Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 3:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆದರೆ ಪವಿತ್ರಾತ್ಮನನ್ನು ದೂಷಿಸಿದವನು ಎಂದಿಗೂ ಕ್ಷಮಾಪಣೆ ಹೊಂದಲಾರನು; ಅವನು ಶಾಶ್ವತವಾದ ಪಾಪದೊಳಗೆ ಸೇರಿದವನಾದನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಆದರೆ ಪವಿತ್ರಾತ್ಮ ಅವರನ್ನು ದೂಷಿಸುವವನಿಗೆ ಮಾತ್ರ ಕ್ಷಮೆ ದೊರಕದು. ಅಂಥವನ ಪಾಪ ಶಾಶ್ವತವಾದುದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಆದರೆ ಪವಿತ್ರಾತ್ಮನನ್ನು ದೂಷಿಸುವವನಿಗೆ ಕ್ಷಮೆ ಇಲ್ಲವೇ ಇಲ್ಲ. ಅವರ ಪಾಪ ಶಾಶ್ವತವಾದದ್ದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಆದರೆ ಪವಿತ್ರಾತ್ಮರನ್ನು ದೂಷಿಸುವವನಿಗೆ ಎಂದಿಗೂ ಕ್ಷಮಾಪಣೆ ದೊರೆಯುವುದಿಲ್ಲ. ಅವನು ನಿತ್ಯ ಪಾಪದ ಅಪರಾಧಿಯಾಗಿದ್ದಾನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಖರೆ ದೆವಾಚ್ಯಾ ಆತ್ಮ್ಯಾಚ್ಯಾ ವಿರೊದ್ ನಿಂದ್ಯಾ ಬೊಲಲ್ಲ್ಯಾಕ್, ಕನ್ನಾಚ್ ಮಾಪಿ ಗಾವಿನಾ. ಕಶ್ಯಾಕ್ ಮಟ್ಲ್ಯಾರ್, ತೊ ಕನ್ನಾಬಿ ಮಾಪ್ ಕರಿನಸಲ್ಲ್ಯಾ ಪಾಪಾತ್ ಪಡ್ತಾ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 3:29
9 ತಿಳಿವುಗಳ ಹೋಲಿಕೆ  

ಮನುಷ್ಯಕುಮಾರನ ವಿರುದ್ಧ ಮಾತನಾಡುವ ಪ್ರತಿಯೊಬ್ಬನಿಗೆ ಕ್ಷಮಾಪಣೆಯಾಗುವುದು. ಆದರೆ ಪವಿತ್ರಾತ್ಮನನ್ನು ದೂಷಿಸಿದವನಿಗೆ ಕ್ಷಮಾಪಣೆಯಿಲ್ಲ.


ಅವರು ಕರ್ತನ ಸಮ್ಮುಖಕ್ಕೂ ಆತನ ಪರಾಕ್ರಮದ ವೈಭವಕ್ಕೂ ದೂರವಾಗಿ ನಿತ್ಯನಾಶನವೆಂಬ ದಂಡನೆಯನ್ನು ಅನುಭವಿಸುವರು.


ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚುತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರಗಳಾದ ಇವರ ಪಾಲಿಗೆ ಕಗ್ಗತ್ತಲೆಯು ಸದಾಕಾಲಕ್ಕೆ ಇಡಲ್ಪಟ್ಟಿದೆ.


ಇವರು ವಿಧವೆಯರ ಮನೆಗಳನ್ನು ದೋಚಿ ತೋರಿಕೆಗಾಗಿ ದೇವರಿಗೆ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ. ಇಂಥವರು ಹೆಚ್ಚಿನ ದಂಡನೆಯನ್ನು ಹೊಂದುವರು” ಎಂದನು.


ಮತ್ತು ಅನೀತಿವಂತರಾದ ಇವರು ನಿತ್ಯದಂಡನೆಗೆ ಹೋಗುವರು ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು” ಎಂದು ಹೇಳಿದನು.


ಸೊದೋಮ್ ಗೊಮೋರ ಪಟ್ಟಣಗಳವರೂ, ಅವುಗಳ ಸುತ್ತಮುತ್ತಲಿನ ಪಟ್ಟಣಗಳವರೂ ಆ ದೂತರಂತೆ ನಡೆದುಕೊಂಡು ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು, ಅಸ್ವಾಭಾವಿಕವಾದ ಕಾರ್ಯಗಳನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ದಂಡನೆಯನ್ನು ಅನುಭವಿಸುತ್ತಾ, ದುರ್ಮಾರ್ಗಿಗಳಿಗೆ ಆಗುವ ದುರ್ಗತಿಗೆ ಉದಾಹರಣೆಯಾಗಿ ಇಡಲ್ಪಟ್ಟಿದ್ದಾರೆ.


ಅಲ್ಲಿದ್ದ ಶಾಸ್ತ್ರಿಗಳಲ್ಲಿ ಕೆಲವರು, “ಇವನು ದೇವದೂಷಣೆ ಮಾಡುತ್ತಾನೆಂದು” ತಮ್ಮತಮ್ಮೊಳಗೆ ಮಾತನಾಡಿಕೊಂಡರು.


ಅವರು “ಈತನಲ್ಲಿ ಅಶುದ್ಧಾತ್ಮವಿದೆ” ಎಂದು ಹೇಳುತ್ತಿದ್ದರಿಂದ ಯೇಸು ಇದನ್ನು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು