Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 4:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅದು ಸಾಸಿವೆ ಕಾಳಿನಂತಿರುತ್ತದೆ. ನೆಲದಲ್ಲಿ ಬಿತ್ತುವಾಗ ಅದು ಭೂಮಿಯಲ್ಲಿರುವ ಎಲ್ಲಾ ಬೀಜಗಳಿಗಿಂತಲೂ ಸಣ್ಣದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಭೂಮಿಯಲ್ಲಿರುವ ಕಾಳುಗಳಲ್ಲಿ ಅತಿ ಚಿಕ್ಕದಾಗಿರುವ ಸಾಸಿವೆಕಾಳಿಗೂ ಅದನ್ನು ಹೋಲಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಅದು ಸಾಸಿವೆ ಕಾಳಿನಂತಿರುತ್ತದೆ. ಭೂವಿುಯಲ್ಲಿ ಬಿತ್ತುವಾಗ ಅದು ಭೂವಿುಯಲ್ಲಿರುವ ಎಲ್ಲಾ ಬೀಜಗಳಿಗಿಂತಲೂ ಸಣ್ಣದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ದೇವರ ರಾಜ್ಯವು ಸಾಸಿವೆ ಕಾಳಿನಂತಿರುತ್ತದೆ. ನೀವು ಭೂಮಿಯಲ್ಲಿ ಬಿತ್ತುವ ಕಾಳುಗಳಲ್ಲಿ ಸಾಸಿವೆ ಕಾಳು ಅತ್ಯಂತ ಸಣ್ಣದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಅದು ಭೂಮಿಯ ಎಲ್ಲಾ ಬೀಜಗಳಿಗಿಂತ ಅತಿ ಚಿಕ್ಕದಾದ ಸಾಸಿವೆ ಕಾಳಿನಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ಹೆ, ಅಶೆ. ಎಕ್ ಮಾನುಸ್, ಎಕ್ ಸಾಸಾಂವಾಚಿ ಭ್ಹಿಂಯ್ ಘೆತಾ, ಜಗಾತ್ ಎಗ್ದಮ್ ಬಾರಿಕ್‍ ಭ್ಹಿಂಯ್ ತಿ, ತಿ ಭ್ಹಿಂಯ್, ತೊ ಜಮ್ನಿತ್ ಘಾಲ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 4:31
30 ತಿಳಿವುಗಳ ಹೋಲಿಕೆ  

ಈ ರೀತಿಯಾಗಿ ಕರ್ತನ ವಾಕ್ಯವು ಬಹಳವಾಗಿ ಹೆಚ್ಚುತ್ತಾ ಪ್ರಬಲವಾಯಿತು.


“ಸೂರ್ಯನು ಮೂಡುವ ದಿಕ್ಕಿನಿಂದ ಮುಳುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನು ಶುದ್ಧ ನೈವೇದ್ಯವನ್ನೂ ಅರ್ಪಿಸುತ್ತಾರೆ. ಹೌದು, ಅನ್ಯ ಜನಾಂಗಗಳಲ್ಲಿಯೇ ನನ್ನ ನಾಮವು ಬಹು ಮಾನ್ಯವಾಗಿದೆ.” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಅವರು ಅದನ್ನು ಕೇಳಿ ದೇವರನ್ನು ಕೊಂಡಾಡಿದರು. ಆಗ ಅವರು ಅವನಿಗೆ; “ಸಹೋದರನೇ, ಯೆಹೂದ್ಯರಲ್ಲಿ ಯೇಸುವನ್ನು ನಂಬಿರುವವರು ಸಾವಿರಾರು ಮಂದಿ ಇದ್ದಾರೆಂಬುದನ್ನು ನೋಡುತ್ತಿದ್ದೀಯಲ್ಲಾ. ಅವರೆಲ್ಲರೂ ಧರ್ಮಶಾಸ್ತ್ರದ ಅಭಿಮಾನಿಗಳಾಗಿದ್ದಾರೆ.


ಮತ್ತು ಇನ್ನು ಎಷ್ಟೋ ಮಂದಿ ಸ್ತ್ರೀಪುರುಷರು ಕರ್ತನಲ್ಲಿ ನಂಬಿಕೆಯಿಟ್ಟು ಅವರ ಮಂಡಳಿಯಲ್ಲಿ ಸೇರಿಕೊಳ್ಳುತ್ತಿದ್ದರು.


ಆದರೆ ವಾಕ್ಯವನ್ನು ಕೇಳಿದವರಲ್ಲಿ ಅನೇಕರು ನಂಬಿದರು; ಗಂಡಸರ ಸಂಖ್ಯೆ ಸುಮಾರು ಐದು ಸಾವಿರಕ್ಕೆ ಏರಿತು.


ಅವನ ಬೋಧನೆಯನ್ನು ಅಂಗೀಕರಿಸಿದ ಅನೇಕರು ದೀಕ್ಷಾಸ್ನಾನಮಾಡಿಸಿ ಕೊಂಡರು. ಆ ದಿನ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿಕೊಂಡರು.


ಆ ದಿನದಲ್ಲಿ ಯೆಹೋವನು ಯೆರೂಸಲೇಮಿನವರನ್ನು ಸುತ್ತಲು ಕಾಪಾಡುವನು; ಅವರೊಳಗೆ ಈಗಿನ ಕುಂಟನು ಆ ದಿನದಲ್ಲಿ ದಾವೀದನಂತಿರುವನು; ದಾವೀದ ವಂಶವು ದೇವರಂತೆ, ಯೆಹೋವನ ದೂತನ ಹಾಗೆ ಅವರಿಗೆ ಮುಂದಾಳಾಗುವುದು.


ಆ ಕಾಲದಲ್ಲಿ ಬಹು ಜನಾಂಗಗಳು ಯೆಹೋವನಾದ ನನ್ನನ್ನು ಆಶ್ರಯಿಸಿಕೊಂಡು ನನ್ನ ಜನವಾಗುವರು; ನಾನು ನಿಮ್ಮ ಮಧ್ಯದಲ್ಲಿ ವಾಸಿಸುವೆನು” ಆಗ, ಸೇನಾಧೀಶ್ವರನಾದ ಯೆಹೋವನೇ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂಬುದು ನಿನಗೆ ಗೊತ್ತಾಗುವುದು.


ಚಿಕ್ಕವನಿಂದ ಒಂದು ಕುಲವಾಗುವುದು, ಅಲ್ಪನಿಂದ ಬಲವಾದ ಜನಾಂಗವಾಗುವುದು. ಯೆಹೋವನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಲುಬೇಗನೆ ಉಂಟುಮಾಡುವೆನು.


ಇವನು ಇಂಥವನಾಗಿರುವುದರಿಂದ ನಾನು ಇವನಿಗೆ ದೊಡ್ಡವರ ಸಂಗಡ ಪಾಲು ಕೊಡುವೆನು, ಇವನು ಬಲಿಷ್ಠರೊಡನೆ ಸೂರೆಯನ್ನು ಹಂಚಿಕೊಳ್ಳುವನು; ತನ್ನ ಪ್ರಾಣವನ್ನು ಧಾರೆಯೆರೆದು, ಮರಣಹೊಂದಿ, ದ್ರೋಹಿಗಳೊಂದಿಗೆ ತನ್ನನ್ನೂ ಎಣಿಸಿಕೊಂಡು, ಬಹು ಜನ ದ್ರೋಹಿಗಳ ಪಾಪವನ್ನು ಹೊರುತ್ತಾ ಅವರಿಗಾಗಿ ವಿಜ್ಞಾಪನೆ ಮಾಡಿದನು.


ಒಣನೆಲದೊಳಗೆ ಬೇರಿನಿಂದ ಹೊರಡುವ ಸಸಿಯಂತೆಯೂ, ಬುಡದಿಂದ ಒಡೆಯುವ ಚಿಗುರಿನ ಹಾಗೂ ಅವನು ಯೆಹೋವನ ದೃಷ್ಟಿಯಲ್ಲಿ ಬೆಳೆದನು. ಅವನಲ್ಲಿ ಯಾವ ಅಂದಚಂದಗಳೂ ಇರಲಿಲ್ಲ; ನಾವು ಅವನನ್ನು ನೋಡಿದಾಗ ನೋಡತಕ್ಕ ಯಾವ ಲಕ್ಷಣವೂ ಕಾಣಲಿಲ್ಲ.


ಆತನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ದಿಯಾಗುವುದು. ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವುದು. ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು. ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು.


ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ, “ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನ ಕ್ರಿಸ್ತನಿಗೂ ಬಂದಿದೆ, ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು” ಎಂಬ ಮಹಾಘೋಷಣೆಯಾಯಿತು.


ಇನ್ನೂ ಆತನು ಹೇಳಿದ್ದು; “ದೇವರ ರಾಜ್ಯವನ್ನು ಯಾವುದಕ್ಕೆ ಹೋಲಿಸೋಣ? ಯಾವ ಸಾಮ್ಯದಿಂದ ಅದನ್ನು ತೋರಿಸಿಕೊಡೋಣ?


ಬಿತ್ತಿದ ಮೇಲೆ ಅದು ಬೆಳೆದು ಎಲ್ಲಾ ಗಿಡಗಳಿಗಿಂತ ದೊಡ್ಡದಾಗಿ ದೊಡ್ಡದೊಡ್ಡ ಕೊಂಬೆಗಳನ್ನು ಬಿಡುವುದರಿಂದ ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಅದರ ನೆರಳಿನಲ್ಲಿ ವಾಸಮಾಡುವುದಕ್ಕಾಗುತ್ತದೆ” ಅಂದನು.


ಕರ್ತನು, “ಸಾಸಿವೇ ಕಾಳಷ್ಟು ನಂಬಿಕೆ ನಿಮಗಿರುವುದಾದರೆ ನೀವು ಈ ಅತ್ತಿಮರಕ್ಕೆ, ‘ನೀನು ಬೇರುಸಹಿತ ಕಿತ್ತುಕೊಂಡುಹೋಗಿ ಸಮುದ್ರದಲ್ಲಿ ನಾಟಿಕೊ’ ಎಂದು ಹೇಳಿದರೂ ಅದು ನಿಮ್ಮ ಮಾತನ್ನು ಕೇಳುವುದು” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು