Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 3:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆತನು ಮನೆಯೊಳಗೆ ಬಂದಾಗ ಅಲ್ಲಿ ಬಹಳ ಜನರು ಸೇರಿಬಂದದ್ದರಿಂದ ಊಟ ಮಾಡಲು ಕೂಡ ಆಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಯೇಸುಸ್ವಾಮಿ ಮನೆಗೆ ಹೋದಾಗ ಜನರು ಮರಳಿ ಗುಂಪುಗುಂಪಾಗಿ ಬಂದರು. ಯೇಸುವಿಗೂ ಶಿಷ್ಯರಿಗೂ ಊಟಮಾಡಲು ಕೂಡ ಬಿಡುವಿಲ್ಲದೆ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆತನು ಮನೆಯೊಳಗೆ ಬಂದಾಗ ಜನರು ತಿರಿಗಿ ನೆರೆದದ್ದರಿಂದ ಊಟಕ್ಕೂ ಅವಕಾಶವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನಂತರ ಯೇಸು ಮನೆಗೆ ಹೋದನು. ಮತ್ತೆ ಅನೇಕ ಜನರು ಅಲ್ಲಿಗೆ ಸೇರಿಬಂದರು. ಆದ್ದರಿಂದ ಯೇಸು ಮತ್ತು ಅವನ ಶಿಷ್ಯರಿಗೆ ಊಟಮಾಡಲೂ ಸಾಧ್ಯವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಯೇಸು ಒಂದು ಮನೆಯೊಳಗೆ ಹೋದಾಗ, ಜನರು ತಿರುಗಿ ಗುಂಪಾಗಿ ನೆರೆದು ಬಂದದ್ದರಿಂದ ಯೇಸುವಿಗೂ ಅವರ ಶಿಷ್ಯರಿಗೂ ಊಟಮಾಡುವುದಕ್ಕೂ ಸಾಧ್ಯವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ತನ್ನಾ ಜೆಜು ಘರಾಕ್ಡೆ ಗೆಲೊ, ಥೈ ಲೈ ಲೊಕಾ ಗೂಳಾ ಹೊಲ್ಲಿ, ತಸೆ ಮನುನ್ ಜೆಜುಕ್ ಅನಿ ತೆಚ್ಯಾ‍ ಶಿಸಾಕ್ನಿ ಜೆವಾನ್‍ ಕರುಕ್ ಸೈತ್ ಎಳ್ ಗಾವುಕ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 3:20
10 ತಿಳಿವುಗಳ ಹೋಲಿಕೆ  

ಆತನು ಅವರಿಗೆ, “ನೀವು ಮಾತ್ರ ಏಕಾಂತ ಸ್ಥಳಕ್ಕೆ ಬಂದು ಸ್ವಲ್ಪ ವಿಶ್ರಮಿಸಿಕೊಳ್ಳಿರಿ” ಎಂದು ಹೇಳಿದನು. ಏಕೆಂದರೆ ಬಹಳ ಮಂದಿ ಬರುತ್ತಾ ಹೋಗುತ್ತಾ ಇದ್ದುದರಿಂದ ಅವರಿಗೆ ಊಟಮಾಡುವುದಕ್ಕೂ ಸಮಯವಿರಲಿಲ್ಲ.


ಆ ಮೇಲೆ ಯೇಸು ಅವರೊಂದಿಗೆ ಬೆಟ್ಟದಿಂದ ಇಳಿದು ಸಮಭೂಮಿಯಲ್ಲಿ ಬಂದು ನಿಂತನು. ಆತನ ಶಿಷ್ಯರ ದೊಡ್ಡಗುಂಪು ಮತ್ತು ಎಲ್ಲಾ ಯೂದಾಯದಿಂದಲೂ, ಯೆರೂಸಲೇಮಿನಿಂದಲೂ, ತೂರ್, ಸೀದೋನ್ ಪಟ್ಟಣಗಳ ಕರಾವಳಿತೀರದಿಂದಲೂ ಬಂದಿದ್ದ ಜನರ ಮಹಾಸಮೂಹವು ಆತನ ಸಂಗಡ ಇದ್ದಿತು.


ಯೇಸು ಮನೆಗೆ ಬಂದಾಗ ಆತನ ಶಿಷ್ಯರು, “ಅದನ್ನು ಬಿಡಿಸಲಿಕ್ಕೆ ನಮ್ಮಿಂದ ಏಕೆ ಆಗಲಿಲ್ಲವೆಂದು” ಆತನನ್ನು ಏಕಾಂತದಲ್ಲಿ ಕೇಳಿದರು.


ತರುವಾಯ ಆತನು ಜನರನ್ನು ಬಿಟ್ಟು ಮನೆಯೊಳಗೆ ಹೋದಾಗ ಆತನ ಶಿಷ್ಯರು ಆ ಸಾಮ್ಯದ ಅರ್ಥವೇನೆಂದು ಆತನನ್ನು ಕೇಳಲು


ಜನರ ಗುಂಪು ಅಧಿಕವಾಗಿದ್ದುದರಿಂದ ಅವರು ತನ್ನ ಮೈಮೇಲೆ ಬಿದ್ದು ನೂಕದಂತೆ ಯೇಸು ತನಗೆ ಒಂದು ದೋಣಿಯನ್ನು ಸಿದ್ಧಮಾಡಲು ಶಿಷ್ಯರಿಗೆ ಹೇಳಿದನು.


ಆ ಮೇಲೆ ಯೇಸುವು ತನ್ನ ಶಿಷ್ಯರೊಂದಿಗೆ ಆ ಸ್ಥಳವನ್ನು ಬಿಟ್ಟು ಸಮುದ್ರದ ಬಳಿಗೆ ಹೋದನು. ಗಲಿಲಾಯದಿಂದ ಬಹು ಜನರ ಗುಂಪು ಆತನನ್ನು ಹಿಂಬಾಲಿಸಿತು.


ಆದರೆ ಅವನು ಹೊರಟುಹೋಗಿ ಎಲ್ಲಾ ಕಡೆಗೂ ಈ ಸಂಗತಿಯನ್ನು ಬಹಳವಾಗಿ ಸಾರಿ ಹಬ್ಬಿಸುವುದಕ್ಕೆ ಪ್ರಾರಂಭಿಸಿದ್ದರಿಂದ ಯೇಸು ಬಹಿರಂಗವಾಗಿ ಬೇರೆ ಊರುಗಳಿಗೆ ಹೋಗಲಾರದೆ ನಿರ್ಜನ ಸ್ಥಳಗಳಲ್ಲಿ ಇದ್ದನು. ಆದರೂ ಜನರು ಎಲ್ಲಾ ಕಡೆಯಿಂದಲೂ ಆತನ ಬಳಿಗೆ ಬರುತ್ತಿದ್ದರು.


ಕೆಲವು ದಿನಗಳಾದ ಮೇಲೆ ಯೇಸು ಕಪೆರ್ನೌಮಿಗೆ ಹಿಂತಿರುಗಿ ಬಂದನು. ಆತನು ಮನೆಯಲ್ಲಿದ್ದಾನೆಂಬ ವರ್ತಮಾನವು ಜನರಲ್ಲಿ ಹಬ್ಬಿತ್ತು.


ಯೇಸುವನ್ನು ಹಿಡಿದುಕೊಟ್ಟ ಇಸ್ಕರಿಯೋತ ಯೂದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು