Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 4:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಇವರು ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಗಳೂ, ಐಶ್ವರ್ಯದಿಂದುಂಟಾಗುವ ವ್ಯಾಮೋಹವೂ, ಇತರ ವಿಷಯಗಳ ಮೇಲಣ ಆಸೆಗಳೂ ಸೇರಿ ಆ ವಾಕ್ಯವನ್ನು ಅಡಗಿಸಿಬಿಡುವುದರಿಂದ ನಿಷ್ಫಲರಾಗಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆದರೆ ಈ ಜೀವಿತದ ಚಿಂತೆಗಳು, ಹಣದ ಮೇಲಿನ ವ್ಯಾಮೋಹ ಮತ್ತು ಇತರ ಎಲ್ಲಾ ವಿಧವಾದ ಆಸೆಗಳು ಅವರಲ್ಲಿ ಬಿದ್ದ ವಾಕ್ಯಕ್ಕೆ ಬೆಳೆಯಲು ಅವಕಾಶ ಕೊಡುವುದಿಲ್ಲ. ಆದ್ದರಿಂದ ಅವರ ಜೀವಿತದಲ್ಲಿ ವಾಕ್ಯವು ಫಲ ಫಲಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆದರೆ ಈ ಜೀವನದ ಚಿಂತೆಗಳೂ ಐಶ್ವರ್ಯದ ವ್ಯಾಮೋಹವೂ ಇನ್ನಿತರ ಅಭಿಲಾಷೆಗಳು ಸೇರಿ ದೇವರ ವಾಕ್ಯವನ್ನು ಅಡಗಿಸುವುದರಿಂದ, ವಾಕ್ಯವು ಫಲವನ್ನು ಕೊಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಖರೆ, ಹ್ಯಾ ಜಿವನಾಚ್ಯಾ ವಿಶಯಾತ್ಲಿ ಯವ್ಜನ್, ಪಯ್ಸ್ಯಾಂಚಿ ಆಶ್ಯಾ, ಅನಿ ಅಸ್ಲ್ಯಾ ಲೈ ಯೌಜನ್ಯಾತ್ನಿ ದೆವಾಚ್ಯಾ ಗೊಸ್ಟಿಯಾಕ್ನಿ ಗುಸ್ಮಟುನ್ ಪಿಕ್ಕ್ ದಿವ್ಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 4:19
28 ತಿಳಿವುಗಳ ಹೋಲಿಕೆ  

ಇಹಲೋಕ ವಿಷಯದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ, ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲವನ್ನೂ ಹೇರಳವಾಗಿ ದಯಪಾಲಿಸುವ ದೇವರ ಮೇಲೆ ನಿರೀಕ್ಷೆಯನ್ನಿಡಬೇಕು.


ಯಾವ ಸಂಬಂಧವಾಗಿಯೂ ಚಿಂತೆಮಾಡದೆ ಸರ್ವವಿಷಯಗಳಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ಕರ್ತನಿಗೆ ತಿಳಿಯಪಡಿಸಿರಿ.


ಆಗ ಯೇಸು ತನ್ನ ಶಿಷ್ಯರಿಗೆ, “ಐಶ್ವರ್ಯವಂತನು ಪರಲೋಕ ರಾಜ್ಯದಲ್ಲಿ ಸೇರುವುದು ಕಷ್ಟ” ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ನನ್ನಲ್ಲಿದ್ದು ಫಲಕೊಡದಿರುವ ಪ್ರತಿಯೊಂದು ಕೊಂಬೆಯನ್ನು ಆತನು ಕತ್ತರಿಸಿಹಾಕುತ್ತಾನೆ. ಫಲ ಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚು ಫಲ ಕೊಡುವ ಹಾಗೆ ಅದನ್ನು ಕತ್ತರಿಸಿ ಶುದ್ಧಮಾಡುತ್ತಾನೆ.


“ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ. ಅತಿ ಭೋಜನದ ಮದದಿಂದಲೂ, ಅಮಲಿನಿಂದಲೂ, ಪ್ರಾಪಂಚಿಕವಾದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗಿರಲಾಗಿ ಆ ದಿನವು ನಿಮ್ಮ ಮೇಲೆ ಉರುಲಿನಂತೆ ಫಕ್ಕನೆ ಬಂದೀತು.


ಆದರೆ, ಕರ್ತನು ಆಕೆಗೆ, “ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯಗಳಿಗಾಗಿ ಚಿಂತೆಯಲ್ಲಿಯೂ ಗಡಿಬಿಡಿಯಲ್ಲಿಯೂ ಸಿಕ್ಕಿಕೊಂಡಿದ್ದೀ.


ನನ್ನ ದ್ರಾಕ್ಷಿಯ ತೋಟದಲ್ಲಿ ಹಿಂದೆ ನಾನು ಮಾಡಿದ್ದಕ್ಕಿಂತಲೂ ಇನ್ನೂ ಹೆಚ್ಚಾಗಿ ಇನ್ನೇನು ಮಾಡಬೇಕಾಗಿತ್ತು? ಅದು ಒಳ್ಳೆಯ ದ್ರಾಕ್ಷಿಯ ಫಲವನ್ನು ಕೊಡುವುದೆಂದು ನಾನು ನಿರೀಕ್ಷಿಸುತ್ತಿರಲು, ಅದು ಹುಳಿ ಹಣ್ಣನ್ನು ಏಕೆ ಕೊಟ್ಟಿತು?


ಅವನು ಅದನ್ನು ಅಗೆದು, ಕಲ್ಲುಗಳನ್ನು ತೆಗೆದುಹಾಕಿ, ಒಳ್ಳೆಯ ದ್ರಾಕ್ಷಿಯ ಸಸಿಗಳನ್ನು ನೆಟ್ಟು, ಮಧ್ಯದಲ್ಲಿ ಗೋಪುರವನ್ನು ಕಟ್ಟಿ, ದ್ರಾಕ್ಷಿಯ ತೊಟ್ಟಿಯನ್ನು ಕೊರೆಯಿಸಿ, ತೋಟವು ಒಳ್ಳೆಯ ಸಿಹಿ ದ್ರಾಕ್ಷಿಯ ಹಣ್ಣನ್ನು ಕೊಡುವುದೆಂದು ಎದುರುನೋಡುತ್ತಿರಲು, ಅದು ಹುಳಿ ಹಣ್ಣನ್ನು ಕೊಟ್ಟಿತು.


ಇವು ನಿಮ್ಮಲ್ಲಿದ್ದು ಬೆಳೆದು ಬಂದರೆ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಕುರಿತಾದ ಪರಿಜ್ಞಾನದಲ್ಲಿ ನೀವು ನಿರುತ್ಸಾಹಿಗಳೂ, ನಿಷ್ಪ್ರಯೋಜಕರೂ ಆಗದಂತೆ ಮಾಡುತ್ತವೆ.


ಯಾಕೆಂದರೆ ದೇಮನು ಇಹಲೋಕವನ್ನು ಪ್ರೀತಿಸಿ, ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು.


ಒಬ್ಬಂಟಿಗನಾದ ಒಬ್ಬ ಮನುಷ್ಯನಿದ್ದಾನೆ. ಅವನಿಗೆ ಅಣ್ಣತಮ್ಮಂದಿರು ಇಲ್ಲ, ಮಕ್ಕಳೂ ಇಲ್ಲ. ಆದರೂ ಅವನ ಪ್ರಯಾಸಕ್ಕೆ ಅಂತ್ಯವಿಲ್ಲ, ಐಶ್ವರ್ಯದಿಂದ ಅವನ ಕಣ್ಣಿಗೆ ತೃಪ್ತಿಯಿಲ್ಲ. ಅವನು, “ನಾನು ಸುಖವನ್ನು ತೊರೆದು ಯಾರಿಗೋಸ್ಕರ ಪ್ರಯಾಸಪಡುತ್ತಾ ಇದ್ದೇನೆ?” ಅಂದುಕೊಳ್ಳುವನು. ಇದೂ ಸಹ ವ್ಯರ್ಥವೇ. ಕೇವಲ ಪ್ರಯಾಸದ ಕೆಲಸವೇ ಸರಿ.


ಇವರು ಸಮುದ್ರದೊಳಗಿರುವ ಗುಪ್ತವಾದ ಬಂಡೆಗಳಂತಿದ್ದು, ನಿಮ್ಮ ಸ್ನೇಹಭೋಜನಗಳಲ್ಲಿ ಸೇರಿ ತಿಂದು ಕುಡಿಯುತ್ತಾರೆ. ನಿರ್ಭಯವಾಗಿ ಸ್ವಂತ ಹೊಟ್ಟೆಯನ್ನೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಬಡಿಸಿಕೊಂಡು ಹೋಗುವ ನೀರಿಲ್ಲದ ಮೋಡಗಳೂ, ಫಲಗಳನ್ನು ಬಿಡದ, ಸಂಪೂರ್ಣವಾಗಿ ಸತ್ತ, ಬೇರು ಸಹಿತ ಕಿತ್ತು ಬಿದ್ದ ಶರತ್ಕಾಲದ ಮರಗಳು.


ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿದೆ; ಆದ್ದರಿಂದ ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕುವರು.


ನಿನ್ನ ದೃಷ್ಟಿಯು ಐಶ್ವರ್ಯದ ಮೇಲೆ ಎರಗುತ್ತದೋ? ಐಶ್ವರ್ಯವು ಅಷ್ಟರೊಳಗೆ ಮಾಯವಾಗುವುದು, ಆಕಾಶದ ಕಡೆಗೆ ಹಾರುವ ಹದ್ದಿನಂತೆ, ಅದು ರೆಕ್ಕೆಗಳನ್ನು ಕಟ್ಟಿಕೊಂಡಿದೆ.


ದುಡ್ಡಿನಾಶೆಯಿಂದ ದುಡಿಯಬೇಡ, ಸ್ವಬುದ್ಧಿಯನ್ನೇ ಆಶ್ರಯಿಸಬೇಡ.


ಮುಳ್ಳುಗಿಡಗಳ ನೆಲದಲ್ಲಿ ಬಿತ್ತಲ್ಪಟ್ಟಂಥವನು ಯಾರೆಂದರೆ, ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಯೂ, ಐಶ್ವರ್ಯದ ಮೋಸತನವೂ ಆ ವಾಕ್ಯವನ್ನು ಅಡಗಿಸಿಬಿಡುವುದರಿಂದ ಫಲವನ್ನು ಕೊಡದೇ ಇರುತ್ತಾನೆ.


“ಇನ್ನು ಕೆಲವರು ಮುಳ್ಳುಗಿಡಗಳಲ್ಲಿ ಬಿದ್ದ ಬೀಜವಾಗಿರುವವರು;


ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನ ಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತವನ್ನು ತಿಳಿದವರಾಗಿ ಉತ್ತಮವಾದದ್ದೂ, ಮೆಚ್ಚಿಕೆಯಾದದ್ದೂ, ದೋಷವಿಲ್ಲದ್ದೂ ಯಾವ ಯಾವುದೆಂದು ವಿವೇಚಿಸುವಿರಿ.


ಪೂರ್ವದಲ್ಲಿ ನೀವು ಇಹಲೋಕದ ಪದ್ಧತಿಗೆ ಅನುಸಾರವಾಗಿಯೂ, ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡೆಸುವ ಆತ್ಮನಿಗನುಸಾರವಾಗಿ ಜೀವನ ನಡಿಸಿದ್ದೀರಿ.


ನಮಗೆ ಹೋರಾಟವಿರುವುದು ಮನುಷ್ಯಮಾತ್ರದವರ ಸಂಗಡವಲ್ಲ. ರಾಜತ್ವಗಳ ಮೇಲೆಯೂ, ಅಧಿಕಾರಿಗಳ ಮೇಲೆಯೂ, ಈ ಅಂಧಕಾರದ ಲೋಕಾಧಿಪತಿಗಳ ಮೇಲೆಯೂ, ಆಕಾಶ ಮಂಡಲಗಳಲ್ಲಿರುವ ದುರಾತ್ಮಗಳ ಸೇನೆಯ ಮೇಲೆಯೂ ನಾವು ಹೋರಾಡುವವರಾಗಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು