Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 16:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅನಂತರ ಹನ್ನೊಂದು ಮಂದಿ ಶಿಷ್ಯರು ಊಟಕ್ಕೆ ಕುಳಿತಿದ್ದಾಗ ಆತನು ಅವರಿಗೂ ಕಾಣಿಸಿಕೊಂಡನು. ತಾನು ಜೀವಿತನಾಗಿ ಎದ್ದು ಬಂದ ಮೇಲೆ ತನ್ನನ್ನು ನೋಡಿದವರ ಮಾತನ್ನು ಅವರು ನಂಬಲಿಲ್ಲವಾದ ಕಾರಣ ಆತನು ಅವರ ಅಪನಂಬಿಕೆಗೂ ಅವರ ಮನಸ್ಸಿನ ಕಾಠಿಣ್ಯಕ್ಕೂ ಅವರನ್ನು ಗದರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅನಂತರ, ಹನ್ನೊಂದು ಮಂದಿ ಶಿಷ್ಯರು ಊಟಮಾಡುತ್ತಿದ್ದಾಗ ಯೇಸುಸ್ವಾಮಿ ಪ್ರತ್ಯಕ್ಷರಾದರು. ತಾವು ಪುನರುತ್ಥಾನ ಹೊಂದಿದ ಮೇಲೆ, ತಮ್ಮನ್ನು ಕಂಡವರ ಮಾತನ್ನು ಅವರು ನಂಬದಿದ್ದ ಕಾರಣ ಅವರ ಅವಿಶ್ವಾಸವನ್ನೂ ಹೃದಯ ಕಾಠಿಣ್ಯವನ್ನೂ ಯೇಸು ಖಂಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ತರುವಾಯ ಹನ್ನೊಂದು ಮಂದಿ ಶಿಷ್ಯರು ಊಟಕ್ಕೆ ಕೂತಿದ್ದಾಗ ಆತನು ಅವರಿಗೂ ಕಾಣಿಸಿಕೊಂಡನು. ತಾನು ಜೀವಿತನಾಗಿ ಎದ್ದು ಬಂದ ಮೇಲೆ ತನ್ನನ್ನು ಕಂಡವರ ಮಾತನ್ನು ಅವರು ನಂಬಲಿಲ್ಲವಾದ ಕಾರಣ ಆತನು ಅವರ ಅಪನಂಬಿಕೆಗೂ ಅವರ ಮನಸ್ಸಿನ ಕಾಠಿಣ್ಯಕ್ಕೂ ಅವರನ್ನು ಗದರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಂತರ ಹನ್ನೊಂದು ಜನ ಶಿಷ್ಯರು ಊಟ ಮಾಡುತ್ತಿರುವಾಗ, ಯೇಸು ಅವರಿಗೆ ಕಾಣಿಸಿಕೊಂಡನು. ಶಿಷ್ಯರಲ್ಲಿ ಕೊಂಚ ನಂಬಿಕೆ ಇದ್ದುದರಿಂದ ಯೇಸು ಅವರನ್ನು ಖಂಡಿಸಿದನು. ಏಕೆಂದರೆ, ಯೇಸು ಸಾವಿನಿಂದ ಎದ್ದುಬಂದಿದ್ದಾನೆಂದು ದೃಢವಾಗಿ ಹೇಳಿದ ಮಾತನ್ನು ಅವರು ನಂಬಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ತರುವಾಯ ಊಟಕ್ಕೆ ಕುಳಿತಿದ್ದ ಹನ್ನೊಂದು ಮಂದಿಗೆ ಯೇಸು ಕಾಣಿಸಿಕೊಂಡರು. ತಾವು ಜೀವಿತರಾಗಿ ಎದ್ದು ಬಂದ ಮೇಲೆ ತಮ್ಮನ್ನು ಕಂಡವರ ಮಾತನ್ನು ಅವರು ನಂಬದಿದ್ದ ಕಾರಣ ಅವರ ಅಪನಂಬಿಕೆಯನ್ನೂ ಹೃದಯದ ಕಾಠಿಣ್ಯವನ್ನೂ ಯೇಸು ಗದರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಆಕ್ರಿಕ್ ಅಕ್ರಾ ಜಾನಾ ಶಿಸಾ ಜೆವ್ತಾನಾ ಜೆಜು ತೆಂಕಾ ದಿಸ್ಲೊ, ಅನಿ ತೆಂಕಾ ಜೊರ್ ಕರ್‍ಲ್ಯಾನ್, ಕಶ್ಯಾಕ್ ಮಟ್ಲ್ಯಾರ್ ತೆಂಚ್ಯಾತ್ಲ್ಯಾನಿ ತೆಕಾ ಝಿತ್ತೊ ಹೊತ್ತೊ ಬಗಟಲ್ಲ್ಯಾನಿ, ಜಾಲ್ಯಾರ್‍ಬಿ ತೆಂಚಿ ಕಾಳ್ಜಾ ವಿಶ್ವಾಸ್ ಕರಿನಸ್ತಾನಾ ರಾವ್ಕ್ ಸರ್ಕಿ ಘಟ್ ಹೊಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 16:14
24 ತಿಳಿವುಗಳ ಹೋಲಿಕೆ  

ಅನಂತರ ಕೇಫನಿಗೂ ತರುವಾಯ ಆತನು ಹನ್ನೆರಡು ಜನ ಅಪೊಸ್ತಲರಿಗೂ ಕಾಣಿಸಿಕೊಂಡನು.


ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಜಾಗರೂಕನಾಗಿರು. ಮಾನಸಾಂತರ ಹೊಂದಿ ದೇವರ ಕಡೆಗೆ ತಿರಿಗಿಕೋ.


ಆ ಮೇಲೆ ತೋಮನಿಗೆ, “ನಿನ್ನ ಬೆರಳನ್ನು ಈ ಕಡೆ ಚಾಚಿ ನನ್ನ ಕೈಗಳನ್ನು ಮುಟ್ಟಿ ನೋಡು, ನಿನ್ನ ಕೈ ಚಾಚಿ ನನ್ನ ಪಕ್ಕೆಯಲ್ಲಿ ಹಾಕು. ಅಪನಂಬಿಕೆಯಳ್ಳವನಾಗಿರಬೇಡ, ನಂಬುವವನಾಗು” ಎಂದು ಹೇಳಿದನು.


ಅನಂತರ ಆತನು ತನ್ನ ಮಹತ್ಕಾರ್ಯಗಳು ಬಹಳವಾಗಿ ನಡೆದ ಊರುಗಳವರು ಮಾನಸಾಂತರಪಡಲಿಲ್ಲವೆಂದು ಅವುಗಳನ್ನು ಗದರಿಸತೊಡಗಿದನು.


ಯೇಸು ಅವರಿಗೆ, “ಎಲಾ ಬುದ್ಧಿಯಿಲ್ಲದವರೇ, ಪ್ರವಾದಿಗಳು ಹೇಳಿದ್ದೆಲ್ಲವನ್ನು ನಂಬದ ಮಂದ ಹೃದಯವುಳ್ಳವರೇ,


ಆತನು ಅವರಿಗೆ, “ನಿಮಗೆ ಇನ್ನೂ ತಿಳಿವಳಿಕೆಯಿಲ್ಲವೇ? ಹೊರಗಿನಿಂದ ಮನುಷ್ಯನೊಳಗೆ ಹೋಗುವಂಥದು,


ಆತನು ಅವರಿಗೆ, “ನಿಮ್ಮ ಅಪನಂಬಿಕೆಯಿಂದಲೇ ಆಗಲಿಲ್ಲ. ಸಾಸಿವೇ ಕಾಳಿನಷ್ಟು ನಂಬಿಕೆ ನಿಮಗೆ ಇರುವುದಾದರೆ,


ಯೆಹೋವನು ಮೋಶೆಗೆ, “ಈ ಜನರು ಇನ್ನು ಎಷ್ಟರವರೆಗೆ ನನ್ನನ್ನು ಅಲಕ್ಷ್ಯಮಾಡುವರು? ನಾನು ನಡೆಸಿದ ಎಲ್ಲಾ ಮಹತ್ಕಾರ್ಯಗಳನ್ನು ಇವರು ಪ್ರತ್ಯಕ್ಷವಾಗಿ ನೋಡಿದಾಗ್ಯೂ ಇನ್ನು ಎಷ್ಟು ದಿನ ನನ್ನನ್ನು ನಂಬದೆ ಇರುವರು?


ಅವರು ಅಲ್ಲಿ ಯೇಸುವನ್ನು ಕಂಡು ಆತನನ್ನು ಆರಾಧಿಸಿದರು; ಆದರೆ ಕೆಲವರು ಸಂದೇಹಪಟ್ಟರು.


ಅವರು ನಂಬಲಿಲ್ಲ ಏಕೆಂದರೆ ಆ ಮಾತುಗಳು ಅವರಿಗೆ ಬರೀ ಹರಟೆಯಾಗಿ ತೋರಿದವು.


ಉಳಿದ ಶಿಷ್ಯರು ಅವನಿಗೆ, “ನಾವು ಕರ್ತನನ್ನು ನೋಡಿದ್ದೇವೆ” ಎಂದು ಹೇಳಿದರು. ಅದಕ್ಕೆ ಅವನು, “ನಾನು ಆತನ ಕೈಗಳಲ್ಲಿ ಮೊಳೆಗಳಿಂದಾದ ಗಾಯವನ್ನು ನೋಡಿ, ಆ ಮೊಳೆಯ ಗಾಯದಲ್ಲಿ ನನ್ನ ಬೆರಳನ್ನು ಇಟ್ಟು ಆತನ ಪಕ್ಕೆಯಲ್ಲಿ ನನ್ನ ಕೈಯನ್ನು ಹಾಕದ ಹೊರತು ನಿಮ್ಮ ಮಾತನ್ನು ನಂಬುವುದೇ ಇಲ್ಲ” ಎಂದನು.


ಎಂಟು ದಿನಗಳಾದ ಮೇಲೆ ಆತನ ಶಿಷ್ಯರು ಪುನಃ ಒಳಗಿದ್ದಾಗ ತೋಮನೂ ಅವರ ಜೊತೆ ಇದ್ದನು. ಬಾಗಿಲುಗಳು ಮುಚ್ಚಿದ್ದವು ಆಗ ಯೇಸು ಬಂದು ನಡುವೆ ನಿಂತು ನಿಮಗೆ “ಸಮಾಧಾನವಾಗಲಿ ಎಂದನು”


ತರುವಾಯ ಯೇಸು ತಿಬೇರಿಯ ಸಮುದ್ರದ ಬಳಿಯಲ್ಲಿ ಶಿಷ್ಯರಿಗೆ ಪುನಃ ಕಾಣಿಸಿಕೊಂಡನು:


ಯೇಸು ಸತ್ತವರೊಳಗಿಂದ ಜೀವಿತನಾಗಿ ಎದ್ದ ಮೇಲೆ, ತನ್ನ ಶಿಷ್ಯರಿಗೆ ಕಾಣಿಸಿಕೊಂಡದ್ದು ಇದು ಮೂರನೆಯ ಸಾರಿ.


ಯೇಸುವು ಬಾಧೆಪಟ್ಟು ಸತ್ತ ನಂತರ ತಾನು ಜೀವಂತನಾಗಿ ಎದ್ದು ಬಂದಿದ್ದೇನೆ ಎಂದು ಅನೇಕ ಸಂಭವಗಳ ಮೂಲಕ ತಾನು ಆರಿಸಿಕೊಂಡಿದ್ದ ಅಪೊಸ್ತಲರಿಗೆ ಸ್ಪಷ್ಟಪಡಿಸಿದನು. ಸತತವಾಗಿ ನಲವತ್ತು ದಿನಗಳ ತನಕ ಅವರಿಗೆ ಕಾಣಿಸಿಕೊಳ್ಳುತ್ತಾ ದೇವರ ರಾಜ್ಯದ ವಿಷಯವನ್ನು ಕುರಿತು ಅವರಿಗೆ ಬೋಧಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು