇಹಿತನೊಡನೆ ಯಾಕೆ ಹೋಗಲಿಲ್ಲ?” ಅಂದನು.


ಇಂತೆನ್ನುವ ಯೆಹೋವನು ನನಗೆ, “ನೀನು ಕಾಲಾಳುಗಳ ಸಂಗಡ ಓಡಿ ಆಯಾಸಗೊಂಡಿದ್ದರೆ ಕುದುರೆಗಳೊಂದಿಗೆ ಓಡಿ ಹೇಗೆ ಮುಂದಾಗುವಿ? ಅಪಾಯವಿಲ್ಲದ ದೇಶದಲ್ಲಿ ನೀನು ನಿರ್ಭಯವಾಗಿದ್ದರೂ ಯೊರ್ದನಿನ ದಟ್ಟಡವಿಯಲ್ಲಿ ಏನು ಮಾಡುವಿ?


ಹೀಗಿರಲು ಹಡಗಿನ ನೌಕಾಧಿಕಾರಿ ಅವನ ಬಳಿಗೆ ಬಂದು, “ಇದೇನು, ನೀನು ನಿದ್ದೆಮಾಡುತ್ತಿರುವುದು? ಎದ್ದೇಳು, ನಿನ್ನ ದೇವರಿಗೆ ಮೊರೆಯಿಡು; ಒಂದು ವೇಳೆ ನಿನ್ನ ದೇವರು ನಮ್ಮನ್ನು ರಕ್ಷಿಸಾನು, ನಾವೆಲ್ಲರು ನಾಶವಾಗದೆ ಉಳಿದೇವು” ಎಂದು ಹೇಳಿದನು.


“ಅಪ್ಪಾ, ತಂದೆಯೇ, ನಿನಗೆ ಎಲ್ಲವೂ ಸಾಧ್ಯ. ಈ ಪಾನಪಾತ್ರೆಯನ್ನು ನನ್ನಿಂದ ತೆಗೆದುಬಿಡು ಆದರೂ ಇದು ನನ್ನ ಚಿತ್ತದಂತಲ್ಲ ನಿನ್ನ ಚಿತ್ತದಂತೆಯೇ ಆಗಲಿ” ಎಂದನು.


ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ. ಆತ್ಮವು ಸಿದ್ಧವಾಗಿದೆ; ಆದರೆ ದೇಹಕ್ಕೆ ಬಲ ಸಾಲದು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು