Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಸುವಾರ್ತೆಯು ಲೋಕದಲ್ಲಿ ಎಲ್ಲೆಲ್ಲಿ ಸಾರಲ್ಪಡುವುದೋ ಅಲ್ಲೆಲ್ಲಾ ಈಕೆಯು ಮಾಡಿದ್ದನ್ನು ಸಹ ಈಕೆಯ ಜ್ಞಾಪಕಾರ್ಥವಾಗಿ ಹೇಳಲಾಗುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಜಗತ್ತಿನಾದ್ಯಂತ ಎಲ್ಲೆಲ್ಲಿ ಶುಭಸಂದೇಶವನ್ನು ಪ್ರಕಟಿಸಲಾಗುವುದೋ ಅಲ್ಲೆಲ್ಲಾ ಈ ಸತ್ಕಾರ್ಯವನ್ನು ಈಕೆಯ ಸವಿನೆನಪಿಗಾಗಿ ಸಾರಲಾಗುವುದು, ಇದು ನಿಶ್ಚಯ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲೆಲ್ಲಿ ಸಾರಲಾಗುವದೋ ಅಲ್ಲಲ್ಲಿ ಈಕೆ ಮಾಡಿದ್ದನ್ನು ಸಹ ಈಕೆಯ ನೆನಪಿಗಾಗಿ ಹೇಳುವರೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಾನು ಸತ್ಯವನ್ನು ಹೇಳುತ್ತೇನೆ. ಪ್ರಪಂಚದಲ್ಲಿ ಸುವಾರ್ತೆ ಸಾರಲ್ಪಡುವಲ್ಲೆಲ್ಲಾ ಈಕೆ ಮಾಡಿದ ಈ ಕಾರ್ಯವನ್ನು ತಿಳಿಸುವುದರಿಂದ ಜನರು ಈಕೆಯನ್ನು ನೆನಪುಮಾಡಿಕೊಳ್ಳುವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಲೋಕದಾದ್ಯಂತ ಎಲ್ಲೆಲ್ಲಿ ಸುವಾರ್ತೆಯು ಸಾರಲಾಗುವದೋ, ಅಲ್ಲೆಲ್ಲಾ ಈ ಸ್ತ್ರೀಯು ಮಾಡಿದ್ದನ್ನು ಸಹ ಈಕೆಯ ಜ್ಞಾಪಕಾರ್ಥವಾಗಿ ಹೇಳಲಾಗುವುದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಬಗಾ, ಮಿಯಾ ತುಮ್ಕಾ ಖರೆಚ್ ಸಾಂಗ್ತಾ “ಸಗ್ಳ್ಯಾ ದುನಿಯಾತ್ ಬರಿ ಖಬರ್ ಪರ್ಗಟ್ ಕರಲ್ಲ್ಯಾ-ಕರಲ್ಲ್ಯಾಕ್ಡೆ, ಹಿನಿ ಕರಲ್ಲ್ಯಾ ಕಾಮಾಚ್ಯಾ ವಿಶಯಾತ್ ಸಾಂಗುನ್ ಹಿಕಾ ಯಾದ್ ಕರುಂಗೆತ್ ರ್‍ಹಾತ್ಯಾತ್” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:9
7 ತಿಳಿವುಗಳ ಹೋಲಿಕೆ  

ಆ ಮೇಲೆ ಅವರಿಗೆ, “ನೀವು ಲೋಕದ ಎಲ್ಲಾ ಕಡೆಗಳಿಗೂ ಹೋಗಿ ಸೃಷ್ಟಿಗಳಿಗೆಲ್ಲಾ ಸುವಾರ್ತೆಯನ್ನು ಸಾರಿರಿ.


ಇದಲ್ಲದೆ ರಾಜ್ಯದ ಈ ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲಾ ಜನಾಂಗಗಳಿಗೆ ಸಾಕ್ಷಿಗಾಗಿ ಸಾರಲ್ಪಡುವುದು; ಆಗ ಅಂತ್ಯವು ಬರುವುದು.


“‘ಆ ಕಿರೀಟವು ಹೇಲೆಮ್, ತೋಬೀಯ, ಯೆದಾಯ, ಚೆಫನ್ಯನ ಮಗನಾದ ಯೋಷೀಯ ಇವರ ಜ್ಞಾಪಕಾರ್ಥವಾಗಿ ಯೆಹೋವನ ಆಲಯದಲ್ಲಿ ಇಡಲಾಗಿದೆ.


ಸಹಸ್ರಾಧಿಪತಿಗಳೂ, ಶತಾಧಿಪತಿಗಳೂ, ಕೊಟ್ಟ ಚಿನ್ನವನ್ನು ಮೋಶೆಯೂ, ಮಹಾಯಾಜಕ ಎಲ್ಲಾಜಾರನೂ ತೆಗೆದುಕೊಂಡು ಇಸ್ರಾಯೇಲರ ವಿಷಯದಲ್ಲಿ ಯೆಹೋವನಿಗೆ ಜ್ಞಾಪಕ ಮಾಡುವುದಕ್ಕಾಗಿ ದೇವದರ್ಶನದ ಗುಡಾರದೊಳಗೆ ತಂದರು.


ಹೆಣ ಬಿದ್ದಲ್ಲಿ ಹದ್ದುಗಳು ಬಂದು ಸೇರಿಕೊಳ್ಳುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು