Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 7:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಮತ್ತು ಸಂತೆಗೆ ಹೋಗಿ ಬಂದರೆ ನೀರನ್ನು ಪ್ರೋಕ್ಷಿಸಿಕೊಳ್ಳದೆ ಇರುತ್ತಿರಲಿಲ್ಲ. ಬಹು ಸ್ವಚ್ಛವಾಗಿ ಸ್ನಾನಮಾಡಿಯೇ ಊಟಮಾಡುವುದು; ತಂಬಿಗೆ, ಚೆಂಬು, ತಪ್ಪಲೆಗಳನ್ನು ತೊಳೆಯುವುದು; ಇವೇ ಮೊದಲಾದ ಅನೇಕ ಆಚಾರಗಳು ಅವರಲ್ಲಿ ರೂಢಿಯಲ್ಲಿದ್ದುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಪೇಟೆ ಬೀದಿಗಳಿಗೆ ಹೋಗಿ ಬಂದರೆ ಸ್ನಾನಮಾಡಿಯೇ ಊಟಮಾಡುವುದು; ತಂಬಿಗೆ, ಚೆಂಬು, ತಪ್ಪಲೆಗಳನ್ನು ಸೂತ್ರಬದ್ಧವಾಗಿ ತೊಳೆಯುವುದು; ಇವೇ ಮೊದಲಾದ ಅನೇಕ ಆಚಾರಗಳು ಅವರಲ್ಲಿ ರೂಢಿಯಲ್ಲಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅವರು ಏನನ್ನಾದರೂ ಮಾರುಕಟ್ಟೆಯಲ್ಲಿ ಕೊಂಡುಕೊಂಡರೆ, ವಿಶೇಷವಾದ ರೀತಿಯಲ್ಲಿ ಅದನ್ನು ತೊಳೆಯದೆ ತಿನ್ನುತ್ತಿರಲಿಲ್ಲ. ತಮ್ಮ ಪಿತೃಗಳಿಂದ ಬಂದ ಇತರ ಆಚಾರಗಳನ್ನು ಅಂದರೆ ಲೋಟ, ಬಟ್ಟಲು, ತಪ್ಪಲೆ ಮತ್ತು ದೋಲಿಗಳನ್ನು ತೊಳೆಯುವಾಗಲೂ ಈ ನಿಯಮಗಳನ್ನು ಅನುಸರಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಪೇಟೆಗೆ ಹೋಗಿ ಬಂದರೆ ಅವರು ಸ್ನಾನ ಮಾಡದೆ ಊಟಮಾಡುತ್ತಿರಲಿಲ್ಲ. ಮಾತ್ರವಲ್ಲದೆ ಲೋಟ, ಚೆಂಬು ಮತ್ತು ತಪ್ಪಲೆಗಳನ್ನು ಬೆಳಗಿ ತೊಳೆಯುವುದು ಮುಂತಾದ ಅನೇಕ ಶುದ್ಧಾಚಾರಗಳನ್ನು ಅವರು ಪಾಲಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಅನಿ ಬಾಜಾರಾಕ್ನಾ ಖಾವ್ಕ್ ಹಾನಲ್ಲೆ ತರ್ ಧುಯ್ನಾಸ್ತಾನಾ ಖಾಯ್ನಸಿತ್. ವಾಟ್ಕಿ,ಗಾಡ್ಗಿ, ತಾಂಬ್ಯಾ, ಆಯ್ದಾನಾ, ಹಾತ್ರಾನಾ ಧುತಲೆ, ಅಸ್ಲಿ ಲೈ ಪದ್ದತಿಯಾ ಪಾಳಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 7:4
15 ತಿಳಿವುಗಳ ಹೋಲಿಕೆ  

ಅವು ಅನ್ನಪಾನಗಳೂ ಮತ್ತು ವಿವಿಧ ಆಚರಣೆಗಳಿಗೂ ಒಳಪಟ್ಟಿರುವ ಸ್ನಾನಗಳು ಸಹಿತವಾಗಿ ದೇಹಕ್ಕೆ ಮಾತ್ರ ಸಂಬಂಧಪಟ್ಟ ನಿಯಮಗಳಾಗಿದ್ದು. ಇವು ಸುಧಾರಣೆಯ ಕಾಲದವರೆಗೆ ಮಾತ್ರ ನೇಮಕವಾಗಿದ್ದವು.


“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪಾತ್ರೆ, ಬಟ್ಟಲು ಇವುಗಳ ಹೊರಭಾಗವನ್ನು ಶುಚಿಮಾಡುತ್ತೀರಿ ಆದರೆ ಅವುಗಳ ಒಳಗೆ ಸುಲಿಗೆಯಿಂದಲೂ, ದುರಾಶೆಯಿಂದಲೂ ತುಂಬಿರುತ್ತವೆ.


ದೇವರ ಸಮೀಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸಮೀಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲಮಾಡಿಕೊಳ್ಳಿರಿ.


ಯೆಹೂದ್ಯರ ಶುದ್ಧಾಚಾರ ಪದ್ಧತಿಯ ಪ್ರಕಾರ ಅಲ್ಲಿ ಆರು ಕಲ್ಲಿನ ಬಾನೆಗಳು ಇದ್ದವು. ಪ್ರತಿಯೊಂದು ಬಾನೆಯೂ ಎರಡು ಇಲ್ಲವೆ ಮೂರು ಕೊಳಗ ನೀರು ಹಿಡಿಯುವ ಅಳತೆಯುಳ್ಳದ್ದಾಗಿತ್ತು.


ಯೆರೂಸಲೇಮೇ, ನಿನಗೆ ರಕ್ಷಣೆಯಾಗುವಂತೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ. ದುರಾಲೋಚನೆಗಳು ನಿನ್ನಲ್ಲಿ ಇನ್ನೆಷ್ಟರವರೆಗೆ ತಂಗಿರುವವು?


ನಿಮ್ಮನ್ನು ತೊಳೆದು ಶುದ್ಧರಾಗಿ, ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಕೃತ್ಯಗಳನ್ನು ತೊಲಗಿಸಿರಿ, ದುರಾಚಾರವನ್ನು ಬಿಡಿ,


ಆದರೆ ಆತನು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲ್ಲೊಬ್ಬರು ಅನ್ಯೋನ್ಯತೆಯಲ್ಲಿರುತ್ತೇವೆ. ಆತನ ಒಬ್ಬನೇ ಕುಮಾರನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಬಿಡಿಸಿ ಶುದ್ಧೀಕರಿಸುತ್ತದೆ.


ಆಗ ಪಿಲಾತನು ತನ್ನ ಯತ್ನ ನಡೆಯುವುದಿಲ್ಲ ಗದ್ದಲ ಮಾತ್ರ ಹೆಚ್ಚಾಗುತ್ತದೆ ಎಂದು ತಿಳಿದು ನೀರನ್ನು ತೆಗೆದುಕೊಂಡು ಜನರ ಮುಂದೆ ಕೈ ತೊಳೆದುಕೊಂಡು, “ಈ ನೀತಿವಂತನನ್ನು ಕೊಲ್ಲಿಸುವುದರಲ್ಲಿ ನಾನು ನಿರಪರಾಧಿ, ನೀವೇ ನೋಡಿಕೊಳ್ಳಿರಿ” ಎನ್ನಲು


ಯೆಹೋವನೇ, ನಾನು ನಿರ್ದೋಷಿ ಎಂದು, ಕೈಗಳನ್ನು ತೊಳೆದುಕೊಂಡವನಾಗಿ,


ಹೀಗಿರಲಾಗಿ ಯೋಹಾನನ ಶಿಷ್ಯರಲ್ಲಿ ಕೆಲವರಿಗೂ ಒಬ್ಬ ಯೆಹೂದ್ಯನಿಗೂ ಶುದ್ಧಾಚಾರವನ್ನು ಕುರಿತು ವಾದ ಉಂಟಾಯಿತು.


ಆ ರೇಕಾಬನ ಮನೆತನದವರ ಮುಂದೆ ದ್ರಾಕ್ಷಾರಸ ತುಂಬಿದ ಬಟ್ಟಲುಗಳನ್ನೂ, ಪಂಚಪಾತ್ರೆಗಳನ್ನೂ ಇಟ್ಟು, “ದ್ರಾಕ್ಷಾರಸವನ್ನು ಕುಡಿಯಿರಿ” ಅಂದನು.


ಕುರುಡನಾದ ಫರಿಸಾಯನೇ, ಮೊದಲು ಪಾತ್ರೆ ಬಟ್ಟಲುಗಳ ಒಳಭಾಗವನ್ನು ಶುಚಿಮಾಡು, ಆಗ ಅವುಗಳ ಹೊರಭಾಗವೂ ಶುಚಿಯಾಗುವುದು.


ನೀವು ದೇವರ ಆಜ್ಞೆಯನ್ನು ಬಿಟ್ಟು ಮನುಷ್ಯರು ನೇಮಿಸಿದ ಸಂಪ್ರದಾಯಗಳನ್ನು ಬಿಡದೆ ಹಿಡಿದುಕೊಂಡಿದ್ದೀರಿ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು