ಮಾರ್ಕ 5:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅನೇಕ ವೈದ್ಯರ ಚಿಕಿತ್ಸೆಯಿಂದ ಆಕೆಯು ಬಹು ಕಷ್ಟವನ್ನು ಅನುಭವಿಸಿ, ಕೈಯಲ್ಲಿದ್ದ ಹಣವನ್ನೆಲ್ಲಾ ವ್ಯಯಮಾಡಿದ್ದರೂ ಅವಳ ರೋಗ ಮಾತ್ರ ಹೆಚ್ಚುತ್ತಾ ಬಂದಿತ್ತೇ ಹೊರತು ಸ್ವಲ್ಪವೂ ಗುಣಮುಖ ಆಗುತ್ತಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಅನೇಕ ವೈದ್ಯರಿಂದ ಚಿಕಿತ್ಸೆಪಡೆದಿದ್ದರೂ ಕೈಯಲ್ಲಿದ್ದ ಹಣವನ್ನೆಲ್ಲಾ ವ್ಯಯಮಾಡಿದ್ದರೂ ಅವಳ ರೋಗ ಮಾತ್ರ ಉಲ್ಬಣ ಆಗುತ್ತಿತ್ತೇ ಹೊರತು ಸ್ವಲ್ಪವೂ ಗುಣಮುಖ ಆಗುತ್ತಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಆಕೆಯು ಅನೇಕ ವೈದ್ಯರಿಂದ ಬಹು ಕಷ್ಟವನ್ನು ಅನುಭವಿಸಿ ಕೈಯಲ್ಲಿದ್ದದ್ದನ್ನೆಲ್ಲಾ ಕಳಕೊಂಡರೂ ರೋಗವು ಹೆಚ್ಚುತ್ತಾ ಬಂದದ್ದೇ ಹೊರತು ಮತ್ತೇನು ಪ್ರಯೋಜನವನ್ನೂ ಹೊಂದಿರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಆಕೆಯು ಬಹಳ ಸಂಕಟಪಟ್ಟಿದ್ದಳು. ಅವಳಿಗೆ ಸಹಾಯ ಮಾಡಲು ಅನೇಕ ವೈದ್ಯರು ಪ್ರಯತ್ನಿಸಿದ್ದರು. ಆಕೆಯಲ್ಲಿದ್ದ ಹಣವೆಲ್ಲವೂ ವೆಚ್ಚವಾಯಿತು. ಆದರೆ ಆಕೆಗೆ ವಾಸಿಯಾಗಲಿಲ್ಲ. ಅವಳ ಕಾಯಿಲೆಯು ಇನ್ನೂ ಹೆಚ್ಚಾಗುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಆಕೆ ಅನೇಕ ವೈದ್ಯರ ಚಿಕಿತ್ಸೆಯಿಂದ ಬಹು ಶ್ರಮಪಟ್ಟು, ತನಗಿದ್ದದ್ದೆಲ್ಲವನ್ನು ಖರ್ಚು ಮಾಡಿದ್ದರೂ ಸ್ವಲ್ಪವೂ ಪ್ರಯೋಜನವಾಗದೆ ಆ ರೋಗವು ಇನ್ನೂ ಹೆಚ್ಚಾಗುತ್ತಾ ಬಂತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ತೆನಿ, ಲೈ ಕಸ್ಟ್ ಸೊಸಲ್ಲಿನ್, ಸಗ್ಳ್ಯಾ ವಗ್ದುಳ್ಯಾನಿಕ್ನಿ, ತಿ ಗೆಲಿ, ಖರೆ, ಕಾಯ್ಬಿ ಪ್ರಯೊಜನ್ ಹೊವಕ್ನಾ. ತಿಚೆಕ್ಡೆ ಹೊತ್ತೆ, ಸಗ್ಳೆ ಪೈಸೆ ತೆನಿ ಸಾರ್ಲಿನ್, ಖರೆ, ತಿಚೊ ರೊಗ್ ಅನಿ ಉಲ್ಲೊ ಜಾಸ್ತಿಚ್ ಹೊಯ್, ಖರೆ, ಕಮಿ ಹೊಯ್ನಶಿ. ಅಧ್ಯಾಯವನ್ನು ನೋಡಿ |