Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 2:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೇಸು ಹೊರಟು ತಿರುಗಿ ಸಮುದ್ರದ ಬಳಿಗೆ ಹೋದನು. ಜನರು ಗುಂಪಾಗಿ ಆತನ ಬಳಿಗೆ ಬಂದಾಗ ಆತನು ಅವರಿಗೆ ಉಪದೇಶ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಯೇಸುಸ್ವಾಮಿ ಪುನಃ ಗಲಿಲೇಯ ಸರೋವರದ ತೀರಕ್ಕೆ ಹೋದರು. ಜನರ ಗುಂಪು ಅವರನ್ನು ಸುತ್ತುಗಟ್ಟಿತು. ಯೇಸು ಅವರಿಗೆ ಪ್ರಬೋಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆತನು ಹೊರಟು ತಿರಿಗಿ ಸಮುದ್ರದ ಬಳಿಗೆ ಹೋದನು. ಜನರ ಗುಂಪೆಲ್ಲಾ ಆತನ ಬಳಿಗೆ ಬಂದಾಗ ಆತನು ಅವರಿಗೆ ಉಪದೇಶಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೇಸು ಮತ್ತೆ ಸರೋವರಕ್ಕೆ ಹೋದನು. ಅನೇಕ ಜನರು ಆತನನ್ನು ಹಿಂಬಾಲಿಸಿ ಅಲ್ಲಿಗೆ ಹೋದದ್ದರಿಂದ ಆತನು ಅವರಿಗೆ ಉಪದೇಶಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯೇಸು ಪುನಃ ಸರೋವರದ ತೀರಕ್ಕೆ ಹೋದರು. ಜನರೆಲ್ಲರೂ ಯೇಸುವಿನ ಬಳಿಗೆ ಬಂದರು. ಯೇಸು ಅವರಿಗೆ ಉಪದೇಶಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಅನಿ ಎಗ್ದಾ ಜೆಜು ಗಾಲಿಲಿಯಾ ಸಮುಂದರಾಚ್ಯಾ ದಂಡೆಕ್ ಗೆಲೊ. ತನ್ನಾ ಲೊಕಾಂಚೊ ಎಕ್ ತಾಂಡೊಬಿ ತೆಚ್ಯಾ ಫಾಟ್ನಾ ಹೊತ್ತೊ. ತೊ ತೆಂಕಾ ದೆವಾಚ್ಯಾ ಗೊಸ್ಟಿಯಾ ಸಿಕ್ವುಕ್‍ಲಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 2:13
11 ತಿಳಿವುಗಳ ಹೋಲಿಕೆ  

ಯೇಸುವು ಪುನಃ ಸಮುದ್ರದ ದಡದಲ್ಲಿ ಉಪದೇಶ ಮಾಡತೊಡಗಿದ್ದನು. ಬಹುಜನರು ಆತನ ಬಳಿಗೆ ಸೇರಿಬಂದಿದ್ದರಿಂದ ಆತನು ಸಮುದ್ರದಲ್ಲಿದ್ದ ದೋಣಿಹತ್ತಿ ಕುಳಿತುಕೊಂಡನು; ಆ ಜನರೆಲ್ಲರು ಸಮುದ್ರದ ದಡದಲ್ಲಿ ಸುತ್ತಲೂ ನೆರೆದುಬಂದಿದ್ದರು.


ಜನರೆಲ್ಲರು ಆತನ ಉಪದೇಶವನ್ನು ಕೇಳಬೇಕೆಂದು ಬೆಳಗ್ಗೆ ಬೇಗನೆ ಎದ್ದು ದೇವಾಲಯಕ್ಕೆ ಆತನ ಬಳಿಗೆ ಬರುತ್ತಿದ್ದರು.


ಆದರೆ ಜನರೆಲ್ಲರು ಆತನ ಹತ್ತಿರದಲ್ಲಿದ್ದುಕೊಂಡು ಬೋಧನೆಯನ್ನು ಗಮನಿಸಿ ಕೇಳುತ್ತಿದ್ದುದರಿಂದ ಏನು ಮಾಡಬೇಕೆಂದು ಅವರಿಗೆ ತಿಳಿಯಲಿಲ್ಲ.


ಆಗ ಬಹು ಜನರು ಅಲ್ಲಿ ಕೂಡಿಬಂದಿದ್ದರಿಂದ ಬಾಗಿಲಿನ ಬಳಿಯಲ್ಲಿಯೂ ಕೂಡ ಸ್ಥಳವಿರಲಿಲ್ಲ. ಯೇಸು ಅವರಿಗೆ ದೇವರ ವಾಕ್ಯವನ್ನು ಹೇಳುತ್ತಿದ್ದನು.


ಆದರೆ ಅವನು ಹೊರಟುಹೋಗಿ ಎಲ್ಲಾ ಕಡೆಗೂ ಈ ಸಂಗತಿಯನ್ನು ಬಹಳವಾಗಿ ಸಾರಿ ಹಬ್ಬಿಸುವುದಕ್ಕೆ ಪ್ರಾರಂಭಿಸಿದ್ದರಿಂದ ಯೇಸು ಬಹಿರಂಗವಾಗಿ ಬೇರೆ ಊರುಗಳಿಗೆ ಹೋಗಲಾರದೆ ನಿರ್ಜನ ಸ್ಥಳಗಳಲ್ಲಿ ಇದ್ದನು. ಆದರೂ ಜನರು ಎಲ್ಲಾ ಕಡೆಯಿಂದಲೂ ಆತನ ಬಳಿಗೆ ಬರುತ್ತಿದ್ದರು.


ಆದೇ ದಿನದಲ್ಲಿ ಯೇಸು ಮನೆಯಿಂದ ಹೊರಟು ಸಮುದ್ರದ ದಡದಲ್ಲಿ ಕುಳಿತುಕೊಂಡನು.


ಯೇಸು ಅಲ್ಲಿಂದ ಹಾದು ಹೋಗುತ್ತಿರುವಾಗ, ಸುಂಕ ಸಂಗ್ರಹಣೆ ಕಟ್ಟೆಯಲ್ಲಿ ಕುಳಿತಿದ್ದ ಮತ್ತಾಯನೆಂಬ ಒಬ್ಬ ಮನುಷ್ಯನನ್ನು ನೋಡಿ, “ನನ್ನನ್ನು ಹಿಂಬಾಲಿಸು” ಎಂದು ಅವನನ್ನು ಕರೆಯಲು ಅವನು ಎದ್ದು ಆತನನ್ನು ಹಿಂಬಾಲಿಸಿದನು.


ಯೇಸು ಅಲ್ಲಿಂದ ಹೊರಟು ಯೂದಾಯ ಪ್ರಾಂತ್ಯಕ್ಕೂ ಯೊರ್ದನ್ ಹೊಳೆಯ ಆಚೆಯ ಸೀಮೆಗೂ ಬಂದನು. ಅಲ್ಲಿ ಜನರು ತಿರುಗಿ ಗುಂಪುಗುಂಪಾಗಿ ಆತನ ಬಳಿಗೆ ಕೂಡಿ ಬರಲು ಆತನು ತಿರುಗಿ ಎಂದಿನಂತೆ ಅವರಿಗೆ ಉಪದೇಶಮಾಡುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು