Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 2:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಕೆಲವು ದಿನಗಳಾದ ಮೇಲೆ ಯೇಸು ಕಪೆರ್ನೌಮಿಗೆ ಹಿಂತಿರುಗಿ ಬಂದನು. ಆತನು ಮನೆಯಲ್ಲಿದ್ದಾನೆಂಬ ವರ್ತಮಾನವು ಜನರಲ್ಲಿ ಹಬ್ಬಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಕೆಲವು ದಿನಗಳು ಕಳೆದ ಬಳಿಕ ಯೇಸುಸ್ವಾಮಿ ಮತ್ತೊಮ್ಮೆ ಕಫೆರ್ನವುಮಿಗೆ ಬಂದರು. ಅವರು ಮನೆಯಲ್ಲಿದ್ದಾರೆಂಬ ಸುದ್ದಿ ಹಬ್ಬಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಕೆಲವು ದಿನಗಳಾದ ಮೇಲೆ ಆತನು ಕಪೆರ್ನೌವಿುಗೆ ತಿರಿಗಿ ಬಂದನು. ಮನೆಯಲ್ಲಿದ್ದಾನೆಂಬ ವರ್ತಮಾನವು ಹಬ್ಬಿದಾಗ ಬಹುಜನರು ಕೂಡಿ ಬಂದಿದ್ದರಿಂದ ಬಾಗಿಲಿನ ಬಳಿಯಲ್ಲಾದರೂ ಸ್ಥಳವಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಕೆಲವು ದಿನಗಳ ತರುವಾಯ, ಯೇಸು ಕಪೆರ್ನೌಮಿಗೆ ಹಿಂದಿರುಗಿ ಬಂದನು. ಯೇಸು ಮನೆಯಲ್ಲಿದ್ದಾನೆಂಬ ಸುದ್ದಿಯು ಹಬ್ಬಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಕೆಲವು ದಿನಗಳಾದ ಮೇಲೆ ಯೇಸು ಕಪೆರ್ನೌಮಿಗೆ ಹಿಂದಿರುಗಿದಾಗ, ಅವರು ಮನೆಗೆ ಬಂದಿದ್ದಾರೆಂಬ ವಾರ್ತೆಯು ಜನರಲ್ಲಿ ಹಬ್ಬಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಎಕ್ ಉಲ್ಲಿ ದಿಸಾ ಹೊಲ್ಲ್ಯಾಮಾನಾ, ಜೆಜು ಕಫರ್‍ನವ್ ಮನ್ತಲ್ಯಾ ಗಾವಾಕ್ ಪರ್ತುನ್ ಯೆಲೊ. ತೊ ಥೈ, ಎಕ್ ಘರಾತ್ ಹಾಯ್ ಮನ್ತಲಿ ಖಬರ್, ಲೊಕಾಕ್ನಿ ಗಾವ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 2:1
13 ತಿಳಿವುಗಳ ಹೋಲಿಕೆ  

ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದ ಸುದ್ದಿಯನ್ನು ಆ ಅಧಿಕಾರಿಯು ಕೇಳಿದಾಗ ತನ್ನ ಮಗನು ಸಾಯುವ ಸ್ಥಿತಿಯಲ್ಲಿದುದ್ದರಿಂದ ಯೇಸುವಿನ ಬಳಿಗೆ ಹೋಗಿ, “ನೀನು ಬಂದು ನನ್ನ ಮಗನನ್ನು ಸ್ವಸ್ಥಮಾಡು” ಎಂದು ಬೇಡಿಕೊಂಡನು.


ಯೇಸು ಅಲ್ಲಿಂದ ಹೊರಟು ತೂರ್ ಪಟ್ಟಣದ ಪ್ರಾಂತ್ಯಗಳಿಗೆ ಹೋಗಿ ಒಂದು ಮನೆಯೊಳಗೆ ಇಳಿದುಕೊಂಡು ಅದು ಯಾರಿಗೂ ತಿಳಿಯಬಾರದೆಂದು ಬಯಸಿದನು; ಆದರೆ ಆತನು ಗುಪ್ತವಾಗಿರುವುದಕ್ಕೆ ಸಾಧ್ಯವಾಗದೆ ಹೋಯಿತು.


ಹೀಗಿರುವಲ್ಲಿ ಕೆಲವು ಮಂದಿ ಗಂಡಸರು ಒಬ್ಬ ಪಾರ್ಶ್ವವಾಯು ರೋಗಿಯನ್ನು ದೋಲಿಯಲ್ಲಿ ಹೊತ್ತುಕೊಂಡು ಬಂದರು. ಅವನನ್ನು ಒಳಗೆ ತೆಗೆದುಕೊಂಡು ಹೋಗಿ ಆತನ ಮುಂದೆ ಇರಿಸಬೇಕೆಂದು ಪ್ರಯತ್ನಿಸಿದರು.


ಆದರೆ ಅವನು ಹೊರಟುಹೋಗಿ ಎಲ್ಲಾ ಕಡೆಗೂ ಈ ಸಂಗತಿಯನ್ನು ಬಹಳವಾಗಿ ಸಾರಿ ಹಬ್ಬಿಸುವುದಕ್ಕೆ ಪ್ರಾರಂಭಿಸಿದ್ದರಿಂದ ಯೇಸು ಬಹಿರಂಗವಾಗಿ ಬೇರೆ ಊರುಗಳಿಗೆ ಹೋಗಲಾರದೆ ನಿರ್ಜನ ಸ್ಥಳಗಳಲ್ಲಿ ಇದ್ದನು. ಆದರೂ ಜನರು ಎಲ್ಲಾ ಕಡೆಯಿಂದಲೂ ಆತನ ಬಳಿಗೆ ಬರುತ್ತಿದ್ದರು.


ಯೇಸು ದೋಣಿಯನ್ನು ಹತ್ತಿ ಸಮುದ್ರವನ್ನು ದಾಟಿ ತನ್ನ ಊರಿಗೆ ಬಂದನು.


ಆ ಸಪ್ಪಳವಾದಾಗ ಆ ಜನರೆಲ್ಲರೂ ಗುಂಪು ಗುಂಪಾಗಿ ಕೂಡಿಬಂದು ಪ್ರತಿಯೊಬ್ಬರೂ ತಮ್ಮತಮ್ಮ ಭಾಷೆಯಲ್ಲೇ ಇವರು ಮಾತನಾಡುವುದನ್ನು ಕೇಳಿ ದಿಗ್ಭ್ರಮೆಗೊಂಡರು.


ಬಳಿಕ ನಜರೇತೆಂಬ ಊರನ್ನು ಬಿಟ್ಟು ಜೆಬುಲೋನ್‌ ಮತ್ತು ನಫ್ತಾಲಿಯರ ಗಡಿ ನಾಡುಗಳಿಗೆ ಬಂದು ಸಮುದ್ರದ ಹತ್ತಿರದಲ್ಲಿರುವ ಕಪೆರ್ನೌಮೆಂಬ ಊರಿನಲ್ಲಿ ವಾಸಿಸತೊಡಗಿದನು.


ಆಗ ಬಹು ಜನರು ಅಲ್ಲಿ ಕೂಡಿಬಂದಿದ್ದರಿಂದ ಬಾಗಿಲಿನ ಬಳಿಯಲ್ಲಿಯೂ ಕೂಡ ಸ್ಥಳವಿರಲಿಲ್ಲ. ಯೇಸು ಅವರಿಗೆ ದೇವರ ವಾಕ್ಯವನ್ನು ಹೇಳುತ್ತಿದ್ದನು.


ಆತನು ಮನೆಯೊಳಗೆ ಬಂದಾಗ ಅಲ್ಲಿ ಬಹಳ ಜನರು ಸೇರಿಬಂದದ್ದರಿಂದ ಊಟ ಮಾಡಲು ಕೂಡ ಆಗಲಿಲ್ಲ.


ತರುವಾಯ ಆತನು ಜನರನ್ನು ಬಿಟ್ಟು ಮನೆಯೊಳಗೆ ಹೋದಾಗ ಆತನ ಶಿಷ್ಯರು ಆ ಸಾಮ್ಯದ ಅರ್ಥವೇನೆಂದು ಆತನನ್ನು ಕೇಳಲು


ಯೇಸು ಮನೆಗೆ ಬಂದಾಗ ಆತನ ಶಿಷ್ಯರು, “ಅದನ್ನು ಬಿಡಿಸಲಿಕ್ಕೆ ನಮ್ಮಿಂದ ಏಕೆ ಆಗಲಿಲ್ಲವೆಂದು” ಆತನನ್ನು ಏಕಾಂತದಲ್ಲಿ ಕೇಳಿದರು.


ಅದಕ್ಕೆ ಯೇಸು ಅವರಿಗೆ, “‘ವೈದ್ಯನೇ, ನಿನ್ನನ್ನು ನೀನೇ ವಾಸಿಮಾಡಿಕೋ’ ಎಂಬ ಗಾದೆಯನ್ನು ನನಗೆ ನಿಸ್ಸಂದೇಹವಾಗಿ ಹೇಳಿ; ಕಪೆರ್ನೌಮಿನಲ್ಲಿ ನೀನು ಮಾಡಿದ ಕಾರ್ಯಗಳನ್ನು ನಾವು ಕೇಳಿದ್ದೇವೆ, ಅಂಥವುಗಳನ್ನು ಈ ನಿನ್ನ ಸ್ವಂತ ಸ್ಥಳದಲ್ಲಿಯೂ ಮಾಡು ಎಂದು ಹೇಳುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು