Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:65 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

65 ಅನಂತರ ಕೆಲವರು ಆತನ ಮೇಲೆ ಉಗುಳಿ, ಆತನ ಮುಖಕ್ಕೆ ಮುಸುಕನ್ನು ಹಾಕಿ, ಗುದ್ದಿ, ಈಗ “ಪ್ರವಾದಿಸು” ಎಂದರು. ಕಾವಲುಗಾರರು ಆತನನ್ನು ತಮ್ಮ ವಶಕ್ಕೆ ತೆಗೆದುಕೊಂಡು ಆತನಿಗೆ ಹೊಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

65 ಅನಂತರ, ಅವರಲ್ಲಿ ಕೆಲವರು ಯೇಸುವಿನ ಮೇಲೆ ಉಗುಳಿದರು. ಅವರ ಮುಖಕ್ಕೆ ಮುಸುಕುಹಾಕಿ, ಅವರನ್ನು ಗುದ್ದಿ, “ಗುದ್ದಿದವರು ಯಾರು? ಪ್ರವಾದಿಸು ನೋಡೋಣ,” ಎನ್ನುತ್ತಿದ್ದರು. ಇದಲ್ಲದೆ ಅಲ್ಲಿದ್ದ ಪಹರೆಯವರು ಅವರಿಗೆ ಏಟಿನ ಮೇಲೆ ಏಟು ಕೊಟ್ಟು ತಮ್ಮ ವಶಕ್ಕೆ ತೆಗೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

65 ಆಮೇಲೆ ಕೆಲವರು ಆತನನ್ನು ಉಗುಳಿ ಆತನ ಮುಖಕ್ಕೆ ಮುಸುಕುಹಾಕಿ ಗುದ್ದಿ - ಪ್ರವಾದನೆ ಹೇಳು ಅನ್ನುತ್ತಿದ್ದರು. ಮತ್ತು ಓಲೇಕಾರರು ಆತನ ಕೆನ್ನೆಗೆ ಏಟು ಹಾಕುತ್ತಾ ತಮ್ಮ ವಶಕ್ಕೆ ತೆಗೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

65 ಅಲ್ಲಿದ್ದ ಕೆಲವು ಜನರು ಯೇಸುವಿಗೆ ಉಗುಳಿ, ಆತನ ಮುಖವನ್ನು ಮುಚ್ಚಿ, ಮುಷ್ಠಿಯಿಂದ ಗುದ್ದಿ, “ನಮಗೆ ಪ್ರವಾದನೆ ಹೇಳು” ಎಂದರು. ನಂತರ ಕಾವಲುಗಾರರು ಯೇಸುವನ್ನು ದೂರ ಕರೆದುಕೊಂಡು ಹೋಗಿ, ಆತನನ್ನು ಹೊಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

65 ತರುವಾಯ ಕೆಲವರು ಯೇಸುವಿನ ಮೇಲೆ ಉಗುಳಿ ಅವರ ಕಣ್ಣಿಗೆ ಬಟ್ಟೆ ಕಟ್ಟಿ ಅವರನ್ನು ಗುದ್ದುವುದಕ್ಕೆ ಆರಂಭಿಸಿ ಯೇಸುವಿಗೆ, “ಪ್ರವಾದನೆ ಹೇಳು,” ಎಂದರು. ಕಾವಲಾಳುಗಳು ಯೇಸುವನ್ನು ಹಿಡಿದುಕೊಂಡುಹೋಗಿ ಅವರನ್ನು ಹೊಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

65 ತೆಂಚ್ಯಾತ್ಲ್ಯಾ ಥೊಡ್ಯಾನಿ ಜೆಜುಕ್ ಥುಕ್ಲ್ಯಾನಿ, ಅನಿ ತೆಚ್ಯಾ ಡೊಳ್ಯಾಕ್ನಿ ಫಾಳಿ ಭಾಂದುನ್ ತೆಕಾ ಡುಬ್ರಿತ್ ಮುಟ್ಕ್ಯಾನಿ ಮಾರ್‍ಲ್ಯಾನಿ ಅನಿ “ತುಕಾ ಮಾರಲ್ಲೆ ಕೊನ್ ಮನುನ್ ಸಾಂಗ್” ಮನುನ್ ಇಚಾರ್‍ಲ್ಯಾನಿ. ಅನಿ ರಾಕ್ವಾಲ್ಯಾನಿ ಠಪ್ರಾಕ್ಯಾ ಮಾರುನ್ ಘೆವ್ನ್ ಗೆಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:65
17 ತಿಳಿವುಗಳ ಹೋಲಿಕೆ  

ಅದಕ್ಕೆ ಮಹಾಯಾಜಕನಾದ ಅನನೀಯನು; ಅವನ ಬಾಯಿಯ ಮೇಲೆ ಹೊಡೆಯಿರಿ ಎಂದು ಹತ್ತಿರದಲ್ಲಿ ನಿಂತಿದ್ದವರಿಗೆ ಅಪ್ಪಣೆ ಕೊಡಲು ಪೌಲನು ಅವನಿಗೆ;


ಆತನ ಬಳಿಗೆ ಬಂದು “ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ” ಎಂದು ಹೇಳಿ ತಮ್ಮ ಕೈಗಳಿಂದ ಆತನ ಕೆನ್ನೆಗೆ ಹೊಡೆದರು.


ನಾನು ಹೊಡೆಯುವವರಿಗೆ ಬೆನ್ನುಕೊಟ್ಟು, ಕೂದಲು ಕೀಳುವವರಿಗೆ ಗಡ್ಡವನ್ನು ಒಡ್ಡಿದೆನು. ಉಗುಳಿಸಿಕೊಳ್ಳುವ ಅವಮಾನಕ್ಕೆ ನನ್ನ ಮುಖವನ್ನು ಮರೆಮಾಡಿಕೊಳ್ಳಲಿಲ್ಲ.


ಯೇಸು ಈ ಮಾತನ್ನು ಹೇಳಿದಾಗ ಹತ್ತಿರ ನಿಂತಿದ್ದ ಕಾವಲಾಳುಗಳಲ್ಲಿ ಒಬ್ಬನು ತನ್ನ ಕೈಯಿಂದ ಯೇಸುವಿನ ಕೆನ್ನೆಗೆ ಹೊಡೆದು, “ನೀನು ಮಹಾಯಾಜಕನಿಗೆ ಹೀಗೆ ಉತ್ತರ ಕೊಡುತ್ತೀಯೋ?” ಎಂದನು.


ಬೆತ್ತದಿಂದ ಆತನ ತಲೆಯ ಮೇಲೆ ಹೊಡೆದು, ಆತನ ಮೇಲೆ ಉಗುಳಿ, ಆತನ ಮುಂದೆ ಮೊಣಕಾಲೂರಿ ನಮಸ್ಕರಿಸಿದರು.


ಅವನು ಧಿಕ್ಕರಿಸಲ್ಪಟ್ಟವನು, ಮನುಷ್ಯರು ಸೇರಿಸಿಕೊಳ್ಳದವನು, ಸಂಕಟಪಡುವವನು, ವ್ಯಾಧಿಪೀಡಿತನು, ಜನರು ಮುಖವನ್ನು ಓರೆಮಾಡಿಕೊಳ್ಳುವ ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು.


ಅವನ ಮುಖವು ಸಕಲ ಮನುಷ್ಯರ ಮುಖಕ್ಕಿಂತಲೂ, ಅವನ ರೂಪವು ಎಲ್ಲಾ ನರಜನ್ಮದವರ ರೂಪಕ್ಕಿಂತಲೂ ವಿಕಾರವಾಗಿರುವುದನ್ನು ನೋಡಿ, ಅನೇಕರು ಹೇಗೆ ಹೆದರಿದರೋ,


ನನಗೆ ಅಸಹ್ಯಪಟ್ಟು ದೂರ ನಿಂತು, ನನ್ನ ಮೇಲೆ ಉಗುಳುವುದಕ್ಕೂ ಹಿಂದೆಗೆಯರು.


ಅರಸನು ಅರಮನೆಯ ತೋಟದಿಂದ ತಾನು ದ್ರಾಕ್ಷಾರಸ ಪಾನಮಾಡಿದ ಗೃಹಕ್ಕೆ ಹಿಂತಿರುಗಿ ಬಂದು ಎಸ್ತೇರಳು ಒರಗಿಕೊಳ್ಳುವ ಸುಖಾಸನದ ಮೇಲೆ ಹಾಮಾನನು ಬಿದ್ದುಕೊಂಡಿರುವುದನ್ನು ಕಂಡು, “ಇವನು ರಾಣಿಯನ್ನು ನನ್ನ ಮುಂದೆಯೇ ಅರಮನೆಯಲ್ಲಿ ಭಂಗಪಡಿಸಬೇಕೆಂದಿರುತ್ತಾನೋ?” ಅಂದನು. ಅರಸನ ಬಾಯಿಂದ ಈ ಮಾತು ಹೊರಬಂದ ಕೂಡಲೆ ಸೇವಕರು ಹಾಮಾನನ ಮುಖಕ್ಕೆ ಮುಸುಕು ಹಾಕಿ ಎಳೆದುಕೊಂಡು ಹೋದರು.


ಅದಕ್ಕೆ ಯೆಹೋವನು ಮೋಶೆಗೆ, “ಆಕೆಯ ತಂದೆ ಆಕೆಯ ಮುಖದ ಮೇಲೆ ಉಗುಳಿದರೆ, ಆಕೆ ಏಳು ದಿನ ನಾಚಿಕೆಯಿಂದ ಮರೆಯಾಗುತ್ತಿದ್ದಳಲ್ಲವೇ? ಹಾಗಾದರೆ ಆಕೆ ಏಳು ದಿನ ಪಾಳೆಯದ ಹೊರಗೆ ಇರಲಿ, ತರುವಾಯ ನೀನು ಆಕೆಯನ್ನು ಪಾಳೆಯದೊಳಗೆ ಸೇರಿಸಿಕೊಳ್ಳಬಹುದು” ಎಂದು ಉತ್ತರಕೊಟ್ಟನು.


ಇವರು ಆತನನ್ನು ಅಪಹಾಸ್ಯ ಮಾಡುವರು, ಆತನ ಮೇಲೆ ಉಗುಳುವರು, ಆತನನ್ನು ಚಾವಟಿಗಳಿಂದ ಹೊಡೆಯುವರು, ಅನಂತರ ಕೊಂದು ಹಾಕುವರು. ಆದರೆ ಆತನು ಮೂರು ದಿನಗಳ ನಂತರ ಜೀವಿತನಾಗಿ ಎದ್ದು ಬರುವನು” ಎಂದು ಹೇಳಿದನು.


ಚಿಯೋನ್ ನಗರವೇ ನಿನ್ನ ಸೇನಾವ್ಯೂಹಗಳನ್ನು ಈಗ ಒಟ್ಟುಗೂಡಿಸು. ಆಹಾ ಶತ್ರುಗಳು ನಮಗೆ ಮುತ್ತಿಗೆ ಹಾಕಿದ್ದಾರೆ. ಇಸ್ರಾಯೇಲಿನ ಅಧಿಪತಿಯ ಕೆನ್ನೆಗೆ ಕೋಲಿನಿಂದ ಹೊಡೆಯುವರು.


ಆಗ ಕೆನಾನನ ಮಗನಾದ ಚಿದ್ಕೀಯನು ಮೀಕಾಯೆಹುವಿನ ಬಳಿಗೆ ಹೋಗಿ ಅವನ ಕೆನ್ನೆಗೆ ಒಂದು ಏಟು ಹಾಕಿ, “ಯೆಹೋವನ ಆತ್ಮವು ನನ್ನನ್ನು ಬಿಟ್ಟು ನಿನ್ನೊಂದಿಗೆ ಮಾತನಾಡುವುದಕ್ಕಾಗಿ ಯಾವ ಮಾರ್ಗವಾಗಿ ಬಂದಿತು?” ಎಂದನು.


ಮತ್ತು ಆತನ ಮೇಲೆ ಉಗುಳಿ ಆ ಬೆತ್ತವನ್ನು ತೆಗೆದುಕೊಂಡು ಆತನ ತಲೆಯ ಮೇಲೆ ಹೊಡೆದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು