ಮಾರ್ಕ 4:39 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಆತನು ಎದ್ದು ಗಾಳಿಯನ್ನು ಗದರಿಸಿ, ಸಮುದ್ರಕ್ಕೆ “ಶಾಂತವಾಗಿರು, ಮೊರೆಯಬೇಡ” ಎಂದು ಅಪ್ಪಣೆಕೊಡುತ್ತಲೇ ಗಾಳಿ ನಿಂತುಹೋಗಿ ಸಮುದ್ರವು ಶಾಂತವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ಆಗ ಯೇಸು ಎಚ್ಚೆತ್ತು, ಬಿರುಗಾಳಿಯನ್ನು ಗದರಿಸಿದರು. ಸರೋವರಕ್ಕೆ, “ಶಾಂತವಾಗಿರು! ಮೊರೆಯಬೇಡ,” ಎಂದು ಆಜ್ಞಾಪಿಸಿದರು. ತಕ್ಷಣ ಬಿರುಗಾಳಿ ನಿಂತಿತು. ವಾತಾವರಣ ಪ್ರಶಾಂತವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ಆತನು ಎದ್ದು ಗಾಳಿಯನ್ನು ಗದರಿಸಿ ಸಮುದ್ರಕ್ಕೆ - ಸುಮ್ಮನಿರು, ಮೊರೆಯಬೇಡ ಎಂದು ಅಪ್ಪಣೆಕೊಟ್ಟನು. ಕೊಡುತ್ತಲೆ ಗಾಳಿ ನಿಂತು ಹೋಗಿ ಎಲ್ಲಾ ಶಾಂತವಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 ಯೇಸು ಎಚ್ಚೆತ್ತು ಬಿರುಗಾಳಿ ಮತ್ತು ಅಲೆಗಳಿಗೆ, “ಪ್ರಶಾಂತವಾಗಿರಿ! ಮೊರೆಯದಿರಿ!” ಎಂದು ಆಜ್ಞಾಪಿಸಿದನು. ಆಗ ಬಿರುಗಾಳಿ ನಿಂತುಹೋಯಿತು ಮತ್ತು ಸರೋವರವು ಪ್ರಶಾಂತವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ಯೇಸು ಎದ್ದು ಬಿರುಗಾಳಿಯನ್ನು ಗದರಿಸಿದರು ಮತ್ತು ಅಲೆಗಳಿಗೆ, “ಸುಮ್ಮನಿರು, ಶಾಂತವಾಗು!” ಎಂದು ಆಜ್ಞಾಪಿಸಿದರು. ಆಗ ಬಿರುಗಾಳಿಯು ನಿಂತು ಹೋಗಿ ಎಲ್ಲವೂ ಪ್ರಶಾಂತವಾಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್39 ಜೆಜುನ್ ಉಟುನ್, ವಾರ್ಯಾಕ್ ಆಜ್ಞಾ ಕರುನ್ “ಗಪ್ ರ್‍ಹಾಮ್!” ಮಟ್ಲ್ಯಾನ್. ಅನಿ ಸಮುಂದರಾಚ್ಯಾ ಲ್ಹಾಟಾಕ್ನಿ “ಹಾಲುನಕಾಸಿ!” ಮಟ್ಲ್ಯಾನ್. ತನ್ನಾ ತೊ ಮೊಟೊ ವಾರೊ ಬಂದ್ ಹೊಲೊ. ಅನಿ ಸಗ್ಳೆ ಶಾಂತ್ ಹೊಲೆ. ಅಧ್ಯಾಯವನ್ನು ನೋಡಿ |