Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 2:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 “ಈತನು ಯಾಕೆ ಹೀಗೆ ಮಾತನಾಡುತ್ತಾನೆ? ಇದು ದೇವದೂಷಣೆ. ದೇವರೊಬ್ಬನೇ ಹೊರತು ಮತ್ತಾರು ಪಾಪಗಳನ್ನು ಕ್ಷಮಿಸಬಲ್ಲರು?” ಎಂದು ತಮ್ಮ ಮನಸ್ಸಿನಲ್ಲಿ ಆಲೋಚಿಸಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಇವನು ಯಾಕೆ ಹೀಗೆ ಮಾತನಾಡುತ್ತಾನೆ? ಇದು ದೇವದೂಷಣೆ. ದೇವರೊಬ್ಬನೇ ಹೊರತು ಮತ್ತಾರು ಪಾಪಗಳನ್ನು ಕ್ಷವಿುಸಬಲ್ಲರು? ಎಂದು ತಮ್ಮ ತಮ್ಮ ಮನಸ್ಸಿನಲ್ಲಿ ಅಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ಇವನು ಹೀಗೇಕೆ ಹೇಳುತ್ತಿದ್ದಾನೆ? ಇದು ದೇವದೂಷಣೆ! ದೇವರೊಬ್ಬನೇ ಪಾಪಗಳನ್ನು ಕ್ಷಮಿಸಲು ಸಾಧ್ಯ” ಎಂದು ತಮ್ಮ ಮನಸ್ಸಿನಲ್ಲಿ ಅಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ಈತನು ಏಕೆ ಹೀಗೆ ಮಾತನಾಡುತ್ತಾನೆ? ಈತನು ದೇವದೂಷಣೆ ಮಾಡುತ್ತಿದ್ದಾನೆ! ದೇವರೊಬ್ಬನೇ ಹೊರತು ಪಾಪಗಳನ್ನು ಕ್ಷಮಿಸುವವರು ಯಾರು?” ಎಂದು ತಮ್ಮೊಳಗೇ ಆಲೋಚಿಸಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 “ಅರೆ, ಹ್ಯೊ ಮಾನುಸ್ ಅಸೊ ಕಶ್ಯಾಕ್ ಬೊಲುಲಾ, ಹೆ, ದೆವಾಚಿ ನಿಂದ್ಯಾ ಕರ್ಲ್ಯಾ ಸರ್ಕೆ ಹೊಲೆ! ದೆವಾಕ್ ಎಕ್ಲ್ಯಾಕ್ ಸೊಡುನ್, ಕೊನಾಕ್ಬಿ ಕೊನಾಚೆಬಿ ಪಾಪ್ ಮಾಪ್ ಕರುಕ್ ಹೊಯ್ನಾ” ಮನುನ್ ಅಪ್ಲ್ಯಾ ಮನಾತುಚ್ ಯವಜ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 2:7
15 ತಿಳಿವುಗಳ ಹೋಲಿಕೆ  

ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿ ಬಿಡುತ್ತೇನೆ. ನಿನ್ನ ಪಾಪಗಳನ್ನು ನನ್ನ ನೆನಪಿನಲ್ಲಿಡುವುದಿಲ್ಲ.


ಅದಕ್ಕೆ ಆ ಶಾಸ್ತ್ರಿಗಳೂ ಮತ್ತು ಫರಿಸಾಯರೂ, “ದೇವದೂಷಣೆಯ ಮಾತನಾಡುವ ಇವನು ಎಷ್ಟರವನು? ಪಾಪಗಳನ್ನು ಕ್ಷಮಿಸಲು ದೇವರೊಬ್ಬನಿಂದ ಹೊರತು ಮತ್ತಾರಿಂದಾದೀತು?” ಎಂದು ಅಂದುಕೊಳ್ಳುತ್ತಿದ್ದರು.


ನಿನಗೆ ಯಾವ ದೇವರು ಸಮಾನ? ನೀನು ನಿನ್ನ ಸ್ವತ್ತಿನವರಲ್ಲಿ ಉಳಿದಿರುವ ಅಪರಾಧವನ್ನು ಕ್ಷಮಿಸುವವನೂ, ಅವರ ದ್ರೋಹವನ್ನು ಲಕ್ಷಿಸದವನೂ ಆಗಿದ್ದೀ. ಹೌದು ನಮ್ಮ ದೇವರು ನಿತ್ಯವೂ ಕೋಪಿಸುವವನಲ್ಲ. ಕರುಣೆಯೇ ಆತನಿಗೆ ಇಷ್ಟ.


ಕರ್ತನಾದ ನಮ್ಮ ದೇವರು ಕರುಣಿಸುವವನೂ, ಕ್ಷಮಿಸುವವನೂ ಆಗಿದ್ದಾನೆ; ನಾವು ಆತನಿಗೆ ತಿರುಗಿಬಿದ್ದೆವಲ್ಲಾ.


ಆತನ ಸಂಗಡ ಊಟಕ್ಕೆ ಕುಳಿತಿದ್ದವರೆಲ್ಲರೂ, “ಪಾಪಗಳನ್ನು ಸಹ ಕ್ಷಮಿಸಲು ಇವನಾರು?” ಎಂದು ತಮ್ಮತಮ್ಮೊಳಗೆ ಅಂದುಕೊಂಡರು.


ನೀನು ಪಾಪವನ್ನು ಕ್ಷಮಿಸುವವನಾದುದರಿಂದ, ಮನುಷ್ಯರ ಭಯಭಕ್ತಿಗೆ ನೀನೇ ಪಾತ್ರನು.


ಅಶುದ್ಧದಿಂದ ಶುದ್ಧವು ಉಂಟಾದೀತೇ? ಎಂದಿಗೂ ಇಲ್ಲ.


ಯೆಹೂದ್ಯರು, “ನಾವು ನಿನ್ನ ಮೇಲೆ ಕಲ್ಲೆಸೆಯುವುದು ಒಳ್ಳೆಯ ಕಾರ್ಯಗಳಿಗಾಗಿ ಅಲ್ಲ, ಆದರೆ ದೇವದೂಷಣೆಗಾಗಿಯೂ ಮತ್ತು ನೀನು ಮನುಷ್ಯನಾಗಿದ್ದು ನಿನ್ನನ್ನು ನೀನೇ ದೇವರನ್ನಾಗಿ ಮಾಡಿಕೊಳ್ಳುವುದಕ್ಕಾಗಿಯೂ ನಾವು ನಿನ್ನ ಮೇಲೆ ಕಲ್ಲೆಸೆಯುತ್ತೇವೆ” ಎಂದು ಉತ್ತರ ಕೊಟ್ಟರು.


ಇವನು ಮಾಡಿದ ದೇವದೂಷಣೆಯನ್ನು ನೀವು ಕೇಳಿದಿರಲ್ಲಾ, ನಿಮಗೆ ಹೇಗೆ ತೋರುತ್ತದೆ?” ಎಂದು ಕೇಳಲು ಅವರೆಲ್ಲರೂ, ಇವನಿಗೆ ಮರಣದಂಡನೆ ಆಗಬೇಕು ಎಂದು ತೀರ್ಪು ಮಾಡಿದರು.


ಆಗ ಮಹಾಯಾಜಕನು ತನ್ನ ಬಟ್ಟೆಗಳನ್ನು ಹರಿದುಕೊಂಡು, “ಇವನು ದೇವದೂಷಣೆಯ ಮಾತನಾಡಿದ್ದಾನೆ; ನಮಗೆ ಸಾಕ್ಷಿಗಳು ಇನ್ನು ಯಾತಕ್ಕೆ ಬೇಕು? ನೋಡಿ ಇವನು ಈಗಲೇ ಆಡಿದ ದೂಷಣೆಯ ಮಾತನ್ನು ಕೇಳಿದಿರಲ್ಲಾ;


ಅಲ್ಲಿದ್ದ ಶಾಸ್ತ್ರಿಗಳಲ್ಲಿ ಕೆಲವರು, “ಇವನು ದೇವದೂಷಣೆ ಮಾಡುತ್ತಾನೆಂದು” ತಮ್ಮತಮ್ಮೊಳಗೆ ಮಾತನಾಡಿಕೊಂಡರು.


ತಂದೆಯು ಪ್ರತಿಷ್ಠೆಮಾಡಿ ಲೋಕಕ್ಕೆ ಕಳುಹಿಸಿಕೊಟ್ಟವನಾದ ‘ನಾನು ದೇವರ ಮಗನಾಗಿದ್ದೇನೆಂದು’ ಹೇಳಿದ್ದಕ್ಕೆ ‘ನೀನು ದೇವದೂಷಣೆ ಮಾಡುತ್ತೀ ಎಂದು ನೀವು ನನಗೆ ಹೇಳುತ್ತಿರಲ್ಲಾ?’


ಆದರೆ ಶಾಸ್ತ್ರಿಗಳಲ್ಲಿ ಕೆಲವರು ಅಲ್ಲಿ ಕುಳಿತುಕೊಂಡಿದ್ದು;


ಹೀಗೆ ಆಲೋಚಿಸಿಕೊಳ್ಳುತ್ತಿದ್ದುದನ್ನು ಕೂಡಲೆ ಯೇಸು ತನ್ನ ಆತ್ಮದಲ್ಲಿ ತಿಳಿದುಕೊಂಡು ಅವರಿಗೆ, “ನೀವು ನಿಮ್ಮ ಮನಸ್ಸಿನಲ್ಲಿ ಯಾಕೆ ಹೀಗೆ ಯೋಚಿಸುತ್ತೀರಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು