Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:41 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಆತನು ಮೂರನೆಯ ಸಾರಿ ಅವರ ಬಳಿಗೆ ಬಂದು, “ನೀವು ಇನ್ನು ನಿದ್ರಿಸಿ ವಿಶ್ರಾಂತಿ ತೆಗೆದುಕೊಳ್ಳುತ್ತಿರುವಿರಾ? ಸಾಕು, ಆ ಗಳಿಗೆ ಸಮೀಪಿಸಿದೆ; ಮನುಷ್ಯಕುಮಾರನು ಪಾಪಿಗಳ ಕೈಗೆ ಒಪ್ಪಿಸಲ್ಪಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಯೇಸು ಮೂರನೆಯ ಸಾರಿ ಅವರ ಬಳಿಗೆ ಬಂದು, “ನೀವು ಇನ್ನೂ ನಿದ್ರಿಸಿ ವಿಶ್ರಮಿಸುತ್ತಿರುವಿರಾ? ಸಾಕು, ಸಮಯವು ಸಮೀಪಿಸಿತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಆತನು ಮೂರನೆಯ ಸಾರಿ ಹೋಗಿ ಬಂದು ಅವರಿಗೆ - ನೀವು ಇನ್ನೂ ನಿದ್ದೆಮಾಡಿ ದಣುವಾರಿಸಿಕೊಳ್ಳಿರಿ; ಸಾಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಯೇಸು ಮೂರನೆಯ ಸಾರಿ ಪ್ರಾರ್ಥಿಸಿದ ಮೇಲೆ, ತನ್ನ ಶಿಷ್ಯರ ಬಳಿಗೆ ಹಿಂತಿರುಗಿ, “ನೀವು ಇನ್ನೂ ನಿದ್ರಿಸುತ್ತಾ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದೀರಾ? ಪಾಪಿಗಳ ಕೈಗೆ ಮನುಷ್ಯಕುಮಾರನನ್ನು ಒಪ್ಪಿಸುವ ಸಮಯ ಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಯೇಸು ಮೂರನೆಯ ಸಾರಿ ಬಂದು ಅವರಿಗೆ, “ಇನ್ನೂ ವಿಶ್ರಮಿಸುತ್ತಿದ್ದೀರಾ? ಸಾಕು! ಸಮಯವು ಸಮೀಪಿಸಿದೆ; ಮನುಷ್ಯಪುತ್ರನಾದ ನಾನು ಪಾಪಿಗಳ ಕೈವಶವಾಗಲಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 ತೊ ತಿನ್ವೆ ಫಾಟಿ ಪರ್ತುನ್ ತೆಂಚೆಕ್ಡೆ ಯೆವ್ನ್ “ತುಮಿ ಅಜುನ್ಬಿ ನಿಜುನ್ ಆರಾಮ್ ಘೆವ್ಲ್ಯಾಶಿ? ಫಿರೆ, ಮಾನ್ಸಾಚ್ಯಾ ಲೆಕಾಕ್ ಧರುನ್ ಪಾಪಿ ಲೊಕಾಂಚ್ಯಾ ಹಾತಾತ್ನಿ ದಿತಲೊ ಎಳ್ ಯೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:41
23 ತಿಳಿವುಗಳ ಹೋಲಿಕೆ  

ಆತನು ಸ್ವಲ್ಪ ಮುಂದೆ ಹೋಗಿ ನೆಲದ ಮೇಲೆ ಬಿದ್ದು ಸಾಧ್ಯವಾದರೆ ಆ ಗಳಿಗೆಯು ತನ್ನಿಂದ ದಾಟಿಹೋಗುವಂತೆ ಪ್ರಾರ್ಥಿಸಿದನು.


ಏಕೆಂದರೆ ಆತನು ತನ್ನ ಶಿಷ್ಯರಿಗೆ ಉಪದೇಶಮಾಡುತ್ತಾ, “ಮನುಷ್ಯಕುಮಾರನು ಜನರ ಕೈಗಳಿಗೆ ಒಪ್ಪಿಸಲ್ಪಡುತ್ತಾನೆ; ಅವರು ಆತನನ್ನು ಕೊಲ್ಲುವರು; ಕೊಲ್ಲಲ್ಪಟ್ಟ ತರುವಾಯ ಮೂರು ದಿನದ ಮೇಲೆ ಆತನು ಜೀವಿತನಾಗಿ ಎದ್ದು ಬರುವನೆಂದು” ಹೇಳಿದನು.


ಯೇಸು ಈ ಮಾತುಗಳನ್ನು ಹೇಳಿದ ಮೇಲೆ ಆಕಾಶದ ಕಡೆಗೆ ಕಣ್ಣೆತ್ತಿ ನೋಡಿ ಹೇಳಿದ್ದೇನೆಂದರೆ, “ತಂದೆಯೇ, ಸಮಯ ಬಂದಿದೆ; ಮಗನು ನಿನ್ನನ್ನು ಮಹಿಮೆಪಡಿಸುವುದಕೊಸ್ಕರ ನಿನ್ನ ಮಗನನ್ನು ಮಹಿಮೆಪಡಿಸು.


ಪ್ರವಾದಿಗಳಲ್ಲಿ ನಿಮ್ಮ ಪೂರ್ವಿಕರು ಹಿಂಸೆಪಡಿಸದವರು ಯಾರಿದ್ದಾರೆ? ಅವರು ಆ ನೀತಿಸ್ವರೂಪನಾದ ಕರ್ತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು, ನೀವು ಈಗ ಆತನನ್ನು ಹಿಡಿದುಕೊಟ್ಟು ಕೊಲ್ಲಿಸಿದ್ದೀರಿ.


ಈಗ ನನ್ನ ಪ್ರಾಣವು ತತ್ತರಿಸುತ್ತಿದೆ. ನಾನೇನು ಹೇಳಲಿ? ‘ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸು.’ ಆದರೆ ಈ ಕಾರಣಕ್ಕಾಗಿಯೇ ಈ ಗಳಿಗೆಗೆ ಬಂದಿದ್ದೇನಲ್ಲಾ?


ಆಗ ಯೇಸು ಅವರಿಗೆ, “ಮನುಷ್ಯಕುಮಾರನು ಮಹಿಮೆ ಹೊಂದುವ ಗಳಿಗೆಯು ಬಂದಿದೆ.


ಯೇಸು ದೇವಾಲಯದ ಕಾಣಿಕೆಯ ಪೆಟ್ಟಿಗೆಗಳು ಇರುವ ಸ್ಥಳದಲ್ಲಿ ಬೋಧನೆ ಮಾಡುತ್ತಿರುವಾಗ ಈ ಮಾತುಗಳನ್ನು ಹೇಳಿದನು. ಆದರೆ ಆತನ ಸಮಯ ಇನ್ನೂ ಬಾರದೆ ಇದ್ದ ಕಾರಣ ಯಾರೂ ಆತನನ್ನು ಬಂಧಿಸಲಿಲ್ಲ.


ಇದಕ್ಕಾಗಿ ಆತನನ್ನು ಬಂಧಿಸುವುದಕ್ಕೆ ಪ್ರಯತ್ನಿಸಿದರೂ ಆತನ ಸಮಯ ಇನ್ನೂ ಬಾರದೆ ಇದ್ದ ಕಾರಣ ಯಾರೂ ಆತನ ಮೇಲೆ ಕೈ ಹಾಕಲಿಲ್ಲ.


ಅವರು ಕುಳಿತುಕೊಂಡು ಊಟಮಾಡುತ್ತಿದ್ದಾಗ ಯೇಸು, “ನನ್ನೊಂದಿಗೆ ಊಟಮಾಡುತ್ತಿರುವ ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡಿದುಕೊಡುವನು ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ” ಎಂದನು.


ಆಗ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತ ಯೂದನು ಯೇಸುವನ್ನು ಮುಖ್ಯಯಾಜಕರಿಗೆ ಹಿಡಿದುಕೊಡಲು ಅವರ ಬಳಿಗೆ ಹೋದನು.


ಆತನು ಇನ್ನೂ ಅವರಿಗೆ, “ನೀವು ನಿಮ್ಮ ಸಂಪ್ರದಾಯಗಳನ್ನು ಪಾಲಿಸುವುದಕ್ಕಾಗಿ ಬಹು ಜಾಣತನದಿಂದ ದೇವರ ಆಜ್ಞೆಯನ್ನು ನಿರ್ಲಕ್ಷಿಸುತ್ತೀರಿ;


ಆಗ ಮನುಷ್ಯಕುಮಾರನನ್ನು ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿ ಕೊಡಲಾಗುವುದು” ಎಂದು ಹೇಳಿದನು.


ಇಸ್ರಾಯೇಲ್ ವಂಶದವರೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಹೋಗಿರಿ, ನಿಮ್ಮ ವಿಗ್ರಹಗಳನ್ನು ಸೇವಿಸಿಕೊಳ್ಳಿರಿ; ಇನ್ನು ಮುಂದೆ ನನ್ನ ಮಾತನ್ನು ಕೇಳಿಯೇ ಕೇಳುವಿರಿ, ಇನ್ನು ಮೇಲಾದರೂ ನನ್ನ ಪರಿಶುದ್ಧ ನಾಮವನ್ನು ನಿಮ್ಮ ಬಲಿಗಳಿಂದಲೂ, ವಿಗ್ರಹಗಳಿಂದಲೂ ನೀವು ಅಪಕೀರ್ತಿಗೆ ಗುರಿಮಾಡುವುದೇ ಇಲ್ಲ.”


ಯೌವನಸ್ಥನೇ, ಯೌವನಪ್ರಾಯದಲ್ಲಿ ಆನಂದಿಸು, ಯೌವನದ ದಿನಗಳಲ್ಲಿ ಹೃದಯವು ನಿನ್ನನ್ನು ಹರ್ಷಗೊಳಿಸಲಿ. ಮನಸ್ಸಿಗೆ ತಕ್ಕಂತೆಯೂ, ಕಣ್ಣಿಗೆ ಸರಿಬೀಳುವ ಹಾಗೆಯೂ ನಡೆದುಕೋ. ಆದರೆ ಈ ಎಲ್ಲಾ ವಿಷಯಗಳಲ್ಲಿಯೂ ದೇವರು ನಿನ್ನನ್ನು ನ್ಯಾಯವಿಚಾರಣೆಗೆ ಗುರಿಮಾಡುವನೆಂದು ತಿಳಿದಿರು.


ಎಲೀಷನು ಇಸ್ರಾಯೇಲರ ಅರಸನಿಗೆ, “ನನಗೂ ನಿನಗೂ ಏನು ಸಂಬಂಧ? ನಿನ್ನ ತಂದೆತಾಯಿಗಳ ಪ್ರವಾದಿಗಳ ಬಳಿಗೆ ಹೋಗು” ಎಂದು ಹೇಳಿದನು. ಅದಕ್ಕೆ ಇಸ್ರಾಯೇಲರ ಅರಸನು, “ಹಾಗೆ ಹೇಳಬೇಡ, ಯೆಹೋವನು ಈ ಮೂರು ಮಂದಿ ಅರಸರಾದ ನಮ್ಮನ್ನು ಮೋವಾಬ್ಯರ ಕೈಗೆ ಒಪ್ಪಿಸುವುದಕ್ಕೋಸ್ಕರ ಇಲ್ಲಿಗೆ ಬರಮಾಡಿದನಲ್ಲವೇ?” ಎಂದನು.


ಅವನು ಅರಸನ ಬಳಿಗೆ ಬಂದಾಗ ಅರಸನು, “ನಾವು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕಾಗಿ ಹೋಗಬಹುದೋ, ಹೋಗಬಾರದೋ?” ಎಂದು ಕೇಳಲು ಅವನು, “ಹೋಗಬಹುದು, ಸಫಲನಾಗುವಿ, ಯೆಹೋವನು ಪಟ್ಟಣವನ್ನು ಅರಸನ ಕೈಗೆ ಒಪ್ಪಿಸುವನು” ಎಂದು ಹೇಳಿದನು.


ಮಧ್ಯಾಹ್ನವಾದನಂತರ ಎಲೀಯನು ಅವರನ್ನು ಪರಿಹಾಸ್ಯ ಮಾಡಿ, “ಗಟ್ಟಿಯಾಗಿ ಕೂಗಿರಿ, ಅವನು ದೇವರಾಗಿರುತ್ತಾನಲ್ಲಾ. ಈಗ ಒಂದು ವೇಳೆ ಅವನು ಧ್ಯಾನದಲ್ಲಿರಬಹುದು, ಇಲ್ಲವೇ ಯಾವುದೋ ಕೆಲಸದಲ್ಲಿ ಅಥವಾ ಪ್ರಯಾಣದಲ್ಲಿ ಇರಬೇಕು. ಅದೂ ಇಲ್ಲದಿದ್ದರೆ ನಿದ್ರೆಮಾಡುತ್ತಿದ್ದಾನು, ಎಚ್ಚರವಾಗಬೇಕು” ಎಂದು ಹೇಳಿದನು.


ಹೋಗಿ, ನೀವು ಆರಿಸಿಕೊಂಡ ದೇವತೆಗಳಿಗೆ ಮೊರೆಯಿಡಿರಿ; ಅವು ನಿಮ್ಮನ್ನು ಈ ಇಕ್ಕಟ್ಟಿನಿಂದ ಬಿಡಿಸಲಿ” ಅಂದನು.


ಯೇಸು ಹಿಂತಿರುಗಿ ಬಂದಾಗ ಅವರು ಪುನಃ ನಿದ್ರೆ ಮಾಡುವುದನ್ನು ಕಂಡನು ಯಾಕೆಂದರೆ ಅವರ ಕಣ್ಣುಗಳು ಭಾರವಾಗಿದ್ದವು. ಮತ್ತು ಆತನಿಗೆ ಏನು ಉತ್ತರ ಕೊಡಬೇಕೆಂದು ಅವರಿಗೆ ತಿಳಿಯಲಿಲ್ಲ.


ಏಳಿರಿ, ಹೋಗೋಣ. ಇಗೋ, ನನ್ನನ್ನು ಪಾಪಿಗಳ ಕೈಗೆ ಹಿಡಿದುಕೊಡುವವನು ಸಮೀಪಕ್ಕೆ ಬಂದಿದ್ದಾನೆ ನೋಡಿರಿ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು