Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 7:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ವ್ಯಭಿಚಾರ, ದುರಾಶೆ, ಕೆಡುಕುತನ, ಮೋಸ, ಕಾಮಾಭಿಲಾಷೆ, ಹೊಟ್ಟೆಕಿಚ್ಚು, ಅಪನಿಂದೆ, ಗರ್ವ, ಬುದ್ಧಿಗೇಡಿತನ ಇವೇ ಮೊದಲಾದವುಗಳು ಹೊರಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಕೆಡುಕುತನ, ಮೋಸ, ಭಂಡತನ, ಅಸೂಯೆ, ಅಪದೂರು, ಅಹಂಕಾರ, ಮೂರ್ಖತನ ಮೊದಲಾದವು ಹೊರಬರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಸೂಳೆಗಾರಿಕೆ ಕಳ್ಳತನ ಕೊಲೆ ಹಾದರ ದ್ರವ್ಯಾಶೆ ಕೆಡುಕುತನ ಮೋಸ ಬಂಡತನ ಹೊಟ್ಟೇಕಿಚ್ಚು ಬೈಗಳು ಸೊಕ್ಕು ಬುದ್ಧಿಗೇಡಿತನ ಇವೇ ಮೊದಲಾದವುಗಳ ಕೆಟ್ಟ ಆಲೋಚನೆಗಳು ಹೊರಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ವ್ಯಭಿಚಾರ, ಹಣದಾಶೆ, ಕೆಡುಕುತನ, ಭಂಡತನ, ಅಸೂಯೆ, ಚಾಡಿಕೋರತನ, ಅಹಂಕಾರ ಮತ್ತು ಬುದ್ಧಿಗೇಡಿತನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ವ್ಯಭಿಚಾರ, ಲೋಭ, ದುಷ್ಟತ್ವ, ವಂಚನೆ, ಅಶ್ಲೀಲತೆ, ಅಸೂಯೆ, ನಿಂದೆ, ಗರ್ವ ಮತ್ತು ಮೂರ್ಖತನ ಮುಂತಾದ ದುರಾಲೋಚನೆಗಳು ಹೊರಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ವ್ಯೆಭಿಚಾರ್ ಜಾಸ್ತಿಚಿ ಆಶ್ಯಾ, ಅಸಂ, ಝುಟೆ ಬೊಲ್ತಲೆ, ಬುರ್ಶೆಪಾನ್, ಕುಸ್ಡೆಪಾನ್, ಚಾಡ್ಗೆಪಾನ್, ಪಿಶೆಪಾನ್, ಅನಿ ಅಹಂಕಾರ್ ಹಿ ಸಗ್ಳಿ ಬುರ್ಶ್ಯಾ ಕಾಮಾ ಮಾನ್ಸಾಕ್ ಮ್ಹೆಳ್ಕೊ ಕರ್‍ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 7:22
26 ತಿಳಿವುಗಳ ಹೋಲಿಕೆ  

ನನ್ನ ಸ್ವಂತ ಸೊತ್ತನ್ನು ನನ್ನ ಇಷ್ಟದಂತೆ ಮಾಡಲು ನನಗೆ ಅಧಿಕಾರವಿಲ್ಲವೋ? ನಾನು ಉದಾರಿಯಾಗಿರುವುದಕ್ಕೆ ನೀನೇಕೆ ಹೊಟ್ಟೆಕಿಚ್ಚುಪಟ್ಟುಕೊಳ್ಳುವಿ?’ ಎಂದು ಹೇಳಿದನು.


ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆ ಮಾಡಿರಿ. ಏಕೆಂದರೆ “ದೇವರು ಅಹಂಕಾರಿಗಳನ್ನು ವಿರೋಧಿಸುತ್ತಾನೆ. ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.”


ತಿಳಿವಳಿಕೆಯಿಲ್ಲದೆ ಮಾತನಾಡುವ ಮೂಢ ಜನರ ಬಾಯನ್ನು ನೀವು ಒಳ್ಳೆ ನಡತೆಯಿಂದ ಮುಚ್ಚಿಸಬೇಕೆಂಬುದು ದೇವರ ಚಿತ್ತ.


ನಾವು ದೇವಜ್ಞಾನಕ್ಕೆ ವಿರೋಧವಾಗಿ ಏಳುವ ಅಹಂಭಾವಗಳನ್ನು ಧ್ವಂಸಮಾಡಿ, ಪ್ರತಿಯೊಂದು ಆಲೋಚನೆಗಳನ್ನೂ ಕ್ರಿಸ್ತನಿಗೆ ವಿಧೇಯರಾಗುವಂತೆ ಸೆರೆಹಿಡಿದು,


ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ ನಿನ್ನ ದೇಹವೆಲ್ಲಾ ಕತ್ತಲಾಗಿರುವುದು. ನಿನ್ನೊಳಗಿರುವ ಬೆಳಕೇ ಕತ್ತಲಾದರೆ ಆ ಕತ್ತಲು ಎಷ್ಟು ಮಹತ್ತರವಾಗಿರಬೇಕು!


ನಾನು ತಿರುಗಿಕೊಂಡು, ಜ್ಞಾನವನ್ನು ಮತ್ತು ಮೂಲತತ್ವವನ್ನು ಹುಡುಕಿ, ವಿಚಾರಿಸಿ ಗ್ರಹಿಸುವುದಕ್ಕೂ ಅಧರ್ಮವು ಮೂರ್ಖತನ, ಅಜ್ಞಾನವು ಹುಚ್ಚುತನ ಎಂದು ತಿಳಿದುಕೊಳ್ಳುವುದಕ್ಕೂ ಮನಸ್ಸಿಟ್ಟೆನು.


ಲೋಭಿಯು ಆಸ್ತಿಯನ್ನು ಗಳಿಸಲು ಆತುರಪಡುವನು, ತನಗೆ ಕೊರತೆಯಾಗುವುದೆಂದು ಅರಿಯನು.


ಗೋದಿರವೆಯ ಸಂಗಡ ಮೂರ್ಖನನ್ನು ಒರಳಿನಲ್ಲಿ ಒನಕೆಯಿಂದ ಕುಟ್ಟಿದರೂ, ಮೂರ್ಖತನವು ಅವನಿಂದ ತೊಲಗದು.


ಮೂರ್ಖನ ಸಂಕಲ್ಪವು ಪಾಪವೇ, ಧರ್ಮನಿಂದಕನು ಮನುಷ್ಯರಿಗೆ ಅಸಹ್ಯ.


ಲೋಭಿಯ ಅನ್ನವನ್ನು ಉಣ್ಣದಿರು, ಅವನ ರುಚಿಪದಾರ್ಥಗಳನ್ನು ಬಯಸಬೇಡ.


ಮೂರ್ಖತನವು ಮಕ್ಕಳ ಮನಸ್ಸಿಗೆ ಸಹಜ, ಆದರೆ ಶಿಕ್ಷಕನ ಬೆತ್ತವು ಅದನ್ನು ತೊಲಗಿಸುವುದು.


ಜಾಣನು ತನ್ನ ಜ್ಞಾನವನ್ನು ಗುಪ್ತಪಡಿಸುವನು, ಮೂಢರ ಮನಸ್ಸು ಮೂರ್ಖತನವನ್ನು ಪ್ರಕಟಿಸುವುದು.


ದುಷ್ಟನು ಸೊಕ್ಕಿನ ಮುಖದಿಂದ, “ಯೆಹೋವನು ವಿಚಾರಿಸುವುದಿಲ್ಲ” ಎಂದು ಹೇಳಿಕೊಂಡು, ದೇವರಿಲ್ಲ ಎಂಬುದಾಗಿ ಸದಾ ಯೋಚಿಸುತ್ತಾನೆ.


ಆದರೂ ಅವನ ದೇಶದಲ್ಲಿ ಉಂಟಾದ ಅದ್ಭುತ ವಿಷಯವನ್ನು ವಿಚಾರಿಸುವುದಕ್ಕಾಗಿ ಬಾಬೆಲಿನ ಅರಸನ ರಾಯಭಾರಿಗಳು ಅವನ ಬಳಿಗೆ ಬಂದಾಗ, ದೇವರು ಅವನನ್ನು ಪರೀಕ್ಷಿಸುವುದಕ್ಕೂ ಹಾಗು ಅವನ ಸರ್ವಾಂತರ್ಯವನ್ನು ತಿಳಿದುಕೊಳ್ಳುವುದಕ್ಕೂ ಅವನನ್ನು ಬಿಟ್ಟುಕೊಟ್ಟನು


ಶತ್ರುಗಳು ನಿಮ್ಮ ಪಟ್ಟಣಗಳಿಗೆ ಮುತ್ತಿಗೆ ಹಾಕಿ, ನಿಮ್ಮನ್ನು ಬಹಳವಾಗಿ ಹಿಂಸಿಸುವ ಕಾಲದಲ್ಲಿ ಕೋಮಲತೆಯ ಮತ್ತು ಅತಿಸೂಕ್ಷ್ಮತೆಯ ದೆಸೆಯಿಂದ ಅಂಗಾಲನ್ನೂ ನೆಲಕ್ಕೆ ಇಡದವಳಾದ ಸ್ತ್ರೀಯು ತಿನ್ನಲಿಕ್ಕೆ ಏನೂ ಇಲ್ಲದವಳಾಗಿ, ನರಳುವಾಗ


ನಿಮ್ಮಲ್ಲಿ ಮೃದುಸ್ವಭಾವಿಯೂ ಮತ್ತು ಸೂಕ್ಷ್ಮಗುಣವುಳ್ಳವನು ಆಗಿರುವ ಸಹೋದರನು ಆಹಾರಕ್ಕಾಗಿ ತನ್ನ ಸಹೋದರ, ಪ್ರೀತಿಯ ಹೆಂಡತಿ ಮತ್ತು ತನ್ನ ಮಕ್ಕಳನ್ನು ದ್ವೇಷಿಸುವನು.


ನೀವು “ಬಿಡುಗಡೆಯುಂಟಾಗುವ ಏಳನೆಯ ವರ್ಷವು ಸಮೀಪವಾಯಿತು” ಎಂಬ ನೀಚವಾದ ಆಲೋಚನೆಯನ್ನು ಮಾಡಿ, ಆ ಬಡ ಸಹೋದರನಿಗೆ ಏನೂ ಕೊಡದೆ ಇರಬಾರದು, ಎಚ್ಚರಿಕೆ! ಹಾಗೆ ಧಿಕ್ಕರಿಸಿದರೆ ಅವನು ಒಂದು ವೇಳೆ ನಿಮ್ಮ ವಿಷಯದಲ್ಲಿ ಯೆಹೋವನಿಗೆ ಮೊರೆಯಿಟ್ಟಾನು, ನೀವು ದೋಷಿಗಳಾಗಿ ಕಂಡುಬರುವಿರಿ.


ನನ್ನ ಮನಸ್ಸನ್ನು ದ್ರವ್ಯಾಶೆಗಲ್ಲ, ನಿನ್ನ ಕಟ್ಟಳೆಗಳ ಕಡೆಗೆ ತಿರುಗಿಸು.


ಇವರ ಕಾಲುಗಳು ಕೇಡನ್ನು ಹಿಂಬಾಲಿಸಿ ಓಡುತ್ತವೆ, ಇವರು ನಿರಪರಾಧಿಯ ರಕ್ತವನ್ನು ಸುರಿಸಲು ಆತುರಪಡುತ್ತಾರೆ, ಇವರ ಯೋಚನೆಗಳು ಅಧರ್ಮದ ಯೋಚನೆಗಳೇ, ಇವರು ಹೋದ ದಾರಿಗಳಲ್ಲಿ ನಷ್ಟವೂ, ನಾಶನವೂ ಉಂಟಾಗುತ್ತವೆ;


ಹೌದು, ಯೆಹೋವನಿಗೆ ತಪ್ಪಿ ನಡೆದು ಆತನನ್ನು ಅಲ್ಲಗಳೆದಿದ್ದೇವೆ, ನಮ್ಮ ದೇವರನ್ನು ಹಿಂಬಾಲಿಸುವುದನ್ನು ಬಿಟ್ಟು ಅವನಿಂದ ದೂರವಾಗಿದ್ದೇವೆ. ಅನ್ಯಾಯವನ್ನೂ ದ್ರೋಹವನ್ನೂ ನುಡಿದಿದ್ದೇವೆ, ಹೃದಯಪೂರ್ವಕವಾಗಿ ಸುಳ್ಳುಮಾತುಗಳನ್ನು ಕಲ್ಪಿಸಿ ಆಡಿದ್ದೇವೆ.


ಹೃದಯವು ಎಲ್ಲಾದಕ್ಕಿಂತಲೂ ವಂಚಕ; ಗುಣವಾಗದ ರೋಗಕ್ಕೆ ಒಳಗಾಗಿದೆ; ಅದನ್ನು ತಿಳಿದವರು ಯಾರು?


ಒಳಗಿನಿಂದ ಅಂದರೆ ಮನುಷ್ಯರ ಹೃದಯದೊಳಗಿನಿಂದ ಬರುವ ದುರಾಲೋಚನೆಗಳು, ಹಾದರ, ಕಳ್ಳತನ, ಕೊಲೆ,


ಈ ಎಲ್ಲಾ ಕೆಡುಕುಗಳು ಮಾನವನ ಅಂತರಂಗದಿಂದಲೇ ಉದ್ಭವಿಸಿ ಅವನನ್ನು ಅಶುದ್ಧ ಮಾಡುತ್ತವೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು