Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 4:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆದರೆ ಅವರಿಗೆ ಬೇರಿಲ್ಲದ ಕಾರಣ ಇವರು ಸ್ವಲ್ಪ ಕಾಲ ಮಾತ್ರವೇ ಇದ್ದು, ಬಳಿಕ ಆ ವಾಕ್ಯದ ನಿಮಿತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಬೇಗ ಎಡವಿಬೀಳುತ್ತಾರೆ; ಇವರೇ ಬಂಡೆಯ ನೆಲದಲ್ಲಿ ಬಿತ್ತಲ್ಪಟ್ಟ ಬೀಜವಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ದೇವರ ಸಂದೇಶದ ನಿಮಿತ್ತ ಕಷ್ಟಕೋಟಲೆಗಳು ಬಂದೊದಗಿದಾಗ ಕೂಡಲೇ ಎಡವಿ ಬೀಳುತ್ತಾರೆ. ಇವರೇ ಕಲ್ಲುನೆಲದ ಮೇಲೆ ಬಿದ್ದ ಬೀಜಕ್ಕೆ ಸಮಾನರಾದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದರೆ ಆ ವಾಕ್ಯವು ತಮ್ಮಲ್ಲಿ ಆಳವಾಗಿ ಬೇರೂರಲು ಅವರು ಅವಕಾಶ ನೀಡುವುದಿಲ್ಲ. ಅವರು ಆ ವಾಕ್ಯವನ್ನು ಸ್ವಲ್ಪಕಾಲ ಮಾತ್ರ ಸ್ವೀಕರಿಸಿಕೊಂಡಿರುತ್ತಾರೆ. ಆ ವಾಕ್ಯದ ದೆಸೆಯಿಂದ ತೊಂದರೆಯಾಗಲಿ ಹಿಂಸೆಯಾಗಲಿ ಬಂದಾಗ ಅವರು ಅದನ್ನು ಬಹುಬೇಗನೆ ತ್ಯಜಿಸುತ್ತಾರೆ. ಇವರೇ ಬೀಜಬಿದ್ದ ಬಂಡೆಯ ನೆಲವಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದರೆ ಅವರಲ್ಲಿ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರ ಇದ್ದು, ವಾಕ್ಯದ ನಿಮಿತ್ತವಾಗಿ ಸಂಕಟ ಇಲ್ಲವೆ ಹಿಂಸೆ ಬಂದಾಗ, ಅವರು ಬೇಗನೆ ಬಿದ್ದು ಹೋಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಖರೆ, ತೆಂಚ್ಯಾ ಭುತ್ತುರ್ ತ್ಯಾ ಗೊಸ್ಟಿಯಾ ಖೊಲಾತ್ ಜಾಯ್ನಸಲ್ಲ್ಯಾಸಾಟ್ನಿ, ತ್ಯಾ, ತೆಂಚೆಕ್ಡೆ ಲೈ ಎಳ್ ರೈನಾತ್. ದೆವಾಚ್ಯಾ ಗೊಸ್ಟಿಯಾಕ್ನಿ ಲಾಗುನ್ ತರಾಸ್, ನಾಜಾಲ್ಯಾರ್, ಕಸ್ಟ್, ಯೆಲ್ಲ್ಯಾತನ್ನಾ ತೆನಿ ತ್ಯಾ ಗೊಸ್ಟಿಯಾ ಸೊಡುನ್ ಸೊಡ್ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 4:17
23 ತಿಳಿವುಗಳ ಹೋಲಿಕೆ  

ನನ್ನ ವಿಷಯದಲ್ಲಿ ಆಪಾದಿಸದವನೇ ಧನ್ಯನು” ಎಂದು ಹೇಳಿದನು.


ನಿನಗೆ ಸಂಭವಿಸಬಹುದಾದ ಬಾಧೆಗಳಿಗೆ ಹೆದರಬೇಡ. ಇಗೋ, ನಿಮ್ಮನ್ನು ಪರೀಕ್ಷಿಸಲು ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕಿದ್ದಾನೆ ಮತ್ತು ಹತ್ತು ದಿನಗಳ ತನಕ ನಿಮಗೆ ಸಂಕಟವಿರುವುದು. ನೀನು ಸಾಯುವ ತನಕ ನಂಬಿಗಸ್ತನಾಗಿರು, ನಾನು ನಿನಗೆ ಜೀವದ ಕಿರೀಟವನ್ನು ಕೊಡುವೆನು.


ಆದಕಾರಣ ನಿಮಗೆ ಹೇಳುತ್ತೇನೆ ಮನುಷ್ಯರು ಮಾಡುವ ಪ್ರತಿಯೊಂದು ಪಾಪಕ್ಕೂ ದೂಷಣೆಗೂ ಕ್ಷಮಾಪಣೆ ಉಂಟಾಗುವುದು. ಆದರೆ ಪವಿತ್ರಾತ್ಮನಿಗೆ ವಿರುದ್ಧವಾಗಿ ನುಡಿಯುವ ದೂಷಣೆಗೆ ಕ್ಷಮಾಪಣೆಯಿರುವುದಿಲ್ಲ.


ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು. ಅದು ಸೈತಾನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ದೃಢವಾಗಿ ಹಿಡಿದುಕೊಂಡಿರುವಿ. ಸೈತಾನನ ನಿವಾಸವಾದ ನಿನ್ನ ಪಟ್ಟಣದಲ್ಲಿ ನನಗೆ ನಂಬಿಗಸ್ತ ಸಾಕ್ಷಿಯಾದ ಅಂತಿಪನು ಕೊಲ್ಲಲ್ಪಟ್ಟಾಗಲೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ನಿರಾಕರಿಸಲಿಲ್ಲ.


ಅವರು ನಮ್ಮಿಂದ ಹೊರಟುಹೋದವರು. ಏಕೆಂದರೆ ಅವರು ನಮ್ಮವರಾಗಿರಲಿಲ್ಲ. ಅವರು ನಮ್ಮವರಾಗಿದ್ದರೆ, ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟುಹೋದುದರಿಂದ ಅವರೆಲ್ಲರೂ ನಮ್ಮವರಲ್ಲವೆಂಬುದು ಸ್ಪಷ್ಟವಾಗಿ ತೋರಿಬಂದಿದೆ.


ಹೀಗಿರುವಲ್ಲಿ, ದೇವಕುಮಾರನನ್ನು ತುಳಿದು, ತನ್ನನ್ನು ಶುದ್ಧೀಕರಿಸಿದ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ, ದೇವರ ಕೃಪಾವರವಾಗಿರುವ ಆತ್ಮನನ್ನು ತಿರಸ್ಕರಿಸುವವನೋ, ಇನೆಂಥ ಕ್ರೂರದಂಡನೆಗೆ ಗುರಿ ಆಗುತ್ತಾನೆಂದು ನೀವೇ ಯೋಚಿಸಿನೋಡಿ?


ನಾನು ಮೊದಲನೆ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನ ಸಂಗಡ ಇರಲಿಲ್ಲ, ಎಲ್ಲರೂ ನನ್ನನ್ನು ಕೈಬಿಟ್ಟರು. ಇದು ಅವರಿಗೆ ದೋಷವಾಗಿ ಎಣಿಸಲ್ಪಡದೆ ಇರಲಿ.


ಆಸ್ಯಸೀಮೆಯಲ್ಲಿರುವವರೆಲ್ಲರೂ ನನ್ನನ್ನು ಕೈಬಿಟ್ಟರೆಂಬುದನ್ನು ನೀನು ಬಲ್ಲೆ. ಅವರಲ್ಲಿ ಪುಗೇಲನೂ ಹೆರ್ಮೊಗೇನನೂ ಸೇರಿದ್ದಾರೆ.


ಆಗ ಯೇಸು ತನ್ನನ್ನು ನಂಬಿದ ಯೆಹೂದ್ಯರಿಗೆ, “ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿರುವುದಾದರೆ, ನಿಜವಾಗಿಯೂ ನೀವು ನನ್ನ ಶಿಷ್ಯರಾಗಿರುವಿರಿ.


ಮನುಷ್ಯಕುಮಾರನ ವಿರುದ್ಧ ಮಾತನಾಡುವ ಪ್ರತಿಯೊಬ್ಬನಿಗೆ ಕ್ಷಮಾಪಣೆಯಾಗುವುದು. ಆದರೆ ಪವಿತ್ರಾತ್ಮನನ್ನು ದೂಷಿಸಿದವನಿಗೆ ಕ್ಷಮಾಪಣೆಯಿಲ್ಲ.


ತನಗೆ ಬೇರಿಲ್ಲದ ಕಾರಣ ಇವನು ಸ್ವಲ್ಪ ಕಾಲ ಮಾತ್ರವೇ ಇದ್ದು ಆ ವಾಕ್ಯದ ನಿಮಿತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಕೂಡಲೆ ಎಡವಿ ಬೀಳುತ್ತಾನೆ.


ಅವನಿಗೆ, ‘ಆದಷ್ಟು ಹಿಂಸೆಯನ್ನು ಮಾಡೋಣ, ಅವನಿಗೆ ಸಂಭವಿಸಿದ್ದಕ್ಕೆ ಮೂಲವು ಅವನಲ್ಲಿಯೇ ಅಡಗಿದೆ’ ಎಂದು ನೀವು ಆಡಿಕೊಂಡ ಕಾರಣ,


ಯಾಕೆಂದರೆ ದೇಮನು ಇಹಲೋಕವನ್ನು ಪ್ರೀತಿಸಿ, ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು.


ದೈಹಿಕವಾಗಿ ಪ್ರಶಂಸೆಯನ್ನು ಹೊಂದಬೇಕೆಂದಿರುವವರು ಸುನ್ನತಿ ಮಾಡಿಸಿಕೊಳ್ಳಿರಿ ಎಂಬುದಾಗಿ ನಿಮ್ಮನ್ನು ಒತ್ತಾಯಿಸುತ್ತಾರೆ. ಏಕೆಂದರೆ ಕ್ರಿಸ್ತನ ಶಿಲುಬೆಯ ದೆಸೆಯಿಂದ ತಮಗೆ ಹಿಂಸೆಯಾಗಬಾರದೆಂಬುದೇ ಅವರ ಉದ್ದೇಶ.


“ಅದೇ ಪ್ರಕಾರ ಬೇರೆ ಕೆಲವರು ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಸ್ವೀಕರಿಸುತ್ತಾರೆ;


“ಇನ್ನು ಕೆಲವರು ಮುಳ್ಳುಗಿಡಗಳಲ್ಲಿ ಬಿದ್ದ ಬೀಜವಾಗಿರುವವರು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು