Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 3:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಇದಲ್ಲದೆ ಯೆರೂಸಲೇಮಿನಿಂದ ಬಂದಿದ್ದ ಶಾಸ್ತ್ರಿಗಳು, “ಇವನನ್ನು ಬೆಲ್ಜೆಬೂಲನು ಹಿಡಿದಿದ್ದಾನೆಂತಲೂ ಇವನು ದೆವ್ವಗಳ ಒಡೆಯನ ಸಹಾಯದಿಂದ ದೆವ್ವಗಳನ್ನು ಬಿಡಿಸುತ್ತಾನೆಂತಲೂ” ಹೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಇದಲ್ಲದೆ, ಜೆರುಸಲೇಮಿನಿಂದ ಬಂದಿದ್ದ ಧರ್ಮಶಾಸ್ತ್ರಿಗಳು, “ಇವನನ್ನು ಬೆಲ್ಜೆಬೂಲನು ಹಿಡಿದಿದ್ದಾನೆ; ದೆವ್ವಗಳ ಒಡೆಯನ ಶಕ್ತಿಯಿಂದಲೇ ಇವನು ದೆವ್ವಬಿಡಿಸುತ್ತಾನೆ,” ಎನ್ನುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಇದಲ್ಲದೆ ಯೆರೂಸಲೇವಿುನಿಂದ ಬಂದಿದ್ದ ಶಾಸ್ತ್ರಿಗಳು - ಇವನನ್ನು ಬೆಲ್ಜೆಬೂಲನು ಹಿಡಿದಿದ್ದಾನೆಂತಲೂ ಇವನು ದೆವ್ವಗಳ ಒಡೆಯನ ಸಹಾಯದಿಂದ ದೆವ್ವಗಳನ್ನು ಬಿಡಿಸುತ್ತಾನೆಂತಲೂ ಹೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಜೆರುಸಲೇಮಿನ ಧರ್ಮೋಪದೇಶಕರು, “ಇವನೊಳಗೆ ದೆವ್ವಗಳ ಒಡೆಯನಾದ ಬೆಲ್ಜೆಬೂಲನು ವಾಸಿಸುತ್ತಿದ್ದಾನೆ. ದೆವ್ವಗಳಿಂದ ಪೀಡಿತರಾಗಿರುವವರನ್ನು ಇವನು ಬಿಡಿಸುವುದು ದೆವ್ವಗಳ ಒಡೆಯನ ಸಹಾಯದಿಂದಲೇ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಯೆರೂಸಲೇಮಿನಿಂದ ಬಂದ ನಿಯಮ ಬೋಧಕರು, “ಈತನನ್ನು ಬೆಲ್ಜೆಬೂಲನು ಹಿಡಿದಿದ್ದಾನೆ! ದೆವ್ವಗಳ ಅಧಿಪತಿಯ ಸಹಾಯದಿಂದಲೇ ಈತನು ದೆವ್ವಗಳನ್ನು ಓಡಿಸುತ್ತಾನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಜೆರುಜಲೆಮಾತ್ನಾ ಯೆಲ್ಲೆ, ಖಾಯ್ದೆ ಸಿಕ್ವುತಲೆ, “ತೆಚ್ಯಾ ಆಂಗಾತ್ ಗಿರ್‍ಯಾಂಚೊ ವಡಿಲ್ ಬೆಎಲ್ಜೆಬುಲ್ ಹಾಯ್. ತ್ಯಾ ಗಿರ್‍ಯಾಚ್ಯಾ ಬಳಾನ್ ತೊ ಲೊಕಾಕ್ನಿಲಾಗಲ್ಲಿ ಗಿರೆ ಸೊಡ್ಸುತಾ,” ಮನುಲಾಗಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 3:22
14 ತಿಳಿವುಗಳ ಹೋಲಿಕೆ  

ತರುವಾಯ ಯೆರೂಸಲೇಮಿನಿಂದ ಫರಿಸಾಯರೂ, ಶಾಸ್ತ್ರಿಗಳೂ ಯೇಸುವಿನ ಬಳಿಗೆ ಬಂದು,


ಗುರುವಿನಂತೆ ಆಗುವುದು ಶಿಷ್ಯನಿಗೆ ಸಾಕು, ಒಡೆಯನಂತೆ ಆಗುವುದು ಆಳಿಗೆ ಸಾಕು. ಅವರು ಮನೆಯ ಯಜಮಾನನಿಗೆ ಬೆಲ್ಜೆಬೂಲನೆಂದು ಹೆಸರಿಟ್ಟು ಕರೆದ ಮೇಲೆ ಆತನ ಮನೆಯವರನ್ನು ಇನ್ನೆಷ್ಟು ಅವಹೇಳನವಾಗಿ ಕರೆದಾರು?


ಆದರೆ ಫರಿಸಾಯರು ಅದನ್ನು ಕೇಳಿ, “ಇವನು ದೆವ್ವಗಳ ಒಡೆಯನಾದ ಬೆಲ್ಜೆಬೂಲನ ಸಹಾಯದಿಂದ ದೆವ್ವಗಳನ್ನು ಬಿಡಿಸುತ್ತಾನೆಯೇ ಹೊರತು ಬೇರೆ ರೀತಿಯಿಂದ ಅಲ್ಲ” ಅಂದರು.


ಆದರೆ ಫರಿಸಾಯರು, “ಇವನು ದೆವ್ವಗಳ ಒಡೆಯನ ಸಹಾಯದಿಂದಲೇ ದೆವ್ವಗಳನ್ನು ಬಿಡಿಸುತ್ತಾನೆ” ಎಂದು ಹೇಳಿದರು.


ಅದಕ್ಕೆ ಆ ಜನರು, “ನಿನಗೆ ದೆವ್ವ ಹಿಡಿದಿದೆ. ನಿನ್ನನ್ನು ಕೊಲ್ಲುವುದಕ್ಕೆ ಯಾರು ಹುಡುಕುತ್ತಿದ್ದಾರೆ?” ಎಂದರು.


ಅದಕ್ಕೆ ಯೆಹೂದ್ಯರು “ನೀನು ದೆವ್ವಹಿಡಿದವನೆಂದು ಈಗ ನಮಗೆ ತಿಳಿಯಿತು. ಅಬ್ರಹಾಮನು ಸತ್ತನು ಮತ್ತು ಪ್ರವಾದಿಗಳೂ ಸತ್ತರು, ಆದರೆ ನೀನು ‘ನನ್ನ ವಾಕ್ಯಕ್ಕೆ ವಿಧೇಯನಾದರೆ ಅವನು ನಿತ್ಯಮರಣವನ್ನು ಅನುಭವಿಸುವುದಿಲ್ಲ’ ಎಂದು ಹೇಳುತ್ತೀಯಲ್ಲಾ?


ಅದಕ್ಕೆ ಯೆಹೂದ್ಯರು, “ನೀನು ಸಮಾರ್ಯದವನು ಮತ್ತು ನಿನಗೆ ದೆವ್ವಹಿಡಿದಿದೆ ಎಂದು ನಾವು ಹೇಳುವುದು ಸರಿಯಲ್ಲವೋ?” ಎಂದು ಕೇಳಿದರು.


ಆದರೆ ಅವರಲ್ಲಿ ಕೆಲವರು, “ಇವನು ದೆವ್ವಗಳ ಒಡೆಯನಾದ ಬೆಲ್ಜೆಬೂಲನ ಶಕ್ತಿಯಿಂದ ದೆವ್ವಗಳನ್ನು ಬಿಡಿಸುತ್ತಾನೆ” ಅಂದರು.


ತರುವಾಯ ಯೆರೂಸಲೇಮಿನಿಂದ ಬಂದಿದ್ದ ಫರಿಸಾಯರೂ ಶಾಸ್ತ್ರಿಗಳಲ್ಲಿ ಕೆಲವರೂ ಯೇಸುವಿನ ಬಳಿಗೆ ಕೂಡಿ ಬಂದರು.


ಯೋಹಾನನು ಬಂದನು, ಅವನು ಅನ್ನ ಪಾನಗಳನ್ನು ತೆಗೆದುಕೊಳ್ಳದವನಾಗಿದುದರಿಂದ, ಅವರು ಅವನಿಗೆ, ‘ದೆವ್ವ ಹಿಡಿದಿದೆ’ ಅನ್ನುತ್ತಾರೆ.


ಆನಂತರ ಯೆರೂಸಲೇಮಿನಲ್ಲಿ ದೇವಾಲಯದ ಪ್ರತಿಷ್ಠೆಯ ಹಬ್ಬವು ನಡೆಯಿತು. ಅದು ಚಳಿಗಾಲವಾಗಿತ್ತು.


ಒಮ್ಮೆ ಆತನು ಉಪದೇಶಮಾಡುತ್ತಿರಲು ಗಲಿಲಾಯ ಮತ್ತು ಯೂದಾಯದ ಎಲ್ಲಾ ಗ್ರಾಮಗಳಿಂದಲೂ ಯೆರೂಸಲೇಮಿನಿಂದಲೂ ಬಂದಿದ್ದ ಫರಿಸಾಯರೂ ಧರ್ಮೋಪದೇಶಕರೂ ಆತನ ಹತ್ತಿರ ಕುಳಿತುಕೊಂಡಿದ್ದರು. ಮತ್ತು ಅವರನ್ನು ಗುಣಮಾಡುವ ದೇವರ ಶಕ್ತಿಯು ಆತನಲ್ಲಿತ್ತು.


ನಾನಾದರೋ ಹುಳದಂಥವನೇ ಹೊರತು ಮನುಷ್ಯನಲ್ಲ; ಮನುಷ್ಯರಿಂದ ನಿಂದಿಸಲ್ಪಟ್ಟು ಜನರಿಂದ ತಿರಸ್ಕಾರ ಹೊಂದಿದ್ದೇನೆ.


ಅಹಜ್ಯನು ಸಮಾರ್ಯದಲ್ಲಿ ತನ್ನ ಮೇಲುಪ್ಪರಿಗೆಯ ಕಿಟಿಕಿಯಿಂದ ಬಿದ್ದು ಅಸ್ವಸ್ಥನಾದಾಗ ತನ್ನ ಸೇವಕರನ್ನು ಕರೆದು ಅವರಿಗೆ, “ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನ ಸನ್ನಿಧಿಗೆ ಹೋಗಿ ನಾನು ಈ ಅಸ್ವಸ್ಥತೆಯಿಂದ ವಾಸಿಯಾಗುವೆನೋ ಇಲ್ಲವೋ ಎಂಬುದನ್ನು ವಿಚಾರಿಸಿರಿ” ಎಂದು ಹೇಳಿಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು