Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 4:41 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಅವರು ಬಹು ಭಯಪಟ್ಟು, “ಈತನು ಯಾರಿರಬಹುದು? ಗಾಳಿಯೂ, ಸಮುದ್ರವೂ ಸಹ ಈತನು ಹೇಳಿದ ಹಾಗೆ ಕೇಳುತ್ತವಲ್ಲಾ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಶಿಷ್ಯರಾದರೋ ಭಯಭ್ರಾಂತರಾಗಿ, “ಗಾಳಿಯೂ ಸರೋವರವೂ ಇವರು ಹೇಳುವಂತೆ ಕೇಳಬೇಕಾದರೆ ಇವರು ಯಾರಿರಬಹುದು?” ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಈತನು ಯಾರಿರಬಹುದು? ಗಾಳಿಯೂ ಸಮುದ್ರವೂ ಸಹ ಈತನು ಹೇಳಿದ ಹಾಗೆ ಕೇಳುತ್ತವಲ್ಲಾ ಎಂದು ತಮ್ಮ ತಮ್ಮೊಳಗೆ ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಶಿಷ್ಯರು ಬಹಳ ಭಯಪಟ್ಟು, “ಈತನು ಯಾರಿರಬಹುದು? ಗಾಳಿ ಮತ್ತು ನೀರು ಸಹ ಈತನ ಮಾತನ್ನು ಕೇಳುತ್ತವೆಯಲ್ಲಾ?” ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಶಿಷ್ಯರು ಭಯಭೀತರಾಗಿ, “ಇವರು ಯಾರಿರಬಹುದು? ಗಾಳಿಯೂ ಸರೋವರವೂ ಸಹ ಇವರ ಮಾತುಗಳನ್ನು ಕೇಳುತ್ತವಲ್ಲಾ!” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 ತೆನಿ ಲೈ ಭಿಂವ್ನ್ ಗೆಲ್ಲೆ, ಅನಿ ಎಕಾಮೆಕಾಕ್ “ಹ್ಯೊ ಮಾನುಸ್ ಕೊನ್? ವಾರೊ ಅನಿ ಲ್ಹಾಟಾಸೈತ್ ಹೆನಿ ಸಾಂಗಟಲ್ಲೆ ಅಯಿಕ್ತ್ಯಾತ್!”ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 4:41
17 ತಿಳಿವುಗಳ ಹೋಲಿಕೆ  

ತರುವಾಯ ಆತನು, “ನಿಮ್ಮ ನಂಬಿಕೆ ಎಲ್ಲಿ?” ಎಂದು ಅವರನ್ನು ಕೇಳಿದನು. ಅವರು ಭಯಪಟ್ಟು, “ಈತನು ಯಾರಿರಬಹುದು? ಗಾಳಿಗೂ ನೀರಿಗೂ ಅಪ್ಪಣೆ ಕೊಡುತ್ತಾನೆ. ಅವು ಕೂಡ ಈತನು ಹೇಳಿದ ಹಾಗೆ ಕೇಳುತ್ತವಲ್ಲಾ?” ಎಂದು ಆಶ್ಚರ್ಯಪಟ್ಟು ಒಬ್ಬರಿಗೊಬ್ಬರು ಮಾತನಾಡಿಕೊಂಡು.


‘ಇಲ್ಲಿಯ ತನಕ ಬರಬಹುದು; ಮೀರಿ ಬರಬೇಡ, ನಿನ್ನ ತೆರೆಗಳ ಹೆಮ್ಮೆಗೆ ಇಲ್ಲೇ ತಡೆಯಾಗುವುದು’ ಎಂದು ಅಪ್ಪಣೆಕೊಟ್ಟೆನು.


ಆ ಜನರು ಬೆರಗಾಗಿ, “ಈತನು ಎಂಥವನಾಗಿರಬಹುದು! ಗಾಳಿಯೂ ಸಮುದ್ರವೂ ಸಹ ಈತನಿಗೆ ವಿಧೇಯವಾಗುತ್ತವಲ್ಲಾ” ಅಂದರು.


ಆತನು ಪರಿಶುದ್ಧರ ಸಭೆಯಲ್ಲಿ ಘನ ಹೊಂದುವ ದೇವರು; ತನ್ನ ಎಲ್ಲಾ ಪರಿವಾರದವರಿಗಿಂತ ಭಯಂಕರನು.


ನೀವಾದರೋ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದು, ಆತನು ನಿಮಗೋಸ್ಕರವಾಗಿ ಮಾಡಿದ ಮಹತ್ಕಾರ್ಯಗಳನ್ನು ಸ್ಮರಿಸಿಕೊಂಡು, ಆತನನ್ನು ಸತ್ಯದಿಂದಲೂ, ಪೂರ್ಣಮನಸ್ಸಿನಿಂದಲೂ ಸೇವಿಸುತ್ತಾ ಬರಬೇಕು;


ಕರ್ತನೇ, ನಿನಗೆ ಭಯಪಡದವರು ಮತ್ತು ನಿನ್ನ ನಾಮವನ್ನು ಮಹಿಮೆ ಪಡಿಸದವರು ಯಾರಾದರು ಇದ್ದಾರೆಯೇ? ನೀನೊಬ್ಬನೇ ಪರಿಶುದ್ಧನು. ನಿನ್ನ ನೀತಿಯುಳ್ಳ ನ್ಯಾಯತೀರ್ಪು ಬೆಳಕಿಗೆ ಬಂದುದರಿಂದ ಸರ್ವಜನಾಂಗಗಳು ನಿನ್ನ ಸನ್ನಿಧಾನಕ್ಕೆ ಬಂದು ನಿನ್ನನ್ನು ಆರಾಧಿಸುವರು.”


ಆ ಮಹಿಳೆ ತನಗೆ ಸಂಭವಿಸಿದ್ದನ್ನು ಗ್ರಹಿಸಿ, ಭಯದಿಂದ ನಡುಗುತ್ತಾ ಬಂದು ಆತನಿಗೆ ಅಡ್ಡಬಿದ್ದು ನಡೆದ ಸಂಗತಿಯನ್ನೆಲ್ಲಾ ತಿಳಿಸಿದಳು.


ಆದ್ದರಿಂದ ಯಾರೂ ಕದಲಿಸಲಾರದ ರಾಜ್ಯವನ್ನು ಪಡೆದುಕೊಳ್ಳುವವರಾದ ನಾವು ಕೃತಜ್ಞತೆಯುಳ್ಳವರಾಗಿ, ಆತನಿಗೆ ಸಮರ್ಪಕವಾದ ಆರಾಧನೆಯನ್ನು ಭಕ್ತಿಯಿಂದಲೂ ಮತ್ತು ಭಯದಿಂದಲೂ ಮಾಡೋಣ.


ಅದಕ್ಕೆ ಎಲ್ಲರು ಬೆರಗಾಗಿ, “ಇದೆಂಥ ಮಾತಾಗಿರಬಹುದು? ಈತನು ಅಧಿಕಾರದಿಂದಲೂ, ಬಲದಿಂದಲೂ ದೆವ್ವಗಳಿಗೆ ಅಪ್ಪಣೆಕೊಡುತ್ತಾನೆ, ಅವು ಬಿಟ್ಟು ಹೋಗುತ್ತವೆ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.


ತರುವಾಯ ಅವರು ದೋಣಿಯನ್ನು ಹತ್ತಿದ ಮೇಲೆ ಗಾಳಿ ನಿಂತು ಹೋಯಿತು.


“ನಾನು ಲೇವಿಯರೊಂದಿಗೆ ಮಾಡಿಕೊಂಡ ಒಡಂಬಡಿಕೆ ಜೀವದಾತ ಹಾಗು ಬದುಕಿನಲ್ಲಿ ಶಾಂತಿ, ಸುಖ ತರುವಂಥ ಒಡಂಬಡಿಕೆ. ಅವರು ಭಯ ಭಕ್ತಿಯಿಂದ ಬಾಳಲೆಂದೇ ನಾನು ಅದನ್ನು ಅವರಿಗೆ ವಿಧಿಸಿದೆನು. ಅದರಂತೆ ಅವರು ನನ್ನಲ್ಲಿ ಭಯಭಕ್ತಿಯಿಟ್ಟು ನನ್ನ ನಾಮಕ್ಕೆ ಹೆದರಿ ನಡೆದುಕೊಂಡರು.


ಅವರು ಅತ್ಯಂತ ಆಶ್ಚರ್ಯಪಟ್ಟು, “ಆತನು ಎಲ್ಲವನ್ನು ಚೆನ್ನಾಗಿ ಮಾಡಿದ್ದಾನೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡುತ್ತಾನೆ” ಎಂದು ಅಂದುಕೊಂಡರು.


ತರುವಾಯ ಆತನು ಅವರನ್ನು, “ಯಾಕೆ ಭಯಪಡುತ್ತೀರಿ? ಇನ್ನೂ ನಿಮಗೆ ನಂಬಿಕೆಯಿಲ್ಲವೇ?” ಎಂದು ಕೇಳಲು


ಆ ಮೇಲೆ ಅವರು ಸಮುದ್ರದ ಆಚೇದಡದಲ್ಲಿದ್ದ ಗೆರಸೇನರ ಸೀಮೆಗೆ ತಲುಪಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು