Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 5:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಯೇಸುವು ಅವನ ಸಂಗಡ ಹೋದನು; ಮತ್ತು ಬಹು ಜನರು ಆತನನ್ನು ನೂಕುತ್ತಾ ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಯೇಸು ಅವನ ಜೊತೆಯಲ್ಲಿ ಹೊರಟರು. ದೊಡ್ಡ ಜನಸ್ತೋಮವು ಯೇಸುವನ್ನು ಮುತ್ತಿಕೊಂಡು ಅವರ ಜೊತೆಯಲ್ಲೇ ಹೊರಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆತನು ಅವನ ಸಂಗಡ ಹೋದನು; ಮತ್ತು ಬಹು ಜನರು ಆತನನ್ನು ನೂಕಿಕೊಂಡು ಹಿಂದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಯೇಸು ಅಧಿಕಾರಿಯೊಂದಿಗೆ ಹೋದನು. ಅನೇಕ ಜನರು ಯೇಸುವನ್ನು ಹಿಂಬಾಲಿಸಿದರು. ಅವರು ಆತನ ಸುತ್ತಲೂ ನೂಕುತ್ತಾ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆಗ ಯೇಸು ಅವನೊಂದಿಗೆ ಹೋದರು. ಜನರು ದೊಡ್ಡ ಗುಂಪಾಗಿ ಯೇಸುವನ್ನು ನೂಕುತ್ತಾ ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಜೆಜು ತೆಚ್ಯಾ ವಾಂಗ್ಡಾ ಗೆಲೊ, ಸುಮಾರ್ ಲೊಕಾ, ತೆಚ್ಯಾ ವಾಂಗ್ಡಾ ಜಾವ್‍ಲಾಗಲ್ಲಿ. ಅನಿ ತೆಚ್ಯಾ ಭೊತ್ಯಾನಿ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 5:24
12 ತಿಳಿವುಗಳ ಹೋಲಿಕೆ  

ಆತನ ಶಿಷ್ಯರು ಆತನಿಗೆ, “ನಿನ್ನ ಸುತ್ತಲೂ ಜನರು ಮುತ್ತಿಕೊಂಡು ನೂಕುವುದು ನಿನಗೆ ತಿಳಿದೇ ಇದೆ. ಆದರೂ ‘ನನ್ನನ್ನು ಮುಟ್ಟಿದವರು ಯಾರು’ ಎಂದು ಕೇಳುತ್ತೀಯಲ್ಲಾ?” ಎಂದರು.


ಯೇಸು ಅವರ ಸಂಗಡ ಹೋದನು. ಆತನು ಇನ್ನೂ ಮನೆಗೆ ಮುಟ್ಟುವುದಕ್ಕೆ ಸ್ವಲ್ಪ ದೂರವಿರುವಾಗಲೇ ಶತಾಧಿಪತಿಯು ಅವನ ಸ್ನೇಹಿತರನ್ನು ಆತನ ಬಳಿಗೆ ಕಳುಹಿಸಿ, “ಕರ್ತನೇ, ತೊಂದರೆ ತೆಗೆದುಕೊಳ್ಳಬೇಡ. ನೀವು ನನ್ನ ಮನೆಗೆ ಬರತಕ್ಕಷ್ಟು ಯೋಗ್ಯತೆ ನನಗಿಲ್ಲ.


ಆತನು ಮನೆಯೊಳಗೆ ಬಂದಾಗ ಅಲ್ಲಿ ಬಹಳ ಜನರು ಸೇರಿಬಂದದ್ದರಿಂದ ಊಟ ಮಾಡಲು ಕೂಡ ಆಗಲಿಲ್ಲ.


ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ, ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದುದರಿಂದ ಆತನು ಎಲ್ಲರಿಗೂ ಒಳ್ಳೆಯದನ್ನು ಮಾಡುತ್ತಾ; ಸೈತಾನನಿಂದ ಬಾಧಿಸಲ್ಪಟ್ಟವರನ್ನು ಗುಣಪಡಿಸುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವ ಸಂಗತಿಯೇ.


ಅವನು ಯೇಸು ಹೇಗಿದ್ದಾನೆಂದು ನೋಡಲು ಅಪೇಕ್ಷಿಸಿದರೂ ತಾನು ಕುಳ್ಳನಾಗಿದ್ದುದರಿಂದ, ಜನರ ಗುಂಪಿನ ನಿಮಿತ್ತ ನೋಡಲಾರದೆ ಹೋದನು.


ಇಷ್ಟರಲ್ಲಿ ಸಾವಿರಾರು ಜನರು ಒಬ್ಬರನ್ನೊಬ್ಬರು ತುಳಿಯುವಷ್ಟು ಕೂಡಿಬಂದಿರಲಾಗಿ ಯೇಸು ಮೊದಲು ತನ್ನ ಶಿಷ್ಯರಿಗೆ ಉಪದೇಶಿಸಿ ಹೇಳಿದ್ದೇನೆಂದರೆ, “ಫರಿಸಾಯರ ಹುಳಿಹಿಟ್ಟಿನ ಬಗ್ಗೆ, ಅಂದರೆ ಅವರ ಕಪಟತನದ ವಿಷಯದಲ್ಲಿ ಜಾಗರೂಕರಾಗಿರಿ.


ಆಗ ಯೇಸುವು, “ನನ್ನನ್ನು ಮುಟ್ಟಿದವರಾರು?” ಎಂದು ಕೇಳಲು ಎಲ್ಲರೂ, ನಾನಲ್ಲ, ನಾನಲ್ಲ ಅನ್ನಲು ಪೇತ್ರನು, “ಗುರುವೇ, ಎಷ್ಟೋ ಜನರು ನಿನ್ನನ್ನು ಮೈಮೇಲೆ ಬೀಳುತ್ತಾ ನೂಕುತ್ತಿದ್ದಾರಲ್ಲಾ” ಅಂದನು.


“ನನ್ನ ಚಿಕ್ಕ ಮಗಳು ಈಗ ಸಾವಿನ ಅಂಚಿನಲ್ಲಿದ್ದಾಳೆ; ಆಕೆಯು ಗುಣಹೊಂದಿ ಬದುಕುವಂತೆ ದಯಮಾಡಿ ನೀನು ಬಂದು ಆಕೆಯ ಮೇಲೆ ನಿನ್ನ ಕೈಯಿಡಬೇಕು” ಎಂದು ಆತನನ್ನು ಬಹಳವಾಗಿ ಬೇಡಿಕೊಂಡನು.


ಆಗ ಅಲ್ಲಿ ಹನ್ನೆರಡು ವರ್ಷದಿಂದ ರಕ್ತಕುಸುಮ ರೋಗವಿದ್ದ ಒಬ್ಬ ಹೆಂಗಸು ಇದ್ದಳು.


ಜನರು ಗುಂಪುಗುಂಪಾಗಿ ಸೇರಿಬರುತ್ತಿರುವಾಗ ಯೇಸು ಹೇಳುವುದಕ್ಕೆ ತೊಡಗಿದ್ದೇನಂದರೆ, “ಈ ಸಂತತಿ ಕೆಟ್ಟ ಸಂತತಿಯೇ; ಇದು ಸೂಚಕಕಾರ್ಯವನ್ನು ಸಂಕೇತವಾಗಿ ನೋಡಬೇಕೆಂದು ಅಪೇಕ್ಷಿಸುತ್ತದೆ. ಆದರೆ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವುದೂ ಈ ಸಂತತಿಗೆ ಸಿಕ್ಕುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು