ಮಾರ್ಕ 3:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆಗ ಯೇಸು ಅವರ ಹೃದಯ ಕಾಠಿಣ್ಯಕ್ಕಾಗಿ ದುಃಖಪಟ್ಟು, ಕೋಪದಿಂದ ಸುತ್ತಲೂ ಅವರನ್ನು ದೃಷ್ಟಿಸಿ ನೋಡಿ ಆ ಮನುಷ್ಯನಿಗೆ, “ನಿನ್ನ ಕೈ ಚಾಚು” ಎಂದು ಹೇಳಲು ಅವನು ಕೈ ಚಾಚಿದನು; ಅವನ ಕೈ ವಾಸಿಯಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಯೇಸು ಸುತ್ತಲೂ ಇದ್ದವರನ್ನು ಕೋಪದಿಂದ ದಿಟ್ಟಿಸಿ, ಅವರ ಹೃದಯ ಕಲ್ಲಾಗಿರುವುದನ್ನು ಕಂಡು, ಮನನೊಂದು, ಬತ್ತಿದ ಕೈಯುಳ್ಳವನಿಗೆ, “ನಿನ್ನ ಕೈಯನ್ನು ಚಾಚು,” ಎಂದರು. ಅವನು ಚಾಚಿದನು, ಅದು ಸಂಪೂರ್ಣವಾಗಿ ಸ್ವಸ್ಥವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆಗ ಆತನು ಅವರ ಮನಸ್ಸು ಕಲ್ಲಾಗಿರುವದನ್ನು ಕಂಡು ದುಃಖಪಟ್ಟು ಕೋಪದಿಂದ ಸುತ್ತಲೂ ಅವರನ್ನು ನೋಡಿ ಆ ಮನುಷ್ಯನಿಗೆ - ನಿನ್ನ ಕೈಚಾಚು ಎಂದು ಹೇಳಿದನು. ಅವನು ಚಾಚಿದನು; ಕೈ ವಾಸಿಯಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಯೇಸು ಕೋಪಗೊಂಡು ಜನರ ಕಡೆಗೆ ನೋಡಿದನು. ಅವರ ಮೊಂಡುತನವನ್ನು ಕಂಡು ಆತನಿಗೆ ದುಃಖವಾಯಿತು. ಯೇಸು ಆ ಮನುಷ್ಯನಿಗೆ, “ನಿನ್ನ ಕೈ ಚಾಚು” ಎಂದು ಹೇಳಿದನು. ಅವನು ತನ್ನ ಕೈಯನ್ನು ಯೇಸುವಿನತ್ತ ಚಾಚಿದನು. ಕೂಡಲೇ ಅವನ ಕೈ ವಾಸಿಯಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆಗ ಯೇಸು ಸುತ್ತಲೂ ಇದ್ದವರನ್ನು ಕೋಪದಿಂದ ನೋಡಿ, ಅವರ ಹೃದಯಕಾಠಿಣ್ಯಕ್ಕಾಗಿ ದುಃಖಪಟ್ಟು, ಆ ಮನುಷ್ಯನಿಗೆ, “ನಿನ್ನ ಕೈಚಾಚು,” ಎಂದು ಹೇಳಿದರು. ಅವನು ಕೈಚಾಚಿದಾಗ, ಅವನ ಕೈ ಸಂಪೂರ್ಣವಾಗಿ ಗುಣವಾಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ತನ್ನಾ ರಾಗಾನ್, ಜೆಜುನ್ ಸಗ್ಳ್ಯಾ ಲೊಕಾಕ್ನಿ ಎಗ್ದಾ ಅಪ್ನಾಚೆ ಡೊಳೆ ಫಿರ್ವುನ್ ಬಗಟ್ಲ್ಯಾನ್. ತೆಂಚೆ ಮಂಡ್‍ಪಾನ್ ಬಗುನ್ ತೆಕಾ ಬೆಜಾರ್ ಹೊಲೊ. ತನ್ನಾ ಜೆಜುನ್ ತ್ಯಾ “ಮಾನ್ಸಾಕ್ ತುಜೊ ಹಾತ್ ಲಾಂಬ್ ಸೊಡ್” ಮಟ್ಲ್ಯಾನ್. ತೆನಿ ಹಾತ್ ಲಾಂಬ್ ಸೊಡ್ಲ್ಯಾನ್, ತನ್ನಾಚ್ ತೆಚೊ ಹಾತ್ ಬರೊ ಹೊಲೊ. ಅಧ್ಯಾಯವನ್ನು ನೋಡಿ |