Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 6:36 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಈ ಜನರಿಗೆ ಅಪ್ಪಣೆಕೊಡು; ಇವರು ಸುತ್ತಲಿರುವ ಸೀಮೆಗೂ ಹಳ್ಳಿಗಳಿಗೂ ಹೋಗಿ ತಮ್ಮ ಊಟಕ್ಕೆ ಏನಾದರೂ ಕೊಂಡುಕೊಳ್ಳಲಿ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 “ಈಗಾಗಲೇ ಹೊತ್ತು ಮೀರಿಹೋಯಿತು; ಇದು ನಿರ್ಜನಪ್ರದೇಶ; ಇನ್ನು ಜನರನ್ನು ಕಳುಹಿಸಿಬಿಡಿ. ಅವರು ಸಮೀಪದ ಊರುಕೇರಿಗಳಿಗೆ ಹೋಗಿ ಊಟಕ್ಕೇ ಏನಾದರೂ ಕೊಂಡುಕೊಳ್ಳಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಇದು ಅಡವಿ, ಈಗ ಹೊತ್ತು ಬಹಳವಾಯಿತು; ಈ ಜನರಿಗೆ ಅಪ್ಪಣೆಕೊಡು; ಇವರು ಸುತ್ತಲಿರುವ ಹಳ್ಳಿಪಳ್ಳಿಗಳಿಗೆ ಹೋಗಿ ತಮ್ಮ ಊಟಕ್ಕೆ ಏನಾದರೂ ಕೊಂಡುಕೊಳ್ಳಲಿ ಅಂದದ್ದಕ್ಕೆ ಯೇಸು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಆದ್ದರಿಂದ ಜನರನ್ನು ಕಳುಹಿಸಿಬಿಡು. ಅವರು ಸುತ್ತಮುತ್ತಲಿರುವ ತೋಟಗಳಿಗೂ ಪಟ್ಟಣಗಳಿಗೂ ಹೋಗಿ ಆಹಾರವನ್ನು ಕೊಂಡುಕೊಳ್ಳಲಿ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಈ ಜನರು ಸುತ್ತಮುತ್ತಲಿನ ಹಳ್ಳಿಗಳಿಗೆ ಹೋಗಿ ತಿನ್ನುವುದಕ್ಕಾಗಿ ಏನಾದರೂ ಕೊಂಡುಕೊಳ್ಳುವಂತೆ ಇವರನ್ನು ಕಳುಹಿಸಿಬಿಡು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ಲೊಕಾಕ್ನಿ ಧಾಡುನ್ ದಿ, ತೆನಿ ಜಗೊಳ್ಲ್ಯಾ ಗಾಂವಾತ್ನಿ, ಶೆತಾತ್ನಿ ಜಾಂವ್ದಿ ಅನಿ ತೆಂಕಾ ಕಾಯ್ತರ್ ಖಾವ್ಕ್ ಇಕಾತ್ ತರ್ಬಿ ಘೆಂವ್ದಿತ್” ಮನುನ್ ಸಾಂಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 6:36
6 ತಿಳಿವುಗಳ ಹೋಲಿಕೆ  

ಆದರೆ ಆತನು ಆಕೆಗೆ ಏನೂ ಉತ್ತರ ಕೊಡಲಿಲ್ಲ. ಆಗ ಆತನ ಶಿಷ್ಯರು ಬಂದು, “ಅವಳು ನಮ್ಮ ಹಿಂದೆ ಕೂಗಿಕೊಂಡು ಬರುತ್ತಿದ್ದಾಳೆ. ಆಕೆಯನ್ನು ಕಳುಹಿಸಿಬಿಡು” ಎಂದು ಆತನನ್ನು ಬೇಡಿಕೊಂಡರು.


ಆತನ ಶಿಷ್ಯರು ಆತನಿಗೆ, “ನಿನ್ನ ಸುತ್ತಲೂ ಜನರು ಮುತ್ತಿಕೊಂಡು ನೂಕುವುದು ನಿನಗೆ ತಿಳಿದೇ ಇದೆ. ಆದರೂ ‘ನನ್ನನ್ನು ಮುಟ್ಟಿದವರು ಯಾರು’ ಎಂದು ಕೇಳುತ್ತೀಯಲ್ಲಾ?” ಎಂದರು.


ಇದನ್ನು ಕೇಳಿ ಆತನ ಬಂಧುಗಳು “ಅವನಿಗೆ ಹುಚ್ಚುಹಿಡಿದಿದೆ” ಎಂದು ಹೇಳಿ ಆತನನ್ನು ಹಿಡಿಯುವುದಕ್ಕೆ ಹೊರಟರು.


ಆಗ ಪೇತ್ರನು ಆತನನ್ನು ಪಕ್ಕಕ್ಕೆ ಕರೆದುಕೊಂಡು ಹೋಗಿ, “ಕರ್ತನೇ, ದೇವರು ಅದನ್ನು ನಿನಗೆ ಬರಗೊಡಿಸದಿರಲಿ; ನಿನಗೆ ಹೀಗೆ ಎಂದಿಗೂ ಆಗಬಾರದು” ಎಂದು ಆತನನ್ನು ಗದರಿಸುವುದಕ್ಕೆ ಪ್ರಾರಂಭಿಸಿದನು.


ಅಷ್ಟರಲ್ಲಿ ಸಂಜೆ ಆಗಿದ್ದರಿಂದ ಆತನ ಶಿಷ್ಯರು ಆತನ ಬಳಿಗೆ ಬಂದು, “ಇದು ನಿರ್ಜನ ಸ್ಥಳ, ಈಗ ಹೊತ್ತು ಬಹಳವಾಯಿತು;


ಅದಕ್ಕೆ ಯೇಸು, “ನೀವೇ ಅವರಿಗೆ ಊಟಕ್ಕೇನಾದರೂ ಕೊಡಿರಿ” ಎಂದು ಉತ್ತರಕೊಟ್ಟನು. ಅದಕ್ಕವರು, “ನಾವು ಹೋಗಿ ಇನ್ನೂರು ದಿನಾರಿ ನಾಣ್ಯಗಳ ಬೆಲೆಯಷ್ಟು ರೊಟ್ಟಿಯನ್ನು ಕೊಂಡುಕೊಂಡು ಅವರಿಗೆ ಊಟ ಕೊಡಬೇಕೋ?” ಎಂದು ಹೇಳಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು