ಮಾರ್ಕ 6:41 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ಆ ಮೇಲೆ ಆತನು ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಪರಲೋಕದ ಕಡೆಗೆ ನೋಡಿ ದೇವರಿಗೆ ಸ್ತೋತ್ರಮಾಡಿ ಆ ರೊಟ್ಟಿಗಳನ್ನು ಮುರಿದು ಇದನ್ನು ನೀವು ಜನರಿಗೆ ಹಂಚಿರಿ ಎಂದು ಶಿಷ್ಯರ ಕೈಗೆ ಕೊಟ್ಟನು, ಅದೇ ರೀತಿಯಲ್ಲಿ ಆ ಎರಡು ಮೀನುಗಳನ್ನೂ ಆತನು ಎಲ್ಲರಿಗೂ ಹಂಚಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ಯೇಸು ಆ ಐದು ರೊಟ್ಟಿಗಳನ್ನೂ ಎರಡು ಮೀನುಗಳನ್ನೂ ತೆಗೆದುಕೊಂಡು, ಸ್ವರ್ಗದತ್ತ ಕಣ್ಣೆತ್ತಿ ನೋಡಿ, ದೇವರಿಗೆ ಸ್ತೋತ್ರ ಸಲ್ಲಿಸಿದರು. ತರುವಾಯ ಆ ರೊಟ್ಟಿಗಳನ್ನು ಮುರಿದು ಜನರಿಗೆ ಬಡಿಸುವಂತೆ ಅವನ್ನು ಶಿಷ್ಯರಿಗೆ ಕೊಟ್ಟರು. ಅಂತೆಯೇ ಎರಡು ಮೀನುಗಳನ್ನು ಜನರೆಲ್ಲರಿಗೆ ಹಂಚುವಂತೆ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)41 ಆಮೇಲೆ ಆತನು ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಆಕಾಶದ ಕಡೆಗೆ ನೋಡಿ ದೇವರ ಸ್ತೋತ್ರಮಾಡಿ ಆ ರೊಟ್ಟಿಗಳನ್ನು ಮುರಿದು - ನೀವು ಜನರಿಗೆ ಹಂಚಿರಿ ಎಂದು ಶಿಷ್ಯರ ಕೈಗೆ ಕೊಟ್ಟು ಆ ಎರಡು ಮೀನುಗಳನ್ನೂ ಎಲ್ಲರಿಗೆ ಹಂಚಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್41 ಯೇಸು ಐದು ರೊಟ್ಟಿಗಳನ್ನು ಮತ್ತು ಎರಡು ಮೀನುಗಳನ್ನು ತೆಗೆದುಕೊಂಡು ಆಕಾಶದ ಕಡೆಗೆ ನೋಡಿ, ರೊಟ್ಟಿಗಾಗಿ ದೇವರಿಗೆ ಕೃತಜ್ಞತೆ ಸಲ್ಲಿಸಿದನು. ಬಳಿಕ ರೊಟ್ಟಿಯನ್ನು ಮುರಿದು, ಅದನ್ನು ಶಿಷ್ಯರಿಗೆ ಕೊಟ್ಟು ಜನರಿಗೆಲ್ಲ ಹಂಚಲು ತಿಳಿಸಿದನು. ಅಂತೆಯೇ ಎರಡು ಮೀನುಗಳನ್ನು ಮುರಿದು ಜನರಿಗೆ ಹಂಚಬೇಕೆಂದು ಶಿಷ್ಯರಿಗೆ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 ಯೇಸು ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಪರಲೋಕದ ಕಡೆಗೆ ನೋಡಿ, ರೊಟ್ಟಿಗಳನ್ನು ಆಶೀರ್ವದಿಸಿ ಮುರಿದು, ತಮ್ಮ ಶಿಷ್ಯರಿಗೆ ಕೊಟ್ಟು ಜನರಿಗೆ ಹಂಚುವಂತೆ ತಿಳಿಸಿದರು. ಅದರಂತೆಯೇ ಎರಡು ಮೀನುಗಳನ್ನು ಜನರೆಲ್ಲರಿಗೆ ಹಂಚಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್41 ಮಾಗಿರ್ ಜೆಜುನ್ ಪಾಂಚ್ ಭಾಕ್ರಿಯಾ ಅನಿ ದೊನ್ ಮಾಸೊಳ್ಲ್ಯಾ ಘೆವ್ನ್ ವೈರ್ ಬಗ್ಲ್ಯಾನ್ ಅನಿ ದೆವಾಕ್ ಧನ್ಯವಾದ್ ದಿಲ್ಲ್ಯಾನ್ ಅನಿ ಮೊಡುನ್ ವಾಟಾ ಮನುನ್ ಶಿಸಾಂಚ್ಯಾ ಹಾತಾತ್ನಿ ದಿಲ್ಲ್ಯಾನ್, ಅನಿ ದೊನ್ ಮಾಸೊಳ್ಯಾಬಿ ಸಗ್ಳ್ಯಾಂಚ್ಯಾ ಸಾಟ್ನಿ ಮೊಡುನ್ ದಿಲ್ಲ್ಯಾನ್, ಅಧ್ಯಾಯವನ್ನು ನೋಡಿ |