Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 3:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆ ಮೇಲೆ ಯೇಸುವು ತನ್ನ ಶಿಷ್ಯರೊಂದಿಗೆ ಆ ಸ್ಥಳವನ್ನು ಬಿಟ್ಟು ಸಮುದ್ರದ ಬಳಿಗೆ ಹೋದನು. ಗಲಿಲಾಯದಿಂದ ಬಹು ಜನರ ಗುಂಪು ಆತನನ್ನು ಹಿಂಬಾಲಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಯೇಸುಸ್ವಾಮಿ ತಮ್ಮ ಶಿಷ್ಯರ ಜೊತೆಯಲ್ಲಿ ಗಲಿಲೇಯ ಸರೋವರದ ತೀರಕ್ಕೆ ಹೊರಟುಹೋದರು. ಸಾವಿರಾರು ಜನರು ಅವರನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೇಸು ತನ್ನ ಶಿಷ್ಯರ ಕೂಡ ಆ ಸ್ಥಳವನ್ನು ಬಿಟ್ಟು ಸಮುದ್ರದ ಬಳಿಗೆ ಹೋದನು. ಗಲಿಲಾಯದಿಂದ ಬಹುಜನರು ಆತನ ಹಿಂದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೇಸು ತನ್ನ ಶಿಷ್ಯರೊಂದಿಗೆ ಸರೋವರಕ್ಕೆ ಹೊರಟುಹೋದನು. ಗಲಿಲಾಯದ ಅನೇಕ ಜನರು ಆತನನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೇಸು ತಮ್ಮ ಶಿಷ್ಯರೊಂದಿಗೆ ಸರೋವರದ ಬಳಿಗೆ ಹೊರಟು ಹೋದರು. ಗಲಿಲಾಯದಿಂದ ಬಂದ ಒಂದು ದೊಡ್ಡ ಜನರ ಗುಂಪು ಯೇಸುವನ್ನು ಹಿಂಬಾಲಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತೆಚ್ಯಾ ಮಾನಾ, ಜೆಜು ಅಪ್ನಾಚ್ಯಾ ಶಿಸಾಂಚ್ಯಾ ವಾಂಗ್ಡಾ ಗಾಲಿಲಿಯಾ ಸಮುಂದರಾಚ್ಯಾ ದಂಡೆಕ್ ಗೆಲೊ. ಥೈ ಲೊಕಾಂಚೊ ಎಕ್ ಮೊಟೊ ತಾಂಡೊ ಜೆಜುಚ್ಯಾ ಭೊತ್ಯಾನಿ ಗೊಳಾಹೊಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 3:7
20 ತಿಳಿವುಗಳ ಹೋಲಿಕೆ  

ಆ ಮೇಲೆ ಯೇಸು ಅವರೊಂದಿಗೆ ಬೆಟ್ಟದಿಂದ ಇಳಿದು ಸಮಭೂಮಿಯಲ್ಲಿ ಬಂದು ನಿಂತನು. ಆತನ ಶಿಷ್ಯರ ದೊಡ್ಡಗುಂಪು ಮತ್ತು ಎಲ್ಲಾ ಯೂದಾಯದಿಂದಲೂ, ಯೆರೂಸಲೇಮಿನಿಂದಲೂ, ತೂರ್, ಸೀದೋನ್ ಪಟ್ಟಣಗಳ ಕರಾವಳಿತೀರದಿಂದಲೂ ಬಂದಿದ್ದ ಜನರ ಮಹಾಸಮೂಹವು ಆತನ ಸಂಗಡ ಇದ್ದಿತು.


ಗಲಿಲಾಯ, ದೆಕಪೊಲಿ, ಯೆರೂಸಲೇಮ್, ಯೂದಾಯ ಎಂಬೀ ಸ್ಥಳಗಳಿಂದಲೂ ಯೊರ್ದನ್ ಹೊಳೆಯ ಆಚೇ ಕಡೆಯಿಂದಲೂ ಜನರು ಗುಂಪುಗುಂಪಾಗಿ ಆತನನ್ನು ಹಿಂಬಾಲಿಸಿದರು.


ಯೇಸು ಅದನ್ನು ತಿಳಿದು ಅಲ್ಲಿಂದ ಹೊರಟು ಹೋದನು.


ಅದಕ್ಕೆ ಅವರು, “ಗಲಿಲಾಯದಿಂದ ಮೊದಲುಗೊಂಡು ಇಲ್ಲಿಯವರೆಗೂ ಯೂದಾಯ ಸೀಮೆಯಲ್ಲೆಲ್ಲಾ ಇವನು ಬೋಧನೆ ಮಾಡುತ್ತಾ ಜನರ ಮನಸ್ಸನ್ನು ಕದಲಿಸುತ್ತಾನೆ” ಎಂದು ಇನ್ನೂ ಒತ್ತಿ ಹೇಳಿದರು.


ಆ ದಿನಗಳಲ್ಲಿ ಯೇಸು ಪ್ರಾರ್ಥನೆ ಮಾಡಲು ಬೆಟ್ಟಕ್ಕೆ ಹೋಗಿ ರಾತ್ರಿಯೆಲ್ಲಾ ದೇವರನ್ನು ಪ್ರಾರ್ಥಿಸುವುದರಲ್ಲಿ ಕಳೆದನು.


ಬಳಿಕ ಆತನು ಗಲಿಲಾಯದಲ್ಲೆಲ್ಲಾ ಹೋಗಿ ಅವರ ಸಭಾಮಂದಿರಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ದೆವ್ವಗಳನ್ನು ಬಿಡಿಸುತ್ತಾ ಇದ್ದನು.


ಒಂದು ಊರಲ್ಲಿ ನಿಮ್ಮನ್ನು ಹಿಂಸೆಪಡಿಸಿದರೆ ಮತ್ತೊಂದು ಊರಿಗೆ ಓಡಿಹೋಗಿರಿ; ಮನುಷ್ಯಕುಮಾರನು ಬರುವಷ್ಟರಲ್ಲಿ ನೀವು ಇಸ್ರಾಯೇಲ್ ಜನರ ಊರುಗಳನ್ನು ಸಂಚರಿಸಿ ಮುಗಿಸಿರುವುದಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ನಫ್ತಾಲಿ ಸ್ವತ್ತಿನಿಂದ, ಕೊಲೆ ಮಾಡಿದವನಿಗೆ ಆಶ್ರಯ ನಗರವಾದ ಗಲಿಲಾಯದ ಕೆದೆಷ್ ಹಮ್ಮೋತ್ ದೋರ್, ಕರ್ತಾನ್ ಎಂಬ ಗೋಮಾಳ ಸಹಿತವಾದ ಮೂರು ಪಟ್ಟಣಗಳು ದೊರಕಿದವು.


ಇಸ್ರಾಯೇಲ್ಯರು ನಫ್ತಾಲಿ ಕುಲದವರ ಪರ್ವತಪ್ರದೇಶವಾದ ಗಲಿಲಾಯ ಪ್ರಾಂತ್ಯದಲ್ಲಿನ ಕೆದೆಷ್, ಎಫ್ರಾಯೀಮ್ ಪರ್ವತ ಪ್ರದೇಶದಲ್ಲಿನ ಶೆಕೆಮ್ ಹಾಗೂ ಯೆಹೂದ್ಯರ ಬೆಟ್ಟದ ಸೀಮೆಯಲ್ಲಿ ಹೆಬ್ರೋನ್ ಅನ್ನಿಸಿಕೊಳ್ಳುವ ಕಿರ್ಯತರ್ಬ ಎಂಬ ಪಟ್ಟಣಗಳನ್ನು ನೇಮಿಸಿದರು.


ಕೂಡಲೇ ಸಹೋದರರು ಪೌಲನನ್ನು ಸಮುದ್ರದ ತನಕ ಹೋಗುವುದಕ್ಕೆ ಕಳುಹಿಸಿಕೊಟ್ಟರು. ಆದರೆ ಸೀಲನೂ, ತಿಮೊಥೆಯನೂ ಅಲ್ಲೇ ನಿಂತರು.


ಆ ಸಹೋದರರು ರಾತ್ರಿಯಲ್ಲಿ ಪೌಲ ಮತ್ತು ಸೀಲರನ್ನು ಬೆರೋಯಕ್ಕೆ ಕಳುಹಿಸಿಬಿಟ್ಟರು. ಅವರು ಅಲ್ಲಿಗೆ ಸೇರಿ ಯೆಹೂದ್ಯರ ಸಭಾಮಂದಿರದೊಳಕ್ಕೆ ಹೋದರು.


ಅವರು ಅವನಿಗೆ “ನೀನು ಸಹ ಗಲಿಲಾಯದವನೋ? ನೀನೇ ಪರಿಶೋಧಿಸಿ ನೋಡು ಗಲಿಲಾಯದಿಂದ ಪ್ರವಾದಿಯು ಬರುವುದಿಲ್ಲ,” ಎಂದರು.


ಕೆಲವರು, “ಈತನು ಕ್ರಿಸ್ತನು” ಎಂದರು, ಆದರೆ ಇನ್ನೂ ಕೆಲವರು “ಕ್ರಿಸ್ತನು ಗಲಿಲಾಯದಿಂದ ಬರುವುದುಂಟೆ?


ಅನೇಕರು ಆತನ ಹಿಂದೆ ಹೋದರು. ಆತನು ಅವರೆಲ್ಲರನ್ನು ಸ್ವಸ್ಥಮಾಡಿ ತನ್ನ ಬಗ್ಗೆ ಯಾರಿಗೂ ತಿಳಿಸಬಾರದೆಂದು ಅವರಿಗೆ ಖಂಡಿತವಾಗಿ ಹೇಳಿದನು.


ಆದರೆ ಅವನು ಹೊರಟುಹೋಗಿ ಎಲ್ಲಾ ಕಡೆಗೂ ಈ ಸಂಗತಿಯನ್ನು ಬಹಳವಾಗಿ ಸಾರಿ ಹಬ್ಬಿಸುವುದಕ್ಕೆ ಪ್ರಾರಂಭಿಸಿದ್ದರಿಂದ ಯೇಸು ಬಹಿರಂಗವಾಗಿ ಬೇರೆ ಊರುಗಳಿಗೆ ಹೋಗಲಾರದೆ ನಿರ್ಜನ ಸ್ಥಳಗಳಲ್ಲಿ ಇದ್ದನು. ಆದರೂ ಜನರು ಎಲ್ಲಾ ಕಡೆಯಿಂದಲೂ ಆತನ ಬಳಿಗೆ ಬರುತ್ತಿದ್ದರು.


ಆತನು ಮನೆಯೊಳಗೆ ಬಂದಾಗ ಅಲ್ಲಿ ಬಹಳ ಜನರು ಸೇರಿಬಂದದ್ದರಿಂದ ಊಟ ಮಾಡಲು ಕೂಡ ಆಗಲಿಲ್ಲ.


ಯೇಸುವು ಪುನಃ ಸಮುದ್ರದ ದಡದಲ್ಲಿ ಉಪದೇಶ ಮಾಡತೊಡಗಿದ್ದನು. ಬಹುಜನರು ಆತನ ಬಳಿಗೆ ಸೇರಿಬಂದಿದ್ದರಿಂದ ಆತನು ಸಮುದ್ರದಲ್ಲಿದ್ದ ದೋಣಿಹತ್ತಿ ಕುಳಿತುಕೊಂಡನು; ಆ ಜನರೆಲ್ಲರು ಸಮುದ್ರದ ದಡದಲ್ಲಿ ಸುತ್ತಲೂ ನೆರೆದುಬಂದಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು