ಮಾರ್ಕ 6:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಏಕೆಂದರೆ ಹೆರೋದನು ಯೋಹಾನನನ್ನು ನೀತಿವಂತನೆಂದೂ ಪರಿಶುದ್ಧನೆಂದೂ ತಿಳಿದು ಭಯಪಟ್ಟು ಅವನಿಗೆ ಯಾವ ಅಪಾಯವೂ ಬಾರದಂತೆ ಕಾಪಾಡಿದ್ದನು. ಇದಲ್ಲದೆ ಯೋಹಾನನು ಹೇಳುತ್ತಿದ್ದ ಸಂದೇಶವನ್ನು ಅವನು ಕೇಳಿದಾಗ ಮನಸ್ಸಿನಲ್ಲಿ ಅಸಮಾಧಾನ ಉಂಟಾದರೂ ಅವನ ಮಾತನ್ನು ಸಂತೋಷದಿಂದ ಕೇಳುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಏಕೆಂದರೆ, ಯೊವಾನ್ನನು ಸಂತನು ಹಾಗೂ ಸತ್ಪುರುಷನು ಎಂದು ಹೆರೋದನು ಅರಿತು, ಆತನಿಗೆ ಭಯಪಟ್ಟು ಯಾವ ಅಪಾಯವೂ ಆತನಿಗೆ ಬಾರದಂತೆ ನೋಡಿಕೊಳ್ಳುತ್ತಿದ್ದನು. ಯೊವಾನ್ನನು ಹೇಳುತ್ತಿದ್ದ ಮಾತುಗಳನ್ನು ಕೇಳಿದಾಗಲೆಲ್ಲಾ ಹೆರೋದನ ಮನಸ್ಸು ಅಲ್ಲೋಲಕಲ್ಲೋಲವಾಗುತ್ತಿತ್ತು. ಆದರೂ ಆತನ ಮಾತುಗಳನು ಕಿವಿಗೊಟ್ಟು ಕೇಳುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಹೆರೋದನು ಯೋಹಾನನನ್ನು ನೀತಿವಂತನೆಂದೂ ದೇವಭಕ್ತನೆಂದೂ ತಿಳಿದು ಅಂಜಿಕೊಂಡು ಅವನಿಗೆ ಯಾವ ಅಪಾಯವೂ ಬಾರದಂತೆ ಇಟ್ಟಿದ್ದನು. ಇದಲ್ಲದೆ ಯೋಹಾನನು ಹೇಳಿದ್ದನ್ನು ಅವನು ಕೇಳಿದಾಗ ಮನಸ್ಸಿನಲ್ಲಿ ಬಹು ಗಲಿಬಿಲಿ ಹುಟ್ಟಿದರೂ ಅವನ ಮಾತನ್ನು ಸಂತೋಷದಿಂದ ಕೇಳುತ್ತಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆದರೆ ಆಕೆಗೆ ಸಾಧ್ಯವಾಗಲಿಲ್ಲ. ಹೆರೋದನು ಯೋಹಾನನನ್ನು ಕೊಲ್ಲಿಸಲು ಭಯಪಟ್ಟನು. ಯೋಹಾನನನ್ನು ಒಳ್ಳೆಯವನೆಂದೂ ಪವಿತ್ರನೆಂದೂ ಜನರೆಲ್ಲರು ನಂಬಿದ್ದಾರೆಂಬುದು ಹೆರೋದನಿಗೆ ತಿಳಿದಿತ್ತು. ಆದ್ದರಿಂದ ಹೆರೋದನು ಯೋಹಾನನನ್ನು ರಕ್ಷಿಸಿದನು. ಹೆರೋದನು ಯೋಹಾನನ ಉಪದೇಶವನ್ನು ಕೇಳಿದಾಗಲೆಲ್ಲಾ ಗಲಿಬಿಲಿಗೊಳ್ಳುತ್ತಿದ್ದನು. ಆದರೂ ಅವನ ಉಪದೇಶವನ್ನು ಸಂತೋಷದಿಂದ ಕೇಳುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಏಕೆಂದರೆ, ಯೋಹಾನನು ನೀತಿವಂತನು ಮತ್ತು ಪವಿತ್ರ ಮನುಷ್ಯನು ಎಂದು ತಿಳಿದು ಹೆರೋದನು ಭಯಪಟ್ಟು ಅವನನ್ನು ಸುರಕ್ಷಿತವಾಗಿಟ್ಟಿದ್ದನು. ಯೋಹಾನನು ಹೇಳಿದ್ದನ್ನು ಹೆರೋದನು ಕೇಳಿದಾಗಲೆಲ್ಲಾ ಅವನಿಗೆ ಗಲಿಬಿಲಿಯಾಗುತ್ತಿತ್ತು. ಆದರೂ ಅವನ ಮಾತನ್ನು ಕೇಳಲು ಇಷ್ಟಪಡುತ್ತಿದ್ದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ಖರೆ ಹೆರೊದ್ ಭಿಂವ್ ಲಾಗಲ್ಲೊ ಕಶ್ಯಾಕ್ ಮಟ್ಲ್ಯಾರ್ ಜುವಾಂವ್ ಎಕ್ ಬರೊ ಅನಿ ಪವಿತ್ರ್ ಮಾನುಸ್ ಮನುನ್ ತೆಕಾ ಗೊತ್ತ್ ಹೊತ್ತೆ,ತಸೆ ಮನುನ್ ತೊ ತೆಕಾ ಕಾಯ್ಬಿ ತರಾಸ್ ಹೊವ್ಕ್ ದಿ ನಸಿ, ತೊ ಸಾಂಗ್ತಾನಾ ತೆಕಾ ತರಾಸ್ ಹೊಲ್ಯಾರ್ಬಿ, ತೊ ಕುಶಿನ್ ತೆಚೆ ಆಯ್ಕಿ. ಅಧ್ಯಾಯವನ್ನು ನೋಡಿ |