ಮಾರ್ಕ 16:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅನಂತರ ಅವರು ಹೊರಟುಹೋಗಿ ಎಲ್ಲಾ ಕಡೆಗಳಲ್ಲಿಯೂ ಸುವಾರ್ತೆಯನ್ನು ಸಾರಿದರು; ಮತ್ತು ಕರ್ತನು ಅವರ ಸಂಗಡ ಕೆಲಸ ಮಾಡುತ್ತಾ ಸೂಚಕಕಾರ್ಯಗಳಿಂದ ಸುವಾರ್ತೆಯ ವಾಕ್ಯವನ್ನು ದೃಢಪಡಿಸುತ್ತಾ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಇತ್ತ ಶಿಷ್ಯರು ಹೊರಟುಹೋಗಿ, ಎಲ್ಲೆಡೆಗಳಲ್ಲಿಯೂ ಶುಭಸಂದೇಶವನ್ನು ಬೋಧಿಸತೊಡಗಿದರು. ಪ್ರಭು ಯೇಸು ಅವರೊಂದಿಗೆ ಕಾರ್ಯಸಾಧಿಸುತ್ತಾ, ಮಹತ್ಕಾರ್ಯಗಳಿಂದ ಶುಭಸಂದೇಶವನ್ನು ಸಮರ್ಥಿಸುತ್ತಾ ಇದ್ದರು. (ಆ ಮಹಿಳೆಯರು ಹೋಗಿ ತಾವು ಕೇಳಿದ್ದೆಲ್ಲವನ್ನೂ ಪೇತ್ರನಿಗೂ ಆತನ ಸಂಗಡಿಗರಿಗೂ ಸಂಕ್ಷಿಪ್ತವಾಗಿ ತಿಳಿಸಿದರು. ಅನಂತರ ಯೇಸುಸ್ವಾಮಿ ಸ್ವತಃ ತಮ್ಮ ಶುಭಸಂದೇಶವನ್ನು ಶಿಷ್ಯರ ಮೂಲಕ ಜಗತ್ತಿನೆಲ್ಲೆಡೆ ಹರಡುವಂತೆ ಮಾಡಿದರು. ಶಾಶ್ವತ ಜೀವೋದ್ಧಾರವನ್ನೀಯುವ ಈ ಶುಭಸಂದೇಶವು ಪವಿತ್ರ ಹಾಗೂ ಚಿರಂತನವಾದುದು). ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಇತ್ತಲಾಗಿ ಅವರು ಹೊರಟುಹೋಗಿ ಎಲ್ಲೆಲ್ಲಿಯೂ ಸುವಾರ್ತೆಯನ್ನು ಸಾರಿದರು; ಮತ್ತು ಕರ್ತನು ಅವರ ಕೂಡ ಕೆಲಸ ಮಾಡುತ್ತಾ ಸೂಚಕಕಾರ್ಯಗಳಿಂದ ಸುವಾರ್ತೆಯ ವಾಕ್ಯವನ್ನು ಬಲಪಡಿಸುತ್ತಾ ಇದ್ದನು.] ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಶಿಷ್ಯರು ಪ್ರಪಂಚದ ಎಲ್ಲಾ ಕಡೆಗೆ ಹೋಗಿ, ಜನರಿಗೆ ಸುವಾರ್ತೆಯನ್ನು ಸಾರಿದರು. ಪ್ರಭುವು ಅವರೊಂದಿಗೆ ಕಾರ್ಯಸಾಧಿಸುತ್ತಾ, ಸೂಚಕಕಾರ್ಯಗಳಿಂದ ಸುವಾರ್ತೆಯ ವಾಕ್ಯವನ್ನು ಬಲಪಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಶಿಷ್ಯರು ಹೊರಟುಹೋಗಿ ಎಲ್ಲಾ ಕಡೆಗಳಲ್ಲಿಯೂ ಸುವಾರ್ತೆಯನ್ನು ಸಾರಿದರು. ಕರ್ತನು ಅವರ ಜೊತೆಯಲ್ಲಿ ಕೆಲಸ ಮಾಡುತ್ತಾ, ಸೂಚಕಕಾರ್ಯಗಳಿಂದ ತಮ್ಮ ವಾಕ್ಯವನ್ನು ಸ್ಥಿರಪಡಿಸುತ್ತಾ ಇದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ಶಿಸಾನಿ ಸಗ್ಳ್ಯಾಕ್ಡೆ ಜಾವ್ನ್ ಬರಿ ಖಬರ್ ಸಾಂಗ್ಲ್ಯಾನಿ ಅನಿ ದೆವಾನ್ ತೆಂಚ್ಯಾ ವಾಂಗ್ಡಾ ಕಾಮ್ ಕರುನ್ ಸುಮಾರ್ ವಿಚಿತ್ರಾ ಕರ್ತಲ್ಯಾಚ್ಯಾ ವೈನಾ ಹೆನಿ ಸಾಂಗ್ತಲಿ ಬರಿ ಖಬರ್ ಖರಿ ಹಾಯ್ ಮನುನ್ ದಾಕ್ವುನ್ ದಿಲ್ಯಾನ್. ಅಧ್ಯಾಯವನ್ನು ನೋಡಿ |