ಮಾರ್ಕ 6:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಈತನು ಆ ಬಡಗಿಯಲ್ಲವೇ? ಈತನು ಮರಿಯಳ ಮಗನಲ್ಲವೇ? ಈತನು ಯಾಕೋಬ, ಯೋಸೆ, ಯೂದ, ಸೀಮೋನ ಇವರ ಅಣ್ಣನಲ್ಲವೇ? ಈತನ ತಂಗಿಯರು ಇಲ್ಲಿ ನಮ್ಮಲ್ಲಿಯೇ ಇದ್ದಾರಲ್ಲವೇ?” ಎಂದು ಹೇಳುತ್ತಾ ಯೇಸುವನ್ನು ತಾತ್ಸಾರ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಇವನು ಆ ಬಡಗಿಯಲ್ಲವೆ? ಮರಿಯಳ ಮಗನಲ್ಲವೆ? ಯಕೋಬ, ಯೋಸೆ, ಯೂದ ಮತ್ತು ಸಿಮೋನ ಇವರ ಸಹೋದರನಲ್ಲವೆ? ಇವನ ಸಹೋದರಿಯರು ಇಲ್ಲಿಯೇ ವಾಸಮಾಡುತ್ತಿಲ್ಲವೆ?” ಎಂದು ಹೇಳುತ್ತಾ ಯೇಸುವನ್ನು ತಾತ್ಸಾರಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಇವನು ಆ ಬಡಗಿಯಲ್ಲವೇ. ಇವನು ಮರಿಯಳ ಮಗನಲ್ಲವೇ. ಯಾಕೋಬ ಯೋಸೆ ಯೂದ ಸೀಮೋನ ಇವರ ಅಣ್ಣನಲ್ಲವೇ. ಇವನ ತಂಗಿಯರು ಇಲ್ಲಿ ನಮ್ಮಲ್ಲಿ ಇದ್ದಾರಲ್ಲವೇ ಎಂದು ಮಾತಾಡಿಕೊಂಡು ಆತನ ವಿಷಯವಾಗಿ ಬೇಸರಗೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಇವನು ಕೇವಲ ಬಡಗಿಯಲ್ಲವೋ? ಇವನ ತಾಯಿ ಮರಿಯಳು. ಇವನು ಯಾಕೋಬ, ಯೋಸೆ, ಯೂದ ಮತ್ತು ಸಿಮೋನರ ಅಣ್ಣ. ಇವನ ತಂಗಿಯರು ಇಲ್ಲಿ ನಮ್ಮೊಂದಿಗಿದ್ದಾರೆ” ಎಂದು ಹೇಳಿ ಆತನನ್ನು ತಾತ್ಸಾರ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಈತನು ಬಡಗಿಯಲ್ಲವೇ? ಈತನು ಮರಿಯಳ ಮಗನಲ್ಲವೇ? ಈತನು ಯಾಕೋಬ, ಯೋಸೆ, ಯೂದ ಮತ್ತು ಸೀಮೋನರ ಅಣ್ಣನಲ್ಲವೇ? ಈತನ ತಂಗಿಯರು ನಮ್ಮಲ್ಲಿ ಇದ್ದಾರಲ್ಲವೇ?” ಎಂದು ಹೇಳಿ, ಯೇಸುವಿನ ವಿಷಯವಾಗಿ ಬೇಸರಗೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 “ಮರಿಚೊ ಲೆಕ್ ಬಡಗಿ ನ್ಹಯ್ ಕಾಯ್ ಹ್ಯೊ? ಹೆಚೆ ಭಾವ್ ಜಾಕೊಬ್, ಜುಜೆ, ಜುದಾಸ್ ಅನಿ ಸಿಮಾವ್. ಹೆಚ್ಯಾ ಭೆನಿಯಾ ಹಿತ್ತೆಚ್ ರಾಯ್ನಾತ್ ಕಾಯ್?” ಅಶೆ ಮನುನ್ ತೆನಿ ಜೆಜುಕ್ ಅವ್ಮಾನ್ ಕರ್‍ಲ್ಯಾನಿ. ಅಧ್ಯಾಯವನ್ನು ನೋಡಿ |