Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 4:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಸಾಮ್ಯಗಳಿಲ್ಲದೆ ಆತನು ಒಂದನ್ನೂ ಹೇಳಲಿಲ್ಲಾ. ಆದರೆ ಏಕಾಂತವಾಗಿರುವಾಗ ಆತನು ತನ್ನ ಆಪ್ತ ಶಿಷ್ಯರಿಗೆ ಎಲ್ಲವನ್ನು ವಿವರಿಸಿ ಹೇಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಆದರೆ ತಮ್ಮ ಆಪ್ತಶಿಷ್ಯರೊಡನೆ ಪ್ರತ್ಯೇಕವಾಗಿದ್ದಾಗ ಅವರಿಗೆ ಎಲ್ಲವನ್ನು ವಿವರಿಸಿ ಹೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಆದರೆ ಪ್ರತ್ಯೇಕವಾಗಿ ಆತನು ತನ್ನ ಆಪ್ತಶಿಷ್ಯರಿಗೆ ಎಲ್ಲವನ್ನು ಬಿಚ್ಚಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಯೇಸುವು ಜನರಿಗೆ ಯಾವಾಗಲೂ ಸಾಮ್ಯಗಳ ಮೂಲಕ ಉಪದೇಶಿಸಿದನು. ಆದರೆ ತನ್ನ ಶಿಷ್ಯರು ಮಾತ್ರ ಇರುವಾಗ ಎಲ್ಲವನ್ನೂ ಅವರಿಗೆ ವಿವರಿಸಿ ತಿಳಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಸಾಮ್ಯವಿಲ್ಲದೆ ಯೇಸು ಅವರಿಗೆ ಏನೂ ಹೇಳುತ್ತಿರಲಿಲ್ಲ. ಆದರೆ ಯೇಸು ತಮ್ಮ ಶಿಷ್ಯರೊಡನೆ ಏಕಾಂತವಾಗಿದ್ದಾಗ ಮಾತ್ರ ಅವರಿಗೆ ಎಲ್ಲವನ್ನು ವಿವರಿಸಿ ಹೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ಕಾನಿ ನಸ್ತಾನಾ, ತೊ, ತೆಂಚ್ಯಾಕ್ಡೆ ಬೊಲಿನಸಿ, ಖರೆ, ಕಡೆಕ್ ಅಪ್ಲ್ಯಾ ಶಿಸಾಂಚ್ಯಾ ವಾಂಗ್ಡಾ ಎಕ್ಲೊಚ್ ರಾತಾನಾ ಕಾನಿಯಾಂಚೊ ಅರ್ತ್‍ ಸೊಡ್ಸುನ್ ಸಾಂಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 4:34
12 ತಿಳಿವುಗಳ ಹೋಲಿಕೆ  

“ಈ ಸಂಗತಿಗಳನ್ನು ಸಾಮ್ಯರೂಪವಾಗಿ ನಿಮಗೆ ಹೇಳಿದ್ದೇನೆ, ಆದರೆ ಇನ್ನು ಮೇಲೆ ಸಾಮ್ಯರೂಪವಾಗಿ ನಿಮ್ಮೊಂದಿಗೆ ಮಾತನಾಡದೆ ತಂದೆಯ ಕುರಿತಾಗಿ ಸ್ಪಷ್ಟವಾಗಿ ತಿಳಿಸುವ ಕಾಲವು ಬರುತ್ತದೆ.


ಆತನು ಒಬ್ಬನೇ ಇದ್ದಾಗ, ಆತನಿಗೆ ಹತ್ತಿರವಾಗಿದ್ದವರು ಹನ್ನೆರಡು ಮಂದಿ ಶಿಷ್ಯರ ಸಂಗಡ ಆ ಸಾಮ್ಯಗಳ ವಿಷಯವಾಗಿ ಆತನನ್ನು ಕೇಳಿದರು.


ಮೋಶೆಯ ಮತ್ತು ಎಲ್ಲಾ ಪ್ರವಾದಿಗಳ ಗ್ರಂಥಗಳು ಮೊದಲುಗೊಂಡು ಸಮಸ್ತ ಗ್ರಂಥಗಳಲ್ಲಿ ತನ್ನ ವಿಷಯವಾಗಿರುವ ಸೂಚನೆಗಳನ್ನು ಅವರಿಗೆ ವಿವರಿಸಿದನು.


ಯೇಸು ಈ ಸಂಗತಿಗಳನ್ನೆಲ್ಲಾ ಜನರ ಗುಂಪುಗಳಿಗೆ ಸಾಮ್ಯರೂಪವಾಗಿ ಹೇಳಿದನು. ಸಾಮ್ಯವಿಲ್ಲದೆ ಏನನ್ನೂ ಹೇಳಲಿಲ್ಲ.


ಆತನು ಈ ರೀತಿಯ ಅನೇಕ ಸಾಮ್ಯಗಳಿಂದ ಜನರಿಗೆ ಅರ್ಥವಾಗುವ ಹಾಗೆ ದೇವರ ವಾಕ್ಯವನ್ನು ಹೇಳುತ್ತಿದ್ದನು.


ಈ ಸಾಮ್ಯವನ್ನು ಯೇಸು ಅವರಿಗೆ ಹೇಳಿದನು. ಆದರೂ ಆತನು ಹೇಳಿದ ವಿಷಯಗಳ ಅರ್ಥ ಏನೆಂಬುದು ಅವರು ಗ್ರಹಿಸಲಿಲ್ಲ.


ಅವರು ಅವನಿಗೆ ಒಂದು ದಿನವನ್ನು ಗೊತ್ತುಮಾಡಲು, ಬಹುಮಂದಿ ಅವನ ಬಿಡಾರದಲ್ಲಿ ಅವನ ಬಳಿಗೆ ಬಂದರು. ಅವನು ಬೆಳಗ್ಗಿನಿಂದ ಸಾಯಂಕಾಲದ ವರೆಗೂ ದೇವರ ರಾಜ್ಯವನ್ನು ಕುರಿತು ಪ್ರಾಮಾಣಿಕವಾಗಿ ಸಾಕ್ಷಿಹೇಳುತ್ತಾ, ಮೋಶೆಯ ಧರ್ಮಶಾಸ್ತ್ರವನ್ನೂ, ಪ್ರವಾದಿಗಳ ಗ್ರಂಥಗಳನ್ನೂ, ಆಧಾರಮಾಡಿಕೊಂಡು ಯೇಸುವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಇದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು