ಮಾರ್ಕ 6:48 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201948 ಎದುರು ಗಾಳಿ ಬೀಸುತ್ತಿದ್ದುದರಿಂದ ಶಿಷ್ಯರು ಹುಟ್ಟುಗೋಲು ಹಾಕಿ ದಣಿದು ಹೋದದ್ದನ್ನು ಯೇಸು ಕಂಡು ಹೆಚ್ಚುಕಡಿಮೆ ರಾತ್ರಿಯ ನಾಲ್ಕನೆಯ ಜಾವದಲ್ಲಿ ಸಮುದ್ರದ ಮೇಲೆ ನಡೆದು ಅವರ ಕಡೆಗೆ ಬಂದು ಅವರನ್ನು ದಾಟಿ ಮುಂದಕ್ಕೆ ಹೋಗಬೇಕೆಂದಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)48 ಎದುರುಗಾಳಿ ಬೀಸುತ್ತಿದ್ದುದರಿಂದ ಶಿಷ್ಯರು ಹುಟ್ಟುಹಾಕಿ ದಣಿದುಹೋಗಿದ್ದರು. ಇದನ್ನು ಕಂಡ ಯೇಸು ಸರೋವರದ ನೀರಿನ ಮೇಲೆ ನಡೆದುಕೊಂಡು ಅವರ ಕಡೆಗೆ ಬಂದು, ಅವರನ್ನು ದಾಟಿ ಮುಂದೆ ಹೋಗುವುದರಲ್ಲಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)48 ಎದುರು ಗಾಳಿ ಬೀಸುತ್ತಿದ್ದದರಿಂದ ಶಿಷ್ಯರು ಹುಟ್ಟು ಹಾಕಿ ಹಾಕಿ ಒದ್ದಾಡುವದನ್ನು ಆತನು ಕಂಡು ಹೆಚ್ಚುಕಡಿಮೆ ರಾತ್ರಿಯ ನಾಲ್ಕನೆಯ ಜಾವದಲ್ಲಿ ಸಮುದ್ರದ ಮೇಲೆ ನಡೆದು ಅವರ ಕಡೆಗೆ ಬಂದು ಅವರನ್ನು ದಾಟಿ ಮುಂದಕ್ಕೆ ಹೋಗಬೇಕೆಂದಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್48 ದೋಣಿಯು ಸರೋವರದ ಮೇಲೆ ದೂರದಲ್ಲಿರುವುದನ್ನೂ ಶಿಷ್ಯರು ಅದನ್ನು ದಡಕ್ಕೆ ಸಾಗಿಸಲು ಬಹಳ ಕಷ್ಟಪಡುತ್ತಿರುವುದನ್ನೂ ಯೇಸು ನೋಡಿದನು. ಗಾಳಿಯು ಅವರಿಗೆ ಪ್ರತಿಕೂಲವಾಗಿ ಬೀಸುತ್ತಿತ್ತು. ಮುಂಜಾನೆ ಮೂರರಿಂದ ಆರು ಗಂಟೆಯ ಸಮಯದಲ್ಲಿ, ಯೇಸು ನೀರಿನ ಮೇಲೆ ನಡೆದುಕೊಂಡು ದೋಣಿಯ ಸಮೀಪಕ್ಕೆ ಬಂದು ಅವರನ್ನು ಹಾದು ಮುಂದೆ ಹೋಗುವುದರಲ್ಲಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ48 ಎದುರುಗಾಳಿ ಬಲವಾಗಿ ಬೀಸುತ್ತಿದ್ದುದರಿಂದ ಶಿಷ್ಯರು ದೋಣಿಯನ್ನು ನಿಯಂತ್ರಿಸಲು ದಣಿದು ಹೋದದ್ದನ್ನು ಯೇಸು ಕಂಡು, ಮುಂಜಾನೆ ಸುಮಾರು ಮೂರು ಗಂಟೆಯಲ್ಲಿ ಅವರ ಬಳಿಗೆ ಸರೋವರದ ಮೇಲೆ ನಡೆಯುತ್ತಾ ಬಂದರು. ಯೇಸು ಅವರನ್ನು ದಾಟಿ ಹೋಗುವುದರಲ್ಲಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್48 ಶಿಸಾ ಸಮುಂದರಾತ್ ತರಾಸ್ ಕರುನ್ ಘೆತಲೆ ತೆನಿ ಬಗಟ್ಲ್ಯಾನ್. ಕಶ್ಯಾಕ್ ಮಟ್ಲ್ಯಾರ್ ತೆನಿ ವಾರ್ಯಾಚ್ಯಾ ವಿರೊದ್ ಆವ್ಲೊ ಮಾರಿತ್. ರಾಚ್ಚ್ಯಾ ತಿನ್ ಘಂಟ್ಯಾಕ್ನಾ ಸಾ ಘಂಟ್ಯಾಚ್ಯಾ ಮದ್ದಿ ತೊ ಪಾನಿಯಾ ವರ್‍ತಿ ಚಲುನ್ಗೆತ್ ತೆಂಚ್ಯಾ ಜಗ್ಗೊಳ್ ಯೆವ್ನ್ ತೆಂಕಾ ದಾಟುನ್ ಫಿಡೆ ಜವ್‍ಲಾಗಲ್ಲೊ. ಅಧ್ಯಾಯವನ್ನು ನೋಡಿ |