Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:50 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

50 ಆಗ ಆತನ ಸಂಗಡವಿದ್ದವರೆಲ್ಲರು ಆತನನ್ನು ಬಿಟ್ಟು ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

50 ಆಗ ಶಿಷ್ಯರೆಲ್ಲರೂ ಯೇಸುವನ್ನು ತೊರೆದು ಪಲಾಯನ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

50 ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

50 ಆಗ ಯೇಸುವಿನ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

50 ಆಗ ಶಿಷ್ಯರೆಲ್ಲರೂ ಯೇಸುವನ್ನು ಬಿಟ್ಟು ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

50 ತನ್ನಾ ಜೆಜುಚಿ ಸಗ್ಳಿ ಶಿಸಾ ಜೆಜುಕ್ ಎಕ್ಲ್ಯಾಕುಚ್ ಸೊಡುನ್ ಪಳುನ್ ಗೆಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:50
11 ತಿಳಿವುಗಳ ಹೋಲಿಕೆ  

ಆಗ ಯೇಸು ಅವರಿಗೆ, “ನೀವೆಲ್ಲರೂ ನನ್ನನ್ನು ಬಿಟ್ಟು ಓಡಿಹೋಗುವಿರಿ. ಏಕೆಂದರೆ; “‘ನಾನು ಕುರುಬನನ್ನು ಹೊಡೆಯುವೆನು; ಕುರಿಗಳು ಚದರಿ ಹೋಗುವವು’ ಎಂದು ಬರೆದಿದೆಯಲ್ಲಾ ಅಂದನು.


ಇಗೋ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಸ್ಥಳಕ್ಕೆ ಚದರಿಹೋಗಿ ನನ್ನನ್ನು ಒಬ್ಬಂಟಿಗನಾಗಿ ಬಿಡುವ ಸಮಯವು ಬರುತ್ತದೆ. ಹೌದು, ಅದು ಈಗಲೇ ಬಂದಿದೆ. ಆದರೂ ನಾನು ಏಕಾಂಗಿಯಲ್ಲ, ಏಕೆಂದರೆ ತಂದೆಯು ನನ್ನ ಸಂಗಡ ಇದ್ದಾನೆ.


ನಾನು ಮೊದಲನೆ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನ ಸಂಗಡ ಇರಲಿಲ್ಲ, ಎಲ್ಲರೂ ನನ್ನನ್ನು ಕೈಬಿಟ್ಟರು. ಇದು ಅವರಿಗೆ ದೋಷವಾಗಿ ಎಣಿಸಲ್ಪಡದೆ ಇರಲಿ.


ನನ್ನ ಆಪ್ತಮಿತ್ರರನ್ನು ದೂರಮಾಡಿದಿ; ಅಂಧಕಾರವೇ ನನ್ನ ಒಡನಾಡಿ.


ನನ್ನ ಆಪ್ತಸ್ನೇಹಿತರು ಮತ್ತು ಜೊತೆಗಾರರು, ನನ್ನ ರೋಗವನ್ನು ನೋಡಿ ಓರೆಯಾಗಿ ಹೋಗುತ್ತಾರೆ; ನನ್ನ ಬಂಧುಗಳು ದೂರ ನಿಲ್ಲುತ್ತಾರೆ.


ಅದಕ್ಕೆ ಯೇಸು, “ನಾನೇ ಆತನು ಎಂದು ನಿಮಗೆ ಹೇಳಿದೆನಲ್ಲಾ. ನೀವು ನನ್ನನ್ನೇ ಹುಡುಕುವುದಾದರೆ ಇವರನ್ನು ಹೋಗಲುಬಿಡಿರಿ” ಎಂದನು.


ನಾನೊಬ್ಬನೇ ದ್ರಾಕ್ಷಿಯನ್ನು ತೊಟ್ಟಿಯಲ್ಲಿ ತುಳಿದಿದ್ದೇನೆ, ಜನಾಂಗದವರಲ್ಲಿ ಯಾರೂ ನನ್ನೊಂದಿಗಿರಲಿಲ್ಲ. ನನ್ನ ಕೋಪದಿಂದ ಶತ್ರುಗಳನ್ನು ತುಳಿದೆನು, ರೋಷವೇರಿದವನಾಗಿ ಅವರನ್ನು ತುಳಿದುಹಾಕಿದೆನು; ಅವರ ಜೀವಸತ್ವ ನನ್ನ ವಸ್ತ್ರಗಳ ಮೇಲೆ ಸಿಡಿದಿದೆ, ನನ್ನ ಉಡುಪನ್ನೆಲ್ಲಾ ಮಲಿನ ಮಾಡಿಕೊಂಡೆನು.


ನಾನು ಪ್ರತಿದಿನವು ನಿಮ್ಮ ಸಂಗಡ ಇದ್ದು ದೇವಾಲಯದಲ್ಲಿ ಬೋಧಿಸುತ್ತಿದ್ದಾಗ ನೀವು ನನ್ನನ್ನು ಬಂಧಿಸಲಿಲ್ಲ. ಆದರೆ ಶಾಸ್ತ್ರದಲ್ಲಿ ಬರೆದದ್ದು ನೆರವೇರುವಂತೆ ಹೀಗೆಲ್ಲಾ ಆಯಿತು” ಎಂದು ಉತ್ತರ ಕೊಟ್ಟನು.


ಆಗ ಯುವಕನೊಬ್ಬನು ಮೈಮೇಲೆ ನಾರುಮಡಿಯನ್ನು ಮಾತ್ರ ಸುತ್ತಿಕೊಂಡವನಾಗಿ ಯೇಸುವಿನ ಹಿಂದೆ ಬರುತ್ತಿದ್ದನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು