Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 2:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಹೀಗೆ ಆಲೋಚಿಸಿಕೊಳ್ಳುತ್ತಿದ್ದುದನ್ನು ಕೂಡಲೆ ಯೇಸು ತನ್ನ ಆತ್ಮದಲ್ಲಿ ತಿಳಿದುಕೊಂಡು ಅವರಿಗೆ, “ನೀವು ನಿಮ್ಮ ಮನಸ್ಸಿನಲ್ಲಿ ಯಾಕೆ ಹೀಗೆ ಯೋಚಿಸುತ್ತೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವರು ಹೀಗೆ ಯೋಚಿಸುತ್ತಿರುವುದನ್ನು ಯೇಸು ತಕ್ಷಣ ಗ್ರಹಿಸಿಕೊಂಡು ಅವರಿಗೆ, “ನೀವು ನಿಮ್ಮ ಮನಸ್ಸಿನಲ್ಲಿ ಹೀಗೆ ಆಲೋಚಿಸುತ್ತಿರುವುದು ಏಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಹೀಗೆ ಅಂದುಕೊಳ್ಳುವದನ್ನು ಕೂಡಲೆ ಯೇಸು ತನ್ನ ಆತ್ಮದಲ್ಲಿ ತಿಳಿದುಕೊಂಡು ಅವರಿಗೆ - ನೀವು ನಿಮ್ಮ ಮನಸ್ಸಿನಲ್ಲಿ ಯಾಕೆ ಹೀಗೆ ಅಂದುಕೊಳ್ಳುತ್ತೀರಿ? ಯಾವದು ಸುಲಭ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಧರ್ಮೋಪದೇಶಕರ ಆಲೋಚನೆಯನ್ನು ತಕ್ಷಣವೇ ಗ್ರಹಿಸಿಕೊಂಡ ಯೇಸು ಅವರಿಗೆ, “ನೀವು ಹೀಗೇಕೆ ಆಲೋಚಿಸುತ್ತೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೇಸು ಅವರು ಯೋಚಿಸುತ್ತಿರುವುದನ್ನು ಕೂಡಲೇ ತಮ್ಮ ಆತ್ಮದಲ್ಲಿ ಗ್ರಹಿಸಿಕೊಂಡು ಅವರಿಗೆ, “ನೀವು ನಿಮ್ಮ ಮನಸ್ಸಿನಲ್ಲಿ ಹೀಗೆ ಆಲೋಚಿಸುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತ್ಯಾ ಮಾನ್ಸಾನಿ ಯೌಜುಲಾಗಲ್ಲೆ ಜೆಜುಕ್ ಕಳ್ಳೆ, ತನ್ನಾ “ತುಮಿ ತುಮ್ಚ್ಯಾ ಮನಾತುಚ್ ಅಶೆ ಕಾಯ್ ಯೌಜುಲ್ಯಾಸಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 2:8
23 ತಿಳಿವುಗಳ ಹೋಲಿಕೆ  

ಆದುದರಿಂದ ಈ ನಿನ್ನ ಕೆಟ್ಟತನವನ್ನು ಬಿಟ್ಟು ಪಶ್ಚಾತ್ತಾಪದಿಂದ ದೇವರ ಕಡೆಗೆ ತಿರುಗಿಕೋ ಕರ್ತನು ನಿನ್ನ ಮನಸ್ಸಿನ ಆಲೋಚನೆಯನ್ನು ಕ್ಷಮಿಸುವನೋ ಏನೋ ಆತನನ್ನು ಬೇಡಿಕೋ.


ಆಗ ಪೇತ್ರನು; “ಅನನೀಯನೇ, ನೀನು ಆ ಹೊಲದ ಕ್ರಯದಲ್ಲಿ ಒಂದು ಭಾಗವನ್ನು ಬಚ್ಚಿಟ್ಟುಕೊಂಡು ಪವಿತ್ರಾತ್ಮನನ್ನು ವಂಚಿಸುವಂತೆ ಸೈತಾನನು ನಿನ್ನ ಹೃದಯದಲ್ಲಿ ಏಕೆ ತುಂಬಿಸಿಕೊಂಡಿ?


ಆದರೆ ನಂಬದ ಕೆಲವರು ನಿಮ್ಮಲ್ಲಿ ಇದ್ದಾರೆ” ನಂಬದವರು ಯಾರೆಂದೂ ಹಾಗೂ ತನ್ನನ್ನು ಹಿಡಿದುಕೊಡುವವನು ಯಾರೆಂದೂ ಯೇಸುವಿಗೆ ಮೊದಲಿನಿಂದಲೂ ತಿಳಿದಿತ್ತು.


ಆತನು ಅವರಿಗೆ, “ಯಾಕೆ ಕಳವಳಗೊಳ್ಳುತ್ತೀರಿ? ನಿಮ್ಮ ಹೃದಯಗಳಲ್ಲಿ ಅನುಮಾನಗಳು ಹುಟ್ಟುವುದೇಕೆ?


ಆದರೆ ಆತನು ಅವರ ಯೋಚನೆಗಳನ್ನು ತಿಳಿದು ಕೈ ಬತ್ತಿಹೋಗಿದ್ದ ಆ ಮನುಷ್ಯನಿಗೆ, “ಎದ್ದು ನಡುವೆ ಬಂದು ನಿಂತುಕೋ” ಎಂದು ಹೇಳಿದನು. ಅವನು ಎದ್ದುಬಂದು ನಿಂತುಕೊಂಡನು.


ಆದರೆ ಅವರು ಹಾಗಂದುಕೊಳ್ಳುವುದನ್ನು ಯೇಸುವು ತಿಳಿದುಕೊಂಡು ಅವರಿಗೆ, “ನೀವು ನಿಮ್ಮ ಮನಸ್ಸಿನಲ್ಲಿ ಅಂದುಕೊಳ್ಳುವುದೇನು?


ಯೇಸು ಅವರ ಆಲೋಚನೆಗಳನ್ನು ತಿಳಿದು, “ನೀವು ಏಕೆ ನಿಮ್ಮ ಮನಸ್ಸಿನಲ್ಲಿ ದುರಾಲೋಚನೆಯನ್ನು ಮಾಡುತ್ತಿದ್ದೀರಿ?


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಗ ನಿನ್ನ ಮನಸ್ಸಿನಲ್ಲಿ ಆಲೋಚನೆಗಳು ಹುಟ್ಟುವವು ಮತ್ತು ನೀನು ಕೆಟ್ಟ ಯೋಚನೆಯನ್ನು ಮಾಡುವಿ.


ನಾನು ಕುಳಿತುಕೊಳ್ಳುವುದು, ಏಳುವುದು ನಿನಗೆ ಗೊತ್ತಿದೆ, ದೂರದಿಂದಲೇ ನನ್ನ ಆಲೋಚನೆಗಳನ್ನು ಬಲ್ಲವನಾಗಿರುತ್ತಿ.


ಆತನ ದೃಷ್ಟಿಗೆ ಮರೆಯಾಗಿರುವ ಒಂದು ಸೃಷ್ಟಿಯೂ ಇಲ್ಲ. ಆತನ ಕಣ್ಣಿಗೆ ಮರೆಯಾದದ್ದು ಒಂದೂ ಇಲ್ಲ ಎಲ್ಲವೂ ನಗ್ನವಾಗಿಯೂ ಬಟ್ಟಬಯಲಾಗಿಯೂ ಇದೆ. ಅಂಥವನಿಗೆ ನಾವು ಲೆಕ್ಕಕೊಡಬೇಕಾಗಿದೆ.


ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನನೇ ನೀನು ನನ್ನ ಮೇಲೆ ಮಮತೆ ಇಟ್ಟಿದ್ದಿಯೋ?” ಎಂದು ಕೇಳಿದನು, ಮೂರನೆಯ ಸಾರಿ ಆತನು, “ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿನಗೆ ಎಲ್ಲವೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟೀದ್ದೇನೆಂದು ನಿನಗೆ ತಿಳಿದಿದೆ” ಎಂದನು. ಆಗ ಅವನಿಗೆ ಯೇಸು “ನನ್ನ ಕುರಿಗಳನ್ನು ಮೇಯಿಸು” ಎಂದನು.


ಒಳಗಿನಿಂದ ಅಂದರೆ ಮನುಷ್ಯರ ಹೃದಯದೊಳಗಿನಿಂದ ಬರುವ ದುರಾಲೋಚನೆಗಳು, ಹಾದರ, ಕಳ್ಳತನ, ಕೊಲೆ,


ದುಷ್ಟನು ತನ್ನ ದುರ್ಮಾರ್ಗವನ್ನು ಬಿಡಲಿ, ಕೆಡುಕನು ತನ್ನ ದುರಾಲೋಚನೆಗಳನ್ನು ತ್ಯಜಿಸಲಿ; ಯೆಹೋವನ ಕಡೆಗೆ ತಿರುಗಿಕೊಂಡು ಬರಲಿ, ಆತನು ಅವನನ್ನು ಕರುಣಿಸುವನು; ನಮ್ಮ ದೇವರನ್ನು ಆಶ್ರಯಿಸಲಿ, ಆತನು ಮಹಾಕೃಪೆಯಿಂದ ಕ್ಷಮಿಸುವನು.


ಮೂರ್ಖನ ಸಂಕಲ್ಪವು ಪಾಪವೇ, ಧರ್ಮನಿಂದಕನು ಮನುಷ್ಯರಿಗೆ ಅಸಹ್ಯ.


ಕುಯುಕ್ತಿಯು ಯೆಹೋವನಿಗೆ ಅಸಹ್ಯ, ನಯನುಡಿಯು ಆತನಿಗೆ ಪ್ರಿಯ.


ನನ್ನ ದೇವರೇ, ನೀನು ಹೃದಯವನ್ನು ಶೋಧಿಸುವವನೂ, ಯಥಾರ್ಥಚಿತ್ತರನ್ನು ಮೆಚ್ಚುವವನೂ ಆಗಿದ್ದಿ ಎಂಬುದನ್ನು ಬಲ್ಲೆನು. ನಾನಂತೂ ಯಥಾರ್ಥಮನಸ್ಸಿನಿಂದಲೂ, ಸ್ವ ಇಚ್ಛೆಯಿಂದಲೂ ಇದನ್ನೆಲ್ಲಾ ಕೊಟ್ಟಿದ್ದೇನೆ. ಇಲ್ಲಿ ಕೂಡಿರುವ ನಿನ್ನ ಪ್ರಜೆಗಳೂ ಸ್ವ ಇಚ್ಛೆಯಿಂದಲೇ ಕಾಣಿಕೆಯನ್ನು ಅರ್ಪಿಸಿದ್ದಾರೆ ಎಂದು ನೋಡಿ ಸಂತೋಷಿಸುತ್ತೇನೆ.


ಅವಳ ಮಕ್ಕಳನ್ನು ಕೊಲ್ಲುವೆನು. ಆಗ ನಾನು ಮನುಷ್ಯರ ಅಂತರಿಂದ್ರಿಯಗಳನ್ನೂ, ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆಂಬುದು ಎಲ್ಲಾ ಸಭೆಗಳಿಗೆ ಗೊತ್ತಾಗುವುದು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕ್ರಿಯೆಗಳಿಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡುವೆನು.


ಯೇಸು ಅದನ್ನು ತಿಳಿದು ಅಲ್ಲಿಂದ ಹೊರಟು ಹೋದನು.


ಅದಕ್ಕೆ ಅವರು, “ನಾವು ರೊಟ್ಟಿಯನ್ನು ತೆಗೆದುಕೊಳ್ಳದೆ ಬಂದಿದ್ದರಿಂದ” ಹೀಗೆ ಹೇಳಿರಬೇಕು ಎಂದು ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.


“ಈತನು ಯಾಕೆ ಹೀಗೆ ಮಾತನಾಡುತ್ತಾನೆ? ಇದು ದೇವದೂಷಣೆ. ದೇವರೊಬ್ಬನೇ ಹೊರತು ಮತ್ತಾರು ಪಾಪಗಳನ್ನು ಕ್ಷಮಿಸಬಲ್ಲರು?” ಎಂದು ತಮ್ಮ ಮನಸ್ಸಿನಲ್ಲಿ ಆಲೋಚಿಸಿಕೊಳ್ಳುತ್ತಿದ್ದರು.


ಯಾವುದು ಸುಲಭ? ಪಾರ್ಶ್ವವಾಯು ರೋಗಿಗೆ ‘ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ ಅನ್ನುವುದೋ’ ಅಥವಾ ‘ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ’ ಅನ್ನುವುದೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು