Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:54 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

54 ಮತ್ತು ಪೇತ್ರನು ದೂರದಿಂದ ಆತನನ್ನು ಹಿಂಬಾಲಿಸುತ್ತಾ ಮಹಾಯಾಜಕನ ಅಂಗಳದೊಳಗೆ ಬಂದು ಕಾವಲುಗಾರರ ಸಂಗಡ ಸೇರಿ ಬೆಂಕಿಯ ಮುಂದೆ ಕುಳಿತು ಚಳಿ ಕಾಯಿಸಿಕೊಳ್ಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

54 ಪೇತ್ರನಾದರೋ ದೂರದಿಂದ ಯೇಸುವನ್ನು ಹಿಂಬಾಲಿಸುತ್ತಿದ್ದನು. ಅವನು ಪ್ರಧಾನಯಾಜಕನ ಭವನದವರೆಗೂ ಬಂದು ಹೊರಾಂಗಣದಲ್ಲಿ, ಪಹರೆಯವರ ಜೊತೆಯಲ್ಲಿ ಕುಳಿತು ಚಳಿ ಕಾಯಿಸಿಕೊಳ್ಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

54 ಮತ್ತು ಪೇತ್ರನು ದೂರದಿಂದ ಆತನ ಹಿಂದೆ ಹೋಗುತ್ತಾ ಮಹಾಯಾಜಕನ ಮಠದ ಅಂಗಳದೊಳಗೂ ಬಂದು ಓಲೇಕಾರರ ಸಂಗಡ ಬೆಂಕಿಯ ಮುಂದೆ ಕೂತುಕೊಂಡು ಚಳಿಕಾಯಿಸಿಕೊಳ್ಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

54 ಪೇತ್ರನು ಯೇಸುವನ್ನು ದೂರದಲ್ಲಿ ಹಿಂಬಾಲಿಸುತ್ತಾ ಪ್ರಧಾನಯಾಜಕನ ಮನೆಯ ಅಂಗಳದೊಳಕ್ಕೆ ಹೋಗಿ, ಕಾವಲುಗಾರರೊಡನೆ ಕುಳಿತುಕೊಂಡು ಬೆಂಕಿಯಿಂದ ಚಳಿಕಾಯಿಸಿಕೊಳ್ಳತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

54 ಪೇತ್ರನು ಮಹಾಯಾಜಕನ ಅಂಗಳದವರೆಗೂ ದೂರದಿಂದಲೇ ಯೇಸುವನ್ನು ಹಿಂಬಾಲಿಸಿ ಆಳುಗಳ ಸಂಗಡ ಕೂತುಕೊಂಡು ಬೆಂಕಿಯ ಹತ್ತಿರ ಚಳಿ ಕಾಯಿಸಿಕೊಳ್ಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

54 ಪೆದ್ರು ಧುರ್-ಧುರ್ನಾಚ್ ಜೆಜುಚ್ಯಾ ಫಾಟ್ನಾ -ಫಾಟ್ನಾ ಮಹಾಯಾಜಕಾಚ್ಯಾ ಘರಾಚ್ಯಾ ದಾರಾತ್ ಸಗೊಳ್ ಯೆಲೊ, ಥೈ ರಾಕ್ವಾಲ್ಯಾಂಚ್ಯಾ ವಾಂಗ್ಡಾ ಬಸುನ್ ಆಗ್ ಶೆಕುಲಾಗಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:54
15 ತಿಳಿವುಗಳ ಹೋಲಿಕೆ  

ಚಳಿಯಿದ್ದುದರಿಂದ ಆಳುಗಳೂ, ಓಲೇಕಾರರೂ ಇದ್ದಲಿನ ಬೆಂಕಿ ಮಾಡಿ ಚಳಿ ಕಾಯಿಸಿಕೊಳ್ಳುತ್ತಾ ನಿಂತಿರಲಾಗಿ; ಪೇತ್ರನೂ ಅವರ ಜೊತೆಯಲ್ಲಿ ನಿಂತುಕೊಂಡು ಚಳಿ ಕಾಯಿಸಿಕೊಳ್ಳುತ್ತಿದ್ದನು.


ಆ ಕಾಲದಲ್ಲಿ ಮುಖ್ಯಯಾಜಕರೂ, ಜನರ ಹಿರಿಯರೂ ಕಾಯಫನೆಂಬ ಮಹಾಯಾಜಕನ ಭವನದಲ್ಲಿ ಕೂಡಿಬಂದು


ಇತ್ತ, ಸೀಮೋನ್ ಪೇತ್ರನು ನಿಂತುಕೊಂಡು ಚಳಿ ಕಾಯಿಸಿಕೊಳ್ಳುತ್ತಾ ಇದ್ದನು. ಆಗ ಅಲ್ಲಿದ್ದವರು ಅವನನ್ನು, “ನೀನು ಸಹ ಆತನ ಶಿಷ್ಯರಲ್ಲಿ ಒಬ್ಬನಲ್ಲವೇ?” ಎಂದು ಕೇಳಲು, ಅವನು ಅದನ್ನು ನಿರಾಕರಿಸಿ, “ನಾನಲ್ಲ” ಎಂದನು.


ಯೇಸು ತೀವ್ರವಾದ ಮನೋವ್ಯಥೆಯುಳ್ಳವನಾಗಿ, ಆಸಕ್ತಿಯಿಂದ ಪ್ರಾರ್ಥಿಸುತ್ತಿರಲಾಗಿ, ಆತನ ಬೆವರು ರಕ್ತದ ಹನಿಗಳೋಪಾದಿಯಲ್ಲಿ ನೆಲಕ್ಕೆ ಬೀಳುತ್ತಿತ್ತು.


ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ. ಆತ್ಮವು ಸಿದ್ಧವಾಗಿದೆ; ಆದರೆ ದೇಹಕ್ಕೆ ಬಲ ಸಾಲದು” ಎಂದು ಹೇಳಿದನು.


ಆದರೆ ಪೇತ್ರನು ದೂರದಿಂದ ಆತನನ್ನು ಹಿಂಬಾಲಿಸುತ್ತಾ, ಮಹಾಯಾಜಕನ ಭವನದ ಅಂಗಳದ ಒಳಗೆ ನುಗ್ಗಿ ಬಂದು ಆತನಿಗೆ ಏನಾಗುವುದೋ ಎಂದು ನೋಡಬೇಕೆಂದು ಸೈನಿಕರ ಸಂಗಡ ಕುಳಿತುಕೊಂಡನು.


ಅದನ್ನು ಕೇಳಿದ ಕೂಡಲೆ ಎಲೀಯನು ತನ್ನ ಕಂಬಳಿಯಿಂದ ಮೋರೆಯನ್ನು ಮುಚ್ಚಿಕೊಂಡು ಹೋಗಿ ಗವಿಯ ದ್ವಾರದಲ್ಲಿ ನಿಂತನು. ಆಗ, “ಎಲೀಯನೇ ನೀನು ಇಲ್ಲೇನು ಮಾಡುತ್ತೀ?” ಎಂಬ ವಾಣಿಯು ಕೇಳಿಸಿತು.


ಹೋರೇಬಿಗೆ ತಲುಪಿ, ಅಲ್ಲಿನ ಒಂದು ಗವಿಯಲ್ಲಿ ಇಳಿದುಕೊಂಡನು. ಆಗ ಅವನಿಗೆ ಯೆಹೋವನಿಂದ, “ಎಲೀಯನೇ ನೀನು ಇಲ್ಲೇನು ಮಾಡುತ್ತೀ?” ಎಂಬ ವಾಣಿಯು ಕೇಳಿಸಿತು.


ಕೆಲವರು ಯೊರ್ದನ್ ಹೊಳೆದಾಟಿ ಗಾದ್ಯರ ದೇಶಕ್ಕೂ, ಗಿಲ್ಯಾದ್ ಪ್ರಾಂತ್ಯಕ್ಕೂ ಹೊರಟುಹೋದರು. ಸೌಲನು ಇನ್ನೂ ಗಿಲ್ಗಾಲಿನಲ್ಲೇ ಇದ್ದನು. ಅವನ ಸಂಗಡ ಇದ್ದವರು ಭಯದಿಂದ ನಡುಗುತ್ತ ಅವನನ್ನು ಹಿಂಬಾಲಿಸಿದರು.


ಇತ್ತಲಾಗಿ ಪೇತ್ರನು ಕೆಳಗೆ ಅಂಗಳದಲ್ಲಿ ಇದ್ದಾಗ ಮಹಾಯಾಜಕನ ದಾಸಿಯರಲ್ಲಿ ಒಬ್ಬಳು ಬಂದು ಅವನು ಚಳಿ ಕಾಯಿಸಿಕೊಳ್ಳುತ್ತಿರುವುದನ್ನು ಕಂಡು,


ಅವರು ಆತನನ್ನು ಹಿಡಿದು ಮಹಾಯಾಜಕನ ಮನೆಯೊಳಕ್ಕೆ ಕರೆದುಕೊಂಡು ಹೋದರು. ಪೇತ್ರನು ದೂರದಿಂದ ಅವರನ್ನು ಹಿಂಬಾಲಿಸುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು