Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 8:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಮತ್ತು ಅವರು ಬೇತ್ಸಾಯಿದ ಊರಿಗೆ ಬಂದರು. ಅಲ್ಲಿ ಜನರು ಒಬ್ಬ ಕುರುಡನನ್ನು ಯೇಸುವಿನ ಬಳಿಗೆ ಕರೆದುಕೊಂಡು ಬಂದು, ಇವನನ್ನು ಮುಟ್ಟಬೇಕು ಎಂದು ಆತನನ್ನು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಯೇಸುಸ್ವಾಮಿ ಮತ್ತು ಅವರ ಶಿಷ್ಯರು ಬೆತ್ಸಾಯಿದಕ್ಕೆ ಬಂದರು. ಕೆಲವರು ಯೇಸುವಿನ ಬಳಿಗೆ ಕುರುಡನೊಬ್ಬನನ್ನು ಕರೆತಂದು ಅವನನ್ನು ಮುಟ್ಟಬೇಕೆಂದು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಮತ್ತು ಅವರು ಬೇತ್ಸಾಯಿದ ಊರಿಗೆ ಬಂದರು. ಅಲ್ಲಿ ಜನರು ಒಬ್ಬ ಕುರುಡನನ್ನು ಯೇಸುವಿನ ಬಳಿಗೆ ಕರಕೊಂಡುಬಂದು - ಇವನನ್ನು ಮುಟ್ಟಬೇಕು ಎಂದು ಆತನನ್ನು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಯೇಸು ಮತ್ತು ಆತನ ಶಿಷ್ಯರು ಬೆತ್ಸಾಯಿದಕ್ಕೆ ಬಂದರು. ಕೆಲವು ಜನರು ಯೇಸುವಿನ ಬಳಿಗೆ ಒಬ್ಬ ಕುರುಡನನ್ನು ತಂದು ಅವನನ್ನು ಮುಟ್ಟಬೇಕೆಂದು ಯೇಸುವನ್ನು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಯೇಸು ಬೇತ್ಸಾಯಿದಕ್ಕೆ ಬಂದಾಗ, ಕೆಲವರು ಒಬ್ಬ ಕುರುಡನನ್ನು ಯೇಸುವಿನ ಬಳಿಗೆ ತಂದು ಅವನನ್ನು ಮುಟ್ಟಬೇಕೆಂದು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಜೆಜು ಅನಿ ತೆಚಿ ಶಿಸಾ ಬೆತ್ಸಾಯಿದಾ ಮನ್ತಲ್ಯಾ ಗಾವಾಕ್ ಯೆಲ್ಯಾನಿ.ಥೈ ಲೊಕಾನಿ ಎಕ್ ಕುಡ್ಡ್ಯಾಕ್ ಜೆಜುಕ್ಡೆ ಘೆವ್ನ್ ಯೆಲ್ಯಾನಿ ಅನಿ ತೆಕಾ ಅಪಡ್ ಮನುನ್ ಮಾಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 8:22
14 ತಿಳಿವುಗಳ ಹೋಲಿಕೆ  

ಹೇಗೆಂದರೆ, “ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿನವರು ಎಂದೋ ಗೋಣಿತಟ್ಟು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡು ಮಾನಸಾಂತರಪಡುತ್ತಿದ್ದರು.


ಇದಾದ ಕೂಡಲೆ ಯೇಸು ತನ್ನ ಶಿಷ್ಯರಿಗೆ, ನಾನು ಈ ಜನರ ಗುಂಪನ್ನು ಕಳುಹಿಸಿ ಬಿಡುವಷ್ಟರೊಳಗೆ ನೀವು ದೋಣಿಯನ್ನ ಹತ್ತಿ ಮುಂದಾಗಿ ಆಚೇದಡಕ್ಕೆ ಬೇತ್ಸಾಯಿದಕ್ಕೆ ಹೋಗಿರಿ ಎಂದು ಬಲವಂತಮಾಡಿದನು.


ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿಯವರು ಆಗಲೇ ಗೋಣಿತಟ್ಟು ಹೊದ್ದುಕೊಂಡು, ಬೂದಿಯಲ್ಲಿ ಕುಳಿತುಕೊಂಡು ಪಶ್ಚಾತ್ತಾಪಪಡುತ್ತಿದ್ದರು.


ಇವರು ಗಲಿಲಾಯದಲ್ಲಿರುವ ಬೇತ್ಸಾಯಿದ ಊರಿನ ಫಿಲಿಪ್ಪನ ಬಳಿಗೆ ಬಂದು, “ಅಯ್ಯಾ, ನಾವು ಯೇಸುವನ್ನು ನೋಡಬೇಕೆಂದಿದ್ದೇವೆಂದು” ಅವನನ್ನು ಬೇಡಿಕೊಂಡರು.


ಈ ಫಿಲಿಪ್ಪನು, ಅಂದ್ರೆಯ ಮತ್ತು ಪೇತ್ರರ ಪಟ್ಟಣವಾದ ಬೆತ್ಸಾಯಿದದವನಾಗಿದ್ದನು.


ಅಷ್ಟರಲ್ಲಿ ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ತಂದರು; ನಾಲ್ಕು ಮಂದಿಯು ಆತನನ್ನು ಹೊತ್ತುಕೊಂಡಿದರು.


ಜ್ವರವು ಆಕೆಯನ್ನು ಬಿಟ್ಟುಹೋಯಿತು; ಆಕೆ ಎದ್ದು ಆತನಿಗೆ ಉಪಚಾರಮಾಡಿದಳು.


ಆಗ ಆತನು ಅವರ ಕಣ್ಣುಗಳನ್ನು ಮುಟ್ಟಿ, “ನಿಮ್ಮ ನಂಬಿಕೆಯಂತೆ ನಿಮಗೆ ಆಗಲಿ” ಅಂದನು. ಆಗ ಅವರ ಕಣ್ಣುಗಳು ತೆರೆಯಲ್ಪಟ್ಟವು.


ಆತನು ಕೈಚಾಚಿ ಆತನನ್ನು ಮುಟ್ಟಿ, “ನನಗೆ ಮನಸ್ಸುಂಟು; ಶುದ್ಧನಾಗು” ಅಂದನು. ಕೂಡಲೆ ಅವನು ಕುಷ್ಠದಿಂದ ಶುದ್ಧನಾದನು.


ಇತ್ತಲಾಗಿ ಅಪೊಸ್ತಲರು ಹಿಂತಿರುಗಿ ಬಂದು ತಾವು ಮಾಡಿದ್ದನ್ನೆಲ್ಲಾ ಯೇಸುವಿಗೆ ವಿವರವಾಗಿ ಹೇಳಿದರು. ಆತನು ಅವರನ್ನು ಪ್ರತ್ಯೇಕವಾಗಿ ಕರೆದುಕೊಂಡು ಬೇತ್ಸಾಯಿದವೆಂಬ ಊರಿಗೆ ಹೋದರು.


ಅವರು ಆತನನ್ನು ನಿನ್ನ ಉಡುಪಿನ ಅಂಚನ್ನಾದರೂ ಮುಟ್ಟಗೊಡಿಸಬೇಕೆಂದು ಬೇಡಿಕೊಂಡರು, ಮತ್ತು ಮುಟ್ಟಿದವರೆಲ್ಲರು ಸ್ವಸ್ಥರಾದರು.


ಏಕೆಂದರೆ ಆತನು ಅನೇಕರನ್ನು ಸ್ವಸ್ಥಮಾಡಿದ್ದರಿಂದ ರೋಗಪೀಡಿತರಾಗಿದ್ದವರೆಲ್ಲರೂ ಯೇಸುವನ್ನು ಮುಟ್ಟಬೇಕೆಂದು ಮೇಲೆ ಬೀಳುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು