Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 16:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಕರ್ತನಾದ ಯೇಸು ಅವರೊಂದಿಗೆ ಮಾತನಾಡಿದ ಮೇಲೆ ಪರಲೋಕಕ್ಕೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಆಸನಾರೂಢನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಯೇಸುಸ್ವಾಮಿ ಶಿಷ್ಯರೊಡನೆ ಮಾತನಾಡಿದ ಮೇಲೆ ಸ್ವರ್ಗಾರೋಹಣವಾಗಿ ದೇವರ ಬಲಪಾರ್ಶ್ವದಲ್ಲಿ ಆಸೀನರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಯೇಸುಸ್ವಾವಿುಯು ಅವರ ಕೂಡ ಮಾತಾಡಿದ ಮೇಲೆ ಆಕಾಶಕ್ಕೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಆಸನಾರೂಢನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಪ್ರಭುವಾದ ಯೇಸು ಈ ಸಂಗತಿಗಳನ್ನು ಶಿಷ್ಯರಿಗೆ ಹೇಳಿದ ಮೇಲೆ, ಸ್ವರ್ಗದೊಳಗೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಕುಳಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಕರ್ತ ಯೇಸು ಅವರೊಂದಿಗೆ ಮಾತನಾಡಿದ ನಂತರ, ಅವರು ಪರಲೋಕಕ್ಕೆ ಏರಿ ದೇವರ ಬಲಪಾರ್ಶ್ವದಲ್ಲಿ ಕುಳಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಜೆಜು ತೆಂಕಾ ಅಶೆ ಹೆ ಸಗ್ಳೆ ಸಾಂಗುನ್ ಹೊಲ್ಲ್ಯಾ ಮಾನಾ ತೆಕಾ ಸರ್‍ಗಾ ವರ್‍ತಿ ಉಕ್ಲುನ್ ಘೆವ್ನ್ ಜಾವ್ನ್ ಹೊಲೆ ಅನಿ ತೊ ದೆವಾಚ್ಯಾ ಉಜ್ವ್ಯಾ ಬಾಜುಕ್ ಬಸ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 16:19
37 ತಿಳಿವುಗಳ ಹೋಲಿಕೆ  

ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ, ದೇವದೂತರು, ಅಧಿಕಾರಿಗಳು ಮತ್ತು ಶಕ್ತಿಗಳೂ ಆತನ ಸ್ವಾಧೀನವಾಗಿವೆ.


ಈತನು ದೇವರ ಮಹಿಮೆಯ ಪ್ರಕಾಶವೂ, ಆತನ ವ್ಯಕ್ತಿತ್ವದ ಪ್ರತಿರೂಪವೂ, ತನ್ನ ಶಕ್ತಿಯುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ಶುದ್ಧಿಮಾಡಿ, ಉನ್ನತದಲ್ಲಿರುವ ಮಹೋನ್ನತನಾದ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.


ಹಾಗಿದ್ದ ಮೇಲೆ ಅಪರಾಧಿಗಳೆಂದು ಖಂಡಿಸುವವರು ಯಾರು? ಮರಣವನ್ನು ಹೊಂದಿದ್ದಲ್ಲದೆ ಜೀವಿತನಾಗಿ ಎದ್ದು ದೇವರ ಬಲಗಡೆಯಲ್ಲಿದ್ದು ನಮಗೋಸ್ಕರ ಬೇಡುವವನಾಗಿರುವ ಕ್ರಿಸ್ತ ಯೇಸುವೋ?


ಯೆಹೋವನು ನನ್ನ ಒಡೆಯನಿಗೆ, “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಪೀಠವಾಗುವಂತೆ ಮಾಡುವ ತನಕ, ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂದು ನುಡಿದನು.


ಆತನು ದೇವರ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಲ್ಪಟ್ಟು, ವಾಗ್ದಾನವಾಗಿದ್ದ ಪವಿತ್ರಾತ್ಮವರವನ್ನು ತಂದೆಯಿಂದ ಹೊಂದಿ ನೀವು ನೋಡಿ ಕೇಳುವುದನ್ನು ಸುರಿಸಿದ್ದಾನೆ.


ನಾವು ಈಗ ಹೇಳುವ ಸಂಗತಿಗಳಲ್ಲಿ ಮುಖ್ಯವಾದ ಮಾತೇನೆಂದರೆ, ಪರಲೋಕದೊಳಗೆ ಮಹೋನ್ನತನ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾದಂಥ ಮಹಾಯಾಜಕನು ನಮಗಿದ್ದಾನೆ.


ನೀವು ಕ್ರಿಸ್ತನೊಂದಿಗೆ ಎಬ್ಬಿಸಲ್ಪಟ್ಟಿರುವುದಾದರೆ ಮೇಲಿನವುಗಳನ್ನೇ ಹುಡುಕಿರಿ, ಅಲ್ಲಿ ಕ್ರಿಸ್ತನು ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾನೆ.


ಯೇಸು ಆಕೆಗೆ, “ನನ್ನನ್ನು ಮುಟ್ಟಬೇಡ, ಏಕೆಂದರೆ ನಾನು ಇನ್ನೂ ತಂದೆಯ ಬಳಿಗೆ ಏರಿಹೋದವನಲ್ಲ. ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವರಿಗೆ, ನನ್ನ ತಂದೆಯೂ, ನಿಮ್ಮ ತಂದೆಯೂ, ನನ್ನ ದೇವರೂ, ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಏರಿಹೋಗುತ್ತೇನೆ ಎಂದು ತಿಳಿಸು” ಎಂದನು.


ಅಲ್ಲಿಗೆ ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ, ನಮಗೋಸ್ಕರ ಮುಂಚಿತವಾಗಿಯೇ ಹೋಗಿ ಆ ಸಾನ್ನಿಧ್ಯವನ್ನು ಪ್ರವೇಶಿಸಿದ್ದಾನೆ.


ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ, ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು, ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು, ದೇವದೂತರಿಗೆ ಕಾಣಿಸಿಕೊಂಡನು, ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು, ಲೋಕದಲ್ಲಿ ನಂಬಲ್ಪಟ್ಟನು, ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.


ಹಾಗಾದರೆ ಮನುಷ್ಯಕುಮಾರನು ತಾನು ಮೊದಲು ಇದ್ದಲ್ಲಿಗೆ ಏರಿ ಹೋಗುವುದನ್ನು ನೀವು ನೋಡುವುದಾದರೆ ಏನನ್ನುವಿರಿ?


ಯೇಸು ತಾನು ಪರಲೋಕಕ್ಕೆ ಏರಿಹೋಗುವ ದಿನಗಳು ಸಮೀಪಿಸುತ್ತಿರುವಾಗ ಯೆರೂಸಲೇಮಿಗೆ ಹೋಗುವುದಕ್ಕೆ ಮನಸ್ಸನ್ನು ದೃಢಮಾಡಿಕೊಂಡನು.


ಯಾಕೆಂದರೆ ಕ್ರಿಸ್ತನು ನಿಜವಾದ ದೇವಾಲಯಕ್ಕೆ ಪ್ರತಿಬಿಂಬವಾಗಿ ಕೈಯಿಂದ ಕಟ್ಟಲ್ಪಟ್ಟ ಪವಿತ್ರ ಸ್ಥಳವನ್ನು ಪ್ರವೇಶಿಸದೆ, ದೇವರ ಸನ್ನಿಧಿಯಲ್ಲಿ ನಮಗೋಸ್ಕರ ಈಗ ಪ್ರತ್ಯಕ್ಷನಾಗಲು ಪರಲೋಕದೊಳಗೆ ಪ್ರವೇಶಿಸಿದನು.


ಇಂಥವನೇ ನಮಗೆ ಬೇಕಾಗಿರುವ ಮಹಾಯಾಜಕನು, ಈತನು ಪರಿಶುದ್ಧನೂ, ನಿರ್ದೋಷಿಯೂ, ನಿಷ್ಕಳಂಕನೂ, ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವವನು, ಆಕಾಶಮಂಡಲಗಳಿಗಿಂತ ಉನ್ನತದಲ್ಲಿರುವವನೂ ಆಗಿರುವನು.


ಆಕಾಶಗಳನ್ನು ದಾಟಿಹೋದ ದೇವಕುಮಾರನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿದ್ದಾನೆ. ಆದುದರಿಂದ ನಮಗಿರುವ ನಂಬಿಕೆಯನ್ನು ದೃಢವಾಗಿ ಹಿಡಿಯೋಣ.


ಆದರೆ ಸಮಸ್ತವನ್ನು ಸರಿಮಾಡುವ ಕಾಲವು ಬರುವ ತನಕ ಪರಲೋಕವೇ ಕ್ರಿಸ್ತನ ಸ್ಥಾನವಾಗಿರಬೇಕು. ಆ ಕಾಲದ ವಿಷಯವಾಗಿ ದೇವರು ಪೂರ್ವದಲ್ಲಿದ್ದ ತನ್ನ ಪರಿಶುದ್ಧ ಪ್ರವಾದಿಗಳ ಮುಖಾಂತರ ಹೇಳಿಸಿದ್ದಾನೆ.


ಯೇಸು ಅವನಿಗೆ “ನಾನು ಬರುವ ತನಕ ಇವನು ಉಳಿದಿರಬೇಕೆಂಬುದು ನನಗೆ ಮನಸ್ಸಾಗಿದ್ದರೆ ಅದರಿಂದ ನಿನಗೇನು? ನೀನು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.


ಅವರ ಊಟವಾದ ಮೇಲೆ ಯೇಸು ಸೀಮೋನ್ ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ಇವರಿಗಿಂತ ಹೆಚ್ಚಾಗಿ ನನ್ನನ್ನು ಪ್ರೀತಿಸುತ್ತಿಯೋ?” ಎಂದು ಕೇಳಲು ಅವನು “ಹೌದು, ಕರ್ತನೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂದು ನೀನೇ ಬಲ್ಲೆ” ಎಂದನು. ಆತನು ಅವನಿಗೆ, “ನನ್ನ ಕುರಿಮರಿಗಳನ್ನು ಮೇಯಿಸು” ಎಂದು ಹೇಳಿದನು.


“ಆದರೆ ಈಗ ನಾನು ನಿನ್ನ ಬಳಿಗೆ ಬರುತ್ತೇನೆ. ಆದುದರಿಂದ ನನ್ನ ಆನಂದವು ಇವರಲ್ಲಿ ಪರಿಪೂರ್ಣವಾಗಿರುವಂತೆ ನಾನು ಲೋಕದಲ್ಲಿದ್ದು ಈ ಮಾತುಗಳನ್ನಾಡುತ್ತಿದೇನೆ.


ನಾನು ತಂದೆಯ ಬಳಿಯಿಂದ ಹೊರಟು ಈ ಲೋಕಕ್ಕೆ ಬಂದಿದ್ದೇನೆ, ಪುನಃ ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುತ್ತೇನೆ” ಎಂದನು.


ಪಸ್ಕಹಬ್ಬದ ಹಿಂದಿನ ದಿನ ಯೇಸು, ತಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗಬೇಕಾದ ತನ್ನ ಗಳಿಗೆ ಬಂದಿತೆಂದು ತಿಳಿದುಕೊಂಡು, ಈ ಲೋಕದಲ್ಲಿರುವ ತನ್ನವರನ್ನು ಪ್ರೀತಿಸಿ, ಅವರನ್ನು ಕೊನೆಯವರೆಗೂ ಪ್ರೀತಿಸುತ್ತಾ ಬಂದನು.


ಅನಂತರ ಅವರು ಹೊರಟುಹೋಗಿ ಎಲ್ಲಾ ಕಡೆಗಳಲ್ಲಿಯೂ ಸುವಾರ್ತೆಯನ್ನು ಸಾರಿದರು; ಮತ್ತು ಕರ್ತನು ಅವರ ಸಂಗಡ ಕೆಲಸ ಮಾಡುತ್ತಾ ಸೂಚಕಕಾರ್ಯಗಳಿಂದ ಸುವಾರ್ತೆಯ ವಾಕ್ಯವನ್ನು ದೃಢಪಡಿಸುತ್ತಾ ಇದ್ದನು.


ಆದರೆ ಇಂದಿನಿಂದ ಮನುಷ್ಯಕುಮಾರನು ಸರ್ವಶಕ್ತನಾದ ದೇವರ ಬಲಗಡೆಯಲ್ಲಿ ಆಸೀನನಾಗಿರುವನು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು