Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 5:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 “ನನ್ನ ಚಿಕ್ಕ ಮಗಳು ಈಗ ಸಾವಿನ ಅಂಚಿನಲ್ಲಿದ್ದಾಳೆ; ಆಕೆಯು ಗುಣಹೊಂದಿ ಬದುಕುವಂತೆ ದಯಮಾಡಿ ನೀನು ಬಂದು ಆಕೆಯ ಮೇಲೆ ನಿನ್ನ ಕೈಯಿಡಬೇಕು” ಎಂದು ಆತನನ್ನು ಬಹಳವಾಗಿ ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅವನು ಯೇಸುವನ್ನು ನೋಡಿದೊಡನೆ ಅವರ ಪಾದಕ್ಕೆರಗಿ, “ನನ್ನ ಪುಟ್ಟ ಮಗಳು ಮರಣಾವಸ್ಥೆಯಲ್ಲಿದ್ದಾಳೆ; ತಾವು ಬಂದು ತಮ್ಮ ಹಸ್ತವನ್ನು ಅವಳ ಮೇಲಿಟ್ಟು, ಅವಳು ಗುಣಹೊಂದಿ ಬದುಕುವಂತೆ ಅನುಗ್ರಹಿಸಬೇಕು,” ಎಂದು ಬಹಳವಾಗಿ ವಿನಂತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನನ್ನ ಚಿಕ್ಕ ಮಗಳು ಈಗ ಸಾಯುತ್ತಾಳೆ; ಆಕೆಯು ವಾಸಿಯಾಗಿ ಬದುಕಿಕೊಳ್ಳುವಂತೆ ನೀನು ಬಂದು ಆಕೆಯ ಮೇಲೆ ಕೈಯಿಡಬೇಕು ಎಂದು ಆತನನ್ನು ಬಹಳವಾಗಿ ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 “ನನ್ನ ಚಿಕ್ಕಮಗಳು ಸಾಯುತ್ತಿದ್ದಾಳೆ. ದಯವಿಟ್ಟು ನೀನು ಬಂದು, ನಿನ್ನ ಕೈಗಳಿಂದ ಅವಳನ್ನು ಸ್ಪರ್ಶಿಸು. ಆಗ ಅವಳು ಗುಣವಾಗಿ ಬದುಕಿಕೊಳ್ಳುತ್ತಾಳೆ” ಎಂದು ಬಹಳವಾಗಿ ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 “ನನ್ನ ಚಿಕ್ಕ ಮಗಳು ಸಾಯುತ್ತಿದ್ದಾಳೆ. ಅವಳು ಗುಣಹೊಂದಿ ಬದುಕುವಂತೆ ದಯಮಾಡಿ ಬಂದು ಅವಳ ಮೇಲೆ ನಿಮ್ಮ ಕೈಗಳನ್ನಿಡಬೇಕು,” ಎಂದು ಬಹಳವಾಗಿ ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಅನಿ “ಮಾಜಿ ಅಪುರ್ಬಾಯೆಚಿ ಲೆಕ್ ಶಿಕ್ ಹಾಯ್, ದಯಾ ಕರುನ್ ತಿಯಾ ಯೆವ್ನ್, ತಿಚ್ಯಾ ವರ್‍ತಿ ಹಾತ್ ಥವ್, ಹೆಚ್ಯಾನಿ, ತಿ ಬರಿ ಹೊತಾ, ಅನಿ ತಿ, ಹುರ್ತಾ” ಮನುನ್ ಲೈ ಮಾಗುಕ್‍ಲಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 5:23
26 ತಿಳಿವುಗಳ ಹೋಲಿಕೆ  

ಆಕೆಯ ಮೇಲೆ ತನ್ನ ಕೈಗಳನ್ನಿಟ್ಟನು. ಇಟ್ಟಕೂಡಲೆ ಆಕೆ ನೆಟ್ಟಗಾದಳು, ದೇವರನ್ನು ಕೊಂಡಾಡಿದಳು.


ಸಂಜೆಯಾದಂತೆ ಜನರು ವಿವಿಧ ರೋಗಗಳಿಂದ ಅಸ್ವಸ್ಥವಾದವರನ್ನೆಲ್ಲಾ ಆತನ ಹತ್ತಿರಕ್ಕೆ ಕರತರಲು; ಆತನು ಪ್ರತಿಯೊಬ್ಬರ ಮೇಲೆಯೂ ಕೈಯಿಟ್ಟು ಅವರನ್ನು ವಾಸಿಮಾಡಿದನು.


ಹಾವುಗಳನ್ನು ಕೈಗಳಿಂದ ಎತ್ತಿಕೊಳ್ಳುವರು; ವಿಷಪದಾರ್ಥಗಳನ್ನೇನಾದರು ಕುಡಿದರೂ ಅವರಿಗೆ ಯಾವ ಹಾನಿಯೂ ಆಗುವುದಿಲ್ಲ. ಅವರು ರೋಗಿಗಳ ಮೇಲೆ ಕೈಯಿಟ್ಟರೆ ಅವರಿಗೆ ಸ್ವಸ್ಥವಾಗುವುದು” ಎಂದು ಹೇಳಿದನು.


ಅವನ ತಂದೆಯು ಜ್ವರದಿಂದಲೂ ರಕ್ತಭೇದಿಯಿಂದಲೂ ಹಾಸಿಗೆ ಹಿಡಿದಿದ್ದನು. ಪೌಲನು ಅವನ ಬಳಿಗೆ ಹೋಗಿ ಪ್ರಾರ್ಥನೆ ಮಾಡಿ ಅವನ ಮೇಲೆ ಕೈಗಳನ್ನಿಟ್ಟು ಅವನನ್ನು ಗುಣಪಡಿಸಿದನು.


ಆತನು ಸಭಾಮಂದಿರದಿಂದೆದ್ದು ಸೀಮೋನನ ಮನೆಗೆ ಬಂದನು. ಅಲ್ಲಿ ಸೀಮೋನನ ಅತ್ತೆಯು ವಿಪರೀತ ಜ್ವರದಿಂದ ಕಷ್ಟಪಡುತ್ತಿರಲಾಗಿ; ಆಕೆಯ ವಿಷಯದಲ್ಲಿ ಅಲಿದ್ದವರು ಆತನನ್ನು ಬೇಡಿಕೊಂಡರು.


ಆತನು ಕುರುಡನ ಕೈ ಹಿಡಿದು ಊರ ಹೊರಗೆ ಕರೆದುಕೊಂಡು ಹೋಗಿ ಅವನ ಕಣ್ಣುಗಳ ಮೇಲೆ ಉಗುಳು ಹಚ್ಚಿ, ಅವನ ಮೇಲೆ ತನ್ನ ಕೈಗಳನ್ನಿಟ್ಟು, “ನಿನಗೆ ಏನಾದರೂ ಕಾಣುತ್ತದೆಯೋ?” ಎಂದು ಅವನನ್ನು ಕೇಳಿದನು.


ಆಗ ಕೆಲವರು ತೊದಲು ಮಾತನಾಡುವ ಒಬ್ಬ ಕಿವುಡನನ್ನು ಆತನ ಬಳಿಗೆ ಕರೆದುಕೊಂಡು ಬಂದು, ಇವನ ಮೇಲೆ ನಿನ್ನ ಕೈಯಿಡಬೇಕು ಎಂದು ಆತನನ್ನು ಬೇಡಿಕೊಂಡರು.


ಆತನು ಊರು ಬಾಗಿಲಿನ ಹತ್ತಿರಕ್ಕೆ ಬಂದಾಗ ಸತ್ತುಹೋಗಿದ್ದ ಒಬ್ಬನನ್ನು ಹೊತ್ತುಕೊಂಡು ಹೊರಗೆ ತರುತ್ತಿದ್ದರು. ಅವನು ತನ್ನ ತಾಯಿಗೆ ಒಬ್ಬನೇ ಮಗನಾಗಿದ್ದನು; ಆಕೆಯು ವಿಧವೆಯಾಗಿದ್ದಳು. ಆಕೆಯ ಸಂಗಡ ಊರಿನವರು ಅನೇಕರಿದ್ದರು.


ಅನೇಕ ದೆವ್ವಗಳನ್ನು ಬಿಡಿಸಿ ಅನೇಕ ರೋಗಿಗಳಿಗೆ ಎಣ್ಣೆ ಹಚ್ಚಿ ಗುಣಪಡಿಸಿದರು.


ಆತನು ಕೈಚಾಚಿ ಆತನನ್ನು ಮುಟ್ಟಿ, “ನನಗೆ ಮನಸ್ಸುಂಟು; ಶುದ್ಧನಾಗು” ಅಂದನು. ಕೂಡಲೆ ಅವನು ಕುಷ್ಠದಿಂದ ಶುದ್ಧನಾದನು.


ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು, ಆತನು ಅವರನ್ನು ಕಷ್ಟದಿಂದ ತಪ್ಪಿಸಿದನು.


ಕಷ್ಟಕಾಲದಲ್ಲಿ ನನಗೆ ಮೊರೆಯಿಡಿರಿ, ಬಿಡಿಸುವೆನು; ಆಗ ನನ್ನನ್ನು ಕೊಂಡಾಡುವಿರಿ.


ನಾಮಾನನು ಇದನ್ನು ಕೇಳಿ ಕೋಪಗೊಂಡು, “ಇದೇನು? ಅವನು ಹೊರಗೆ ಬಂದು ತನ್ನ ದೇವರಾದ ಯೆಹೋವನ ಹೆಸರನ್ನು ಹೇಳಿ ನನ್ನ ಕುಷ್ಠದ ಮೇಲೆ ಕೈಯಾಡಿಸಿ ವಾಸಿಮಾಡುವನೆಂದು ನೆನಸಿದೆನು.


ಆಗ ಅನನೀಯನು ಹೊರಟು ಆ ಮನೆಯೊಳಗೆ ಹೋಗಿ ಅವನ ಮೇಲೆ ತನ್ನ ಕೈಗಳನ್ನಿಟ್ಟು, “ಸಹೋದರನಾದ ಸೌಲನೇ, ನೀನು ಬಂದ ದಾರಿಯಲ್ಲಿ ನಿನಗೆ ಕಾಣಿಸಿಕೊಂಡ ಕರ್ತನಾದ ಯೇಸು ನಿನಗೆ ಕಣ್ಣು ಕಾಣುವಂತೆಯೂ, ನೀನು ಪವಿತ್ರಾತ್ಮಭರಿತನಾಗುವಂತೆಯೂ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ” ಎಂದು ಹೇಳಿದನು.


ಅಪೊಸ್ತಲರು ಅವರ ಮೇಲೆ ಕೈಗಳನ್ನಿಟ್ಟು ಪ್ರಾರ್ಥನೆಮಾಡಿ ಆ ಕಾರ್ಯಕ್ಕಾಗಿ ಅವರನ್ನು ನೇಮಿಸಿದರು.


ಹೀಗಿರಲಾಗಿ ಅವನ ಸಹೋದರಿಯರು, “ಕರ್ತನೇ ಇಗೋ, ನೀನು ಪ್ರೀತಿಸುವವನು ಅಸ್ವಸ್ಥನಾಗಿದ್ದಾನೆ” ಎಂಬುದಾಗಿ ಯೇಸುವಿನ ಬಳಿಗೆ ಹೇಳಿ ಕಳುಹಿಸಿದರು.


ಯೇಸುವು ಅವನ ಸಂಗಡ ಹೋದನು; ಮತ್ತು ಬಹು ಜನರು ಆತನನ್ನು ನೂಕುತ್ತಾ ಹಿಂಬಾಲಿಸಿದರು.


ಅಪೊಸ್ತಲರು ಅವರ ಮೇಲೆ ಕೈಗಳನ್ನಿಡಲು ಅವರು ಪವಿತ್ರಾತ್ಮವರವನ್ನು ಹೊಂದಿದರು.


ಮತ್ತು ಅನನೀಯನೆಂಬ ಒಬ್ಬ ಮನುಷ್ಯನು ಒಳಗೆ ಬಂದು ತನಗೆ ಪುನಃ ಕಣ್ಣು ಕಾಣುವಂತೆ ತನ್ನ ಮೇಲೆ ಕೈಯಿಟ್ಟು ಪ್ರಾರ್ಥನೆಮಾಡುವುದನ್ನು ದರ್ಶನದಲ್ಲಿ ನೋಡಿದ್ದಾನೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು