Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:62 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

62 ಯೇಸುವು “ಹೌದು ನಾನೇ! “ಇದಲ್ಲದೆ ಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವುದನ್ನೂ, ಆಕಾಶದ ಮೇಘಗಳಲ್ಲಿ ಬರುವುದನ್ನೂ ನೀವು ನೋಡುವಿರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

62 ಅದಕ್ಕೆ ಯೇಸು, “ಹೌದು ನಾನೇ, ಸರ್ವಶಕ್ತ ದೇವರ ಬಲಗಡೆ ನರಪುತ್ರನು ಆಸೀನನಾಗಿ ಇರುವುದನ್ನೂ ಆಕಾಶದ ಮೇಘಗಳಲ್ಲಿ ಬರುವುದನ್ನೂ ನೀವು ಕಾಣುವಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

62 ಯೇಸು - ನಾನೇ, ಇದಲ್ಲದೆ ಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವದನ್ನೂ ಆಕಾಶದ ಮೇಘಗಳೊಂದಿಗೆ ಬರುವದನ್ನೂ ನೋಡುವಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

62 ಯೇಸು, “ಹೌದು, ನಾನೇ ದೇವರ ಮಗನು. ಮನುಷ್ಯಕುಮಾರನು ದೇವರ ಬಲಗಡೆಯಲ್ಲಿ ಕುಳಿತಿರುವುದನ್ನೂ ಆಕಾಶದ ಮೇಘಗಳ ಮೇಲೆ ಬರುವುದನ್ನೂ ನೀನು ಕಾಣುವೆ” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

62 ಅದಕ್ಕೆ ಯೇಸು, “ಹೌದು ನಾನೇ, ಇದಲ್ಲದೆ ಮನುಷ್ಯಪುತ್ರನಾದ ನಾನು ಸರ್ವಶಕ್ತರ ಬಲಗಡೆಯಲ್ಲಿ ಆಸೀನನಾಗಿರುವುದನ್ನೂ ಆಕಾಶದ ಮೇಘಗಳಲ್ಲಿ ಬರುವುದನ್ನೂ ನೀವು ಕಾಣುವಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

62 ಜೆಜುನ್ “ಹೊಯ್ ಮಿಯಾ” ಮನುನ್ ಜಾಬ್ ದಿವ್ನ್, “ಮಾನ್ಸಾಚೊ ಲೆಕ್ ಮಹೊನ್ನತಾಚ್ಯಾ ಉಜ್ವ್ಯಾಕ್ಡೆ ಬಸಲ್ಲೆ ಅನಿ ದೆವ್ ರ್‍ಹಾತಲ್ಯಾ ಜಾಗ್ಯಾ ವೈನಾ ಯೆತಲ್ಯಾ ಮಹಿಮೆಚ್ಯಾ ಮೊಡಾಂಚ್ಯಾ ವಾಂಗ್ಡಾ ಯೆತಲೆ ತುಮಿ ಬಗ್ತ್ಯಾಸಿ”, ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:62
20 ತಿಳಿವುಗಳ ಹೋಲಿಕೆ  

ಯೆಹೋವನು ನನ್ನ ಒಡೆಯನಿಗೆ, “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಪೀಠವಾಗುವಂತೆ ಮಾಡುವ ತನಕ, ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂದು ನುಡಿದನು.


ಈತನು ದೇವರ ಮಹಿಮೆಯ ಪ್ರಕಾಶವೂ, ಆತನ ವ್ಯಕ್ತಿತ್ವದ ಪ್ರತಿರೂಪವೂ, ತನ್ನ ಶಕ್ತಿಯುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ಶುದ್ಧಿಮಾಡಿ, ಉನ್ನತದಲ್ಲಿರುವ ಮಹೋನ್ನತನಾದ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.


ಆಗ ಮನುಷ್ಯಕುಮಾರನು ಮಹಾಬಲದಿಂದಲೂ ಮಹಿಮೆಯಿಂದಲೂ ಮೇಘಗಳಲ್ಲಿ ಬರುವುದನ್ನು ಅವರು ನೋಡುವರು.


ಆಗ ಮನುಷ್ಯಕುಮಾರನನ್ನು ಸೂಚಿಸುವ ಗುರುತು ಆಕಾಶದಲ್ಲಿ ಕಾಣಬರುವವು. ಆಗ ಭೂಲೋಕದಲ್ಲಿರುವ ಎಲ್ಲಾ ಕುಲದವರು ಎದೆಬಡಕೊಳ್ಳುವರು, ಮತ್ತು ಮನುಷ್ಯಕುಮಾರನು ಬಲದಿಂದಲೂ, ಬಹು ಮಹಿಮೆಯಿಂದಲೂ ಆಕಾಶದ ಮೇಘಗಳ ಮೇಲೆ ಬರುವುದನ್ನು ಕಾಣುವರು.


ಯೇಸು ಪ್ರತ್ಯುತ್ತರವಾಗಿ, “ನೀನೇ ಹೇಳಿದ್ದೀ; ಆದರೆ ನಾನು ನಿಮಗೆ ಹೇಳುವುದೇನೆಂದರೆ, ಇನ್ನು ಮೇಲೆ ಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವುದನ್ನೂ, ಆಕಾಶದ ಮೇಘಗಳ ಮೇಲೆ ಕುಳಿತು ಬರುವುದನ್ನೂ ಕಾಣುವಿರಿ” ಅಂದನು.


ಆದರೆ ಇಂದಿನಿಂದ ಮನುಷ್ಯಕುಮಾರನು ಸರ್ವಶಕ್ತನಾದ ದೇವರ ಬಲಗಡೆಯಲ್ಲಿ ಆಸೀನನಾಗಿರುವನು” ಎಂದು ಹೇಳಿದನು.


ನೋಡಿರಿ, ಆತನು ಮೇಘಗಳೊಂದಿಗೆ ಬರುತ್ತಾನೆ, ಎಲ್ಲರ ಕಣ್ಣುಗಳು ಆತನನ್ನು ನೋಡುವವು, ಆತನನ್ನು ಇರಿದವರು ಸಹ ಅದನ್ನು ಕಾಣುವರು, ಭೂಮಿಯಲ್ಲಿರುವ ಎಲ್ಲಾ ಕುಲದವರು ಆತನ ನಿಮಿತ್ತ ದುಃಖಿಸುವರು. ಹೌದು, ಹಾಗೆಯೇ ಆಗುವುದು. ಆಮೆನ್.


ಕರ್ತನಾದ ಯೇಸು ಅವರೊಂದಿಗೆ ಮಾತನಾಡಿದ ಮೇಲೆ ಪರಲೋಕಕ್ಕೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಆಸನಾರೂಢನಾದನು.


ಆ ಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕುಳಿತಿದ್ದಾತನನ್ನೂ ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋದವು, ಆದರೆ ಹೋಗುವುದಕ್ಕೆ ಅವುಗಳಿಗೆ ಸ್ಥಳವಿರಲಿಲ್ಲ.


ನಾವು ಈಗ ಹೇಳುವ ಸಂಗತಿಗಳಲ್ಲಿ ಮುಖ್ಯವಾದ ಮಾತೇನೆಂದರೆ, ಪರಲೋಕದೊಳಗೆ ಮಹೋನ್ನತನ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾದಂಥ ಮಹಾಯಾಜಕನು ನಮಗಿದ್ದಾನೆ.


‘ಆ ದಿನಗಳ ತರುವಾಯ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು’ ಹೀಗಿರುವುದು, ‘ನಾನು ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು. ನಾನು ಅವರ ಹೃದಯಗಳ ಮೇಲೆ ಅವುಗಳನ್ನು ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರುವರು.


ಪಿಲಾತನು ಯೇಸುವನ್ನು “ನೀನು ಯೆಹೂದ್ಯರ ಅರಸನೋ” ಎಂದು ಕೇಳಲು, ಆತನು, “ನೀನೇ ಹೇಳಿದ್ದೀ” ಎಂದು ಉತ್ತರ ಕೊಟ್ಟನು.


ಪಿಲಾತನು ಆತನನ್ನು, “ನೀನು ಯೆಹೂದ್ಯರ ಅರಸನೋ” ಎಂದು ಕೇಳಲು ಆತನು, “ನೀನೇ ಹೇಳಿದ್ದೀ” ಎಂದು ಉತ್ತರಕೊಟ್ಟನು.


ಯೇಸು ದೇಶಾಧಿಪತಿಯ ಮುಂದೆ ನಿಂತಿರುವಾಗ ದೇಶಾಧಿಪತಿಯು ಆತನನ್ನು, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಿದನು. ಯೇಸು, “ನೀನೇ ಹೇಳಿದ್ದೀ” ಅಂದನು.


ನಮ್ಮ ಕರ್ತನಾದ ಯೇಸುಕ್ರಿಸ್ತನ ಶಕ್ತಿಯನ್ನೂ, ಪ್ರತ್ಯಕ್ಷತೆಯನ್ನೂ ನಿಮಗೆ ತಿಳಿಯಪಡಿಸಿದ್ದರಲ್ಲಿ ಚಮತ್ಕಾರದಿಂದ ಕಲ್ಪಿಸಿದ ಕಟ್ಟುಕಥೆಗಳನ್ನು ನಾವು ಅನುಸರಿಸಲಿಲ್ಲ. ಆತನ ಮಹತ್ತನ್ನು ಕಣ್ಣಾರೆ ಕಂಡವರಾಗಿಯೇ ಅದನ್ನು ತಿಳಿಯಪಡಿಸಿದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು