Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 4:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದರೆ ಬಿಸಿಲೇರಿದಾಗ ಬಾಡಿ, ಬೇರಿಲ್ಲದ ಕಾರಣ ಒಣಗಿ ಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಬಿಸಿಲೇರಿದಾಗ ಬಾಡಿದವು; ಆಳವಾಗಿ ಬೇರೂರಲು ಆಗದ ಕಾರಣ ಅವು ಒಣಗಿಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆದರೆ ಬಿಸಿಲೇರಿದಾಗ ಬಾಡಿ ಬೇರಿಲ್ಲದಕಾರಣ ಒಣಗಿಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದರೆ ಸೂರ್ಯನು ಮೇಲೇರಿದಾಗ, ಆಳವಾದ ಬೇರಿಲ್ಲದ ಕಾರಣ ಆ ಸಸಿಗಳು ಒಣಗಿಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದರೆ ಬಿಸಿಲೇರಿದಾಗ ಅವು ಬಾಡಿಹೋಗಿ, ಬೇರಿಲ್ಲದ ಕಾರಣ ಒಣಗಿಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಸೂರ್ಯಾ ಉಗ್ವುನ್ ಯೆಲ್ಲ್ಯಾ ತನ್ನಾ, ತಿ ಝಾಡಾ ವಾಳುನ್ ಗೆಲಿ, ಕಶ್ಯಾಕ್ ಮಟ್ಲ್ಯಾರ್, ತೆಂಚಿ ಬೆರಾ ಭುತ್ತುರ್ ಜಾವ್ಕನತ್ತಿ. ತಸೆ ಮನುನ್, ತಿ ಝಾಡಾ, ವಾಳುನ್ ಗೆಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 4:6
15 ತಿಳಿವುಗಳ ಹೋಲಿಕೆ  

ಸೂರ್ಯನು ಉದಯಿಸಿದ ಮೇಲೆ ಸುಡುವ ಬಿಸಿಲಿಗೆ ಹುಲ್ಲು ಬಾಡಿ, ಹೂವು ಉದುರಿ ಅದರ ರೂಪದ ಸೊಗಸು ನಾಶವಾಗುತ್ತದೆ; ಹಾಗೆಯೇ ಐಶ್ವರ್ಯವಂತನು ತನ್ನ ಪ್ರಯತ್ನಗಳಲ್ಲಿ ಕುಂದಿಹೋಗುವನು.


ಇನ್ನೆಂದಿಗೂ ಅವರಿಗೆ ಹಸಿವೆಯಾಗಲಿ, ಬಾಯಾರಿಕೆಯಾಗಲಿ ಆಗುವುದಿಲ್ಲ, ಅವರಿಗೆ ಸೂರ್ಯನ ಬಿಸಿಲಾದರೂ, ಯಾವ ಝಳವಾದರೂ ತಟ್ಟುವುದಿಲ್ಲ.


ಇವರು ಸಮುದ್ರದೊಳಗಿರುವ ಗುಪ್ತವಾದ ಬಂಡೆಗಳಂತಿದ್ದು, ನಿಮ್ಮ ಸ್ನೇಹಭೋಜನಗಳಲ್ಲಿ ಸೇರಿ ತಿಂದು ಕುಡಿಯುತ್ತಾರೆ. ನಿರ್ಭಯವಾಗಿ ಸ್ವಂತ ಹೊಟ್ಟೆಯನ್ನೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಬಡಿಸಿಕೊಂಡು ಹೋಗುವ ನೀರಿಲ್ಲದ ಮೋಡಗಳೂ, ಫಲಗಳನ್ನು ಬಿಡದ, ಸಂಪೂರ್ಣವಾಗಿ ಸತ್ತ, ಬೇರು ಸಹಿತ ಕಿತ್ತು ಬಿದ್ದ ಶರತ್ಕಾಲದ ಮರಗಳು.


ದುರ್ನೀತಿಯ ಎಲ್ಲಾ ವಂಚನೆಯಿಂದಲೂ ಕೂಡಿ ನಾಶದ ಮಾರ್ಗದಲ್ಲಿರುವವರಿಗೋಸ್ಕರವಾಗಿ ಬರುವನು. ಯಾಕೆಂದರೆ ಅವರು ಸತ್ಯವನ್ನು ಪ್ರೀತಿಸದೆ ನಿರಾಕರಿಸಿದ್ದರಿಂದ ರಕ್ಷಣೆಯನ್ನು ಹೊಂದದೆ ನಾಶವಾಗುತ್ತಾರೆ.


ಆತನಲ್ಲಿ ಬೇರೂರಿಕೊಂಡು, ಆತನಲ್ಲಿ ಕಟ್ಟಲ್ಪಟ್ಟು ಮತ್ತು ನಿಮಗೆ ಬೋಧಿಸಲ್ಪಟ್ಟ ಉಪದೇಶದ ಪ್ರಕಾರವೇ ಕ್ರಿಸ್ತ ನಂಬಿಕೆಯಲ್ಲಿ ನೆಲೆಗೊಂಡು ದೇವರಿಗೆ ಹೆಚ್ಚೆಚ್ಚಾಗಿ ಸ್ತೋತ್ರ ಸಲ್ಲಿಸುವವರಾಗಿರಿ.


ಕ್ರಿಸ್ತನು ನಿಮ್ಮ ನಂಬಿಕೆಯ ಮೂಲಕ ನಿಮ್ಮ ಹೃದಯಗಳಲ್ಲಿ ವಾಸಮಾಡುವಂತೆಯೂ, ಆತನು ತನ್ನ ಮಹಿಮಾತಿಶಯದ ಪ್ರಕಾರ ಅನುಗ್ರಹಿಸಲಿ.


ಸೂರ್ಯನು ಉದಯಿಸಿದಾಗ ದೇವರು ಬಿಸಿಯಾದ ಮೂಡಣ ಗಾಳಿಯನ್ನು ಏರ್ಪಡಿಸಿದನು; ಬಿಸಿಲು ಯೋನನ ತಲೆಗೆ ಹೊಡೆಯಲು ಅವನು ಮೂರ್ಛೆಹೋಗುವವನಾಗಿ “ನಾನು ಬದುಕುವುದಕ್ಕಿಂತ ಸಾಯುವುದೇ ಲೇಸು” ಎಂದು ಸಾಯಲು ಬಯಸಿದನು.


ನೀನು ದೀನರಿಗೆ ಕೋಟೆಯು, ಇಕ್ಕಟ್ಟಿನಲ್ಲಿ ದಿಕಿಲ್ಲದವರಿಗೆ ರಕ್ಷಣಾದುರ್ಗವೂ, ಬಿಸಿಲಿಗೆ ನೆರಳೂ, ಭೀಕರರ ಶ್ವಾಸವು ಗೋಡೆಗೆ ಬಡಿದುಬಿಡುವ ಬಿರುಗಾಳಿಯಂತಿರುವಾಗ ಆಶ್ರಯವೂ ಆಗಿದ್ದೀ.


ನಾನು ಕಪ್ಪಾಗಿದ್ದೇನೆ ಎಂದು ನನ್ನನ್ನು ದಿಟ್ಟಿಸಿ ನೋಡಬೇಡಿರಿ. ನಾನು ಕಪ್ಪಾಗಿರುವುದು ಸೂರ್ಯನ ತಾಪದಿಂದ. ನನ್ನ ಸಹೋದರರು ನನ್ನ ಮೇಲೆ ಕೋಪಗೊಂಡು ದ್ರಾಕ್ಷಿತೋಟಗಳನ್ನು ಕಾಯುವುದಕ್ಕೆ ಇಟ್ಟರು; ಆದುದರಿಂದ ನನ್ನ ಸ್ವಂತ ದ್ರಾಕ್ಷಿ ತೋಟವನ್ನೂ ನಾನು ಕಾಯ್ದುಕೊಳ್ಳಲಾಗಲಿಲ್ಲ.


ಆದರೆ ಬಿಸಿಲೇರಿದಾಗ ಬೇರಿಲ್ಲದ ಕಾರಣ ಬಾಡಿ ಒಣಗಿಹೋದವು.


ಬೇರೆ ಕೆಲವು ಬೀಜಗಳು ಹೆಚ್ಚು ಮಣ್ಣಿಲ್ಲದ ಬಂಡೆಯ ನೆಲದ ಮೇಲೆ ಬಿದ್ದವು; ಅಲ್ಲಿ ಮಣ್ಣು ಆಳವಾಗಿಲ್ಲದ್ದರಿಂದ ಅವು ಬೇಗ ಮೊಳೆತವು;


ಮತ್ತೆ ಕೆಲವು ಬೀಜಗಳು ಮುಳ್ಳುಗಿಡಗಳಲ್ಲಿ ಬಿದ್ದವು; ಮುಳ್ಳುಗಿಡಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟದ್ದರಿಂದ ಅವು ಫಲಕೊಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು