Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 6:56 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

56 ಆತನು ಯಾವ ಗ್ರಾಮಗಳಿಗೆ, ಯಾವ ಊರು ಹಳ್ಳಿಗಳಿಗೆ ಹೋದರೂ ಅಲ್ಲಿಯವರು ರೋಗಿಗಳನ್ನು ತಂದು ಸಂತೆಬೀದಿಗಳಲ್ಲಿ ಇಟ್ಟು, ಆತನ ಉಡುಪಿನ ಅಂಚನ್ನಾದರೂ ಮುಟ್ಟಗೊಡಿಸಬೇಕೆಂದು ಆತನನ್ನು ಬೇಡಿಕೊಂಡರು; ಆತನನ್ನು ಮುಟ್ಟಿದವರೆಲ್ಲರೂ ಗುಣಹೊಂದಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

56 ಅವರ ಉಡುಪಿನ ಅಂಚನ್ನಾದರೂ ಮುಟ್ಟಗೊಡಿಸಬೇಕೆಂದು ಯೇಸುವನ್ನು ಬೇಡಿಕೊಳ್ಳುತ್ತಿದ್ದರು. ಹಾಗೆ ಮುಟ್ಟಿದವರೆಲ್ಲರೂ ಗುಣಹೊಂದುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

56 ಆತನು ಯಾವ ಗ್ರಾಮಗಳಿಗೂ ಯಾವ ಊರು ಹಳ್ಳಿಗಳಿಗೂ ಹೋದನೋ ಅಲ್ಲಿಯವರು ರೋಗಿಗಳನ್ನು ಪೇಟೆಗಳಲ್ಲಿ ಇಟ್ಟು - ನಿನ್ನ ಉಡುಪಿನ ಗೊಂಡೆಯನ್ನಾದರೂ ಮುಟ್ಟಗೊಡಿಸಬೇಕೆಂದು ಆತನನ್ನು ಬೇಡಿಕೊಂಡರು; ಆತನನ್ನು ಮುಟ್ಟಿದವರೆಲ್ಲರೂ ಸ್ವಸ್ಥರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

56 ಯೇಸು ಆ ಪ್ರದೇಶದಲ್ಲಿದ್ದ ಪಟ್ಟಣಗಳಿಗೆ, ನಗರಗಳಿಗೆ ಮತ್ತು ತೋಟಗಳಿಗೆ ಹೋದನು. ಆತನು ಹೋದ ಕಡೆಗಳಲ್ಲೆಲ್ಲಾ ಜನರು ಮಾರುಕಟ್ಟೆಯ ಸ್ಥಳಗಳಿಗೆ ಕಾಯಿಲೆಯ ಜನರನ್ನು ಕರೆತಂದರು. ಅವರು ಯೇಸುವಿಗೆ, ನಿನ್ನ ಮೇಲಂಗಿಯ ಅಂಚನ್ನಾದರೂ ಮುಟ್ಟಲು ತಮಗೆ ಅವಕಾಶ ಕೊಡಬೇಕೆಂದು ಬೇಡಿಕೊಂಡರು. ಆತನನ್ನು ಸ್ಪರ್ಶಿಸಿದ ಜನರೆಲ್ಲರಿಗೂ ಗುಣವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

56 ಯೇಸು ಹಳ್ಳಿ, ಪಟ್ಟಣ ಊರುಗಳಲ್ಲಿ ಎಲ್ಲೆಲ್ಲಿ ಹೋದರೋ ಅಲ್ಲಿ ಜನರು ರೋಗಿಗಳನ್ನು ತಂದು ಪೇಟೆಗಳಲ್ಲಿ ಇಟ್ಟು, ಯೇಸುವಿನ ಉಡುಪಿನ ಅಂಚನ್ನಾದರೂ ಮುಟ್ಟಗೊಡಿಸಬೇಕೆಂದು ಅವರನ್ನು ಬೇಡಿಕೊಂಡರು. ಯೇಸುವನ್ನು ಮುಟ್ಟಿದವರೆಲ್ಲರೂ ಗುಣಹೊಂದಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

56 ಜೆಜು ಖೈ-ಖೈ ಗೆಲೊ, ತ್ಯಾ ಗಾಂವಾತ್ನಿ, ಶಾರಾತ್ನಿ, ಶೆತಾತ್ನಿ, ಗೆಲೊ ತ್ಯಾ ಜಾಗ್ಯಾನಿತ್ಲ್ಯಾ ಬಾಜಾರಾತ್ನಿ ಶಿಕ್ ಹೊತ್ತ್ಯಾಕ್ನಿ ಘೆವ್ನ್ ಯೆಲ್ಯಾನಿ ಅನಿ ತುಜೆ ಕಪ್ಡೆ ತರ್ಬಿ ಅಪ್ಡುಕ್ ತೆಂಕಾ ಅವ್ಕಾಸ್ ದಿ ಮನುನ್ ಮಾಗ್ಲ್ಯಾನಿ ಅನಿ ಕೊನ್-ಕೊನ್ ಅಪಡ್ಲ್ಲ್ಯಾನಿ ತೆನಿ ಆರಾಮ್ ಹೊಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 6:56
15 ತಿಳಿವುಗಳ ಹೋಲಿಕೆ  

ಆಗ ಹನ್ನೆರಡು ವರ್ಷದಿಂದ ರಕ್ತಕುಸುಮ ರೋಗವಿದ್ದ ಒಬ್ಬ ಹೆಂಗಸು,


ಮತ್ತು ಆತನಿಂದ ಶಕ್ತಿ ಹೊರಟು ಎಲ್ಲರನ್ನೂ ವಾಸಿಮಾಡುತ್ತಿದ್ದುದರಿಂದ, ಆ ಗುಂಪಿನ ಜನರೆಲ್ಲಾ ಆತನನ್ನು ಮುಟ್ಟುವುದಕ್ಕೆ ಪ್ರಯತ್ನಪಟ್ಟರು.


ಏಕೆಂದರೆ ಆತನು ಅನೇಕರನ್ನು ಸ್ವಸ್ಥಮಾಡಿದ್ದರಿಂದ ರೋಗಪೀಡಿತರಾಗಿದ್ದವರೆಲ್ಲರೂ ಯೇಸುವನ್ನು ಮುಟ್ಟಬೇಕೆಂದು ಮೇಲೆ ಬೀಳುತ್ತಿದ್ದರು.


ಹೀಗಿರುವುದರಿಂದ ಜನರು ರೋಗಿಗಳನ್ನು ದೋಲಿಗಳ ಮೇಲೆಯೂ, ಹಾಸಿಗೆಗಳ ಮೇಲೆಯೂ ಇಟ್ಟು ಪೇತ್ರನು ಹಾದು ಹೋಗುವಾಗ, ಅವನ ನೆರಳಾದರೂ ಕೆಲವರ ಮೇಲಾದರೂ ಬೀಳಲಿ ಎಂದು ಅವರನ್ನು ಬೀದಿಗೆ ತೆಗೆದುಕೊಂಡು ಬರುತ್ತಿದ್ದರು.


ಬರಬೇಕಾದ ರಕ್ಷಣೆಯು ಇನ್ನಾರಲ್ಲಿಯೂ ಸಿಗುವುದಿಲ್ಲ; ಆ ಹೆಸರಿನಿಂದಲೇ ಹೊರತು ಆಕಾಶದ ಕೆಳಗೆ ಮನುಷ್ಯರಿಗೆ ಕೊಟ್ಟಿರುವ ಮತ್ತ್ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವುದಿಲ್ಲ” ಎಂದು ಹೇಳಿದನು.


ಒಬ್ಬ ಅಂಗಹೀನನಿಗೆ ಆದ ಉಪಕಾರದ ವಿಷಯದಲ್ಲಿ ಅವನಿಗೆ ಹೇಗೆ ಸ್ವಸ್ಥವಾಯಿತು ಎಂಬುದಾಗಿ ನೀವು ನಮ್ಮನ್ನು ಈ ಹೊತ್ತು ವಿಚಾರಿಸುತ್ತಿದ್ದೀರಿ.


ಆದರೆ ಯೇಸು, “ಇಷ್ಟಕ್ಕೇ ಬಿಡಿರಿ” ಎಂದು ಹೇಳಿ ಆ ಆಳಿನ ಕಿವಿಯನ್ನು ಮುಟ್ಟಿ ವಾಸಿಮಾಡಿದನು.


ಆಕೆಯು ಹಿಂದಿನಿಂದ ಬಂದು ಆತನ ಅಂಗಿಯ ಅಂಚನ್ನು ಮುಟ್ಟಿದಳು; ಮುಟ್ಟುತ್ತಲೇ ಆಕೆಗೆ ರಕ್ತಸ್ರಾವವಾಗುವುದು ನಿಂತಿತು.


ಒಂದು ದಿನ ಜನರು ಒಬ್ಬ ಸತ್ತವನನ್ನು ಸಮಾಧಿಮಾಡುವುದಕ್ಕೆ ಹೋದಾಗ, ಮೋವಾಬ್ಯರ ಗುಂಪು ಬರುತ್ತಿರುವುದನ್ನು ಕಂಡು ಶವವನ್ನು ಎಲೀಷನ ಸಮಾಧಿಯಲ್ಲಿ ಬಿಸಾಡಿ ಓಡಿಹೋದರು. ಸತ್ತ ಮನುಷ್ಯನ ದೇಹವು ಎಲೀಷನ ಎಲುಬುಗಳಿಗೆ ತಗಲಿದ ಕೂಡಲೆ ಅವನು ಜೀವ ಬಂದು ಎದ್ದು ನಿಂತನು.


ನೀವು ಹೊದ್ದುಕೊಳ್ಳುವ ಬಟ್ಟೆಯ ನಾಲ್ಕು ಮೂಲೆಗಳಲ್ಲಿ ಗೊಂಡೆಗಳನ್ನು ಕಟ್ಟಬೇಕು.


ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,


ಅವರು ಆತನನ್ನು ನಿನ್ನ ಉಡುಪಿನ ಅಂಚನ್ನಾದರೂ ಮುಟ್ಟಗೊಡಿಸಬೇಕೆಂದು ಬೇಡಿಕೊಂಡರು, ಮತ್ತು ಮುಟ್ಟಿದವರೆಲ್ಲರು ಸ್ವಸ್ಥರಾದರು.


ಆ ಸೀಮೆಯಲ್ಲೆಲ್ಲಾ ಓಡಾಡಿ ರೋಗಿಯಾಗಿದ್ದವರನ್ನು ದೋಲಿಯ ಮೇಲೆ ಹಾಕಿಕೊಂಡು ಆತನು ಎಲ್ಲಿದ್ದಾನೆಂದು ಕೇಳಿದರೋ ಅಲ್ಲಿಗೆ ತೆಗೆದುಕೊಂಡು ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು