Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 4:38 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಆದರೆ ಆತನು ದೋಣಿಯ ಹಿಂಭಾಗದಲ್ಲಿ ತಲೆದಿಂಬನ್ನು ಒರಗಿ ನಿದ್ದೆಮಾಡುತ್ತಿದ್ದನು. ಅವರು ಆತನನ್ನು ಎಬ್ಬಿಸಿ, “ಗುರುವೇ, ನಾವು ಮುಳುಗಿಹೋಗುವುದರಲ್ಲಿ ನಿನಗೆ ಚಿಂತೆಯಿಲ್ಲವೇ” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಯೇಸುವಾದರೋ ದೋಣಿಯ ಹಿಂಭಾಗದಲ್ಲಿ ದಿಂಬನ್ನು ಒರಗಿ ನಿದ್ದೆ ಮಾಡುತ್ತಿದ್ದರು. ಶಿಷ್ಯರು ಅವರನ್ನು ಎಬ್ಬಿಸಿ, “ಗುರುವೇ, ನಾವು ಸಾಯುತ್ತಿದ್ದೇವೆ, ತಮಗೆ ಚಿಂತೆಯೇ ಇಲ್ಲವೆ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಆತನು ದೋಣಿಯ ಹಿಂಭಾಗದಲ್ಲಿ ತಲೆಗಿಂಬನ್ನು ಒರಗಿ ನಿದ್ದೆ ಮಾಡುತ್ತಿದ್ದನು. ಅವರು ಆತನನ್ನು ಎಬ್ಬಿಸಿ - ಗುರುವೇ, ನಾವು ಮುಳುಗಿಹೋಗುವದರಲ್ಲಿ ನಿನಗೆ ಚಿಂತೆಯಿಲ್ಲವೇ ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಯೇಸುವು ದೋಣಿಯ ಹಿಂಭಾಗದಲ್ಲಿ ತಲೆದಿಂಬಿನ ಮೇಲೆ ತಲೆಯನ್ನಿಟ್ಟು ನಿದ್ರಿಸುತ್ತಿದ್ದನು. ಶಿಷ್ಯರು ಆತನ ಬಳಿಗೆ ಹೋಗಿ, ಆತನನ್ನು ಎಬ್ಬಿಸಿ, “ಗುರುವೇ, ನೀನು ನಮ್ಮ ಬಗ್ಗೆ ಚಿಂತಿಸುವುದಿಲ್ಲವೆ? ನಾವು ಮುಳುಗಿಹೋಗುತ್ತಿದ್ದೇವೆ!” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಯೇಸು ದೋಣಿಯ ಹಿಂಭಾಗದಲ್ಲಿ ದಿಂಬಿನ ಮೇಲೆ ಒರಗಿ ನಿದ್ದೆಮಾಡುತ್ತಿದ್ದರು. ಶಿಷ್ಯರು ಯೇಸುವನ್ನು ಎಬ್ಬಿಸಿ, “ಗುರುವೇ, ನಾವು ಮುಳುಗಿ ಸಾಯುತ್ತಿದ್ದೇವೆ. ನಿಮಗೆ ಚಿಂತೆಯಿಲ್ಲವೇ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ಖರೆ ಜೆಜು, ಢೊನಿತ್, ಫಾಟಿಕ್ಡೆ ಉಶ್ಯಾ ವರ್‍ತಿ ಟಕ್ಲೆ ಥವ್ನ್ ಘೆವ್ನ್ ನಿಜಲ್ಲೊ. ಶಿಸಾನಿ ತೆಕಾ ಉಟ್ವುಲ್ಯಾನಿ, ಅನಿ “ಗುರುಜಿ, ಅಮಿ ಮರುನ್ ಗೆಲ್ಲ್ಯಾರ್‍ಬಿ, ತುಕಾ ಕಾಯ್ ಪರ್ವಾ ನಾ ಕಾಯ್?” ಮನುನ್ ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 4:38
22 ತಿಳಿವುಗಳ ಹೋಲಿಕೆ  

ನಿಮ್ಮ ಚಿಂತಾಭಾರವನ್ನೆಲ್ಲಾ ಆತನ ಮೇಲೆ ಹಾಕಿರಿ ಆತನು ನಿಮಗೋಸ್ಕರ ಚಿಂತಿಸುತ್ತಾನೆ.


ಏಕೆಂದರೆ ನಮಗಿರುವ ಮಹಾಯಾಜಕನು ನಮ್ಮ ಬಲಹೀನತೆಗಳಲ್ಲಿ ಅನುಕಂಪ ತೋರಿಸುವವನಾಗಿದ್ದಾನೆ. ಆತನು ಸರ್ವ ವಿಷಯಗಳಲ್ಲಿಯೂ ನಮ್ಮ ಹಾಗೆ ಶೋಧನೆಗೆ ಗುರಿಯಾದವನು, ಪಾಪ ಮಾತ್ರ ಮಾಡಲಿಲ್ಲವಷ್ಟೇ.


ಆಗ ಶಿಷ್ಯರು ಆತನ ಹತ್ತಿರ ಬಂದು ಆತನನ್ನು ಎಬ್ಬಿಸಿ, “ಕರ್ತನೇ, ನಮ್ಮನ್ನು ಕಾಪಾಡು, ಸಾಯುತ್ತಿದ್ದೇವೆ” ಎಂದರು.


ಹೀಗಿರಲಾಗಿ ಅವರು ಆತನ ಹತ್ತಿರ ಬಂದು, “ಗುರುವೇ, ಗುರುವೇ, ನಾವು ಸಾಯುತ್ತಿದ್ದೇವೆ” ಎಂದು ಹೇಳಿ ಆತನನ್ನು ಎಬ್ಬಿಸಿದರು. ಆಗ ಆತನು ಎದ್ದು ಗಾಳಿಯನ್ನೂ ಏರಿ ಬರುತ್ತಿದ್ದ ನೀರಿನ ಅಲೆಗಳನ್ನೂ ಗದರಿಸಿದನು. ಆಗ ಅವು ನಿಂತು, ಶಾಂತವಾಯಿತು.


ಯೆಹೋವನೇ, ಇವುಗಳನ್ನು ನೋಡಿಯೂ ನಿನ್ನನ್ನು ಬಿಗಿಹಿಡಿಯುವಿಯೋ? ಸುಮ್ಮನಿರುವಿಯೋ? ನಮ್ಮನ್ನು ಹೆಚ್ಚಾಗಿ ಕುಗ್ಗಿಸುವಿಯೋ?”


ಆದುದರಿಂದ ಆತನು ಎಲ್ಲಾ ವಿಷಯಗಳಲ್ಲಿಯೂ ತನ್ನ ಸಹೋದರರಿಗೆ ಸಮಾನನಾಗುವುದು ಅತ್ಯಗತ್ಯವಾಗಿತ್ತು. ಹೀಗೆ ಆತನು ಜನರ ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ, ದೇವರ ಕಾರ್ಯಗಳಲ್ಲಿ ಕರುಣೆಯೂ, ನಂಬಿಕೆಯೂ, ಉಳ್ಳ ಮಹಾಯಾಜಕನಾದನು.


ಅಲ್ಲಿ ಯಾಕೋಬನು ತೆಗೆಸಿದ ಬಾವಿಯಿತ್ತು. ಯೇಸು ಪ್ರಯಾಣಮಾಡಿದ್ದರಿಂದ ಆಯಾಸಗೊಂಡು ಆ ಬಾವಿಯ ಬಳಿಯಲ್ಲಿ ಹಾಗೆ ಕುಳಿತುಕೊಂಡನು. ಆಗ ಹೆಚ್ಚು ಕಡಿಮೆ ಮಧ್ಯಾಹ್ನವಾಗಿತ್ತು.


ಆಕಾಶದಿಂದ ನೋಡು, ಪರಿಶುದ್ಧವೂ, ಘನವೂ ಆದ ನಿನ್ನ ಉನ್ನತಸ್ಥಾನದಿಂದ ಲಕ್ಷಿಸು; ನಿನ್ನ ಉತ್ಸಾಹವೆಲ್ಲಿ, ನಿನ್ನ ಸಾಹಸ ಕಾರ್ಯಗಳೆಲ್ಲಿ? ನಿನ್ನ ಕರುಳ ಮರುಗಾಟವನ್ನೂ, ನಿನ್ನ ಕನಿಕರವನ್ನೂ ನಮ್ಮ ಕಡೆಗೆ ಬಿಗಿ ಹಿಡಿದಿದ್ದಿ.


ಇದಲ್ಲದೆ ನಾನು ಮೊರೆಯಿಟ್ಟು ಕೂಗಿಕೊಂಡರೂ ನನ್ನ ಬಿನ್ನಹಕ್ಕೆ ಕಿವಿಗೊಡುತ್ತಿಲ್ಲ.


ಆತನ ಬಳಿಗೆ ತಮ್ಮ ಶಿಷ್ಯರನ್ನು ಹೆರೋದ್ಯರ ಜೊತೆಮಾಡಿ ಕಳುಹಿಸಿದರು. ಇವರು ಯೇಸುವಿಗೆ, “ಗುರುವೇ, ನೀನು ಸತ್ಯವಂತನು, ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನು, ಯಾರಿಗೂ ಹೆದರದವನು; ನೀನು ಜನರ ದಾಕ್ಷಿಣ್ಯಕ್ಕೆ ತಕ್ಕಂತೆ ಮಾತನಾಡುವವನಲ್ಲ ಎಂದು ಬಲ್ಲೆವು.


ತರುವಾಯ ದೊಡ್ಡ ಬಿರುಗಾಳಿ ಎದ್ದು ಅಲೆಗಳು ಆ ದೋಣಿಗೆ ಬಡಿದು ನೀರು ಒಳಗೆ ನುಗ್ಗಿದ್ದರಿಂದ ಆ ದೋಣಿ ಆಗಲೇ ತುಂಬುವುದಕ್ಕೆ ಬಂದಿತ್ತು.


ಆತನು ಎದ್ದು ಗಾಳಿಯನ್ನು ಗದರಿಸಿ, ಸಮುದ್ರಕ್ಕೆ “ಶಾಂತವಾಗಿರು, ಮೊರೆಯಬೇಡ” ಎಂದು ಅಪ್ಪಣೆಕೊಡುತ್ತಲೇ ಗಾಳಿ ನಿಂತುಹೋಗಿ ಸಮುದ್ರವು ಶಾಂತವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು