ಮಾರ್ಕ 6:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಸಬ್ಬತ್ ದಿನ ಬಂದಾಗ ಆತನು ಅಲ್ಲಿಯ ಸಭಾಮಂದಿರದಲ್ಲಿ ಉಪದೇಶಮಾಡತೊಡಗಿದನು. ಅಲ್ಲಿ ನೆರದಿದ್ದ ಜನರು ಯೇಸುವಿನ ಬೋಧನೆಯನ್ನು ಕೇಳಿ ಬೆರಗಾದರು. “ಈತನಿಗೆ ಈ ಬೋಧನೆಯ ಮಾತುಗಳು ಎಲ್ಲಿಂದ ಬಂದಿತು? ಈತನು ಪಡೆದಿರುವ ಜ್ಞಾನವಾದರೂ ಎಂಥದ್ದು? ಈತನ ಕೈಯಿಂದ ಇಂತಹ ಅದ್ಭುತಕಾರ್ಯಗಳು ಆಗುವುದಾದರು ಹೇಗೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಸಬ್ಬತ್‍ದಿನ ಅಲ್ಲಿಯ ಪ್ರಾರ್ಥನಾಮಂದಿರದಲ್ಲಿ ಉಪದೇಶ ಮಾಡತೊಡಗಿದರು. ಕಿಕ್ಕಿರಿದು ನೆರೆದಿದ್ದ ಜನರು ಯೇಸುವಿನ ಬೋಧನೆಯನ್ನು ಕೇಳಿ ಬೆರಗಾದರು. “ಇದೆಲ್ಲಾ ಇವನಿಗೆ ಎಲ್ಲಿಂದ ಬಂದಿತು? ಇವನು ಪಡೆದಿರುವ ಜ್ಞಾನವಾದರೂ ಎಂಥಾದ್ದು? ಇವನಿಂದ ಮಹತ್ಕಾರ್ಯಗಳು ಆಗುವುದಾದರೂ ಹೇಗೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಸಬ್ಬತ್ ದಿನ ಬಂದಾಗ ಆತನು ಸಭಾಮಂದಿರಕ್ಕೆ ಹೋಗಿ ಉಪದೇಶ ಮಾಡುವದಕ್ಕೆ ಪ್ರಾರಂಭಿಸಿದನು. ಎಲ್ಲರು ಕೇಳಿ ಅತ್ಯಾಶ್ಚರ್ಯಪಟ್ಟು - ಇವನಿಗೆ ಈ ಮಾತುಗಳು ಎಲ್ಲಿಂದ ಬಂದಿದ್ದಾವು? ಇವನು ಪಡೆದಿರುವ ಈ ಜ್ಞಾನವೇನು? ಇವನ ಕೈಯಿಂದ ಇಂಥ ಮಹತ್ಕಾರ್ಯಗಳಾಗುವದೇನು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಸಬ್ಬತ್ ದಿನದಂದು ಯೇಸು ಸಭಾಮಂದಿರದಲ್ಲಿ ಉಪದೇಶಿಸಿದನು. ಆತನ ಉಪದೇಶವನ್ನು ಕೇಳಿ ಆಶ್ಚರ್ಯಗೊಂಡ ಅನೇಕ ಜನರು, “ಈ ಉಪದೇಶವನ್ನು ಮತ್ತು ಈ ಜ್ಞಾನವನ್ನು ಇವನು ಎಲ್ಲಿಂದ ಪಡೆದನು? ಇವನಿಗೆ ಕೊಟ್ಟವರು ಯಾರು? ಇವನಿಗೆ ಅದ್ಭುತಕಾರ್ಯಗಳನ್ನು ಮಾಡುವ ಶಕ್ತಿಯು ಎಲ್ಲಿಂದ ಬಂತು? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಸಬ್ಬತ್ ದಿನ ಬಂದಾಗ, ಯೇಸು ಸಭಾಮಂದಿರದಲ್ಲಿ ಬೋಧಿಸಲಾರಂಭಿಸಿದರು. ಅದನ್ನು ಕೇಳಿದ ಅನೇಕರು ವಿಸ್ಮಯಗೊಂಡು, “ಈತನು ಇವೆಲ್ಲವನ್ನು ಎಲ್ಲಿಂದ ಪಡೆದಿದ್ದಾನೆ? ಈತನ ಕೈಗಳಿಂದ ಇಂಥ ಅದ್ಭುತಕಾರ್ಯಗಳನ್ನು ಮಾಡುವ ಜ್ಞಾನವು ಈತನಿಗೆ ಎಲ್ಲಿಂದ ಬಂತು? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಸಬ್ಬತಾಚ್ಯಾ ದಿಸಿ ಸಿನಾಗೊಗಾತ್ ಜೆಜು ಸಿಕ್ವುಕ್ಲಾಗ್ಲೊ. ಥೈ, ಲೈ ಲೊಕಾ ಹೊತ್ತಿ. ಲೊಕಾ ತೆಚಾ ಗೊಸ್ಟಿಯಾ ಆಯ್ಕುನ್ ಅಜಾಪ್ ಹೊಲಿ, ಅನಿ ತೆನಿ “ಹ್ಯಾ ಗೊಸ್ಟಿಯಾ ಹೆಕಾ ಖೈತ್ನಾ ಗಾವ್ಲ್ಯಾ? ಹೆಕಾ ಕಸ್ಲೆ ಜ್ಞಾನ್ ದಿಲ್ಲೆ ಹಾಯ್? ಅನಿ ಹ್ಯೊ ಅಜಾಪಾ ಕಸೆ ಕರುನ್ ಕರ್‍ತಾ?” ಮನುನ್ ಇಚಾರ್‍ಲ್ಯಾನಿ. ಅಧ್ಯಾಯವನ್ನು ನೋಡಿ |